ಎಜ್ರ 7:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇದಲ್ಲದೆ ಆ ದೇವಾಲಯದ ಸೇವೆಯಲ್ಲಿರುವ ಯಾಜಕರು, ಲೇವಿಯರು, ಗಾಯಕರು, ದ್ವಾರಪಾಲಕರು, ದಾಸರು ಮುಂತಾದ ಸೇವಕರಲ್ಲಿ ಯಾರಿಂದಲೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.’ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇದಲ್ಲದೆ, ಆ ದೇವಾಲಯದ ಪರಿಚರ್ಯೆಯಲ್ಲಿದ್ದ, ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ಚಾಕರ ಮುಂತಾದ ಸೇವಕರಲ್ಲಿ ಯಾವನಿಂದಲೂ ಶುಲ್ಕ, ತೆರಿಗೆ, ಸುಂಕ ಇವುಗಳನ್ನು ವಸೂಲಿ ಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಇದಲ್ಲದೆ ಆ ದೇವಾಲಯದ ಯಾಜಕ ಲೇವಿಯ ಗಾಯಕ ದ್ವಾರಪಾಲಕ ದಾಸ ಮುಂತಾದ ಸೇವಕರಲ್ಲಿ ಯಾವನಿಂದಾದರೂ ಕಪ್ಪ, ತೆರಿಗೆ, ಸುಂಕ ಇವುಗಳನ್ನು ವಸೂಲಿ ಮಾಡುವದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬದಾಗಿ ತಿಳಿದಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನಾನು ನಿಮಗೆ ತಿಳಿಯಪಡಿಸುವುದೇನೆಂದರೆ: ಯಾಜಕರಿಂದ, ಲೇವಿಯರಿಂದ, ಗಾಯಕರಿಂದ, ದ್ವಾರಪಾಲಕರಿಂದ ಮತ್ತು ದೇವಾಲಯದ ಸೇವಕರಿಂದ ತೆರಿಗೆವಸೂಲಿ ಮಾಡುವುದು ನ್ಯಾಯಬಾಹಿರವಾದದ್ದು. ಅವರು ಯಾವ ರೀತಿಯ ತೆರಿಗೆಯನ್ನಾಗಲಿ ಸುಂಕವನ್ನಾಗಲಿ ಕಪ್ಪಕಾಣಿಕೆಯನ್ನಾಗಲಿ ಅರಸನಿಗೆ ಸಲ್ಲಿಸಬೇಕಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇದಲ್ಲದೆ, ಆ ದೇವಾಲಯದ ಯಾಜಕ, ಲೇವಿಯ, ಗಾಯಕ, ದ್ವಾರಪಾಲಕ, ಚಾಕರ ಮುಂತಾದ ಸೇವಕರಲ್ಲಿ ಯಾವನಿಂದಲೂ ಶುಲ್ಕ, ತೆರಿಗೆ, ಸುಂಕ, ಇವುಗಳನ್ನು ವಸೂಲಿ ಮಾಡುವುದಕ್ಕೆ ನಿಮಗೆ ಅಧಿಕಾರವಿಲ್ಲ ಎಂಬುದು ತಿಳಿದಿರಲಿ.” ಅಧ್ಯಾಯವನ್ನು ನೋಡಿ |