ಎಫೆಸದವರಿಗೆ 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದೇವರು ತನ್ನ ಸ್ವಕೀಯ ಜನರಿಗೆ ವಿಮೋಚನೆಯುಂಟಾಗುತ್ತದೆ ಎಂಬುದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಈ ಕಾರಣ ದೇವರಿಗೆ ಮಹಿಮೆಯನ್ನು ಸಲ್ಲಿಸೋಣ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಹೀಗೆ ದೇವರಿಗೆ ಸೇರಿದವರು ವಿಮೋಚನೆ ಹೊಂದಿ ಸ್ವರ್ಗೀಯ ಸ್ವಾಸ್ತ್ಯಕ್ಕೆ ಬಾಧ್ಯರಾಗಲು ಆ ಪವಿತ್ರಾತ್ಮರೇ ಆಧಾರ. ಈ ಕಾರಣ ದೇವರಿಗೆ ಮಹಿಮೆ ಸಲ್ಲಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದೇವರು ಸಂಪಾದಿಸಿಕೊಂಡ ಜನರಿಗೆ ವಿಮೋಚನೆಯಾಗುವದೆಂಬದಕ್ಕೆ ಪವಿತ್ರಾತ್ಮನು ನಮ್ಮ ಬಾಧ್ಯತೆಗೆ ಸಂಚಕಾರವಾಗಿದ್ದಾನೆ. ಆ ವಿಮೋಚನೆಯು ದೇವರ ಮಹಿಮೆಗೆ ಎಷ್ಟೋ ಪ್ರಖ್ಯಾತಿಯನ್ನು ಉಂಟುಮಾಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದೇವರು ತನ್ನ ಜನರಿಗೆ ವಾಗ್ದಾನ ಮಾಡಿದವುಗಳನ್ನು ನಾವು ಹೊಂದಿಕೊಳ್ಳುತ್ತೇವೆ ಎಂಬುದಕ್ಕೆ ಆ ಪವಿತ್ರಾತ್ಮನೇ ಪ್ರಮಾಣವಾಗಿದ್ದಾನೆ. ದೇವರು ಸಂಪಾದಿಸಿಕೊಂಡ ಜನರಿಗೆ ಇದು ಸಂಪೂರ್ಣ ವಿಮೋಚನೆಯನ್ನು ಉಂಟುಮಾಡುತ್ತದೆ. ದೇವರ ಮಹಿಮೆಗೆ ಸ್ತೋತ್ರವಾಗ ಬೇಕೆಂಬುದೇ ಇದೆಲ್ಲದರ ಉದ್ದೇಶವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ದೇವರಿಗೆ ಸೇರಿದವರಾದ ನಾವು ವಿಮೋಚನೆಯಾಗುವ ತನಕ ನಮ್ಮ ಸ್ವರ್ಗೀಯ ವಾರಸುತನವನ್ನು ಹೊಂದುವೆವು ಎಂಬುವುದಕ್ಕೆ ಈ ಪವಿತ್ರಾತ್ಮ ದೇವರೇ ನಮಗೆ ಹೊಣೆಯಾಗಿದ್ದಾರೆ. ದೇವರ ಮಹಿಮೆಯ ನಿಮಿತ್ಯವಾಗಿ ನಾವು ಅವರನ್ನು ಸ್ತುತಿಸೋಣ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ಪವಿತ್ರ್ ಆತ್ಮೊ ದೆವಾನ್ ಅಪ್ನಾಚ್ಯಾ ಲೊಕಾಕ್ನಿ ಗೊಸ್ಟ್ ದಿಲ್ಲೆ ಸಗ್ಳೆ ಅಮ್ಕಾ ಗಾವ್ತಾ ಮನ್ತಲ್ಯಾಕ್ ಖಾತ್ರಿ ಹೊವ್ನ್ ಹಾಯ್, ಅನಿ ಹಿ ಖಾತ್ರಿ ಅಮ್ಕಾ ದೆವ್ ಅಪ್ನಾಚೆ - ಅಪ್ನಾಚೆ ಮನುನ್ ಹೊತ್ತ್ಯಾಕ್ನಿ ಪುರಾ ರಿತಿನ್ ಸ್ವತಂತ್ರ್ ದಿತಾ ಮನುನ್ ದಾಕ್ವುನ್ ದಿತಾ ತೆಚ್ಯಾ ಮಹಿಮೆಚಿ ಸ್ತುತಿ ಹೊಂವ್ದಿ! ಅಧ್ಯಾಯವನ್ನು ನೋಡಿ |