Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅವರ ತರುವಾಯ ನಾನು ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿ, ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ, ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನದ ಪರಿಚಾರಕರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆನು. ಆ ಊರಿನವರು ದೇವದಾಸವರ್ಗದವರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಪಂಡಿತರಾದ ಯೋಯಾರೀಬ್, ಎಲ್ನಾತಾನ್ ಇವರನ್ನೂ ಕರೆಯಿಸಿದೆ; ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿದೆ; ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನ ಪರಿಚಾರಕ ವರ್ಗದವರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆ. ಆ ಊರಿನವರು ಪರಿಚಾರಕ ವರ್ಗದವರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಎಲ್ನಾತಾನ್ ಇವರನ್ನೂ ಕರಿಸಿ ಕಾಸಿಫ್ಯ ಊರಿನ ಮುಖ್ಯಸ್ಥನಾದ ಇದ್ದೋವಿನ ಬಳಿಗೆ ಹೋಗಬೇಕೆಂದು ಅಪ್ಪಣೆಮಾಡಿ ನಮ್ಮ ಬಳಿಗೆ ದೇವಾಲಯ ಸೇವಕರನ್ನು ಕಳುಹಿಸುವ ಹಾಗೆ ಅವರು ಇದ್ದೋವಿಗೂ ಕಾಸಿಫ್ಯ ಊರಿನಲ್ಲಿ ವಾಸಿಸುತ್ತಿದ್ದ ಅವನ ಸಹೋದರರಾದ ದೇವಸ್ಥಾನದಾಸ ವರ್ಗದವರಿಗೂ ಹೇಳತಕ್ಕ ಮಾತುಗಳನ್ನು ಹೇಳಿಕೊಟ್ಟೆನು. ಆ ಊರಿನವರು ದೇವದಾಸವರ್ಗದವರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಕಾಸಿಫ್ಯದ ಇದ್ದೋ ಎಂಬವರಲ್ಲಿಗೆ ಕಳುಹಿಸಿದೆನು. ಇವನು ಕಾಸಿಫ್ಯದ ನಿವಾಸಿಗಳ ನಾಯಕನಾಗಿದ್ದನು. ಇವನ ಸಂಬಂಧಿಕರು ಕಾಸಿಫ್ಯದ ದೇವಾಲಯದ ಸೇವಕರಾಗಿದ್ದಾರೆ. ನಾವು ಕಟ್ಟುವ ದೇವಾಲಯದಲ್ಲಿ ಸೇವೆ ಮಾಡುವವರನ್ನು ಇದ್ದೋ ಕಳುಹಿಸಬೇಕೆಂಬ ಉದ್ದೇಶದಿಂದಲೇ ನಾನು ಅವರನ್ನು ಅವರ ಬಳಿಗೆ ಕಳುಹಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಕಾಸಿಫ್ಯದಲ್ಲಿರುವ ಅಧಿಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ, ಅವರು ನಮ್ಮ ದೇವರ ಆಲಯಕ್ಕೋಸ್ಕರ ಸೇವಕರನ್ನು ತರುವ ಹಾಗೆ ಅವರು ಕಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ, ಅವನ ಸಹೋದರರಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:17
16 ತಿಳಿವುಗಳ ಹೋಲಿಕೆ  

ದೇವಸ್ಥಾನದಾಸರಲ್ಲಿ: ಜೀಹ ಸಂತಾನದವರು ಮತ್ತು ಹಸೂಫ, ಟಬ್ಬಾವೋತ್,


ಕ್ರೇತ್ ದ್ವೀಪದಲ್ಲಿ ಇನ್ನೂ ಕ್ರಮಕ್ಕೆ ಬಾರದಿರುವ ಕಾರ್ಯಗಳನ್ನು ಕ್ರಮಪಡಿಸಿ, ಪಟ್ಟಣ ಪಟ್ಟಣಗಳಲ್ಲಿ ಹಿರಿಯರನ್ನು ನೇಮಿಸಬೇಕೆಂದು ನಾನು ನಿನಗೆ ಅಪ್ಪಣೆಕೊಟ್ಟು ನಿನ್ನನ್ನು ಅಲ್ಲಿ ಬಿಟ್ಟು ಬಂದೆ.


ಇದರಿಂದ ಯೆಹೋವನು, “ನೀನು ನನ್ನ ಕಡೆಗೆ ಹಿಂದಿರುಗಿದರೆ ನನ್ನ ಸಮ್ಮುಖದಲ್ಲಿ ನಿಲ್ಲುವಂತೆ ನಾನು ನಿನ್ನನ್ನು ತಿರುಗಿ ಸೇರಿಸಿಕೊಳ್ಳುವೆನು. ನೀನು ತುಚ್ಛವಾದದ್ದನ್ನು ನಿರಾಕರಿಸಿ, ಅಮೂಲ್ಯವಾದದ್ದನ್ನು ಪ್ರಕಾಶಪಡಿಸಿದರೆ ನೀನು ನನ್ನ ಬಾಯಂತಿರುವಿ. ಜನರು ನಿನ್ನ ಕಡೆಗೆ ತಿರುಗಿಕೊಳ್ಳುವರು, ನೀನು ಅವರ ಕಡೆಗೆ ತಿರುಗದಿರುವಿ.


ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ, “ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ಅವನೊಡನೆ ಕೆಲವು ಜನರು ಇಸ್ರಾಯೇಲರೂ, ಯಾಜಕರೂ, ಲೇವಿಯರೂ, ಗಾಯಕರೂ, ದ್ವಾರಪಾಲಕರೂ ಮತ್ತು ದೇವಸ್ಥಾನದಾಸರೂ ಅರ್ತಷಸ್ತ ಅರಸನ ಆಳ್ವಿಕೆಯ ಏಳನೆಯ ವರ್ಷದಲ್ಲಿ ಯೆರೂಸಲೇಮಿಗೆ ಬಂದರು.


ಎಲ್ಲಾ ಸಂತಾನದವರನ್ನು ದೇವಸ್ಥಾನದ ಸೇವೆಗಾಗಿ ನೇಮಿಸಿದರು ಮತ್ತು ಸೊಲೊಮೋನನ ದಾಸರೂ ಒಟ್ಟು 392.


ಅರಸನು, “ಈ ಕಾರ್ಯದಲ್ಲಿ ಯೋವಾಬನ ಕೈವಾಡ ಇದೆಯೇ?” ಎಂದು ಕೇಳಿದನು. ಅದಕ್ಕೆ ಆ ಸ್ತ್ರೀಯು, “ಅರಸನ ಜೀವದಾಣೆ, ಅರಸನು ಒಂದು ಮಾತು ಹೇಳಿದರೆ ನಾವು ತಪ್ಪಿಸಿಕೊಂಡು ಎಡಕ್ಕಾಗಲಿ, ಬಲಕ್ಕಾಗಲಿ ಜಾರಿಕೊಳ್ಳುವುದಕ್ಕೆ ಆಗುವುದಿಲ್ಲ. ನಿನ್ನ ದಾಸಿಯಾದ ನನ್ನನ್ನು ಪ್ರೇರೇಪಿಸಿ, ಈ ಎಲ್ಲಾ ಮಾತುಗಳನ್ನು ನನಗೆ ಕಲಿಸಿ ಕೊಟ್ಟವನು ನಿನ್ನ ಸೇವಕನಾದ ಯೋವಾಬನೇ ಹೌದು.


ಅರಸನ ಬಳಿಗೆ ಹೋಗಿ ಈ ಮಾತುಗಳನ್ನು ಅವನಿಗೆ ಹೇಳು” ಎಂದು ಆಜ್ಞಾಪಿಸಿ, ಹೇಳಬೇಕಾದ ಮಾತುಗಳನ್ನು ಆಕೆಗೆ ಕಲಿಸಿಕೊಟ್ಟನು.


ಇವರ ಸ್ವದೇಶದವರಲ್ಲಿ ನಿನ್ನಂಥ ಪ್ರವಾದಿಯನ್ನು ಅವರಿಗೋಸ್ಕರ ಏರ್ಪಡಿಸುವೆನು; ಅವನ ಬಾಯಿಂದ ನನ್ನ ಮಾತುಗಳನ್ನು ನುಡಿಸುವೆನು; ನಾನು ಅವನಿಗೆ ಆಜ್ಞಾಪಿಸಿದ್ದನ್ನೆಲ್ಲಾ ಅವನು ಅವರಿಗೆ ತಿಳಿಸುವನು.


ಇಗೋ, ನಾನು ಇಸ್ರಾಯೇಲರೊಳಗಿಂದ ನಿನ್ನ ಕುಲದವರಾದ ಲೇವಿಯರನ್ನು ಆರಿಸಿಕೊಂಡಿದ್ದೇನೆ. ಅವರು ಯೆಹೋವನಿಗೆ ಸಮರ್ಪಿಸಲ್ಪಟ್ಟ ಕಾಣಿಕೆಯಂತೆ ನಿನ್ನ ವಶದಲ್ಲಿಯೇ ಇದ್ದಾರೆ. ಅವರೇ ದೇವದರ್ಶನದ ಗುಡಾರದ ಸೇವಾಕಾರ್ಯವನ್ನು ಮಾಡಬೇಕು.


ನೀನು ಅವನ ಸಂಗಡ ಮಾತನಾಡಿ ಹೇಳಬೇಕಾದ ಮಾತುಗಳನ್ನು ಅವನಿಗೆ ತಿಳಿಸಿಕೊಡು. ನಿನ್ನ ಬಾಯಿಗೂ ಅವನ ಬಾಯಿಗೂ ಸಹಾಯವಾಗಿದ್ದು ನೀವು ಮಾಡಬೇಕಾದದ್ದನ್ನು ಬೋಧಿಸುವೆನು.


ಆಗ ಅವರ ಪಟ್ಟಣಗಳನ್ನೂ, ಸ್ವಾಸ್ತ್ಯವನ್ನೂ ಮೊದಲು ಸ್ವಾಧೀನಮಾಡಿಕೊಂಡವರು ಇಸ್ರಾಯೇಲ್ಯರು, ಯಾಜಕರು ಲೇವಿಯರು ಮತ್ತು ದೇವಾಲಯದ ಸೇವಕರು ಇವರೇ.


ಆದುದರಿಂದ ನಾನು ಪ್ರಧಾನರಾದ ಎಲೀಯೆಜೆರ್, ಅರೀಯೇಲ್, ಶೆಮಾಯ, ಎಲ್ನಾತಾನ್, ಯಾರೀಬ್, ಎಲ್ನಾತಾನ್, ನಾತಾನ್, ಜೆಕರ್ಯ, ಮೆಷುಲ್ಲಾಮ್ ಇವರನ್ನೂ, ಪಂಡಿತರಾದ ಯೋಯಾರೀಬ್ ಎಲ್ನಾತಾನ್ ಇವರನ್ನೂ ಕರೆಯಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು