Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 7:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವನು ಮೊದಲನೆಯ ತಿಂಗಳಿನ ಮೊದಲ ದಿನದಲ್ಲಿ ಬಾಬಿಲೋನಿನಿಂದ ಹೊರಟನು; ತನ್ನ ದೇವರ ಕೃಪಾ ಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವನು ಬಾಬಿಲೋನಿನಿಂದ ಹೊರಟದ್ದು ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ. ತನ್ನ ದೇವರ ಕೃಪಾಹಸ್ತ ಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನ ಜೆರುಸಲೇಮಿಗೆ ಬಂದು ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವನು ಮೊದಲನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬಾಬೆಲಿನಿಂದ ಹೊರಟನು; ತನ್ನ ದೇವರ ಕೃಪಾಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇವಿುಗೆ ಸೇರಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರು ಬಾಬಿಲೋನನ್ನು ಮೊದಲನೆಯ ತಿಂಗಳಿನ ಮೊದಲನೆಯ ದಿನದಂದು ಬಿಟ್ಟು ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಜೆರುಸಲೇಮನ್ನು ಸೇರಿದರು. ದೇವರಾದ ಯೆಹೋವನು ಎಜ್ರನ ಸಂಗಡವಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅವನು ಮೊದಲನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಬಾಬಿಲೋನಿನಿಂದ ಹೊರಟು, ಐದನೆಯ ತಿಂಗಳಿನ, ಮೊದಲನೆಯ ದಿವಸದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು. ಏಕೆಂದರೆ ಅವನ ದೇವರಾದ ಯೆಹೋವ ದೇವರ ಹಸ್ತವು ಅವನ ಮೇಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 7:9
11 ತಿಳಿವುಗಳ ಹೋಲಿಕೆ  

ಎಜ್ರನು ಇಸ್ರಾಯೇಲ್ ದೇವರಾದ ಯೆಹೋವನಿಂದ ದೊರಕಿದ ಮೋಶೆಯ ಧರ್ಮೋಪದೇಶದಲ್ಲಿ ಪಾರಂಗತನಾದ ಶಾಸ್ತ್ರಿಯಾಗಿದ್ದನು. ಅವನ ದೇವರಾದ ಯೆಹೋವನ ಹಸ್ತಪಾಲನೆಯಿಂದ ಅರಸನು ಅವನಿಗೆ ಇಷ್ಟವಾದದ್ದನ್ನೆಲ್ಲಾ ಅನುಗ್ರಹಿಸಿದನು.


ರಾಜವನಪಾಲಕನಾದ ಆಸಾಫನು ದೇವಾಲಯದ ಕೋಟೆಯ ಬಾಗಿಲುಗಳು, ಪಟ್ಟಣದ ಪೌಳಿಗೋಡೆ, ನಾನು ಸೇರುವ ಮನೆ ಇವುಗಳಿಗೆ ಬೇಕಾಗುವ ತೊಲೆಗಳಿಗಾಗಿ ಮರಗಳನ್ನು ಕೊಡುವ ಹಾಗೆ ಅರಸನು ನನಗೆ ಪತ್ರಗಳನ್ನು ಕೊಡಬೇಕು” ಎಂದು ಬಿನ್ನವಿಸಲು, ನನ್ನ ದೇವರ ಕೃಪಾಹಸ್ತಪಾಲನೆ ನನಗಿದ್ದುದರಿಂದ ಅರಸನು ಅವುಗಳನ್ನು ನನಗೆ ಕೊಟ್ಟನು.


ಇದಲ್ಲದೆ, ನನ್ನ ದೇವರ ಕೃಪಾಹಸ್ತವು ನನ್ನನ್ನು ಪಾಲಿಸಿದ್ದನ್ನೂ, ಅರಸನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆನು. ಆಗ ಅವರು, “ಬನ್ನಿರಿ, ಕಟ್ಟೋಣ” ಎಂದು ಹೇಳಿ ಆ ಒಳ್ಳೇ ಕೆಲಸಕ್ಕೆ ಕೈಹಾಕಲು ಪರಸ್ಪರ ಧೈರ್ಯ ನೀಡಿದರು.


ಎಜ್ರನು ಆ ಅರಸನ ಆಳ್ವಿಕೆಯ ಏಳನೆಯ ವರ್ಷದ ಐದನೆಯ ತಿಂಗಳಲ್ಲಿ ಯೆರೂಸಲೇಮನ್ನು ತಲುಪಿದನು.


ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವುದು; ಆತನನ್ನು ತೊರೆದುಬಿಟ್ಟವರೆಲ್ಲರೂ ಆತನ ಉಗ್ರವಾದ ಕೋಪಕ್ಕೆ ಗುರಿಯಾಗುವರು. ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕೋಸ್ಕರ ಸೈನ್ಯವನ್ನೂ, ಅಶ್ವಬಲವನ್ನೂ ಕೊಡಲು ಅರಸನಿಂದ ಸಹಾಯ ಕೇಳಲು ನಾಚಿಕೊಂಡಿದ್ದೆನು.


ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇಮಿಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.


ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.


ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನ್ನೊಂದಿಗೆ ಇರುವುದರಿಂದ ಅರಸನ ಮುಂದೆ ನನಗೆ ದೊರಕ್ಕಿದ್ದರಿಂದ ನಾನು ಧೈರ್ಯವಾಗಿ ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವು ಜನ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು” ಎಂದು ಹೇಳಿದನು.


ನಮ್ಮ ದೇವರ ಕೃಪಾಶೀರ್ವಾದ ನಮಗೆ ದೊರೆಕ್ಕಿದ್ದರಿಂದ ಅವರು ಇಸ್ರಾಯೇಲನ ಮಗನಾದ ಲೇವಿಯ ಕುಲದ ಮಹ್ಲೀ ಸಂತಾನದವರಲ್ಲಿ ಈಸ್ಸೆಕೆಲನನ್ನೂ, ಶೇರೇಬ್ಯನನ್ನೂ ಅವನ ಪುತ್ರಭ್ರಾತೃಗಳಲ್ಲಿ ಹದಿನೆಂಟು ಜನರನ್ನೂ,


ನಾವು ಯೆರೂಸಲೇಮನ್ನು ಸೇರಿ ಮೂರು ದಿನ ವಿಶ್ರಮಿಸಿಕೊಂಡೆವು.


ಆಗ ನಾವು ನಿನ್ನಿಂದ ಅಗಲುವುದಿಲ್ಲ. ನಿನ್ನ ಹೆಸರನ್ನು ಹೇಳಿಕೊಂಡು ಆರಾಧಿಸುವಂತೆ ನಮ್ಮನ್ನು ಚೈತನ್ಯಗೊಳಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು