ಎಜ್ರ 9:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವನವನ್ನು ಅನುಗ್ರಹಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆದರೂ ನಮ್ಮ ದೇವರಾದ ಸರ್ವೇಶ್ವರಾ, ಒಂದು ಕ್ಷಣ ನಮಗೆ ನೀವು ಪ್ರಸನ್ನರಾಗಿ ನಮ್ಮಲ್ಲಿ ಸ್ವಲ್ಪ ಜನರನ್ನಾದರೂ ರಕ್ಷಣೆಗಾಗಿ ಉಳಿಸಿ, ತಮ್ಮ ಪರಿಶುದ್ಧಸ್ಥಳದಲ್ಲಿ ಮೊಳೆಯುವಂತೆ, ನಮ್ಮನ್ನು ನೆಲೆಗೊಳಿಸಿ, ನಮ್ಮ ಕಣ್ಣುಗಳನ್ನು ಬೆಳಗಿಸಿ, ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ನವಜೀವವನ್ನು ಅನುಗ್ರಹಿಸಿದಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಆದರೂ ನಮ್ಮ ದೇವರಾದ ಯೆಹೋವನು ಒಂದು ಕ್ಷಣ ನಮಗೆ ಪ್ರಸನ್ನನಾಗಿ ನಮ್ಮಲ್ಲಿ ಸ್ವಲ್ಪ ಜನರನ್ನು ರಕ್ಷಣೆಗಾಗಿ ಉಳಿಸಿ ತನ್ನ ಪರಿಶುದ್ಧಸ್ಥಳದಲ್ಲಿ ಮೊಳೆಯಂತೆ ನಮ್ಮನ್ನು ನೆಲೆಗೊಳಿಸಿ ನಮ್ಮ ಕಣ್ಣುಗಳನ್ನು ಕಳೆಗೊಳಿಸಿ ನಮ್ಮ ದಾಸತ್ವದಲ್ಲಿ ನಮಗೆ ಸ್ವಲ್ಪಮಟ್ಟಿಗೆ ಉಜ್ಜೀವವನ್ನು ಅನುಗ್ರಹಿಸಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 “ಈಗಲಾದರೋ ನೀನು ನಮ್ಮ ಮೇಲೆ ದಯೆ ತೋರಿಸಿರುವೆ. ಸೆರೆಯಲ್ಲಿದ್ದ ನಿನ್ನ ಜನರಲ್ಲಿ ಕೆಲವರು ಅಲ್ಲಿಂದ ತಪ್ಪಿಸಿಕೊಂಡು ನಿನ್ನ ಪರಿಶುದ್ಧ ದೇಶದಲ್ಲಿ ವಾಸಿಸುವಂತೆ ಮಾಡಿರುವೆ; ಗುಲಾಮತನದಿಂದ ನಮ್ಮನ್ನು ಬಿಡುಗಡೆ ಮಾಡಿ ಹೊಸಜೀವ ಕೊಟ್ಟಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 “ಈಗ ನಮ್ಮ ಯೆಹೋವ ದೇವರೇ, ಸ್ವಲ್ಪ ಹೊತ್ತು ನಮಗೆ ದಯೆತೋರಿ ನಮ್ಮ ದಾಸತ್ವದಿಂದ ನಮಗೆ ಬಿಡುಗಡೆ ಕೊಟ್ಟಿದ್ದೀರಿ. ನಮ್ಮ ಕಣ್ಣುಗಳನ್ನು ಬೆಳಗಿಸಿ, ತಮ್ಮ ಪರಿಶುದ್ಧ ಸ್ಥಾನದಲ್ಲಿ ನೆಲೆಗೊಳಿಸುವಂತೆ ಮಾಡಿದ್ದೀರಿ ಅಧ್ಯಾಯವನ್ನು ನೋಡಿ |
ಜೀವಸ್ವರೂಪನಾದ ದೇವರನ್ನು ದೂಷಿಸುವುದಕ್ಕಾಗಿ ತನ್ನ ಯಜಮಾನನಾದ ಅಶ್ಶೂರದ ಅರಸನಿಂದ ಕಳುಹಿಸಲ್ಪಟ್ಟ ರಬ್ಷಾಕೆಯ ನಿಂದನೆಯ ಮಾತುಗಳನ್ನು, ನಿನ್ನ ದೇವರಾದ ಯೆಹೋವನು ಕೇಳಿರುವನು. ನಿನ್ನ ದೇವರಾದ ಯೆಹೋವನು ತಾನು ಹೇಳಿದ ಮಾತುಗಳ ನಿಮಿತ್ತ ಮುಯ್ಯಿತೀರಿಸುವನು. ಆದುದರಿಂದ ಉಳಿದಿರುವ ಸ್ವಲ್ಪ ಜನರಿಗಾಗಿಯಾದರೂ ಆತನನ್ನು ಪ್ರಾರ್ಥಿಸು ಎಂಬುದಾಗಿ ಹಿಜ್ಕೀಯನು ಹೇಳುತ್ತಾನೆ” ಎಂದು ಹೇಳಿರಿ ಅಂದನು.