Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 8:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇಮಿಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ನಮ್ಮ ದೇವರ ಕೃಪಾಹಸ್ತ ನಮ್ಮನ್ನು ಪಾಲಿಸುತ್ತಾ ಇತ್ತು. ಶತ್ರುಗಳ ಹಾಗು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ಅವರು ನಮ್ಮನ್ನು ಪಾರುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ನಾವು ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನದಲ್ಲಿ ಅಹವಾ ನದಿಯನ್ನು ಬಿಟ್ಟು ಯೆರೂಸಲೇವಿುಗೆ ಹೊರಟೆವು. ನಮ್ಮ ದೇವರ ಹಸ್ತವು ನಮ್ಮನ್ನು ಪಾಲಿಸುತ್ತಾ ಇತ್ತು. ಆತನು ಶತ್ರುಗಳ ಮತ್ತು ದಾರಿಯಲ್ಲಿ ಹೊಂಚುಹಾಕುವವರ ಕೈಗೆ ಸಿಕ್ಕದಂತೆ ನಮ್ಮನ್ನು ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಮೊದಲನೆಯ ತಿಂಗಳಿನ ಹನ್ನೆರಡನೆಯ ದಿನ ನಾವು ಅಹವಾ ನದಿಯ ದಡವನ್ನು ಬಿಟ್ಟು ಜೆರುಸಲೇಮಿಗೆ ಹೊರಟೆವು. ದೇವರು ನಮ್ಮೊಂದಿಗಿದ್ದು ಶತ್ರುಗಳಿಂದಲೂ ಕಳ್ಳರಿಂದಲೂ ನಮ್ಮನ್ನು ಸಂರಕ್ಷಿಸಿ ಕಾಪಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ನಾವು ಯೆರೂಸಲೇಮಿಗೆ ಹೋದ ಮೊದಲನೆಯ ತಿಂಗಳ, ಹನ್ನೆರಡನೆಯ ದಿವಸದಲ್ಲಿ ಅಹಾವ ನದಿಯನ್ನು ಬಿಟ್ಟು ಹೊರಟೆವು. ನಮ್ಮ ದೇವರ ಹಸ್ತವು ನಮ್ಮ ಮೇಲೆ ಇದ್ದುದರಿಂದ, ದೇವರು ಶತ್ರುವಿನ ಕೈಗೂ, ಮಾರ್ಗದಲ್ಲಿ ಹೊಂಚುಹಾಕುವವರ ಕೈಗೂ ನಮ್ಮನ್ನು ತಪ್ಪಿಸಿಬಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 8:31
10 ತಿಳಿವುಗಳ ಹೋಲಿಕೆ  

ಅಹವಾ ಪ್ರಾಂತ್ಯದ ಕಡೆಗೆ ಹರಿಯುವ ನದಿಯ ಬಳಿಯಲ್ಲಿ ನಾನು ಇವರನ್ನು ಕೂಡಿಸಿದೆನು. ಅಲ್ಲಿ ಮೂರು ದಿನ ಪಾಳೆಯಮಾಡಿಕೂಂಡ ಮೇಲೆ ಸಾಧಾರಣ ಜನರೂ, ಯಾಜಕರೂ ಬಂದಿದ್ದಾರೆ, ಲೇವಿಯರಲ್ಲಿ ಯಾರೂ ಬರಲಿಲ್ಲ ಎಂದು ಕಂಡುಬಂತು.


ಅವನು ಮೊದಲನೆಯ ತಿಂಗಳಿನ ಮೊದಲ ದಿನದಲ್ಲಿ ಬಾಬಿಲೋನಿನಿಂದ ಹೊರಟನು; ತನ್ನ ದೇವರ ಕೃಪಾ ಹಸ್ತಪಾಲನೆಯಿಂದ ಐದನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಯೆರೂಸಲೇಮಿಗೆ ಬಂದು ಸೇರಿದನು.


ಆದರೆ ನಾನು ದೇವರಿಂದ ಸಹಾಯವನ್ನು ಪಡೆದು ಈ ದಿನದವರೆಗೂ ಸುರಕ್ಷಿತವಾಗಿದ್ದು ಚಿಕ್ಕವರಿಗೂ, ದೊಡ್ಡವರಿಗೂ ಸಾಕ್ಷಿಹೇಳುವವನಾಗಿದ್ದೇನೆ. ಪ್ರವಾದಿಗಳೂ, ಮೋಶೆಯೂ ಮುಂದೆ ಆಗುವುದನ್ನು ಕುರಿತು ತಿಳಿಸಿದ ಸಂಗತಿಗಳನ್ನೇ, ಹೊರತು ನಾನು ಇನ್ನೇನೂ ಹೇಳುವವನಲ್ಲ.


ನೀನು ದಯಮಾಡಿ ಅವನನ್ನು ಯೆರೂಸಲೇಮಿಗೆ ಕಳುಹಿಸಬೇಕೆಂದು ಪೌಲನ ಕೇಡಿಗಾಗಿ ಬಲವಾದ ಬಿನ್ನಹವನ್ನು ಮಾಡಿದರು. ಏಕೆಂದರೆ, ದಾರಿಯಲ್ಲಿ ಅವನನ್ನು ಕೊಲ್ಲುವುದಕ್ಕಾಗಿ ಹೊಂಚುಹಾಕಿಕೊಂಡಿದ್ದರು.


ನನ್ನ ದೇವರಾದ ಯೆಹೋವನ ಹಸ್ತಪಾಲನೆಯು ನನ್ನೊಂದಿಗೆ ಇರುವುದರಿಂದ ಅರಸನ ಮುಂದೆ ನನಗೆ ದೊರಕ್ಕಿದ್ದರಿಂದ ನಾನು ಧೈರ್ಯವಾಗಿ ನನ್ನೊಂದಿಗೆ ಪ್ರಯಾಣ ಮಾಡುವುದಕ್ಕೆ ಕೆಲವು ಜನ ಇಸ್ರಾಯೇಲ್ ಪ್ರಧಾನರನ್ನು ಕೂಡಿಸಿಕೊಂಡೆನು” ಎಂದು ಹೇಳಿದನು.


ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು