ಎಜ್ರ 6:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅದರಲ್ಲಿ, “ಅರಸನಾದ ಕೋರೆಷನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನ ದೇವಾಲಯದ ವಿಷಯವಾಗಿ ಕೊಟ್ಟ ಅಪ್ಪಣೆ, ‘ಬಲವಾದ ಅಸ್ತಿವಾರವನ್ನು ಹಾಕಿ, ಯಜ್ಞಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವು, ಅಗಲ ಅರುವತ್ತು ಮೊಳವು ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 “ಅರಸ ಸೈರಸನ ಮೊದಲನೆಯ ವರ್ಷದಲ್ಲಿ, ಅರಸ ಸೈರಸನು ಜೆರುಸಲೇಮಿನ ದೇವಾಲಯದ ಬಗ್ಗೆ ಕೊಟ್ಟ ಅಪ್ಪಣೆ ಇದು: ಬಲವಾದ ಅಸ್ತಿವಾರವನ್ನು ಹಾಕಿ, ಬಲಿಸಮರ್ಪಣೆಗಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಎತ್ತರ ಇಪ್ಪತ್ತೇಳು ಮೀಟರ್, ಅಗಲ ಇಪ್ಪತ್ತೇಳು ಮೀಟರ್ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಅರಸನಾದ ಕೋರೆಷನ ಮೊದಲನೆಯ ವರುಷದಲ್ಲಿ ಅರಸನಾದ ಕೋರೆಷನು ಯೆರೂಸಲೇವಿುನ ದೇವಾಲಯದ ವಿಷಯ ಕೊಟ್ಟ ಅಪ್ಪಣೆ - ಬಲವಾದ ಅಸ್ತಿವಾರವನ್ನು ಹಾಕಿ ಯಜ್ಞಸಮರ್ಪಣೆಗಾಗಿ ಆಲಯವನ್ನು ತಿರಿಗಿ ಕಟ್ಟಬೇಕು. ಅದರ ಎತ್ತರ ಅರುವತ್ತು ಮೊಳವೂ ಅಗಲ ಅರುವತ್ತು ಮೊಳವೂ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ರಾಜನಾದ ಸೈರಸನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಜೆರುಸಲೇಮಿನಲ್ಲಿರುವ ದೇವಾಲಯದ ವಿಷಯವಾಗಿ ಸೈರಸ್ ರಾಜನು ಹೊರಡಿಸಿದ ರಾಜಾಜ್ಞೆ: ದೇವಾಲಯವು ಮತ್ತೆ ಕಟ್ಟಲ್ಪಡಲಿ. ಅದು ಹೋಮಯಜ್ಞಾದಿಗಳನ್ನು ಸಮರ್ಪಿಸುವ ಸ್ಥಳವಾಗಲಿ. ದೇವಾಲಯದ ಅಸ್ತಿವಾರವು ಬಲವಾಗಿರಬೇಕು. ಅದರ ಎತ್ತರ ತೊಂಭತ್ತು ಅಡಿ ಇರಬೇಕು. ಅದರ ಅಗಲ ತೊಂಭತ್ತು ಅಡಿ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅರಸನಾದ ಕೋರೆಷನ ಮೊದಲನೆಯ ವರ್ಷದಲ್ಲಿ ಅರಸನಾದ ಕೋರೆಷನು ಯೆರೂಸಲೇಮಿನಲ್ಲಿರುವ ದೇವರ ಆಲಯಕ್ಕೋಸ್ಕರ ಕೊಟ್ಟ ಅಪ್ಪಣೆ ಏನೆಂದರೆ: ಜನರು ಬಲಿಗಳನ್ನು ಸಮರ್ಪಿಸುವುದಕ್ಕಾಗಿ ಆಲಯವನ್ನು ಪುನಃ ಕಟ್ಟಬೇಕು. ಅದರ ಅಸ್ತಿವಾರಗಳನ್ನು ಬಲವಾಗಿ ಹಾಕಬೇಕು. ಅದರ ಎತ್ತರ 27 ಮೀಟರ್, ಅದರ ಅಗಲ 27 ಮೀಟರ್ ಆಗಿರಲಿ. ಅಧ್ಯಾಯವನ್ನು ನೋಡಿ |