ಎಜ್ರ 7:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶಗ್ರಂಥಕ್ಕೆ ಅನುಸಾರವಾಗಿದೆಯೋ ಇಲ್ಲವೋ ಎಂದು ಪರಿಶೀಲಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನೀನು ಹೋಗಿ, ಜುದೇಯದವರ ಮತ್ತು ಜೆರುಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶ ಗ್ರಂಥಕ್ಕೆ ಅನುಗುಣವಾಗಿ ಇದೆಯೋ ಇಲ್ಲವೋ ವಿಮರ್ಶೆಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇವಿುನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ಧರ್ಮೋಪದೇಶ ಗ್ರಂಥಕ್ಕೆ ಅನುಸಾರವಾಗಿದೆಯೋ ಇಲ್ಲವೋ ವಿಮರ್ಶೆ ಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಎಜ್ರನೇ, ನಾನೂ ನನ್ನ ಏಳು ಮಂದಿ ಸಲಹೆಗಾರರೂ ನಿನ್ನನ್ನು ಯೆಹೂದಕ್ಕೆ ಮತ್ತು ಜೆರುಸಲೇಮಿಗೆ ಕಳುಹಿಸುತ್ತೇವೆ. ಅಲ್ಲಿ ನೀನೂ ನಿನ್ನ ಜನರೂ ದೇವರ ಕಟ್ಟಳೆಗಳಿಗೆ ವಿಧೇಯರಾಗಿರುವಂತೆ ನೋಡಿಕೊ. ಆ ಕಟ್ಟಳೆಗಳು ನಿನ್ನ ಬಳಿಯಲ್ಲಿ ಇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನೀನು ಹೋಗಿ ಯೆಹೂದದವರ ಮತ್ತು ಯೆರೂಸಲೇಮಿನವರ ಆಚರಣೆಯು ನಿನ್ನ ಕೈಯಲ್ಲಿರುವ ನಿನ್ನ ದೇವರ ನಿಯಮ ಗ್ರಂಥಕ್ಕೆ ಅನುಗುಣವಾಗಿ ಇದೆಯೋ, ಇಲ್ಲವೋ ವಿಮರ್ಶೆ ಮಾಡಬೇಕು. ಅಧ್ಯಾಯವನ್ನು ನೋಡಿ |
ಮತ್ತು ತನ್ನ ಹೆಸರನ್ನು ಸ್ಥಾಪಿಸುವುದಕ್ಕೋಸ್ಕರ ಆ ಸ್ಥಳವನ್ನು ಆರಿಸಿಕೊಂಡ ದೇವರು ಈ ಆಜ್ಞೆಯನ್ನು ಬದಲಿಸುವುದಕ್ಕೂ, ಯೆರೂಸಲೇಮಿನ ದೇವಾಲಯವನ್ನು ನಾಶಮಾಡುವುದಕ್ಕೂ ಕೈಯೆತ್ತುವ ಪ್ರತಿಯೊಬ್ಬ ರಾಜನನ್ನೂ ಮತ್ತು ಪ್ರತಿಯೊಂದು ಜನಾಂಗವನ್ನೂ ಕೆಡವಿ ಹಾಕಲಿ. ದಾರ್ಯಾವೆಷನಾದ ನಾನು ಆಜ್ಞೆಯನ್ನು ಕೊಟ್ಟಿದ್ದೇನೆ, ಅದನ್ನು ಉದಾಸೀನತೆಯಿಂದ ಅಲಕ್ಷಿಸದೆ ಕೈಕೊಳ್ಳಬೇಕು” ಎಂದು ತಿಳಿಸಿದನು.