ಎಜ್ರ 9:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂ ಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂ ಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ಥ್ಯವನ್ನಾಗಿ ಬಿಡುವಿರಿ’ ಎಂದು ಹೇಳಿದಿಯಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀಗಿರಲಾಗಿ, ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂಬಾರದು, ನಿಮ್ಮ ಗಂಡುಮಕ್ಕಳಿಗಾಗಿ ಅವರ ಹೆಣ್ಣುಮಕ್ಕಳನ್ನು ತೆಗೆದುಕೊಳ್ಳಲೂಬಾರದು. ಅವರಿಗೆ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ, ನೀವು ಬಲಗೊಂಡು, ಆ ನಾಡಿನ ಸಮೃದ್ಧಿಯನ್ನು ಅನುಭವಿಸಿ ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತ ಸೊತ್ತನ್ನಾಗಿ ಬಿಡುವಿರಿ’ ಎಂದು ಹೇಳಿದಿರಲ್ಲವೆ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ತ್ಯವನ್ನಾಗಿ ಬಿಡುವಿರಿ ಎಂದು ಹೇಳಿದಿಯಲ್ಲಾ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದ್ದರಿಂದ ಇಸ್ರೇಲ್ ಜನರೇ, ನಿಮ್ಮ ಮಕ್ಕಳು ಅವರ ಮಕ್ಕಳನ್ನು ಮದುವೆಯಾಗಲು ಬಿಡಬೇಡಿ. ಅವರ ಸಹವಾಸ ಮಾಡಬೇಡಿರಿ. ಅವರ ವಸ್ತುಗಳನ್ನು ಆಶಿಸಬೇಡಿರಿ. ನನ್ನ ಕಟ್ಟಳೆಗಳನ್ನು ಪಾಲಿಸಿರಿ; ಆಗ ನೀವು ಬಲಶಾಲಿಗಳಾಗಿ ಈ ದೇಶವನ್ನು ಅನುಭವಿಸುವಿರಿ. ಈ ದೇಶವನ್ನು ನೀನು ಇಟ್ಟುಕೊಂಡವರಾಗಿ ನಿಮ್ಮ ಮಕ್ಕಳಿಗೆ ಸ್ವಾಸ್ತ್ಯವಾಗಿ ಕೊಡುವಿರಿ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದ್ದರಿಂದ ನೀವು ಪ್ರಬಲವಾಗಿ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಮಕ್ಕಳಿಗೆ ಶಾಶ್ವತ ಸ್ವಾಸ್ತ್ಯವನ್ನಾಗಿ ಕೊಡುವ ಹಾಗೆ ನೀವು ನಿಮ್ಮ ಪುತ್ರಿಯರನ್ನು ಅವರ ಪುತ್ರರಿಗೆ ಮದುವೆಮಾಡಿಕೊಡಬೇಡಿರಿ. ಅವರ ಪುತ್ರಿಯರನ್ನು ನಿಮ್ಮ ಪುತ್ರರಿಗೆ ತೆಗೆದುಕೊಳ್ಳಬೇಡಿರಿ. ಅವರ ಸಮಾಧಾನವನ್ನೂ, ಅವರ ಮೇಲನ್ನೂ ಹುಡುಕಲೇ ಬೇಡಿರಿ,’ ಎಂದು ದೇವರೇ ನಮಗೆ ಹೇಳಿದಿರಲ್ಲವೇ? ಅಧ್ಯಾಯವನ್ನು ನೋಡಿ |