Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಬುಕ್ಕೀಯನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನಯಾಜಕನಾದ ಆರೋನನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇವನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನ ಯಾಜಕನಾದ ಆರೋನನ ಮಗ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲ್ಲಾಜಾರನ ಮಗನು; ಇವನು ಪ್ರಧಾನ ಯಾಜಕನಾದ ಆರೋನನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಬುಕ್ಕೀಯು ಅಬೀಷೂವನ ಮಗನು; ಅಬೀಷೂವನು ಫೀನೆಹಾಸನ ಮಗನು; ಫೀನೆಹಾಸನು ಎಲ್ಲಾಜಾರನ ಮಗನು. ಎಲ್ಲಾಜಾರನು ಪ್ರಧಾನಯಾಜಕನಾದ ಆರೋನನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇವನು ಅಬೀಷೂವನ ಮಗನು; ಇವನು ಫೀನೆಹಾಸನ ಮಗನು; ಇವನು ಎಲಿಯಾಜರನ ಮಗನು; ಇವನು ಮುಖ್ಯಯಾಜಕನಾದ ಆರೋನನ ಮಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:5
25 ತಿಳಿವುಗಳ ಹೋಲಿಕೆ  

ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳುವುದಕ್ಕಾಗುವುದಿಲ್ಲ, ಆದರೆ ಆರೋನನಂತೆ ದೇವರಿಂದ ಕರೆಯಲ್ಪಟ್ಟು ವಹಿಸಿಕೊಳ್ಳುತ್ತಾನೆ.


ಮಹಾಯಾಜಕನಾದ ಅಜರ್ಯನೂ ಎಲ್ಲಾ ಯಾಜಕರೂ ಅವನನ್ನು ದೃಷ್ಟಿಸಿ ನೋಡಿದಾಗ, ಅವನ ಹಣೆಯಲ್ಲಿ ಕುಷ್ಠವು ಕಂಡುಬಂದ ಕಾರಣ, ಅವನನ್ನು ಶೀಘ್ರವಾಗಿ ಅಲ್ಲಿಂದ ಹೊರಡಿಸಿದರು. ಯೆಹೋವನು ತನ್ನನ್ನು ಬಾಧಿಸಿದ್ದಾನೆಂದು ಅವನಿಗೆ ತಿಳಿಯಿತು. ಅವನೂ ಶೀಘ್ರವಾಗಿ ಹೊರಗೆ ಹೋಗಲು ಆತುರಪಟ್ಟನು.


ಇಗೋ, ಯೆಹೋವನ ಆಜ್ಞಾಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಮಹಾಯಾಜಕನಾದ ಅಮರ್ಯನು ನಿಮ್ಮ ನಾಯಕನು; ರಾಜಕೀಯ ಕಾರ್ಯಸಂಬಂಧವಾದ ಎಲ್ಲಾ ವಿಚಾರಣೆಗಳಲ್ಲಿಯೂ ಇಷ್ಮಾಯೇಲನ ಮಗನೂ ಯೆಹೂದ ಕುಲದ ಪ್ರಮುಖನೂ ಆದ ಜೆಬದ್ಯನು ಅಧ್ಯಕ್ಷನು; ಲೇವಿಯರು ನ್ಯಾಯಸ್ಥಾನದ ಉದ್ಯೋಗಸ್ಥರಾಗಿ ನಿಮ್ಮೊಂದಿಗಿದ್ದಾರೆ; ಧ್ಯೆರ್ಯದಿಂದ ಕಾರ್ಯಪ್ರವೃತ್ತರಾಗಿರಿ, ಯೆಹೋವನು ಸಜ್ಜನರ ಸಹಾಯಕನು” ಎಂದು ಹೇಳಿದನು.


ಎಲ್ಲಾಜಾರನು ಫೀನೆಹಾಸನನ್ನು ಪಡೆದನು; ಫೀನೆಹಾಸನು ಅಬೀಷೂವನನ್ನು ಪಡೆದನು;


ಆರೋನನ ಮೊಮ್ಮಗನೂ, ಎಲ್ಲಾಜಾರನ ಮಗನೂ ಆದ ಫೀನೆಹಾಸನು ಯಾಜಕಸೇವೆಮಾಡುತ್ತಿದ್ದನು. ಹೀಗಿರುವುದರಿಂದ ಇಸ್ರಾಯೇಲ್ಯರು, “ನಾವು ನಮ್ಮ ಬಂಧುಗಳಾದ ಬೆನ್ಯಾಮೀನ್ಯರೊಡನೆ ಯುದ್ಧಕ್ಕೆ ಹೋಗಬೇಕೋ, ಬೇಡವೋ?” ಎಂದು ಯೆಹೋವನನ್ನು ಕೇಳಿದರು. ಆತನು ಅವರಿಗೆ, “ಹೋಗಿರಿ, ನಾಳೆ ಅವರನ್ನು ನಿಮ್ಮ ಕೈಗೆ ಒಪ್ಪಿಸುವೆನು” ಅಂದನು.


ಆರೋನನ ಮಗನಾದ ಎಲಿಯಾಜರನು ಮರಣ ಹೊಂದಿದನು. ಅವನ ಶವವನ್ನು ಎಫ್ರಾಯೀಮ್ ಪರ್ವತ ಪ್ರಾಂತ್ಯದಲ್ಲಿ ಅವನ ಮಗನಾದ ಫೀನೆಹಾಸನ ಪಾಲಿಗೆ ಬಂದ ಗುಡ್ಡದಲ್ಲಿ ಸಮಾಧಿಮಾಡಿದರು.


ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನು ರೂಬೇನ್, ಗಾದ್, ಮನಸ್ಸೆ ಕುಲಗಳವರಿಗೆ “ನೀವು ಯೆಹೋವನಿಗೆ ವಿರುದ್ಧವಾಗಿ ಅಂಥ ದ್ರೋಹವನ್ನು ಮಾಡಲಿಲ್ಲವಾದ್ದರಿಂದ ಆತನು ನಮ್ಮ ಮಧ್ಯದಲ್ಲಿದ್ದಾನೆಂಬುದು ಈಗ ನಮಗೆ ತಿಳಿಯಿತು. ಹೀಗಿರಲಾಗಿ ನೀವು ಇಸ್ರಾಯೇಲರನ್ನು ಯೆಹೋವನ ಶಿಕ್ಷಾಹಸ್ತದಿಂದ ತಪ್ಪಿಸಿದ್ದೀರಿ” ಎಂದನು.


ಅದಕ್ಕೆ ಮೊದಲು ಗಿಲ್ಯಾದಿನಲ್ಲಿರುವ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಮಹಾಯಾಜಕ ಎಲಿಯಾಜರನ ಮಗನಾದ ಫೀನೆಹಾಸನನ್ನು


ಮಹಾಯಾಜಕನಾದ ಎಲಿಯಾಜರನೂ, ನೂನನ ಮಗನಾದ ಯೆಹೋಶುವನೂ ಹಾಗೂ ಇಸ್ರಾಯೇಲ್ಯರ ಕುಲಾಧಿಪತಿಗಳೂ


ಸಹಸ್ರಾಧಿಪತಿಗಳೂ, ಶತಾಧಿಪತಿಗಳೂ, ಕೊಟ್ಟ ಚಿನ್ನವನ್ನು ಮೋಶೆಯೂ, ಮಹಾಯಾಜಕ ಎಲ್ಲಾಜಾರನೂ ತೆಗೆದುಕೊಂಡು ಇಸ್ರಾಯೇಲರ ವಿಷಯದಲ್ಲಿ ಯೆಹೋವನಿಗೆ ಜ್ಞಾಪಕ ಮಾಡುವುದಕ್ಕಾಗಿ ದೇವದರ್ಶನದ ಗುಡಾರದೊಳಗೆ ತಂದರು.


ಯೆಹೋವನ ಅಪ್ಪಣೆಯ ಮೇರೆಗೆ ಮೋಶೆಯೂ, ಮಹಾಯಾಜಕನಾದ ಎಲ್ಲಾಜಾರನೂ ಮಾಡಿದರು.


ಮೋಶೆಯು ಇವರನ್ನು ಯುದ್ಧಕ್ಕೆ ಕಳುಹಿಸುವಾಗ ಕುಲವೊಂದಕ್ಕೆ ಸಾವಿರ ಭಟರನ್ನು, ಮಹಾಯಾಜಕನಾದ ಎಲ್ಲಾಜಾರನ ಮಗನಾದ ಫೀನೆಹಾಸನನ್ನು, ದೇವರ ಸಾಮಾನುಗಳನ್ನೂ, ಆಜ್ಞಾತುತೂರಿಗಳನ್ನೂ ತೆಗೆದುಕೊಂಡು ಅವರೊಡನೆ ಹೋಗಬೇಕೆಂದು ಆಜ್ಞಾಪಿಸಿದನು.


ಅವರು ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಮೋಶೆ, ಮಹಾಯಾಜಕನಾದ ಎಲ್ಲಾಜಾರ್, ಕುಲಾಧಿಪತಿಗಳು, ಸರ್ವಸಮೂಹದವರೆಲ್ಲರ ಮುಂದೆ ನಿಂತು ಅವರಿಗೆ,


ಅದಲ್ಲದೆ ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಪ್ರಧಾನಪುರುಷರ ಅಧ್ಯಕ್ಷನಾಗಿ ದೇವಸ್ಥಾನವನ್ನು ನೋಡಿಕೊಳ್ಳುವವರ ಮೇಲ್ವಿಚಾರಕನಾಗಿರಬೇಕು.


ಜನರೆಲ್ಲರಿಗೋಸ್ಕರ ದೋಷಪರಿಹಾರ ಮಾಡಲು ಸಮರ್ಪಿತವಾದ ಹೋತದ ವಿಷಯದಲ್ಲಿ ಅದು ಏನಾಯಿತೆಂದು ಮೋಶೆ ವಿಚಾರಿಸಲಾಗಿ ಅದನ್ನು ಸುಟ್ಟುಬಿಟ್ಟರೆಂದು ತಿಳಿಯಬಂತು. ಇದನ್ನು ಕೇಳಿದಾಗ ಅವನು ಆರೋನನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರ ಮೇಲೆ ಸಿಟ್ಟುಗೊಂಡು,


ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೆ, “ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ.


ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬುವವರಿಗೆ, “ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸಾಯುವಿರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾಗುವುದು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲರ ಮನೆತನದವರೇ ದುಃಖಿಸಲಿ.


ಆರೋನನ ಮಗನಾದ ಎಲ್ಲಾಜಾರನು ಪೂಟಿಯೇಲನ ಹೆಣ್ಣು ಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡನು. ಆಕೆ ಅವನಿಗೆ ಫೀನೆಹಾಸನನ್ನು ಹೆತ್ತಳು. ಅವರವರ ಗೋತ್ರದ ಪ್ರಕಾರ ಇವರೇ ಲೇವಿಯರ ಪೂರ್ವಿಕರು.


ಮೆರಾಯೋತನು ಜೆರಹ್ಯನ ಮಗ; ಇವನು ಉಜ್ಜೀಯ ಮಗ; ಇವನು ಬುಕ್ಕೀಯ ಮಗ.


ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು