ಎಜ್ರ 9:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರು ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಮಕ್ಕಳನ್ನು ತೆಗೆದುಕೊಂಡದ್ದರಿಂದ ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಯಿತು. ಪ್ರಭುಗಳೂ ಮತ್ತು ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಇಸ್ರಯೇಲರಲ್ಲಿ ಸಾಧಾರಣಜನರು, ಯಾಜಕರು, ಲೇವಿಯರು ತಮಗೆ ಹಾಗು ತಮ್ಮ ಗಂಡುಮಕ್ಕಳಿಗೆ ಅವರಿಂದ ಹೆಣ್ಣುಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ದೇವಕುಲವು ಅನ್ಯದೇಶಗಳವರೊಡನೆ ಮಿಶ್ರವಾಗುತ್ತಿದೆ; ನಾಯಕರೇ, ಮುಖ್ಯಸ್ಥರೇ, ಈ ದ್ರೋಹಕ್ಕೆ ಮುಂದಾಳುಗಳಾಗುತ್ತಿದ್ದಾರೆ,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ತಮಗೂ ತಮ್ಮ ಗಂಡುಮಕ್ಕಳಿಗೂ ಅವರಿಂದ ಹೆಣ್ಣುಗಳನ್ನು ತೆಗೆದುಕೊಂಡದರಿಂದ ದೇವಕುಲವು ಅನ್ಯದೇಶಗಳವರೊಡನೆ ವಿುಶ್ರವಾಯಿತು. ಪ್ರಭುಗಳೂ ಪ್ರಧಾನರೂ ಈ ದ್ರೋಹಕ್ಕೆ ಮುಂದಾಳುಗಳಾದರು ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಇಸ್ರೇಲ್ ಜನರು ತಮ್ಮ ಸುತ್ತಲು ವಾಸಿಸುವ ಜನರೊಂದಿಗೆ ಮದುವೆಯಾಗಿದ್ದಾರೆ. ಇಸ್ರೇಲ್ ಜನರು ದೇವರ ವಿಶೇಷ ಜನರಾಗಿದ್ದಾರೆ. ಆದರೆ ಈಗ ಅನ್ಯರೊಂದಿಗೆ ಬೆರೆತು ಹೋಗಿದ್ದಾರೆ. ಇಸ್ರೇಲರ ಪ್ರಧಾನರು, ಮುಖ್ಯಾಧಿಕಾರಿಗಳು ಈ ರೀತಿಯಾಗಿ ಮಾಡಿ ಜನರಿಗೆ ಕೆಟ್ಟ ಮಾದರಿಯಾಗಿ ಜೀವಿಸುತ್ತಿದ್ದಾರೆ” ಎಂದು ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಇಸ್ರಾಯೇಲರು ತಮಗೂ, ತಮ್ಮ ಪುತ್ರರಿಗೂ ಅವರ ಪುತ್ರಿಯರನ್ನು ತೆಗೆದುಕೊಂಡರು. ಆದಕಾರಣ ಪರಿಶುದ್ಧ ಸಂತಾನದವರು ಈ ದೇಶದ ಜನರ ಸಂಗಡ ಬೆರೆತುಕೊಂಡಿದ್ದಾರೆ. ನಿಶ್ಚಯವಾಗಿ ಪ್ರಧಾನರು ಮತ್ತು ಅಧಿಕಾರಸ್ಥರು ಈ ಅಪನಂಬಿಗಸ್ತಿಕೆಗೆ ಮುಂದಾಳುಗಳಾದರು,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿ |
ಹೀಗಿರಲಾಗಿ ನೀವು ನಿಮ್ಮ ಹೆಣ್ಣುಮಕ್ಕಳನ್ನು ಅವರ ಗಂಡುಮಕ್ಕಳಿಗೆ ಕೊಡಲೂ ಬಾರದು, ನಿಮ್ಮ ಗಂಡುಮಕ್ಕಳಿಗೋಸ್ಕರ ಅವರ ಹೆಣ್ಣು ಮಕ್ಕಳನ್ನು ತೆಗೆದುಕೊಳ್ಳಲೂ ಬಾರದು, ಅವರಿಗೋಸ್ಕರ ಸುಖಕ್ಷೇಮಗಳನ್ನು ಎಂದಿಗೂ ಬಯಸಬಾರದು. ಈ ಪ್ರಕಾರ ನಡೆದರೆ ನೀವು ಬಲಗೊಂಡು ಆ ದೇಶದ ಸಮೃದ್ಧಿಯನ್ನು ಅನುಭವಿಸಿ, ಅದನ್ನು ನಿಮ್ಮ ಸಂತಾನದವರಿಗೆ ಶಾಶ್ವತಸ್ವಾಸ್ಥ್ಯವನ್ನಾಗಿ ಬಿಡುವಿರಿ’ ಎಂದು ಹೇಳಿದಿಯಲ್ಲಾ.