Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, ಇಸ್ರಾಯೇಲ್ ಸಾಧಾರಣಜನರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವ ಇಚ್ಛೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಜನ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಬಾಬಿಲೋನ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರವನ್ನು, ಹಾಗು ಇಸ್ರಯೇಲ್ ಜನಸಾಮಾನ್ಯರೂ ಯಾಜಕರೂ ಜೆರುಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವಂತ ಇಚ್ಛೆಯಿಂದ ಕೊಡುವ ಕಾಣಿಕೆಗಳನ್ನು, ಅಲ್ಲಿಗೆ ಒಪ್ಪಿಸಬೇಕು. ಹೀಗೆಂದು ತಿಳಿಸಿ ನಾನೂ ಮತ್ತು ನನ್ನ ಏಳು ಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬಾಬೆಲ್ ಸಂಸ್ಥಾನದಲ್ಲಿ ನಿನಗೆ ಸಿಕ್ಕುವ ಬೆಳ್ಳಿಬಂಗಾರ, [ಇಸ್ರಾಯೇಲ್] ಸಾಧಾರಣಜನರೂ ಯಾಜಕರೂ ಯೆರೂಸಲೇವಿುನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವೇಚ್ಫೆಯಿಂದ ಕೊಡುವ ಕಾಣಿಕೆ ಇವುಗಳನ್ನು ಅಲ್ಲಿಗೆ ಒಪ್ಪಿಸಬೇಕು; ಹೀಗೆಂದು ನಾನೂ ಮತ್ತು ನನ್ನ ಏಳು ಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದಾರಿಯಲ್ಲಿ ಬಾಬಿಲೋನ್ ಸಾಮ್ರಾಜ್ಯದ ಎಲ್ಲಾ ಸಂಸ್ಥಾನಗಳನ್ನು ಸಂದರ್ಶಿಸಬೇಕು. ಅಲ್ಲಿ ವಾಸಿಸುವ ನಿನ್ನ ಜನರಿಂದಲೂ ಯಾಜಕರಿಂದಲೂ ಲೇವಿಯರಿಂದಲೂ ಬೆಳ್ಳಿಬಂಗಾರಗಳನ್ನು ಕಾಣಿಕೆಯಾಗಿ ಸ್ವೀಕರಿಸು. ಆ ಕಾಣಿಕೆಗಳು ಜೆರುಸಲೇಮಿನಲ್ಲಿರುವ ದೇವಾಲಯಕ್ಕಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬಾಬಿಲೋನ್ ಸಂಸ್ಥಾನದಲ್ಲಿ ಸಿಕ್ಕುವ ಬೆಳ್ಳಿಬಂಗಾರವನ್ನು ಹಾಗು ಇಸ್ರಾಯೇಲ್ ಜನ ಸಾಮಾನ್ಯರೂ, ಯಾಜಕರೂ, ಯೆರೂಸಲೇಮಿನಲ್ಲಿರುವ ತಮ್ಮ ದೇವರ ಆಲಯಕ್ಕಾಗಿ ಸ್ವಂತ ಇಚ್ಛೆಯಿಂದ ಕೊಡುವ ಕಾಣಿಕೆಗಳನ್ನು ಅಲ್ಲಿಗೆ ಒಪ್ಪಿಸಬೇಕು. ಹೀಗೆಂದು ತಿಳಿಸಿ, ನಾನೂ ಮತ್ತು ನನ್ನ ಏಳುಮಂದಿ ಮಂತ್ರಿಗಳೂ ನಿನ್ನನ್ನು ಕಳುಹಿಸುತ್ತಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:16
13 ತಿಳಿವುಗಳ ಹೋಲಿಕೆ  

ಆಗ ಇಸ್ರಾಯೇಲ್ ಗೋತ್ರಕುಟುಂಬಗಳ ಪ್ರಧಾನರೂ, ಸಹಸ್ರಾಧಿಪತಿಗಳೂ, ಅರಸನ ಕೆಲಸದವರ ಮುಖ್ಯಸ್ಥರೂ, ದೇವಾಲಯದ ಕೆಲಸಕ್ಕೋಸ್ಕರ ಸ್ವ ಇಚ್ಛೆಯಿಂದ


ಅವರ ನೆರೆಯವರೆಲ್ಲರೂ ಕಾಣಿಕೆಗಳನ್ನು ಕೊಟ್ಟಿದ್ದಲ್ಲದೆ ಅವರಿಗೆ ಬೆಳ್ಳಿಯ ಸಾಮಾನು, ಬಂಗಾರ, ಸರಕು, ಪಶು, ಶ್ರೇಷ್ಠವಸ್ತು ಇವುಗಳನ್ನೂ ಕೊಟ್ಟು ಸಹಾಯಮಾಡಿದರು.


ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ” ಎಂದು ಪ್ರಕಟಿಸಿದನು.


ಅವರು ಪೂರ್ಣಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಯೆಹೋವನಿಗೆ ಕಾಣಿಕೆ ನೀಡಿದ್ದನ್ನು ನೋಡಿ ಜನರೆಲ್ಲರೂ ಸಂತೋಷಪಟ್ಟರು. ಅರಸನಾದ ದಾವೀದನಿಗೂ ಬಹಳ ಸಂತೋಷವಾಯಿತು.


ಪ್ರತಿಯೊಬ್ಬನೂ ತನ್ನ ತನ್ನ ಹೃದಯದಲ್ಲಿ ನಿರ್ಣಯಿಸಿಕೊಂಡ ಪ್ರಕಾರ ಕೊಡಲಿ; ದುಃಖದಿಂದಾಗಲಿ ಬಲವಂತದಿಂದಾಗಲಿ ಯಾರೂ ಕೊಡಬಾರದು; ಯಾಕೆಂದರೆ ಸಂತೋಷವಾಗಿ ಕೊಡುವವನನ್ನು ದೇವರು ಪ್ರೀತಿಸುವನು.


ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ಆದರೆ ನಾನು ನಿನಗೋಸ್ಕರ ಒಂದು ಆಲಯವನ್ನು, ನೀನು ಶಾಶ್ವತವಾಗಿ ವಾಸಮಾಡತಕ್ಕ ಸ್ಥಳವಾಗಿರಲೆಂದು ನಾನು ಕಟ್ಟಿಸಿದ್ದೇನೆ” ಎಂದನು.


ಆತನು ಹೇಳಿದ್ದೇನೆಂದರೆ, ‘ನನ್ನ ಜನರಾದ ಇಸ್ರಾಯೇಲರನ್ನು ಐಗುಪ್ತ ದೇಶದಿಂದ ಬರಮಾಡಿದ ದಿನ ಮೊದಲುಗೊಂಡು ನನ್ನ ಹೆಸರು ಅದರಲ್ಲಿ ಇರುವ ಹಾಗೆ ಆಲಯವನ್ನು ಕಟ್ಟುವುದಕ್ಕಾಗಿ ಇಸ್ರಾಯೇಲರ ಕುಲಗಳಲ್ಲಿ ಯಾವ ಪಟ್ಟಣವನ್ನೂ, ನನ್ನ ಆಲಯ ಸ್ಥಾನವನ್ನಾಗಿ ಆರಿಸಿಕೊಳ್ಳಲಿಲ್ಲ; ನನ್ನ ಪ್ರಜೆಗಳಾದ ಇಸ್ರಾಯೇಲರ ಪ್ರಭುವಾಗಿರುವುದಕ್ಕಾಗಿ ಯಾವ ವ್ಯಕ್ತಿಯನ್ನು ಆರಿಸಿಕೊಂಡದ್ದೂ ಇಲ್ಲ.


ಆದರೆ ಈಗ ನನ್ನ ಹೆಸರಿಗೋಸ್ಕರ ಯೆರೂಸಲೇಮನ್ನೂ ನನ್ನ ಪ್ರಜೆಗಳಾದ ಇಸ್ರಾಯೇಲರನ್ನು ಆಳುವುದಕ್ಕೋಸ್ಕರ ದಾವೀದನನ್ನೂ ಆರಿಸಿಕೊಂಡಿದ್ದೇನೆ’ ಎಂದು ಹೇಳಿದನು.


ಮೂಡಣದಿಕ್ಕಿನ ದ್ವಾರಪಾಲಕನಾಗಿದ್ದ ಇಮ್ನನ ಮಗನಾದ ಕೋರೆ ಎಂಬ ಲೇವಿಯನು, ಜನರು ಸ್ವಂತ ಇಚ್ಛೆಯಿಂದ ದೇವರಿಗೆ ಕಾಣಿಕೆಯಾಗಿ ಸಮರ್ಪಿಸುತ್ತಿದ್ದ ವಸ್ತುಗಳ ಮೇಲ್ವಿಚಾರಕನಾಗಿದ್ದನು. ಅಲ್ಲದೆ ಯೆಹೋವನ ನೈವೇದ್ಯಕ್ಕಾಗಿ ಪ್ರತ್ಯೇಕಿಸಲ್ಪಟ್ಟ ದ್ರವ್ಯ, ಮಹಾಪರಿಶುದ್ಧ ವಸ್ತು, ಇವುಗಳನ್ನು ಹಂಚಿಕೊಡುವವನೂ ಆಗಿದ್ದನು.


ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ದೇವರಿಗೆ, ಕೀರ್ತಿ ಉಂಟಾಗಲಿ, ಯೆಹೋವನಿಗೆ ಸ್ತೋತ್ರ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು