Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 9:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೆಹೋವನೇ, ಇಸ್ರಾಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿಮಿತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು” ಎಂದು ಬೇಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಸರ್ವೇಶ್ವರಾ, ಇಸ್ರಯೇಲ್ ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀವು ಧರ್ಮಸ್ವರೂಪರೆಂದು ಸ್ಪಷ್ಟವಾಯಿತು. ನಾವಾದರೋ ನಿಮ್ಮ ದೃಷ್ಟಿಯಲ್ಲಿ ಅಪರಾಧಿಗಳು, ಈ ನಮ್ಮ ದುಷ್ಕೃತ್ಯದ ಸಲುವಾಗಿ ನಿಮ್ಮೆದುರಿನಲ್ಲಿ ನಿಲ್ಲಲಾರೆವು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೆಹೋವನೇ, ಇಸ್ರಾಯೇಲ್‍ದೇವರೇ, ಈಗಿರುವಷ್ಟು ಜನರನ್ನು ನಮ್ಮಲ್ಲಿ ಉಳಿಸಿದ್ದರಿಂದ ನೀನು ಧರ್ಮಸ್ವರೂಪನೆಂದು ಪ್ರಕಟವಾಯಿತು. ನಾವಾದರೋ ನಿನ್ನ ದೃಷ್ಟಿಯಲ್ಲಿ ಅಪರಾಧಿಗಳು. ಈ ನಮ್ಮ ದುಷ್ಕೃತ್ಯದ ನಿವಿುತ್ತವಾಗಿ ನಿನ್ನೆದುರಿನಲ್ಲಿ ನಿಲ್ಲಲಾರೆವು ಎಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 “ಇಸ್ರೇಲಿನ ದೇವರಾದ ಯೆಹೋವನೇ, ನೀನು ಒಳ್ಳೆಯವನಾಗಿರುವೆ. ನಮ್ಮ ಜನಾಂಗದ ಕೆಲವರನ್ನಾದರೂ ಉಳಿದುಕೊಳ್ಳುವಂತೆ ಮಾಡಿರುವೆ. ಹೌದು, ನಾವು ಪಾಪಿಗಳು. ನಮ್ಮ ಅಪರಾಧಗಳ ದೆಸೆಯಿಂದ ಯಾರೂ ನಿನ್ನ ಮುಂದೆ ನಿಲ್ಲಲು ಸಾಧ್ಯವಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಇಸ್ರಾಯೇಲರ ದೇವರಾಗಿರುವ ಯೆಹೋವ ದೇವರೇ, ನೀವು ನೀತಿವಂತರು! ನಾವು ಇಂದು ತಪ್ಪಿಸಿಕೊಂಡು ಉಳಿದಿದ್ದೇವೆ. ನಾವು ನಮ್ಮ ಅಪರಾಧಗಳ ನಿಮಿತ್ತ ನಿಮ್ಮ ಮುಂದೆ ನಿಲ್ಲಲು ಯೋಗ್ಯರಲ್ಲದಿದ್ದರೂ, ನಮ್ಮ ಅಪರಾಧಗಳೊಂದಿಗೆ ನಿಮ್ಮ ಮುಂದೆ ನಿಂತಿದ್ದೇವೆ,” ಎಂದು ಪ್ರಾರ್ಥನೆಮಾಡಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 9:15
26 ತಿಳಿವುಗಳ ಹೋಲಿಕೆ  

ಕರ್ತನೇ, ಯೆಹೋವನೇ, ನೀನು ಪಾಪಗಳನ್ನು ಲೆಕ್ಕಿಸುವುದಾದರೆ ನಿನ್ನ ಮುಂದೆ ಯಾರು ನಿಲ್ಲಲು ಸಾಧ್ಯ?


ಆದುದರಿಂದ ನೀವು ನಿಮ್ಮ ಪಾಪಗಳಲ್ಲಿಯೇ ಸಾಯುವಿರೆಂದು ನಿಮಗೆ ನಾನು ಹೇಳಿದೆನು. ನೀವು ನನ್ನನ್ನು ಯಾರೆಂದು ನಂಬದೆ ಹೋದರೆ ನಿಮ್ಮ ಪಾಪಗಳಲ್ಲಿಯೇ ಸಾಯುವಿರಿ” ಎಂದು ಹೇಳಿದನು.


ಧರ್ಮಶಾಸ್ತ್ರದ ನುಡಿಗಳೆಲ್ಲವು ಆ ಶಾಸ್ತ್ರಕ್ಕೆ ಒಳಗಾದವರಿಗೆ ಹೇಳಿವೆಯೆಂದು ಬಲ್ಲೆವಷ್ಟೆ. ಹೀಗೆ ಎಲ್ಲರ ಬಾಯಿ ಕಟ್ಟಿಹೋಗುವುದು. ಲೋಕವೆಲ್ಲಾ ದೇವರ ಮುಂದೆ ಅಪರಾಧಿಯಾಗಿ ನಿಲ್ಲುವುದು.


ಯೇಸು ತಿರುಗಿ ಅವರಿಗೆ, “ನಾನು ಹೋಗುತ್ತೇನೆ, ನೀವು ನನ್ನನ್ನು ಹುಡುಕುವಿರಿ ಮತ್ತು ನೀವು ನಿಮ್ಮ ಪಾಪದಲ್ಲೇ ಸಾಯುವಿರಿ. ನಾನು ಹೋಗುವಲ್ಲಿಗೆ ನೀವು ಬರಲಾರಿರಿ” ಎಂದನು.


ಅವರು ದೇವರಿಂದ ದೊರಕುವ ನೀತಿಯನ್ನರಿಯದೆ ಸ್ವಂತ ನೀತಿಯನ್ನೇ; ಸ್ಥಾಪಿಸಬೇಕೆಂದು ಪ್ರಯತ್ನಿಸುತ್ತಾ ಇದ್ದುದ್ದರಿಂದ ದೇವರ ನೀತಿಗೆ ಅಧೀನರಾಗಲಿಲ್ಲ.


ಆದಕಾರಣ ಯೆಹೋವನು ಆ ಕೇಡನ್ನು ನೋಡಿಕೊಂಡಿದ್ದು ನಮ್ಮ ಮೇಲೆ ಬರಮಾಡಿದ್ದಾನೆ; ನಮ್ಮ ದೇವರಾದ ಯೆಹೋವನು ತಾನು ಮಾಡುವ ಸಕಲಕಾರ್ಯಗಳಲ್ಲಿ ಧರ್ಮಸ್ವರೂಪನೇ; ನಾವೋ ಆತನ ಮಾತನ್ನು ಕೇಳಲಿಲ್ಲ.


“ನರಪುತ್ರನೇ, ಇಸ್ರಾಯೇಲ್ ವಂಶದವರಿಗೆ ಹೀಗೆ ನುಡಿ, ‘ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರವು ನಮ್ಮ ಮೇಲೆ ಬಿದ್ದಿದೆ; ಅವುಗಳಿಂದ ಕ್ಷೀಣವಾಗಿ ಹೋಗುತ್ತಿದ್ದೇವೆ; ನಾವು ಹೇಗೆ ಬದುಕುವೆವು? ಅಂದುಕೊಳ್ಳುತ್ತೀರಲ್ಲಾ.


ಯೆಹೋವನೇ, ನೀನು ಧರ್ಮಸ್ವರೂಪನಾಗಿರುವುದರಿಂದ ನಾನು ನಿನ್ನೊಡನೆ ವ್ಯಾಜ್ಯವಾಡಲಾರೆನು. ಆದರೂ ನಿನ್ನ ಸಂಗಡ ನ್ಯಾಯವನ್ನು ಚರ್ಚಿಸುವೆನು. ದುಷ್ಟರ ನಡತೆ ಏಕೆ ಸಫಲವಾಗುತ್ತದೆ?


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ಕ್ರಿಸ್ತನು ಎದ್ದುಬರಲಿಲ್ಲವಾದರೆ ನಿಮ್ಮ ನಂಬಿಕೆಯು ನಿರರ್ಥಕವಾಗಿದೆ, ಹಾಗೂ ನೀವು ಇನ್ನೂ ನಿಮ್ಮ ಪಾಪಗಳಲ್ಲಿಯೇ ಇದ್ದೀರಿ.


“ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ, ನಿನ್ನ ಕಡೆಗೆ ತಿರುಗಿಕೊಳ್ಳಲು ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದಿವೆ, ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿವೆ.


ನೀನು ಮಹಾಶಕ್ತಿಶಾಲಿ; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?


ಯೆಹೋವನು ಕೃಪಾಳುವೂ, ನೀತಿವಂತನೂ ಆಗಿದ್ದಾನೆ; ನಮ್ಮ ದೇವರು ಕನಿಕರವುಳ್ಳವನು.


ಯೆಹೋವನೇ, ನೀನು ನೀತಿಸ್ವರೂಪನು, ನಿನ್ನ ವಿಧಿಗಳು ನ್ಯಾಯವಾಗಿವೆ.


ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.


“ಆದರೆ ಅವರು ತಾವೂ ಹಾಗು ತಮ್ಮ ಪೂರ್ವಿಕರು ನನಗೆ ದ್ರೋಹಿಗಳಾಗಿ ಪಾಪಮಾಡಿದವರೆಂದೂ ಅರಿಕೆಮಾಡಿದರೆ, ತಾವು ನನಗೆ ವಿರೋಧವಾಗಿ ನಡೆದುದರಿಂದಲೇ


ನಾನು ಅವರಿಗೆ ವಿರೋಧವಾಗಿ ನಡೆದುಕೊಂಡು ಶತ್ರುದೇಶದಲ್ಲಿ ಸೆರೆಯವರನ್ನಾಗಿ ಮಾಡಬೇಕಾಯಿತೆಂದೂ ಒಪ್ಪಿ, ತಮ್ಮ ಮೊಂಡತನವನ್ನು ಬಿಟ್ಟು ನನ್ನ ಆಜ್ಞೆಗೆ ತಲೆ ಬಾಗಿ ತಮ್ಮ ಪಾಪದಿಂದುಂಟಾದ ಶಿಕ್ಷೆಯನ್ನು ಸ್ವೀಕರಿಸುವುದಾದರೆ,


ಇವರು ಗಿಲ್ಯಾದನಲ್ಲಿದ್ದ ರೂಬೇನ್ಯರ, ಗಾದ್ಯರ ಹಾಗೂ ಮನಸ್ಸೆ ಕುಲದ ಅರ್ಧಜನರ ಬಳಿಗೆ ಬಂದು,


ಸೆರೆಯವರಲ್ಲಿ ಉಳಿದವರು ಯಾವ ಊರುಗಳಲ್ಲಿ ಪ್ರವಾಸಿಗಳಾಗಿರುತ್ತಾರೋ ಆ ಊರುಗಳವರು ಯೆರೂಸಲೇಮಿನ ದೇವಾಲಯಕ್ಕೋಸ್ಕರ ಕಾಣಿಕೆಗಳನ್ನಲ್ಲದೆ ಬೆಳ್ಳಿಬಂಗಾರ, ಸರಕು, ಪಶು ಇವುಗಳನ್ನೂ ಕೊಟ್ಟು ಅವರಿಗೆ ಸಹಾಯ ಮಾಡಲಿ” ಎಂದು ಪ್ರಕಟಿಸಿದನು.


ಅವನು ಯಥಾರ್ಥಚಿತ್ತನೆಂದು ಕಂಡು ಅವನಿಗೆ, ಕಾನಾನ್ಯರು, ಹಿತ್ತಿಯರು, ಅಮೋರಿಯರು, ಪೆರಿಜ್ಜೀಯರು, ಯೆಬೂಸಿಯರು, ಗಿರ್ಗಾಷಿಯರು ಇವರ ದೇಶವನ್ನು ನಿನ್ನ ಸಂತಾನದವರಿಗೆ ಕೊಡುತ್ತೇನೆಂದು ವಾಗ್ದಾನಮಾಡಿ ಅದನ್ನು ನೆರವೇರಿಸಿದ್ದರಿಂದ ನೀನು ನೀತಿಸ್ವರೂಪನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು