ಎಜ್ರ 9:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನೀನು ನಿನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ದೇಶವು ಅನ್ಯದೇಶಗಳವರ ಅಶುದ್ಧತ್ವದಿಂದಲೂ, ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಆ ದೇಶವು ಎಲ್ಲೆಲ್ಲೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನೀವು ನಿಮ್ಮ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ, ‘ನೀವು ಸ್ವತಂತ್ರಿಸಿಕೊಳ್ಳುವುದಕ್ಕೆ ಹೋಗುವ ನಾಡು ಅನ್ಯದೇಶಗಳವರ ಅಶುದ್ಧತ್ವದಿಂದಲೂ ಅವರ ವಿಗ್ರಹಗಳಿಂದಲೂ ಮಲಿನವಾಗಿದೆ. ಅದು ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ನೀನು ನಿನ್ನ ಸೇವಕರಾದ ಪ್ರವಾದಿಗಳ ಮುಖಾಂತರ ನಮಗೆ - ನೀವು ಸ್ವತಂತ್ರಿಸಿಕೊಳ್ಳುವದಕ್ಕೆ ಹೋಗುವ ದೇಶವು ಅನ್ಯದೇಶಗಳವರ ಅಶುದ್ಧತ್ವದಿಂದಲೂ ಅವರ ವಿಗ್ರಹಗಳಿಂದಲೂ ಮಲಿನವಾಯಿತು. ಅದು ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೂ ಆ ವಿಗ್ರಹಗಳ ಅಸಹ್ಯತೆಯಿಂದ ತುಂಬಿರುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ದೇವರೇ, ನೀನು ನಿನ್ನ ಸೇವಕರಾದ ಪ್ರವಾದಿಗಳ ಮೂಲಕ ನಮಗೆ ಆ ಆಜ್ಞೆಗಳನ್ನು ಕೊಟ್ಟಿರುವೆ. ನೀನು ಹೀಗೆ ಹೇಳಿದೆ: ‘ನೀವು ವಾಸಿಸಲಿರುವ ಮತ್ತು ನಿಮ್ಮದನ್ನಾಗಿಸಿಕೊಳ್ಳುವ ನಾಡು ಪಾಳಾಗಿರುವ ನಾಡಾಗಿದೆ. ಅಲ್ಲಿಯ ಜನರು ಎಲ್ಲೆಲ್ಲಿಯೂ ಮಾಡಿರುವ ಕೆಟ್ಟಕೃತ್ಯಗಳಿಂದ ಅದು ಹಾಳಾಗಿದೆ; ಅವರು ತಮ್ಮ ಪಾಪಗಳಿಂದ ಆ ನಾಡನ್ನು ಹೊಲಸು ಮಾಡಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಿಮ್ಮ ಸೇವಕರಾದ ಪ್ರವಾದಿಗಳ ಮುಖಾಂತರ ನೀವು ಆ ನಿಮ್ಮ ಆಜ್ಞೆಗಳನ್ನು ಕೊಟ್ಟಿದ್ದೀರಿ. ‘ನೀವು ಸ್ವಾಧೀನಮಾಡಿಕೊಳ್ಳಲು ಹೋಗುವ ದೇಶವು, ಆ ದೇಶಗಳ ಜನರ ಅಶುದ್ಧತ್ವದಿಂದ ಮೈಲಿಗೆಯಾದ ದೇಶವಾಗಿದೆ. ಆ ಜನರು ತಮ್ಮ ಅಸಹ್ಯ ಅಭ್ಯಾಸಗಳಿಂದ ಅದನ್ನು ಒಂದು ಮೂಲೆಯಿಂದ ಮತ್ತೊಂದು ಮೂಲೆಯವರೆಗೂ ತುಂಬಿಸಿದ್ದಾರೆ. ಅಧ್ಯಾಯವನ್ನು ನೋಡಿ |