Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನ ಧರ್ಮಶಾಸ್ತ್ರವನ್ನು ಅಭ್ಯಸಿಸಿ ಅನುಸರಿಸಲೂ ಇಸ್ರಯೇಲರಿಗೆ ಅದರ ವಿಧಿನಿಯಮಗಳನ್ನು ಕಲಿಸಲೂ ಅವನು ದೃಢಮನಸ್ಸು ಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನು ಯೆಹೋವ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ ಇಸ್ರಾಯೇಲ್ಯರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಲಿಕ್ಕೂ ದೃಢಮಾಡಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಧರ್ಮಶಾಸ್ತ್ರವನ್ನು ಓದಲೂ, ಅಭ್ಯಾಸಿಸಲೂ ಮತ್ತು ಅದಕ್ಕೆ ವಿಧೇಯನಾಗಲು ಎಜ್ರನು ತನ್ನ ಸಮಯವನ್ನೆಲ್ಲಾ ವಿನಿಯೋಗಿಸಿದನು. ಯೆಹೋವನ ಆಜ್ಞೆಗಳನ್ನು, ವಿಧಿನಿಯಮಗಳನ್ನು ಇಸ್ರೇಲ್ ಜನರಿಗೆ ಕಲಿಸಬೇಕೆಂಬ ಇಚ್ಫೆ ಅವನಲ್ಲಿತ್ತು. ಯೆಹೋವನ ಕಟ್ಟಳೆಗಳಿಗೆ ವಿಧೇಯರಾಗುವಂತೆ ಇಸ್ರೇಲರೆಲ್ಲರಿಗೆ ಸಹಾಯ ಮಾಡಬೇಕೆಂಬ ಅಭಿಲಾಷೆಯು ಅವನಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಏಕೆಂದರೆ ಎಜ್ರನು ಯೆಹೋವ ದೇವರ ನಿಯಮವನ್ನು ಅಭ್ಯಾಸ ಮಾಡುವುದಕ್ಕೂ ಅದನ್ನು ಕೈಗೊಂಡು ನಡೆಯುವುದಕ್ಕೂ ಇಸ್ರಾಯೇಲರಿಗೆ ಅದರ ತೀರ್ಪುಗಳನ್ನು ಹಾಗೂ ನಿಯಮಗಳನ್ನು ಬೋಧಿಸುವುದಕ್ಕೂ ತನ್ನನ್ನು ಪ್ರತಿಷ್ಠಿಸಿಕೊಂಡಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:10
30 ತಿಳಿವುಗಳ ಹೋಲಿಕೆ  

ದೇವರ ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತನಾಗಿರು. ಪೂರ್ಣ ದೀರ್ಘಶಾಂತಿಯಿಂದ ಉಪದೇಶಿಸುತ್ತಾ ಖಂಡಿಸು, ಗದರಿಸು, ಎಚ್ಚರಿಸು.


“ಆದುದರಿಂದ, ಈ ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಬಂಡೆಯ ಮೇಲೆ ಮನೆಯನ್ನು ಕಟ್ಟಿಕೊಂಡ ಬುದ್ಧಿವಂತನಿಗೆ ಹೋಲುವನು.


ಜ್ಞಾನಾನುಸಾರವಾಗಿ ಮಾತನಾಡುವುದು ಯಾಜಕನ ತುಟಿಗಳ ಧರ್ಮವಷ್ಟೆ; ಅವನು ಸೇನಾಧೀಶ್ವರನಾದ ಯೆಹೋವನ ದೂತನಾಗಿರುವ ಕಾರಣ ಜನರು ಅವನ ಬಾಯಿಂದ ಧರ್ಮೋಪದೇಶವನ್ನು ಕೇಳುವುದು ಧರ್ಮ. ನೀವೋ ದಾರಿತಪ್ಪಿದ್ದೀರಿ;


ನೀವು ಇವುಗಳನ್ನು ತಿಳಿದುಕೊಂಡು ಇದರಂತೆ ಮಾಡಿದರೆ ನೀವು ಧನ್ಯರು.


ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.


“ಎಜ್ರನೇ, ನಿನ್ನ ಕೈಯಲ್ಲಿರುವ ನಿನ್ನ ದೇವರ ಜ್ಞಾನೋಪದೇಶಗ್ರಂಥಕ್ಕೆ ಅನುಸಾರವಾಗಿ ನ್ಯಾಯಾಧೀಶರನ್ನೂ ಮತ್ತು ಪಂಚಾಯತರನ್ನೂ ನೇಮಿಸು. ಅವರು ಹೊಳೆಯಾಚೆಯ ಇಸ್ರಾಯೇಲರಲ್ಲಿ ನಿನ್ನ ದೇವರ ಧರ್ಮವನ್ನು ಅರಿತಿರುವವರೆಲ್ಲರ ವ್ಯಾಜ್ಯಗಳನ್ನು ತೀರಿಸಲಿ. ಅರಿಯದವರಿಗೆ ನೀವು ಅದನ್ನು ಕಲಿಸಬೇಕು.


ಯೆಹೋವನ ಧರ್ಮಶಾಸ್ತ್ರವು ಲೋಪವಿಲ್ಲದ್ದು; ಅದು ಪ್ರಾಣವನ್ನು ಉಜ್ಜೀವಿಸಮಾಡುವಂಥದ್ದು. ಯೆಹೋವನ ಕಟ್ಟಳೆಗಳು ನಂಬಿಕೆಗೆ ಯೋಗ್ಯವಾದದ್ದು; ಅವು ಬುದ್ಧಿಹೀನರಿಗೆ ವಿವೇಕಪ್ರದವಾಗಿದೆ.


ಅವರು ಯಾಕೋಬ್ ವಂಶದವರಿಗೆ ನಿನ್ನ ನಿರ್ಣಯಗಳನ್ನು ತಿಳಿಸುವರು; ಇಸ್ರಾಯೇಲರಿಗೆ ನಿನ್ನ ಧರ್ಮಶಾಸ್ತ್ರವನ್ನು ಕಲಿಸುವರು. ನಿನ್ನ ಸನ್ನಿಧಿಯಲ್ಲಿ ಧೂಪಹಾಕುವರು; ನಿನ್ನ ಯಜ್ಞವೇದಿಯ ಮೇಲೆ ಸರ್ವಾಂಗಹೋಮಗಳನ್ನು ಸಮರ್ಪಿಸುವರು.


ನಮ್ಮ ಪೂರ್ವಿಕರಾದ ಅಬ್ರಹಾಮ್, ಇಸಾಕ್ ಮತ್ತು ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥಾ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿ ಉಳ್ಳವರಾಗಿರುವುದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು.


ಯೆಹೋವನೇ, ನೀನು ದೀನರ ಕೋರಿಕೆಯನ್ನು ನೆರವೇರಿಸುವವನೇ ಆಗಿದ್ದಿ; ಅವರ ಹೃದಯವನ್ನು ಧೈರ್ಯಪಡಿಸುತ್ತಿ; ಅವರ ಮೊರೆಗೆ ಕಿವಿಗೊಡುತ್ತಿ.


ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.


ನೀನಾದರೋ ಸ್ವಸ್ಥ ಬೋಧನೆಗೆ ಅನುಗುಣವಾಗಿ ಉಪದೇಶಮಾಡು.


ನಾನು ನಿನ್ನ ನಿಯಮಗಳನ್ನು ಅಭ್ಯಾಸಿಸುವವನಾದುದರಿಂದ, ಸರಾಗವಾಗಿ ನಡೆಯುವೆನು.


ದೇವರೇ, ನನ್ನ ಹೃದಯವು ಸ್ಥಿರವಾಗಿದೆ, ಸ್ಥಿರವಾಗಿದೆ. ನಾನು ವಾದ್ಯಗಳನ್ನು ನುಡಿಸುತ್ತಾ ಹಾಡುವೆನು.


ಹಿಜ್ಕೀಯನು ಯೆಹೋವನ ಸೇವೆಯಲ್ಲಿ ನಿಪುಣರಾದ ಎಲ್ಲಾ ಲೇವಿಯರೊಡನೆ ಪ್ರೀತಿಯಿಂದ ಮಾತನಾಡಿದನು. ನೇಮಕವಾದ ಏಳು ದಿನಗಳ ಹಬ್ಬದವರೆಗೂ ಜನರು ಸಮಾಧಾನ ಯಜ್ಞಗಳನ್ನು ಅರ್ಪಿಸುತ್ತಾ ತಮ್ಮ ಪೂರ್ವಿಕರ ದೇವರಾದ ಯೆಹೋವನನ್ನು ತಮ್ಮ ದೇವರೆಂದು ಅರಿಕೆಮಾಡಿಕೊಳ್ಳುತ್ತಾ ಔತಣಮಾಡಿದರು.


ಆದರೂ, ನೀನು ದೇಶದೊಳಗಿನಿಂದ ಅಶೇರ ವಿಗ್ರಹಸ್ತಂಭಗಳನ್ನು ತೆಗೆದು ಹಾಕಿ, ಯೆಹೋವನ ಭಕ್ತಿಯಲ್ಲಿ ಮನಸ್ಸಿಟ್ಟಿದ್ದರಿಂದ ನಿನ್ನಲ್ಲಿ ಒಳ್ಳೆಯದು ಉಂಟೆಂದು ತಿಳಿದು ಬಂದಿದೆ” ಎಂಬುದಾಗಿ ಹೇಳಿದನು.


ಅವನು ಯೆಹೋವನನ್ನು ಅನುಸರಿಸುವುದಕ್ಕೆ ಮನಸ್ಸುಮಾಡದೆ ದ್ರೋಹಿಯಾದನು.


ಆಗ ಸಮುವೇಲನು ಅವರಿಗೆ, “ನೀವು ಪೂರ್ಣಮನಸ್ಸಿನಿಂದ ಯೆಹೋವನ ಕಡೆಗೆ ತಿರುಗಿಕೊಂಡಿರುವುದಾದರೆ ನಿಮ್ಮ ಮಧ್ಯದಲ್ಲಿರುವ ಅಷ್ಟೋರೆತ್ ಮೊದಲಾದ ಅನ್ಯದೇವತೆಗಳನ್ನು ತೆಗೆದುಹಾಕಿ ಯೆಹೋವನ ಮೇಲೆಯೇ ಮನಸ್ಸಿಟ್ಟು ಆತನೊಬ್ಬನನ್ನೇ ಸೇವಿಸಿರಿ. ಆಗ ಆತನು ನಿಮ್ಮನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸಿ ಕಾಪಾಡುವನು” ಅಂದನು.


ಈ ಕಾರ್ಯಗಳ ವಿಷಯದಲ್ಲಿ ಬೋಧಿಸುತ್ತಾ, ಎಚ್ಚರಿಸುತ್ತಾ, ಪೂರ್ಣ ಅಧಿಕಾರದಿಂದ ಖಂಡಿಸುತ್ತಾ ಇರು. ಯಾರೂ ನಿನ್ನನ್ನು ತಿರಸ್ಕರಿಸದ ಹಾಗೆ ನೋಡಿಕೋ.


ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ, ಏಕಪತ್ನಿಯುಳ್ಳವನೂ, ಶಾಂತನೂ, ಜಿತೇಂದ್ರಿಯನೂ, ಮಾನಸ್ಥನೂ, ಅತಿಥಿಸತ್ಕಾರಮಾಡುವವನೂ, ಬೋಧಿಸಲು ಶಕ್ತನಾಗಿರಬೇಕು.


ಥೆಯೊಫಿಲನೇ, ನಾನು ಮೊದಲು ಬರೆದ ಪುಸ್ತಕದಲ್ಲಿ, ಯೇಸು ತಾನು ಆರಿಸಿಕೊಂಡಿದ್ದ ಅಪೊಸ್ತಲರಿಗೆ ಪವಿತ್ರಾತ್ಮನ ಮೂಲಕ ಅಪ್ಪಣೆಕೊಟ್ಟು,


ಐಗುಪ್ತದೇಶದಲ್ಲಿ ದಾಸರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.


ಆದುದರಿಂದ ಈ ಸಣ್ಣ ಆಜ್ಞೆಗಳಲ್ಲಿ ಒಂದನ್ನು ಮೀರಿ ನಡೆದು ಜನರಿಗೂ ಹಾಗೆ ಮಾಡುವುದಕ್ಕೆ ಬೋಧಿಸುವವನು ಪರಲೋಕ ರಾಜ್ಯದಲ್ಲಿ ಬಹಳ ಕನಿಷ್ಠನೆನ್ನಿಸಿಕೊಳ್ಳುವನು; ಆದರೆ ತಾನೇ ಸ್ವತಃ ಆ ಆಜ್ಞೆಗಳಂತೆ ನಡೆದುಕೊಂಡು ಜನರಿಗೂ ಹಾಗೆ ನಡೆಯಬೇಕೆಂದು ಬೋಧಿಸುವವನು ಪರಲೋಕ ರಾಜ್ಯದಲ್ಲಿ ಶ್ರೇಷ್ಠನೆನಿಸಿಕೊಳ್ಳುವನು.


ನೀನಂತು ಮನಸ್ಸನ್ನು ಪರಿವರ್ತಿಸಿಕೊಂಡು ದೇವರ ಕಡೆಗೆ ಕೈಗಳನ್ನೆತ್ತಿ ಸ್ತುತಿಸು.


ಯಾಜಕನು ಮತ್ತು ಶಾಸ್ತ್ರಿಯೂ, ಇಸ್ರಾಯೇಲರಿಗಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆಗಿದ್ದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರ.


ಕಡೆಯವರೆಗು ಯಾವಾಗಲೂ ನಿನ್ನ ನಿಬಂಧನೆಗಳನ್ನು ಕೈಗೊಳ್ಳುವುದಕ್ಕೆ ಮನಸ್ಸುಮಾಡಿದ್ದೇನೆ. ಸಾಮೆಕ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು