ಎಜ್ರ 9:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಇಸ್ರಾಯೇಲ್ ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಇಸ್ರಯೇಲ್ ದೇವರ ವಿಧಿಗಳ ಬಗ್ಗೆ ಗೌರವವಿದ್ದವರೆಲ್ಲರು ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು, ನನ್ನನ್ನು ಕೂಡಿಕೊಂಡರು. ನಾನು ಸಂಧ್ಯಾನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧವಾಗಿ ಕುಳಿತುಕೊಂಡಿದ್ದೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಇಸ್ರಾಯೇಲ್‍ದೇವರ ವಿಧಿಗಳನ್ನು ಗೌರವಿಸಿದವರೆಲ್ಲರೂ ಸೆರೆಯಿಂದ ಬಂದವರ ದ್ರೋಹದ ಸಲುವಾಗಿ ಕಳವಳಗೊಂಡು ನನ್ನನ್ನು ಕೂಡಿಕೊಂಡರು. ನಾನು ಸಂಧ್ಯಾನೈವೇದ್ಯಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕೂತುಕೊಂಡಿದ್ದೆನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಇದನ್ನು ನೋಡಿ ದೇವರ ಕಟ್ಟಳೆಗಳನ್ನು ಗೌರವಿಸುವ ಪ್ರತಿಯೊಬ್ಬನು ಭಯಪಟ್ಟನು; ನಡುಗಿದನು. ಯಾಕೆಂದರೆ ಸೆರೆವಾಸದಿಂದ ಹಿಂದಿರುಗಿ ಬಂದ ಇಸ್ರೇಲರು ದೇವರಿಗೆ ನಂಬಿಗಸ್ತರಾಗಿರಲಿಲ್ಲ. ನಾನೂ ನನ್ನೊಂದಿಗಿದ್ದ ಜನರೂ ಸಾಯಂಕಾಲದ ಯಜ್ಞವನ್ನರ್ಪಿಸುವ ಸಮಯದ ತನಕ ಹಾಗೆಯೇ ಕುಳಿತಿದ್ದೆವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಸೆರೆಯಿಂದ ಬಂದವರ ಅಪರಾಧಕ್ಕೋಸ್ಕರ ಇಸ್ರಾಯೇಲ್ ದೇವರ ಮಾತುಗಳಿಗೆ ಹೆದರಿಕೊಂಡಿದ್ದ ಮನುಷ್ಯರೆಲ್ಲರೂ, ನನ್ನ ಬಳಿಗೆ ಕೂಡಿಬಂದರು. ಆದರೆ ನಾನು ಸಾಯಂಕಾಲದ ಬಲಿಯನ್ನು ಅರ್ಪಿಸುವವರೆಗೆ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಅಧ್ಯಾಯವನ್ನು ನೋಡಿ |