Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ನನ್ನ ರಾಜ್ಯದಲ್ಲಿರುವ ಇಸ್ರಾಯೇಲರು ತಮ್ಮ ಯಾಜಕರು ಮತ್ತು ಲೇವಿಯರು ಹಾಗು ಯೆರೂಸಲೇಮಿಗೆ ಹೋಗಬೇಕೆಂದು ಮನಸ್ಸುಳ್ಳವರೆಲ್ಲರೂ ನಿನ್ನ ಸಂಗಡ ಹೋಗಬಹುದೆಂದು ಅಪ್ಪಣೆ ಕೊಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ನನ್ನ ರಾಜ್ಯದಲ್ಲಿರುವ ಇಸ್ರಯೇಲರಲ್ಲಿ, ಯಾಜಕರಲ್ಲಿ ಹಾಗು ಲೇವಿಯರಲ್ಲಿ ಯಾರು ಯಾರಿಗೆ ಜೆರುಸಲೇಮಿಗೆ ಹೋಗುವುದಕ್ಕೆ ಮನಸ್ಸಿದೆಯೋ ಅವರೆಲ್ಲರು ನಿನ್ನೊಂದಿಗೆ ಹೋಗಬಹುದೆಂದು ಅಪ್ಪಣೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ನನ್ನ ರಾಜ್ಯದಲ್ಲಿರುವ ಇಸ್ರಾಯೇಲ್ಯರಲ್ಲಿಯೂ ಯಾಜಕರಲ್ಲಿಯೂ ಲೇವಿಯರಲ್ಲಿಯೂ ಯೆರೂಸಲೇವಿುಗೆ ಹೋಗುವದಕ್ಕೆ ಮನಸ್ಸುಳ್ಳವರೆಲ್ಲರೂ ನಿನ್ನೊಂದಿಗೆ ಹೋಗಬಹುದೆಂದು ಅಪ್ಪಣೆಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಈ ಆಜ್ಞೆಯನ್ನು ಕೊಡುವ ನಾನು ತಿಳಿಸುವುದೇನೆಂದರೆ, ನನ್ನ ಸಾಮ್ರಾಜ್ಯದಲ್ಲಿರುವ ಇಸ್ರೇಲರ ಯಾಜಕರು, ಲೇವಿಯರು, ಜನರೆಲ್ಲರೂ ಎಜ್ರನೊಂದಿಗೆ ಜೆರುಸಲೇಮಿಗೆ ಹೋಗಲು ಇಚ್ಛಿಸುವುದಾದರೆ ಅವರು ಹೋಗಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನನ್ನ ರಾಜ್ಯದಲ್ಲಿರುವ ಇಸ್ರಾಯೇಲರಲ್ಲಿ, ಯಾಜಕರಲ್ಲಿ ಹಾಗು ಲೇವಿಯರಲ್ಲಿ ಯಾರಿಗೆ ಯೆರೂಸಲೇಮಿಗೆ ಹೋಗುವುದಕ್ಕೆ ಮನಸ್ಸಿದೆಯೋ, ಅವರೆಲ್ಲರು ನಿನ್ನೊಂದಿಗೆ ಹೋಗಬಹುದೆಂದು ಅಪ್ಪಣೆ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:13
11 ತಿಳಿವುಗಳ ಹೋಲಿಕೆ  

ಅರಸನಾದ ದಾರ್ಯಾವೆಷನು ಬಾಬಿಲೋನಿನ ಗ್ರಂಥಸಂಗ್ರಹವಾಗಿದ್ದ ಬಾಬಿಲೋನಿನ ಭಂಡಾರದಲ್ಲಿ ರಾಜಾಜ್ಞೆಯನ್ನು ಹುಡುಕುವುದಕ್ಕೆ ಆಜ್ಞೆಯನ್ನು ಹೊರಡಿಸಿದನು.


ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.


ಯಾಕೆಂದರೆ ದೇವರೇ ತನ್ನ ಸುಚಿತ್ತವನ್ನು ನೆರವೇರಿಸಬೇಕೆಂದು ನಿಮ್ಮಲ್ಲಿ ಉದ್ದೇಶವನ್ನೂ ಮತ್ತು ಪ್ರಯತ್ನವನ್ನೂ ಉಂಟುಮಾಡುವವನಾಗಿದ್ದಾನೆ.


ಆತನು ಅವುಗಳನ್ನು ಯುಗಯುಗಾಂತರಕ್ಕೂ ಸ್ಥಾಪಿಸಿದ್ದಾನೆ, ಆತನು ಎಂದಿಗೂ ಮೀರಲಾಗದಂಥ ಕಟ್ಟಳೆಯನ್ನು ವಿಧಿಸಿದ್ದಾನೆ.


ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.


ಆಗ ಅರಸನು ಹಾಗೆ ಮಾಡುವುದಕ್ಕೆ ಅಪ್ಪಣೆಕೊಟ್ಟನು. ಕೂಡಲೆ ಈ ಸಂಬಂಧವಾದ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾಯಿತು ಮತ್ತು ಹಾಮಾನನ ಹತ್ತು ಮಕ್ಕಳನ್ನು ಗಲ್ಲಿಗೆ ಏರಿಸಲಾಯಿತು.


ಈ ನಿರ್ಣಯವು ಶೂಷನ್ ಅರಮನೆಯಲ್ಲಿ ಪ್ರಕಟವಾದ ಕೂಡಲೇ ಅಂಚೆಯವರು ರಾಜಾಜ್ಞೆಯ ಮೇರೆಗೆ ಶೀಘ್ರವಾಗಿ ಹೊರಟರು. ಅರಸನಾದರೋ ಹಾಮಾನನನೊಡನೆ ಮದ್ಯಪಾನ ಮಾಡುವುದಕ್ಕೆ ಕುಳಿತುಕೊಂಡನು. ಅತ್ತ ಶೂಷನ್ ಪಟ್ಟಣದಲ್ಲಿ ತಳಮಳ ಉಂಟಾಯಿತು.


ಆದರೆ ಬಾಬಿಲೋನಿನ ಅರಸನಾದ ಕೋರೆಷನು ತನ್ನ ಆಳ್ವಿಕೆಯ ಮೊದಲನೆಯ ವರ್ಷದಲ್ಲಿ ಈ ದೇವಾಲಯವನ್ನು ಪುನಃ ಕಟ್ಟುವುದಕ್ಕೆ ಅಪ್ಪಣೆಕೊಟ್ಟನು.


ನಿಮ್ಮಲ್ಲಿ ಯಾರು ಆತನ ಪ್ರಜೆಗಳಾಗಿರುತ್ತಾರೋ, ಅವರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಿ ಅಲ್ಲಿ ವಾಸಿಸುತ್ತಿರುವ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಲಿ. ಅವರ ದೇವರು ಅವರ ಸಂಗಡ ಇರಲಿ.


ಅವರು, “ಸರ್ವಜನರು ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಪಸ್ಕಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿಗೆ ಬರಬೇಕು” ಎಂಬುದಾಗಿ ಬೇರ್ಷೆಬದಿಂದ ದಾನ್ ವರೆಗೂ ವಾಸಮಾಡುತ್ತಿದ್ದ ಇಸ್ರಾಯೇಲರೊಳಗೆ ಡಂಗುರ ಹೊಡಿಸಬೇಕೆಂದು ನಿರ್ಣಯಿಸಿದರು. ಜನರಲ್ಲಿ ಹೆಚ್ಚು ಮಂದಿ ಆ ವರೆಗೂ ಧರ್ಮಶಾಸ್ತ್ರವಿಧಿಯ ಪ್ರಕಾರ ಪಸ್ಕಹಬ್ಬವನ್ನು ಆಚರಿಸಿರಲಿಲ್ಲ.


“ನಾನು ಆಳುವ ರಾಜ್ಯದವರೆಲ್ಲರೂ ದಾನಿಯೇಲನ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕೆಂದು ಆಜ್ಞಾಪಿಸುತ್ತೇನೆ; ಆತನೇ ಜೀವಸ್ವರೂಪನಾದ ಸನಾತನ ದೇವರು, ಆತನ ರಾಜ್ಯವು ಎಂದಿಗೂ ಅಳಿಯದು, ಆತನ ಆಳ್ವಿಕೆಯು ಶಾಶ್ವತವಾಗಿರುವುದು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು