Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 6:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ಬಾಬಿಲೋನಿಗೆ ತೆಗೆದುಕೊಂಡು ಹೋದ ಬೆಳ್ಳಿ, ಬಂಗಾರದ ದೇವಸ್ಥಾನ ಪಾತ್ರೆಗಳನ್ನು ಹಿಂತಿರುಗಿ ಕೊಡಬೇಕು. ಅವುಗಳನ್ನೆಲ್ಲಾ ಮೊದಲಿದ್ದ ಸ್ಥಳಕ್ಕೆ ಅಂದರೆ ಯೆರೂಸಲೇಮಿನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು’ ಎಂಬುದಾಗಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇದಲ್ಲದೆ, ನೆಬೂಕದ್ನೆಚ್ಚರನು ಜೆರುಸಲೇಮಿನ ದೇವಾಲಯದಿಂದ ಬಾಬಿಲೋನಿಗೆ ತೆಗೆದುಕೊಂಡು ಬಂದ ಬೆಳ್ಳಿಬಂಗಾರದ ದೇವಸ್ಥಾನದ ಪಾತ್ರೆಗಳನ್ನು ಹಿಂದಕ್ಕೆ ಕೊಡಬೇಕು. ಅವುಗಳನ್ನೆಲ್ಲ ಮೊದಲಿದ್ದ ಸ್ಥಳಕ್ಕೆ ಅಂದರೆ, ಜೆರುಸಲೇಮಿನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇವಿುನ ದೇವಾಲಯದಿಂದ ಬಾಬೆಲಿಗೆ ತೆಗೆದುಕೊಂಡು ಬಂದ ಬೆಳ್ಳಿ ಬಂಗಾರದ ದೇವಸ್ಥಾನಪಾತ್ರೆಗಳನ್ನು ತಿರಿಗಿ ಕೊಡಬೇಕು. ಅವುಗಳನ್ನೆಲ್ಲಾ ಮೊದಲಿದ್ದ ಸ್ಥಳಕ್ಕೆ ಅಂದರೆ ಯೆರೂಸಲೇವಿುನ ದೇವಾಲಯಕ್ಕೆ ತೆಗೆದುಕೊಂಡು ಹೋಗಿ ಅಲ್ಲಿಡಬೇಕು ಎಂಬದಾಗಿ ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬೆಳ್ಳಿಬಂಗಾರಗಳ ವಸ್ತುಗಳೆಲ್ಲವನ್ನು ಜೆರುಸಲೇಮಿನ ದೇವಾಲಯದಿಂದ ನೆಬೂಕದ್ನೆಚ್ಚರನು ಸೂರೆಮಾಡಿ ಬಾಬಿಲೋನಿಗೆ ತಂದದ್ದನ್ನು ದೇವಾಲಯದಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಲ್ಲಿರುವ ಮಂದಿರದಿಂದ ತೆಗೆದುಕೊಂಡು ಬಾಬಿಲೋನಿಗೆ ಒಯ್ದ ದೇವರ ಆಲಯದ ಬೆಳ್ಳಿಬಂಗಾರದ ಸಲಕರಣೆಗಳನ್ನು ತಿರುಗಿ ಯೆರೂಸಲೇಮಿನಲ್ಲಿರುವ ಮಂದಿರಕ್ಕೆ ತೆಗೆದುಕೊಂಡುಹೋಗಿ, ದೇವರ ಆಲಯದೊಳಗೆ ಅದರದರ ಸ್ಥಳದಲ್ಲಿ ಇಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 6:5
12 ತಿಳಿವುಗಳ ಹೋಲಿಕೆ  

ಬೇಲ್ಶಚ್ಚರನು ಅದನ್ನು ಸವಿಯುತ್ತಾ, ಯೆರೂಸಲೇಮಿನ ದೇವಾಲಯದೊಳಗಿನಿಂದ ತನ್ನ ತಂದೆಯಾದ ನೆಬೂಕದ್ನೆಚ್ಚರನು ತೆಗೆದುಕೊಂಡು ಬಂದಿದ್ದ ಬೆಳ್ಳಿ, ಬಂಗಾರಗಳ ಪಾತ್ರೆಗಳಲ್ಲಿ ತಾನೂ, ತನ್ನ ಮುಖಂಡರೂ, ಪತ್ನಿಯರೂ ಮತ್ತು ಉಪಪತ್ನಿಯರೂ ಕುಡಿಯುವುದಕ್ಕಾಗಿ ಅವುಗಳನ್ನು ತರುವಂತೆ ಆಜ್ಞಾಪಿಸಿದನು.


ಅದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯದಿಂದ ತೆಗೆದುಕೊಂಡುಹೋಗಿ, ಬಾಬಿಲೋನಿನ ದೇವಾಲಯದಲ್ಲಿಟ್ಟಿದ್ದ ಬೆಳ್ಳಿಬಂಗಾರದ ದೇವಸ್ಥಾನ ಪಾತ್ರೆಗಳನ್ನು ಅಲ್ಲಿಂದ ತೆಗಿಸಿ ತಾನು ದೇಶಾಧಿಪತಿಯನ್ನಾಗಿ ನೇಮಿಸಿದ ಶೆಷ್ಬಚ್ಚರನಿಗೆ ಒಪ್ಪಿಸಿದನು.


ಇದಲ್ಲದೆ ನಾನು ಯಾಜಕರಿಗೂ ಈ ಸಕಲಜನರಿಗೂ ಹೀಗೆ ನುಡಿದೆನು, “ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಯೆಹೋವನ ಆಲಯದ ಉಪಕರಣಗಳು ಬೇಗನೆ ಬಾಬೆಲಿನಿಂದ ಹಿಂದಕ್ಕೆ ತರಲ್ಪಡುವವು’ ಎಂಬುದಾಗಿ ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ; ನಿಮಗೆ ಸುಳ್ಳನ್ನು ಸಾರುತ್ತಾರೆ.


ಕಾವಲು ದಂಡಿನ ಅಧಿಪತಿಯು ಬೆಳ್ಳಿಬಂಗಾರದ ಪಂಚಪಾತ್ರೆ, ಅಗ್ಗಿಷ್ಟಿಕೆ, ಬಟ್ಟಲು, ಬೋಗುಣಿ, ದೀಪಸ್ತಂಭ, ಧೂಪಾರತಿ, ತಾಂಬಾಣ ಮೊದಲಾದವುಗಳನ್ನು ತೆಗೆದುಕೊಂಡನು.


ನೆಬೂಕದ್ನೆಚ್ಚರನು ವರ್ಷ ಆರಂಭದಲ್ಲಿ ಅವನನ್ನೂ, ಯೆಹೋವನ ದೇವಾಲಯದ ಬೆಲೆಯುಳ್ಳ ಸಾಮಾನುಗಳನ್ನು ಬಾಬಿಲೋನಿಗೆ ತರಿಸಿಕೊಂಡು, ಅವನ ಚಿಕ್ಕಪ್ಪನಾದ ಚಿದ್ಕೀಯನನ್ನು ಯೆಹೂದ ಮತ್ತು ಯೆರೂಸಲೇಮಿನ ಅರಸನನ್ನಾಗಿ ಮಾಡಿದನು.


ಇದಲ್ಲದೆ, ಯೆಹೋವನು ಮುಂತಿಳಿಸಿದ ಪ್ರಕಾರ ಅವನು ಯೆಹೋವನ ಆಲಯದ ಮತ್ತು ಅರಸನ ಅರಮನೆಯ ಭಂಡಾರಗಳಲ್ಲಿದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ದ್ರವ್ಯವನ್ನು ತೆಗೆದುಕೊಂಡು ಹೋದನು. ಇಸ್ರಾಯೇಲರ ಅರಸನಾದ ಸೊಲೊಮೋನನು ಯೆಹೋವನ ಆಲಯಕ್ಕಾಗಿ ಮಾಡಿಸಿದ್ದ ಬಂಗಾರದ ಎಲ್ಲಾ ಸಾಮಾನುಗಳನ್ನು ಮುರಿದುಬಿಟ್ಟನು.


ಆಗ ಕರ್ತನು ಯೆಹೂದದ ಅರಸನಾದ ಯೆಹೋಯಾಕೀಮನನ್ನೂ, ದೇವಾಲಯದ ಅನೇಕ ಪಾತ್ರೆಗಳನ್ನೂ ಅವನ ವಶಕ್ಕೆ ಕೊಡಲು ಅವನು ಅವುಗಳನ್ನು ಶಿನಾರ್ ದೇಶಕ್ಕೆ ಸಾಗಿಸಿ ತನ್ನ ದೇವರ ಮಂದಿರಕ್ಕೆ ತಂದು ಆ ದೇವರ ಭಂಡಾರದಲ್ಲಿ ಸೇರಿಸಿಬಿಟ್ಟನು.


ದೇವಾಲಯದ ಎಲ್ಲಾ ಚಿಕ್ಕ, ದೊಡ್ಡ ಸಾಮಾನುಗಳನ್ನೂ ಯೆಹೋವನ ಮಂದಿರದ ಭಂಡಾರದ ಹಾಗೂ ಅರಸನ ಮತ್ತು ಅವನ ಸರದಾರರ ಭಂಡಾರದ ದ್ರವ್ಯವನ್ನೂ ಬಾಬಿಲೋನಿಗೆ ಒಯ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು