Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಜ್ರ 9:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಾವು ನಮ್ಮ ಪೂರ್ವಿಕರ ಕಾಲದಿಂದ ಇಂದಿನ ವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ, ನಮ್ಮ ಅರಸರೂ ಮತ್ತು ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ, ಸೆರೆಗೂ, ಸುಲಿಗೆಗೂ, ಅಪಮಾನಕ್ಕೂ ಗುರಿಯಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ; ನಮ್ಮ ಪಾಪಗಳ ನಿಮಿತ್ತ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಸಿಕ್ಕಿಬಿದ್ದೆವು. ಈಗಿರುವಂತೆ, ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿ ಆದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಾವು ನಮ್ಮ ಪಿತೃಗಳ ಕಾಲದಿಂದ ಇಂದಿನವರೆಗೂ ಮಹಾಪರಾಧಿಗಳೇ. ನಮ್ಮ ಪಾಪಗಳ ದೆಸೆಯಿಂದ ನಾವೂ ನಮ್ಮ ಅರಸರೂ ಯಾಜಕರೂ ಅನ್ಯದೇಶಗಳ ರಾಜರ ಕೈಗೆ ಒಪ್ಪಿಸಲ್ಪಟ್ಟು ಈಗಿರುವಂತೆ ಕತ್ತಿಗೂ ಸೆರೆಗೂ ಸುಲಿಗೆಗೂ ಅಪಮಾನಕ್ಕೂ ಗುರಿಯಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಮ್ಮ ಪೂರ್ವಿಕರ ಕಾಲದಿಂದ ಈ ತನಕ ನಾವು ಮಹಾಪರಾಧಗಳನ್ನು ಮಾಡಿದ್ದೇವೆ. ನಮ್ಮ ಪಾಪಗಳಿಗಾಗಿ ನಮಗೂ ನಮ್ಮ ರಾಜರುಗಳಿಗೂ ನಮ್ಮ ಯಾಜಕರುಗಳಿಗೂ ಶಿಕ್ಷೆಯಾಯಿತು. ಅನ್ಯದೇಶದ ರಾಜರುಗಳು ನಮ್ಮ ದೇಶವನ್ನು ಆಕ್ರಮಿಸಿ ನಮ್ಮ ಜನರನ್ನು ಸೆರೆಯಾಳುಗಳಾಗಿ ಒಯ್ದರು; ನಮ್ಮ ಐಶ್ವರ್ಯವನ್ನು ಸೂರೆಗೈದು ನಮ್ಮನ್ನು ನಾಚಿಕೆಗೆ ಒಳಪಡಿಸಿದರು. ಈಗಲೂ ಅದೇ ಅನುಭವ ನಮಗಾಗಿದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಮ್ಮ ತಂದೆಗಳ ದಿವಸಗಳು ಮೊದಲ್ಗೊಂಡು ಈ ದಿವಸದವರೆಗೆ ದೊಡ್ಡ ಅಪರಾಧಕ್ಕೊಳಗಾಗಿದ್ದೇವೆ. ಇಂದಿನ ಪ್ರಕಾರವೇ ನಾವು ಅನ್ಯದೇಶಗಳ ಅರಸರ ಕೈಗೆ ಸಿಕ್ಕಿಬಿದ್ದೆವು. ನಮ್ಮ ಅಕ್ರಮಗಳಿಗೋಸ್ಕರ ನಾವೂ, ನಮ್ಮ ಅರಸರೂ ನಮ್ಮ ಯಾಜಕರೂ ಖಡ್ಗವೂ ಸೆರೆಗೂ ಕೊಳ್ಳೆಗೂ ನಾಚಿಕೆಗೂ ಗುರಿಯಾಗಿದ್ದೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಜ್ರ 9:7
38 ತಿಳಿವುಗಳ ಹೋಲಿಕೆ  

ನಮ್ಮ ಪೂರ್ವಿಕರು ನಮ್ಮ ದೇವರಾದ ಯೆಹೋವನಿಗೆ ದ್ರೋಹಮಾಡಿ, ಆತನ ಚಿತ್ತಕ್ಕೆ ವಿರುದ್ಧವಾಗಿ ನಡೆದು ಆತನನ್ನು ತೊರೆದುಬಿಟ್ಟರು. ಅವರು ಆತನ ನಿವಾಸ ಸ್ಥಳವನ್ನು ತೊರೆದು ವಿಮುಖರಾದರು.


ನಮ್ಮ ಪೂರ್ವಿಕರು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು.


ನೀವು ನಡೆಸಿದ ದುರಾಚಾರಗಳನ್ನೂ, ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದುದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ನಾಶಕ್ಕೂ, ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.


ಅದನ್ನು ಯೆರೂಸಲೇಮಿಗೂ, ಯೆಹೂದದ ಪಟ್ಟಣಗಳಿಗೂ, ಅರಸರಿಗೂ ಮತ್ತು ಪ್ರಧಾನರಿಗೂ ಕುಡಿಸಿದೆನು. ಇದರಿಂದ ಅವರು ಹಾಳಾಗಿ ಪರಿಹಾಸ್ಯಕ್ಕೂ ಮತ್ತು ಶಾಪಕ್ಕೂ ಗುರಿಯಾಗುವುದಕ್ಕೆ ಆಸ್ಪದವಾಯಿತು.


ನೀನು ಅನೇಕ ವರ್ಷಗಳ ತನಕ ಅವರ ವಿಷಯದಲ್ಲಿ ತಾಳ್ಮೆಯುಳ್ಳವನಾಗಿ ಪ್ರವಾದಿಗಳ ಮುಖಾಂತರ ಮಾತನಾಡುತ್ತಿದ್ದ ನಿನ್ನ ಆತ್ಮನಿಂದ ಅವರನ್ನು ಎಷ್ಟು ಎಚ್ಚರಿಸುತ್ತಿದ್ದರೂ ಅವರು ಕಿವಿಗೊಡದೆ ಹೋದ ಮೇಲೆ ನೀನು ಅವರನ್ನು ಅನ್ಯದೇಶಗಳವರ ಕೈಗೆ ಒಪ್ಪಿಸಿಬಿಟ್ಟೆ.


ನಿಮ್ಮ ಪೂರ್ವಿಕರು ಸಹೋದರರೂ ನಡೆದಂತೆ ನೀವೂ ನಡೆಯಬೇಡಿರಿ. ಅವರು ತಮ್ಮ ಪೂರ್ವಿಕರ ದೇವರಾದ ಯೆಹೋವನಿಗೆ ವಿರೋಧವಾಗಿ ದ್ರೋಹಿಗಳಾಗಿದ್ದುದರಿಂದ ಆತನು ಅವರನ್ನು ನಾಶನಕ್ಕೆ ಒಪ್ಪಿಸಿದನು. ಅದಕ್ಕೆ ನೀವೇ ಸಾಕ್ಷಿಗಳು.


ನೀವು ಯೆಹೋವನ ಮಾತನ್ನು ಕೇಳದೆಯೂ, ಆತನ ಆಜ್ಞೆಗಳನ್ನು ಕೈಕೊಳ್ಳದೆಯೂ ಹೋದರೆ, ಆತನ ಹಸ್ತವು ನಿಮ್ಮ ಹಿರಿಯರಿಗೆ ವಿರೋಧವಾಗಿದ್ದಂತೆ ನಿಮಗೂ ವಿರೋಧವಾಗಿಯೇ ಇರುವುದು.


“ಈ ದುಷ್ಟ ಸಂತತಿಯವರಾದ ನೀವು ನಿಮ್ಮ ತಂದೆಗಳಿಗೆ ಬದಲಾಗಿ ಬಂದು ಇಸ್ರಾಯೇಲರ ಮೇಲಿದ್ದ ಯೆಹೋವನ ರೋಷಾಗ್ನಿಯನ್ನು ಮತ್ತಷ್ಟು ಹೆಚ್ಚಿಸುತ್ತೀರಿ.


ಸೆರೆಯವರಾಗಿ ಬಿದ್ದುಕೊಂಡಿರುವ ದೇಶದಲ್ಲಿ ಅವರು ಪಶ್ಚಾತ್ತಾಪಪಟ್ಟು, ನಿನ್ನ ಅನುಗ್ರಹದಿಂದ ತಮ್ಮ ಪೂರ್ವಿಕರಿಗೆ ದೊರಕಿದ ದೇಶದ ಕಡೆಗೂ, ನೀನು ಆರಿಸಕೊಂಡ ಪಟ್ಟಣದ ಕಡೆಗೂ, ನಾನು ನಿನ್ನ ಹೆಸರಿಗೋಸ್ಕರ ಕಟ್ಟಿಸಿದ ಈ ಆಲಯದ ಕಡೆಗೂ ತಿರುಗಿಕೊಂಡು,


ನಮ್ಮ ದುಷ್ಕರ್ಮ ಮಹಾಪರಾಧಗಳ ನಿಮಿತ್ತವಾಗಿ ಇಷ್ಟೆಲ್ಲಾ ಕೇಡು ಬಂದರೂ ನಮ್ಮ ದೇವರಾದ ನೀನು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟು ಜನರನ್ನು ಉಳಿಸಿದಿ.


ನಾವೇ ತಂದುಕೊಂಡ ಅವಮಾನದಲ್ಲಿ ಬಿದ್ದಿರೋಣ, ನಮ್ಮ ನಾಚಿಕೆಯು ನಮ್ಮನ್ನು ಮುಚ್ಚಿಬಿಡಲಿ. ನಾವು ಮತ್ತು ನಮ್ಮ ಪೂರ್ವಿಕರೂ ಬಾಲ್ಯದಿಂದ ಇಂದಿನವರೆಗೂ ನಮ್ಮ ದೇವರಾದ ಯೆಹೋವನಿಗೆ ಪಾಪಮಾಡುತ್ತಾ ಬಂದಿದ್ದೇವಷ್ಟೆ. ನಮ್ಮ ದೇವರಾದ ಯೆಹೋವನ ಮಾತನ್ನು ನಾವು ಕೇಳಲೇ ಇಲ್ಲ” ಎಂದು ಮೊರೆಯಿಡುತ್ತಾರೆ.


ಅವರು ಅದನ್ನು ಸೇರಿ ಅನುಭವಿಸಿದರೂ ನಿನ್ನ ಮಾತಿಗೆ ಕಿವಿಗೊಡಲಿಲ್ಲ, ನಿನ್ನ ಧರ್ಮಾನುಸಾರ ನಡೆಯಲಿಲ್ಲ; ನೀನು ಆಜ್ಞಾಪಿಸಿದವುಗಳಲ್ಲೆಲ್ಲಾ ಒಂದನ್ನೂ ಮಾಡಲಿಲ್ಲ. ಆದಕಾರಣ ನೀನು ಈ ಕೇಡನ್ನೆಲ್ಲಾ ಅವರ ಮೇಲೆ ಬರಮಾಡಿದ್ದಿ.


ಅರಸರು, ಪ್ರಧಾನರು, ಯಾಜಕರು, ಪ್ರವಾದಿಗಳು, ಯೆಹೂದದ ಪ್ರಜೆಗಳು, ಯೆರೂಸಲೇಮಿನ ನಿವಾಸಿಗಳು, ಅಂತು ಎಲ್ಲಾ ಇಸ್ರಾಯೇಲರೂ ಮತ್ತು ಯೆಹೂದ್ಯರೂ ನನ್ನನ್ನು ರೇಗಿಸತಕ್ಕ ಅಧರ್ಮವನ್ನು ತುಂಬಾ ಮಾಡಿದ್ದರಿಂದ ನಾನು ಈ ಪಟ್ಟಣವನ್ನು ನನ್ನ ಸನ್ನಿಧಿಯಿಂದ ತೊಲಗಿಸಬೇಕಾಗಿ ಬಂತು.


ಯೆಹೋವನು ಹೇಳಿದ್ದೇನೆಂದರೆ, “ಈ ದೇಶದ ಮೇಲೆಯೂ, ಜನರ ಮೇಲೆಯೂ ಯೆಹೂದದ ಅರಸನ ಮುಂದೆ ಪಾರಾಯಣವಾದ ಆ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪಗಳನ್ನು ಬರಮಾಡುವೆನು;


ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ.


ನಿಮ್ಮ ಪೂರ್ವಿಕರು, ಯೆಹೂದದ ಅರಸರು, ಅವರ ಹೆಂಡತಿಯರು, ನೀವು ಮತ್ತು ನಿಮ್ಮ ಹೆಂಡತಿಯರು ಇವರೆಲ್ಲರೂ ಯೆಹೂದ ದೇಶದಲ್ಲಿಯೂ, ಯೆರೂಸಲೇಮಿನ ಬೀದಿಗಳಲ್ಲಿಯೂ ನಡೆಸಿದ ದುರಾಚಾರಗಳನ್ನು ಮರೆತುಬಿಟ್ಟಿರೋ?


“ನಾನು ಪಟ್ಟಣದೊಳಗಿಂದ ನಿಮ್ಮನ್ನು ಕಿತ್ತು ಅನ್ಯರ ಕೈಗೆ ಕೊಟ್ಟು ದಂಡಿಸುವೆನು.


“ಇದಲ್ಲದೆ, ಇಸ್ರಾಯೇಲರು ತಮ್ಮ ಅಧರ್ಮದ ನಿಮಿತ್ತವೇ ಸೆರೆಯಾಗಿ ಹೋದರೆಂತಲೂ, ಅವರು ನನಗೆ ದ್ರೋಹಮಾಡಿದ್ದರಿಂದ ನಾನು ಅವರಿಗೆ ವಿಮುಖನಾಗಿ ಅವರೆಲ್ಲರೂ ಖಡ್ಗದಿಂದ ಹತರಾಗುವಂತೆ ಅವರನ್ನು ಶತ್ರುಗಳ ವಶ ಮಾಡಿದೆನೆಂತಲೂ ಜನಾಂಗಗಳಿಗೆ ಗೊತ್ತಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು