Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:6 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಎಜ್ರನು, ಇಸ್ರಯೇಲ್ ದೇವರಾದ ಸರ್ವೇಶ್ವರನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾಂಡಿತ್ಯ ಪಡೆದ ಒಬ್ಬ ಧರ್ಮಶಾಸ್ತ್ರಿ ಆಗಿದ್ದನು. ಅವನ ದೇವರಾದ ಸರ್ವೇಶ್ವರನ ಕೃಪಾಹಸ್ತ ಅವನ ಮೇಲಿತ್ತು. ಆದುದರಿಂದ ಅರಸನು ಅವನಿಗೆ ಇಷ್ಟವಾದುದನ್ನೆಲ್ಲ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಎಜ್ರನು ಇಸ್ರಾಯೇಲ್‍ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಎಜ್ರನು ಬಾಬಿಲೋನಿನಿಂದ ಜೆರುಸಲೇಮಿಗೆ ಬಂದನು. ಅವನು ವಿದ್ವಾಂಸನಾಗಿದ್ದನು. ಇಸ್ರೇಲರ ದೇವರಾದ ಯೆಹೋವನು ಮೋಶೆಗೆ ಕೊಟ್ಟಿದ್ದ ಧರ್ಮಶಾಸ್ತ್ರವನ್ನು ಅವನು ಚೆನ್ನಾಗಿ ಬಲ್ಲವನಾಗಿದ್ದನು. ಯೆಹೋವನು ಎಜ್ರನೊಂದಿಗಿದ್ದುದರಿಂದ ಅವನು ಕೇಳಿದ್ದೆಲ್ಲವನ್ನು ಅರ್ತಷಸ್ತ ರಾಜನು ಅವನಿಗೆ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಈ ಎಜ್ರನು ಬಾಬಿಲೋನಿನಿಂದ ಬಂದನು, ಅವನು ಇಸ್ರಾಯೇಲ್ ದೇವರಾಗಿರುವ ಯೆಹೋವ ದೇವರು ಕೊಟ್ಟ ಮೋಶೆಯ ನಿಯಮದಲ್ಲಿ ಪಾಂಡಿತ್ಯ ಪಡೆದ ನಿಯಮಶಾಸ್ತ್ರಿ ಆಗಿದ್ದನು. ಅವನ ಮೇಲೆ ಅವನ ದೇವರಾಗಿರುವ ಯೆಹೋವ ದೇವರ ಕೈ ಇದ್ದುದರಿಂದ, ಅವನು ಕೇಳಿದ್ದನ್ನೆಲ್ಲಾ ಅರಸನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:6
40 ತಿಳಿವುಗಳ ಹೋಲಿಕೆ  

ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವುದು; ಆತನನ್ನು ತೊರೆದುಬಿಟ್ಟವರೆಲ್ಲರೂ ಆತನ ಉಗ್ರವಾದ ಕೋಪಕ್ಕೆ ಗುರಿಯಾಗುವರು. ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕೋಸ್ಕರ ಸೈನ್ಯವನ್ನೂ, ಅಶ್ವಬಲವನ್ನೂ ಕೊಡಲು ಅರಸನಿಂದ ಸಹಾಯ ಕೇಳಲು ನಾಚಿಕೊಂಡಿದ್ದೆನು.


ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನ್ನೊಂದಿಗೆ ಇರುವುದರಿಂದ ಅರಸನ ಮುಂದೆ ನನಗೆ ದೊರಕ್ಕಿದ್ದರಿಂದ ನಾನು ಧೈರ್ಯವಾಗಿ ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವು ಜನ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು” ಎಂದು ಹೇಳಿದನು.


ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇಮಿಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.


ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ” ಎಂದು ಹೇಳಿದನು.


ಇದಲ್ಲದೆ, ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ, ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು, “ಬನ್ನಿರಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಪರಸ್ಪರ ಧೈರ್ಯ ನೀಡಿದರು.


ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.


ನಮ್ಮ ದೇವರ ಕೃಪಾಶೀರ್ವಾದ ನಮಗೆ ದೊರೆಕ್ಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ, ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಜನರನ್ನೂ,


“ಅರ್ತಷಸ್ತ ರಾಜನಾದ ನಾನು ಹೊಳೆಯಾಚೆಯ ಪ್ರಾಂತ್ಯಗಳ ಭಂಡಾರಗಳ ಮುಖ್ಯಸ್ಥರಿಗೆ ಆಜ್ಞಾಪಿಸುವುದು ಏನೆಂದರೆ, ‘ಯಾಜಕರೂ ಪರಲೋಕದೇವರ ಧರ್ಮಾಚಾರ್ಯನೂ ಆದ ಎಜ್ರನು ಕೇಳಿಕೊಳ್ಳುವುದನ್ನೆಲ್ಲಾ ನೀವು ತಪ್ಪದೆ ಕೊಡಬೇಕು.


ಅವನು ಮೊದಲನೆಯ ತಿಂಗಳಿನ ಮೊದಲ ದಿನದಲ್ಲಿ ಬಾಬಿಲೋನಿನಿಂದ ಹೊರಟನು; ತನ್ನ ದೇವರ ಕೃಪಾ ಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು.


ನಿನ್ನ ಎಲ್ಲಾ ನಡವಳಿಕೆಯಲ್ಲಿ ಆತನ ಚಿತ್ತಕ್ಕೆ ವಿಧೇಯನಾಗಿರು; ಆತನೇ ನಿನ್ನ ಮಾರ್ಗಗಳನ್ನು ಸರಾಗಮಾಡುವನು.


ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ, ನಾನು ಈಗ ನಿಮಗೆ ಬೋಧಿಸುವ ಆತನ ಆಜ್ಞೆಗಳನ್ನೆಲ್ಲಾ ಅನುಸರಿಸಿ ನಡೆದರೆ, ಆತನು ಭೂಮಿಯ ಮೇಲಿರುವ ಎಲ್ಲಾ ಜನಾಂಗಗಳಿಗಿಂತಲೂ ನಿಮ್ಮನ್ನು ಉನ್ನತಸ್ಥಿತಿಗೆ ತರುವನು.


ನೀವು ಸ್ವಾಧೀನಮಾಡಿಕೊಳ್ಳುವುದಕ್ಕೆ ಹೋಗುವ ದೇಶದಲ್ಲಿ ಅನುಸರಿಸಬೇಕಾದ ಆಜ್ಞಾವಿಧಿಗಳನ್ನು ನನ್ನ ದೇವರಾದ ಯೆಹೋವನು ನನಗೆ ಆಜ್ಞಾಪಿಸಿದಂತೆಯೇ ನಿಮಗೆ ಬೋಧಿಸಿದ್ದೇನೆ.


ಸಹೋದರರೇ, ನಾನು ನಿಮಗೆ ತಿಳಿಸಿದ ಸುವಾರ್ತೆಯನ್ನು ನಿಮ್ಮ ನೆನಪಿಗೆ ತರುತ್ತೇನೆ; ನೀವು ಅದನ್ನು ಸ್ವೀಕರಿಸಿ, ಅದರಲ್ಲಿ ನಿಂತಿದ್ದೀರಿ.


ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ?


ಆಗ ಆತನು ಅವರಿಗೆ, “ಹೀಗಿರಲಾಗಿ ಪರಲೋಕ ರಾಜ್ಯದ ವಿಷಯವಾಗಿ ಉಪದೇಶಹೊಂದಿ ಶಿಕ್ಷಿತನಾದ ಪ್ರತಿಯೊಬ್ಬ ಶಾಸ್ತ್ರೋಪದೇಶಕನು, ತನ್ನ ಬೊಕ್ಕಸದೊಳಗಿನಿಂದ ಹೊಸ ವಸ್ತುಗಳನ್ನೂ, ಹಳೆಯ ವಸ್ತುಗಳನ್ನೂ ಹೊರಗೆ ತೆಗೆಯುವಂಥ ಮನೆ ಯಜಮಾನನಿಗೆ ಹೋಲಿಕೆಯಾಗಿದ್ದಾನೆ” ಎಂದು ಹೇಳಿದನು.


ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ.


ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು.


ಒಂದು ದಿವ್ಯ ವಿಷಯವನ್ನು ಹೇಳುವುದಕ್ಕೆ ನನ್ನ ಹೃದಯವು ತವಕಪಡುತ್ತದೆ; ನಾನು ರಾಜನನ್ನು ಕುರಿತು ಈ ಪದ್ಯವನ್ನು ರಚಿಸುವೆನು. ನನ್ನ ನಾಲಿಗೆಯು ಒಳ್ಳೆಯ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.


ದೇವರ ಮನುಷ್ಯನಾದ ದಾವೀದನ ವಾದ್ಯಗಳನ್ನು ಹಿಡಿದಿರುವ ಇವನ ಬಂಧುಗಳಾದ ಶೆಮಾಯ, ಅಜರೇಲ್, ಮಿಲಲೈ, ಗಿಲಲೈ, ಮಾಯೈ, ನೆತನೇಲ್, ಯೆಹೂದ, ಹಾನಾನೀ ಎಂಬುವರೂ ಹೋದರು, ಧರ್ಮೋಪದೇಶಕನಾದ ಎಜ್ರನು ಇವರ ಮುಂದಾಳಾಗಿ ಹೊರಟನು.


ಮರುದಿನ ಎಲ್ಲಾ ಇಸ್ರಾಯೇಲ್ ಗೋತ್ರಪ್ರಧಾನರೂ, ಯಾಜಕರೂ, ಲೇವಿಯರೂ ಧರ್ಮನಿಯಮಗಳ ಅಧ್ಯಯನಕ್ಕಾಗಿ ಧರ್ಮೋಪದೇಶಕನಾದ ಎಜ್ರನ ಬಳಿಗೆ ಸೇರಿಬಂದರು.


ನಮ್ಮ ಶತ್ರುಗಳು ತಮ್ಮ ಉದ್ದೇಶ ನಮಗೆ ಗೊತ್ತಾಯಿತೆಂದೂ ದೇವರು ಅದನ್ನು ವ್ಯರ್ಥಮಾಡಿದನೆಂದೂ ತಿಳಿದುಕೊಂಡಾಗ ಅವರು ನಮ್ಮನ್ನು ಬಿಟ್ಟು ಹೋದರು. ನಾವೆಲ್ಲರೂ ನಮ್ಮ ನಮ್ಮ ಪೌಳಿಗೋಡೆಯ ಕೆಲಸವನ್ನು ಪುನಃ ಪ್ರಾರಂಭಿಸಲು ತೊಡಗಿದೆವು.


ಆಮೇಲೆ ಯೆರೂಸಲೇಮಿಗಾಗಿ ಮಾಡತಕ್ಕ ಕಾರ್ಯದ ವಿಷಯವಾಗಿ ನನ್ನ ದೇವರು ನನ್ನಲ್ಲಿ ಯಾವ ಆಲೋಚನೆಯನ್ನು ಹುಟ್ಟಿಸಿದ್ದಾನೆಂಬುದನ್ನು ಯಾರಿಗೂ ತಿಳಿಸದೆ, ರಾತ್ರಿಯಲ್ಲೆದ್ದು ಕೆಲವು ಜನರನ್ನು ಮಾತ್ರ ಕರೆದುಕೊಂಡು ಹೊರಟೆನು. ನನ್ನ ವಾಹನಪಶುವಿನ ಹೊರತು ಬೇರೆ ಯಾವ ಪಶುವೂ ನನ್ನೊಂದಿಗಿರಲಿಲ್ಲ.


ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.


ಆದರೆ ಯೆಹೂದ್ಯರು ಮತ್ತು ಹಿರಿಯರೊಂದಿಗೆ ದೇವರ ಕೃಪಾಕಟಾಕ್ಷ ಇದ್ದುದರಿಂದ ವಿಚಾರಿಸುವುದಕ್ಕೆ ಬಂದವರು ಅವರಿಗೆ ಅಡ್ಡಿಮಾಡದೆ, ತಾವು ಇದರ ವಿಷಯವಾಗಿ ದಾರ್ಯಾವೆಷನಿಗೆ ವರ್ತಮಾನ ಮುಟ್ಟಿಸಿ, ಉತ್ತರವನ್ನು ಬರೆದು ಕಳುಹಿಸುವೆವೆಂದು ಹೇಳಿ ಹೊರಟು ಹೋದರು.


ಹೀಗಿರಲು ‘ನಾವು ಜ್ಞಾನಿಗಳು, ಯೆಹೋವನ ಧರ್ಮಶಾಸ್ತ್ರವು ನಮ್ಮಲ್ಲಿಯೇ ಇದೆ’ ಎಂದು ನೀವು ಅಂದುಕೊಳ್ಳುವುದು ಹೇಗೆ? ಆಹಾ, ಶಾಸ್ತ್ರಿಗಳ ಸುಳ್ಳು ಲೇಖನಿಯು ಅದನ್ನು ಸುಳ್ಳಾಗಿ ಮಾಡಿದೆ.


ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತ್ತಿದ್ದ ದ್ವಾರಪಾಲಕರು: ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬುವವರು.


ಜನರೆಲ್ಲರೂ ಧರ್ಮೋಪದೇಶ ವಾಕ್ಯಗಳನ್ನು ಕೇಳುತ್ತಾ ಅಳುತ್ತಿದ್ದುದರಿಂದ ದೇಶಾಧಿಪತಿಯಾದ ನೆಹೆಮೀಯನೂ, ಧರ್ಮೋಪದೇಶಕನಾದ ಎಜ್ರನೂ, ಜನರಿಗೆ ಬೋಧಿಸುತ್ತಿದ್ದ ಲೇವಿಯರೂ, “ಯೆಹೋವನಿಗೆ ಈ ದಿನವು ಪರಿಶುದ್ಧವಾಗಿರುವುದರಿಂದ ನೀವು ದುಃಖಿಸುತ್ತಾ ಅಳುತ್ತಾ ಇರಬೇಡಿರಿ” ಎಂದು ಹೇಳಿದರು.


ಧರ್ಮೋಪದೇಶಕನಾದ ಎಜ್ರನು ಪಾರಾಯಣಕ್ಕಾಗಿ ಮಾಡಲ್ಪಟ್ಟ ಮರದ ಪೀಠದ ಮೇಲೆ ನಿಂತನು. ಅವನ ಬಲಗಡೆಯಲ್ಲಿ ಮತ್ತಿತ್ಯ, ಶೆಮ, ಅನಾಯ, ಊರೀಯ, ಹಿಲ್ಕೀಯ, ಮಾಸೇಯ ಎಂಬುವರೂ, ಎಡಗಡೆಯಲ್ಲಿ ಪೆದಾಯ, ಮಿಷಾಯೇಲ್, ಮಲ್ಕೀಯ, ಹಾಷುಮ್, ಹಷ್ಬದ್ದಾನ, ಜೆಕರ್ಯ, ಮೆಷುಲ್ಲಾಮ್ ಎಂಬುವರೂ ನಿಂತುಕೊಂಡಿದ್ದರು.


ಅವನು ಯಾಕೋಬನಿಗೆ, “ಇನ್ನು ಮೇಲೆ ನೀನು ಯಾಕೋಬನೆಂದು ಕರೆಯಲ್ಪಡುವುದಿಲ್ಲ; ನೀನು ದೇವರ ಸಂಗಡಲೂ, ಮನುಷ್ಯರ ಸಂಗಡಲೂ ಹೋರಾಡಿ ಗೆದ್ದವನಾದುದರಿಂದ ನಿನಗೆ ‘ಇಸ್ರಾಯೇಲ್’ ಎಂದು ಹೆಸರಾಗುವುದು” ಎಂದು ಹೇಳಿದನು.


“ಶಾಸ್ತ್ರಿಗಳೂ ಫರಿಸಾಯರೂ ಮೋಶೆಯ ಸ್ಥಾನದಲ್ಲಿ ಕುಳಿತುಕೊಂಡಿದ್ದಾರೆ;


ಬುಕ್ಕೀಯನು ಅಬೀಷೂವನ ಮಗ; ಇವನು ಫೀನೆಹಾಸನ ಮಗ; ಇವನು ಎಲ್ಲಾಜಾರನ ಮಗ; ಇವನು ಪ್ರಧಾನಯಾಜಕನಾದ ಆರೋನನ ಮಗ.


ತಮ್ಮ ತಮ್ಮ ಪಟ್ಟಣಗಳಲ್ಲಿ ವಾಸಿಸುತ್ತಿದ್ದ ಇಸ್ರಾಯೇಲ್ ಸರ್ವಸಮೂಹದವರು ಏಳನೆಯ ತಿಂಗಳಲ್ಲಿ ನೀರುಬಾಗಿಲಿನ ಮುಂದೆ ಬಯಲಿನಲ್ಲಿ ಒಟ್ಟಾಗಿ ಸೇರಿ ಬಂದರು. ಯೆಹೋವನು ಮೋಶೆಯ ಮುಖಾಂತರ ಇಸ್ರಾಯೇಲರಿಗೆ ಕೊಟ್ಟ ಧರ್ಮಶಾಸ್ತ್ರವನ್ನು ತೆಗೆದುಕೊಂಡು ಬರಬೇಕೆಂದು ಧರ್ಮೋಪದೇಶಕನಾದ ಎಜ್ರನನ್ನು ಕೇಳಿಕೊಂಡನು.


ಅರ್ತಷಸ್ತ ರಾಜನ ಆಳ್ವಿಕೆಯಲ್ಲಿ ನನ್ನೊಂದಿಗೆ ಬಾಬಿಲೋನಿನಿಂದ ಹೊರಟ ಗೋತ್ರಪ್ರಧಾನರ ಮತ್ತು ಅವರ ಸಂತಾನದವರ ವಿವರಣೆ.


ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತನಾಡಿ, ಅವರಿಗೆ ನೀತಿನಿಯಮಗಳನ್ನೂ, ಯಥಾರ್ಥ ಧರ್ಮೋಪದೇಶವನ್ನೂ, ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದೆ.


ಆಗ ನಾವು ನಿನ್ನಿಂದ ಅಗಲುವುದಿಲ್ಲ. ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು.


ಆಗ ಅವರು ಇದು ನಿನ್ನ ಕೈಕೆಲಸವೆಂದೂ, ಯೆಹೋವನಾದ ನೀನೇ ಇದನ್ನು ಮಾಡಿದೆ ಎಂದು ತಿಳಿದುಕೊಳ್ಳುವರು.


ಆತನು ತನ್ನ ವಾಕ್ಯವನ್ನು ಯಾಕೋಬ್ಯರಿಗೆ ತಿಳಿಸುತ್ತಾನೆ, ತನ್ನ ನಿಯಮವಿಧಿಗಳನ್ನು ಇಸ್ರಾಯೇಲರಿಗೆ ಪ್ರಕಟಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು