ಎಜ್ರ 6:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಇದಲ್ಲದೆ, ಆಡಂಬರದಿಂದ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಿದರು. ಏಕೆಂದರೆ, ಇಸ್ರಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಸ್ಸೀರಿಯದ ಅರಸ, ತಮಗೆ ಸಹಾಯಮಾಡುವಂತೆ ಸರ್ವೇಶ್ವರ ಅವನ ಮನಪರಿವರ್ತಿಸಿ, ಅವರಿಗೆ ಸಂತೋಷವನ್ನು ಉಂಟುಮಾಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಇದಲ್ಲದೆ ಇಸ್ರಾಯೇಲ್‍ದೇವರ ಆಲಯವನ್ನು ಕಟ್ಟುವದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯ ಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿವಸಗಳವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಅವರು ಏಳು ದಿನಗಳ ತನಕ ಸಂತಸದಿಂದ ಆಚರಿಸಿದರು. ಯಾಕೆಂದರೆ ಅಶ್ಶೂರದ ಅರಸನ ಮನಸ್ಸನ್ನು ಮಾರ್ಪಡಿಸುವುದರ ಮೂಲಕ ಯೆಹೋವನು ಯೆಹೂದ್ಯರನ್ನು ಬಹಳ ಸಂತೋಷಗೊಳಿಸಿದ್ದನು. ಇಸ್ರೇಲ್ ದೇವರ ಆಲಯದ ಕಟ್ಟಡವು ಪೂರ್ಣಗೊಳ್ಳಲು ಅಶ್ಶೂರದ ಅರಸನು ಸಹಾಯ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಸಂತೋಷದಿಂದ ಏಳು ದಿವಸ ಆಚರಿಸಿದರು. ಏಕೆಂದರೆ ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರ ಆಲಯದ ಕಾರ್ಯದಲ್ಲಿ ಅವರ ಕೈಗಳನ್ನು ಬಲಪಡಿಸುವುದಕ್ಕೆ ಅಸ್ಸೀರಿಯ ದೇಶದ ಅರಸನ ಹೃದಯವನ್ನು, ಅವರ ಕಡೆಗೆ ಮನಪರಿವರ್ತಿಸಿದ್ದರಿಂದ ಯೆಹೋವ ದೇವರು ಅವರನ್ನು ಸಂತೋಷಪಡಿಸಿದರು. ಅಧ್ಯಾಯವನ್ನು ನೋಡಿ |