ಎಜ್ರ 7:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನ್ನೊಂದಿಗೆ ಇರುವುದರಿಂದ ಅರಸನ ಮುಂದೆ ನನಗೆ ದೊರಕ್ಕಿದ್ದರಿಂದ ನಾನು ಧೈರ್ಯವಾಗಿ ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವು ಜನ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅರಸನ, ಅವನ ಮಂತ್ರಿಗಳ ಮತ್ತು ಅವನ ಎಲ್ಲ ವಿಶಿಷ್ಟ ಪದಾಧಿಕಾರಿಗಳ ಮುಂದೆ ನನಗೆ ದೇವರು ದಯೆತೋರಿಸಿದ್ದಾರೆ. ನನ್ನ ದೇವರಾದ ಸರ್ವೇಶ್ವರನ ಕೃಪಾಹಸ್ತ ನನ್ನ ಮೇಲಿದ್ದುದರಿಂದಲೇ ನಾನು ಧೈರ್ಯ ತಂದುಕೊಂಡು, ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವುಮಂದಿ ಇಸ್ರಯೇಲ್ ಮುಖಂಡರನ್ನು ಒಂದುಗೂಡಿಸಿಕೊಂಡೆ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅರಸನ, ಅವನ ಮಂತ್ರಿಗಳ ಮತ್ತು ಅವನ ಎಲ್ಲಾ ಶ್ರೇಷ್ಠರಾದ ಸರದಾರರ ಮುಂದೆ ನನಗೆ ದಯೆತೋರಿಸಿದ್ದಾನೆ. ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನಗೆ ದೊರಕಿದ್ದರಿಂದ ನಾನು ಧೈರ್ಯತಂದುಕೊಂಡು ನನ್ನೊಂದಿಗೆ ಪ್ರಯಾಣ ಮಾಡುವದಕ್ಕೆ ಕೆಲವು ಮಂದಿ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ರಾಜನ, ಅವನ ಮುಖ್ಯಾಧಿಕಾರಿಗಳ ಮತ್ತು ಅವನ ಸಲಹೆಗಾರರ ಸಮ್ಮುಖದಲ್ಲಿ ಯೆಹೋವನು ನನ್ನ ಮೇಲಿಟ್ಟಿರುವ ಅಗಾಧ ಪ್ರೀತಿಯನ್ನು ಪ್ರಕಟಪಡಿಸಿದನು. ದೇವರಾದ ಯೆಹೋವನು ನನ್ನ ಸಂಗಡವಿದ್ದುದರಿಂದ ನಾನು ಧೈರ್ಯಗೊಂಡೆನು. ನನ್ನೊಂದಿಗೆ ಜೆರುಸಲೇಮಿಗೆ ಹೋಗಲು ಮನಸ್ಸುಳ್ಳ ಇಸ್ರೇಲ್ ನಾಯಕರನ್ನು ನಾನು ಒಟ್ಟುಗೂಡಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಅರಸನ ಮುಂದೆಯೂ, ಅವನ ಸಲಹೆಗಾರರ ಮುಂದೆಯೂ, ಅರಸನ ಪರಾಕ್ರಮವುಳ್ಳ ಪ್ರಧಾನರ ಮುಂದೆಯೂ ನನಗೆ ಕೃಪೆತೋರಿಸಿದ್ದಾರೆ. ಹೀಗೆಯೇ ನನ್ನ ದೇವರಾಗಿರುವ ಯೆಹೋವ ದೇವರ ಹಸ್ತವು ನನ್ನ ಮೇಲೆ ಇದ್ದುದರಿಂದ, ನಾನು ಧೈರ್ಯಗೊಂಡು ಇಸ್ರಾಯೇಲಿನೊಳಗಿಂದ ಮುಖ್ಯಸ್ಥರನ್ನು ನನ್ನ ಸಂಗಡ ಹೋಗಲು ಕೂಡಿಸಿಕೊಂಡೆನು,” ಎಂದನು. ಅಧ್ಯಾಯವನ್ನು ನೋಡಿ |