Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯಾಜಕನು ಮತ್ತು ಶಾಸ್ತ್ರಿಯೂ, ಇಸ್ರಾಯೇಲರಿಗಾಗಿ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆಗಿದ್ದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಯಾಜಕನು, ಶಾಸ್ತ್ರಿಯು ಹಾಗು ಇಸ್ರಯೇಲರಿಗೆ ಕೊಡಲಾದ ಸರ್ವೇಶ್ವರನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನು ಆದ ಎಜ್ರನಿಗೆ ಅರಸ ಅರ್ತಷಸ್ತನು ಕೊಟ್ಟ ಪತ್ರದ ನಕಲು ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯಾಜಕನೂ ಶಾಸ್ತ್ರಿಯೂ ಇಸ್ರಾಯೇಲ್ಯರಿಗೆ ಕೊಡಲ್ಪಟ್ಟ ಯೆಹೋವನ ಆಜ್ಞಾವಿಧಿಸೂತ್ರಗಳಲ್ಲಿ ವಿದ್ವಾಂಸನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ನಕಲು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಎಜ್ರನು ಯಾಜಕನೂ ಬೋಧಕನೂ ಆಗಿದ್ದನು. ಯೆಹೋವನು ಇಸ್ರೇಲರಿಗೆ ಕೊಟ್ಟಿರುವ ಕಟ್ಟಳೆಗಳನ್ನು, ವಿಧಿಗಳನ್ನು ಅವನು ಚೆನ್ನಾಗಿ ಅಭ್ಯಾಸ ಮಾಡಿಕೊಂಡಿದ್ದನು. ರಾಜನಾದ ಅರ್ತಷಸ್ತನು ಅವನಿಗೆ ಕೊಟ್ಟಿದ್ದ ಪತ್ರದಲ್ಲಿ ಹೀಗೆ ಬರೆದಿತ್ತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯಾಜಕನು, ನಿಯಮಶಾಸ್ತ್ರಿಯು ಹಾಗೂ ಇಸ್ರಾಯೇಲರಿಗೆ ಕೊಡಲಾದ ಯೆಹೋವ ದೇವರ ಆಜ್ಞಾಸೂತ್ರಗಳಲ್ಲಿ ವಿದ್ವಾಂಸನೂ ಆದ ಎಜ್ರನಿಗೆ ಅರಸನಾದ ಅರ್ತಷಸ್ತನು ಕೊಟ್ಟ ಪತ್ರದ ನಕಲು ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:11
9 ತಿಳಿವುಗಳ ಹೋಲಿಕೆ  

“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.


“ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ;


ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.


ಹೊಳೆಯ ಈಚೆಯ ಪ್ರದೇಶಗಳ ದೇಶಾಧಿಪತಿಯಾದ ತತ್ತೆನೈಯೂ, ಶೆತರ್ಬೋಜೆನೈಯೂ ಮತ್ತು ಹೊಳೆಯ ಈಚೆಯಲ್ಲಿ ಅವನ ಜೊತೆಗಾರರಾದ ಅಪರ್ಸತ್ಕಾಯರೂ ಅರಸನಾದ ದಾರ್ಯಾವೆಷನಿಗೆ ಕಳುಹಿಸಿದ ಪತ್ರದ ಪ್ರತಿಯು.


ಅವರು ಅರಸನಿಗೆ ಕಳುಹಿಸಿದ ಪತ್ರದ ಸಾರಾಂಶ ಹೀಗಿತ್ತು, “ಅರ್ತಷಸ್ತ ರಾಜರಿಗೆ, ನಿಮ್ಮ ಸೇವಕರಾದ ಹೊಳೆಯ ಈಚೆಯವರು.


ಎಜ್ರನು ಯೆಹೋವನ ಧರ್ಮಶಾಸ್ತ್ರವನ್ನು ಅಭ್ಯಾಸಿಸಿ ಅನುಸರಿಸಲಿಕ್ಕೂ, ಇಸ್ರಾಯೇಲರಿಗೆ ಅದರ ವಿಧಿನ್ಯಾಯಗಳನ್ನು ಕಲಿಸಬೇಕೆಂದು ದೃಢಮಾಡಿಕೊಂಡಿದ್ದನು.


“ರಾಜಾಧಿರಾಜನಾದ ಅರ್ತಷಸ್ತನು, ಯಾಜಕನೂ ಪರಲೋಕದೇವರ ಧರ್ಮಶಾಸ್ತ್ರದಲ್ಲಿ ಪ್ರವೀಣನೂ ಆದ ಎಜ್ರನಿಗೆ ತಿಳಿಸುವುದೇನೆಂದರೆ,


“ಅರ್ತಷಸ್ತ ರಾಜನಾದ ನಾನು ಹೊಳೆಯಾಚೆಯ ಪ್ರಾಂತ್ಯಗಳ ಭಂಡಾರಗಳ ಮುಖ್ಯಸ್ಥರಿಗೆ ಆಜ್ಞಾಪಿಸುವುದು ಏನೆಂದರೆ, ‘ಯಾಜಕರೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು