ಎಜ್ರ 8:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವುದು; ಆತನನ್ನು ತೊರೆದುಬಿಟ್ಟವರೆಲ್ಲರೂ ಆತನ ಉಗ್ರವಾದ ಕೋಪಕ್ಕೆ ಗುರಿಯಾಗುವರು. ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕೋಸ್ಕರ ಸೈನ್ಯವನ್ನೂ, ಅಶ್ವಬಲವನ್ನೂ ಕೊಡಲು ಅರಸನಿಂದ ಸಹಾಯ ಕೇಳಲು ನಾಚಿಕೊಂಡಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ನಮ್ಮ ದೇವರ ಕೃಪಾಹಸ್ತ ಅವರ ಎಲ್ಲ ಶರಣಾರ್ಥಿಗಳ ಮೇಲಿತ್ತು. ನಮ್ಮ ದೇವರನ್ನು ತೊರೆದುಬಿಟ್ಟವರೆಲ್ಲರು ಅವರ ಪ್ರಬಲವಾದ ರೌದ್ರಕ್ಕೆ ಗುರಿಯಾಗುವರು ಎಂದು ನಾವು ಅರಸನ ಮುಂದೆ ಹೇಳಿದ್ದೆವು. ಆದುದರಿಂದ ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವುದಕ್ಕಾಗಿ ಸೈನ್ಯವನ್ನಾಗಲಿ, ಅಶ್ವಬಲವನ್ನಾಗಲಿ ಕೇಳಿಕೊಳ್ಳುವುದಕ್ಕೆ ನಾನು ನಾಚಿಕೊಂಡಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ನಮ್ಮ ದೇವರ ಹಸ್ತವು ಆತನ ಎಲ್ಲಾ ಶರಣಾರ್ಥಿಗಳನ್ನೂ ಪಾಲಿಸುವದು; ಆತನ ಬಲವಾದ ರೌದ್ರಕ್ಕೆ ಆತನನ್ನು ತೊರೆದುಬಿಟ್ಟವರೆಲ್ಲರೂ ಗುರಿಯಾಗುವರು ಎಂದು ನಾವು ಅರಸನ ಮುಂದೆ ಹೇಳಿದ್ದರಿಂದ ದಾರಿಯಲ್ಲಿ ನಮ್ಮನ್ನು ಶತ್ರುಗಳಿಂದ ರಕ್ಷಿಸುವದಕ್ಕೋಸ್ಕರ ಸೈನ್ಯವನ್ನೂ ಅಶ್ವಬಲವನ್ನೂ ಕೇಳಿಕೊಳ್ಳುವದಕ್ಕೆ ನಾಚಿಕೊಂಡಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಾವು ಪ್ರಯಾಣ ಮಾಡುವಾಗ ದಾರಿಯಲ್ಲಿ ಶತ್ರುಗಳಿದ್ದುದರಿಂದ ನಮ್ಮ ಸಂರಕ್ಷಣೆಗಾಗಿ ಸಿಪಾಯಿಗಳನ್ನು ಮತ್ತು ರಾಹುತರನ್ನು ಅರಸನಿಂದ ಕೇಳಲು ನನಗೆ ಸಂಕೋಚವಾಯಿತು. ಯಾಕೆಂದರೆ, “ನಮ್ಮ ದೇವರು ತನ್ನನ್ನು ನಂಬಿದವರೊಂದಿಗಿದ್ದಾನೆ; ಆತನಿಂದ ದೂರಹೋಗುವವರ ಮೇಲೆ ಆತನು ಕೋಪವುಳ್ಳವನಾಗಿದ್ದಾನೆ” ಎಂದು ರಾಜನಾದ ಅರ್ತಷಸ್ತನಿಗೆ ನಾವು ಹೇಳಿದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ನಮ್ಮ ದೇವರ ಕೃಪಾಹಸ್ತವು ಅವರನ್ನು ಹುಡುಕುವವರೆಲ್ಲರ ಮೇಲೆಯೂ ಇದೆ, ಆದರೆ ಅವರ ಕೋಪವು ಅವರನ್ನು ತ್ಯಜಿಸುವ ಎಲ್ಲರ ವಿರುದ್ಧವಾಗಿರುತ್ತದೆ,” ಎಂದು ನಾವು ಅರಸನಿಗೆ ಹೇಳಿದ್ದರಿಂದ, ಮಾರ್ಗದಲ್ಲಿ ಶತ್ರುವಿಗೆ ವಿರೋಧವಾಗಿ ನಮಗೆ ಸಹಾಯ ಕೊಡಲು ಸೈನ್ಯವನ್ನೂ ಅಶ್ವಬಲವನ್ನೂ ಅರಸನಿಂದ ಕೇಳಲು ನಾಚಿಕೆಪಟ್ಟೆವು. ಅಧ್ಯಾಯವನ್ನು ನೋಡಿ |
ನನ್ನ ಮಗನಾದ ಸೊಲೊಮೋನನೇ, ನೀನಂತೂ ನಿನ್ನ ತಂದೆಯ ದೇವರನ್ನು ಅರಿತುಕೊಂಡು ಸಂಪೂರ್ಣಹೃದಯದಿಂದಲೂ, ಮನಸ್ಸಂತೋಷದಿಂದಲೂ ಆತನನ್ನೇ ಸೇವಿಸು. ಯೆಹೋವನು ಎಲ್ಲಾ ಹೃದಯಗಳನ್ನು ವಿಚಾರಿಸುವವನೂ, ಎಲ್ಲಾ ಮನಸ್ಸಂಕಲ್ಪಗಳನ್ನು ಬಲ್ಲವನೂ ಆಗಿರುತ್ತಾನಲ್ಲಾ. ನೀನು ಆತನನ್ನು ಹುಡುಕುವುದಾದರೆ ಆತನು ನಿನಗೆ ಸಿಕ್ಕುವನು. ಆತನನ್ನು ಕಡೆಗಣಿಸಿದರೆ ಆತನು ನಿನ್ನನ್ನು ಶಾಶ್ವತವಾಗಿ ತಳ್ಳಿಬಿಡುವನು.