Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 1:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈ ಕೃಪೆಯನ್ನು ಆತನು ಎಲ್ಲಾ ಜ್ಞಾನ ವಿವೇಕಗಳೊಂದಿಗೆ ನಮಗೆ ಹೇರಳವಾಗಿ ಸುರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆತನು ರಹಸ್ಯವಾದ ತನ್ನ ಸಂಕಲ್ಪವನ್ನು ನಮಗೆ ತಿಳಿಯಪಡಿಸುವದರ ಮೂಲಕ ವಿಶೇಷವಾದ ಜ್ಞಾನವನ್ನೂ ಬುದ್ಧಿಯನ್ನೂ ಕೊಟ್ಟು ಆ ಕೃಪೆಯನ್ನು ಇನ್ನೂ ಹೆಚ್ಚಾಗಿ ನಮಗೆ ತೋರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ದೇವರು ನಮಗೆ ಆ ಕೃಪೆಯನ್ನು ಸಂಪೂರ್ಣವಾಗಿಯೂ ಉಚಿತವಾಗಿಯೂ ತೋರಿದನು. ದೇವರು ತನ್ನ ರಹಸ್ಯವಾದ ಯೋಜನೆಯನ್ನು ನಮಗೆ ತಿಳಿಸುವುದರ ಮೂಲಕ ನಮಗೆ ಸಂಪೂರ್ಣವಾದ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ದೇವರು ಆ ಕೃಪೆಯನ್ನು ನಮ್ಮಲ್ಲಿ ಸಮೃದ್ಧಿಯಾಗಿ ಸುರಿಸಿದ್ದಾರೆ. ಎಲ್ಲಾ ಜ್ಞಾನ ವಿವೇಕಗಳೊಂದಿಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ಹಿ ತೆನಿ ಅಮ್ಕಾ ಭರ್ಪುರ್ ಮಾಪಾನ್ ದಿಲ್ಯಾನಾಯ್! ಅಪ್ನಾಚ್ಯಾ ಸಗ್ಳ್ಯಾ ಶಾಂತ್ಪಾನಾನ್ ಅನಿ ಸಮ್ಜನಿನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 1:8
17 ತಿಳಿವುಗಳ ಹೋಲಿಕೆ  

ಅವರು “ವಧಿಸಲ್ಪಟ್ಟ ಕುರಿಮರಿಯು ಬಲ, ಐಶ್ವರ್ಯ, ಜ್ಞಾನ, ಸಾಮರ್ಥ್ಯ, ಘನತೆ, ಮಹಿಮೆ ಸ್ತೋತ್ರಗಳನ್ನು ಹೊಂದುವುದಕ್ಕೆ ಯೋಗ್ಯನು” ಎಂದು ಮಹಾಧ್ವನಿಯಿಂದ ಹಾಡಿದರು.


ಈ ಕ್ರಿಸ್ತನಲ್ಲಿಯೇ ಜ್ಞಾನ ಮತ್ತು ವಿವೇಕದ ಸರ್ವಸಂಪತ್ತು ಅಡಗಿದೆ.


ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.


ಆದರೆ ಆ ಅಪರಾಧದ ಸಂಗತಿಗೂ ದೇವರ ಕೃಪಾದಾನದ ಸಂಗತಿಗೂ ಬಹಳ ವ್ಯತ್ಯಾಸವುಂಟು. ಹೇಗೆಂದರೆ ಆ ಒಬ್ಬನ ಅಪರಾಧದಿಂದ ಬಹುಮಂದಿ ಸತ್ತರು ಹೀಗಿರಲಾಗಿ ದೇವರ ಕೃಪೆಯು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಕೃಪೆಯಿಂದ ಸಿಕ್ಕುವ ವರವೂ ಅನೇಕರಿಗೆ ಹೇರಳವಾಗಿ ಸಿದ್ಧವಾಗಿರುವುದು ನಿಶ್ಚಯವಲ್ಲವೇ.


ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.


ಇದಲ್ಲದೆ ತನ್ನ ಚಿತ್ತದ ಉದ್ದೇಶಕ್ಕನುಸಾರವಾಗಿ ಎಲ್ಲಾ ಕಾರ್ಯಗಳನ್ನು ನಡೆಸುವಾತನು ತನ್ನ ಸಂಕಲ್ಪದ ಪ್ರಕಾರ ಮೊದಲೇ ನೇಮಿಸಲ್ಪಟ್ಟವರಾದ ನಮ್ಮನ್ನು ಕ್ರಿಸ್ತನಲ್ಲಿ ತನ್ನ ಸ್ವಕೀಯ ಜನರನ್ನಾಗಿ ಅರಿಸಿಕೊಂಡನು.


ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.


ಆಹಾ ದೇವರ ಐಶ್ವರ್ಯವೂ, ಜ್ಞಾನವೂ, ವಿವೇಕವೂ ಅಗಾಧ. ಆತನ ನ್ಯಾಯತೀರ್ಪುಗಳು ಎಷ್ಟೋ ಆಗಮ್ಯವಾದದ್ದು. ಆತನ ಮಾರ್ಗಗಳು ಆಗೋಚರವಾದವುಗಳೂ ಆಗಿವೆ.


ಇಗೋ, ನನ್ನ ಸೇವಕನು ಕೃತಾರ್ಥನಾಗುವನು. ಅವನು ಉನ್ನತನಾಗಿ ಮೇಲಕ್ಕೇರಿ ಮಹೋನ್ನತ ಪದವಿಗೆ ಬರುವನು.


ಜ್ಞಾನವೆಂಬ ನನಗೆ ಜಾಣ್ಮೆಯೇ ನಿವಾಸ, ಯುಕ್ತಿಗಳ ತಿಳಿವಳಿಕೆಯನ್ನು ಹೊಂದಿದ್ದೇನೆ.


ಯೆಹೋವನೇ, ನಿನ್ನ ಕೈಕೆಲಸಗಳು ಬಗೆ ಬಗೆಯಾಗಿವೆ. ಅವುಗಳನ್ನೆಲ್ಲಾ ಜ್ಞಾನದಿಂದಲೇ ಮಾಡಿರುವೆ; ಭೂಲೋಕವು ನಿನ್ನ ಆಸ್ತಿಯಿಂದ ತುಂಬಿರುತ್ತದೆ.


ಮನುಷ್ಯಕುಮಾರನು ಬಂದನು, ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನು ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ. ಆದರೆ ಜ್ಞಾನವು ಅದರ ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು.


ಯೇಸುಕ್ರಿಸ್ತನು ನಮಗೋಸ್ಕರ ಸುರಿಸಿದ ರಕ್ತದ ಮೂಲಕ ನಮಗೆ ಆತನ ಕೃಪೆಯ ಐಶ್ವರ್ಯಕ್ಕನುಸಾರವಾಗಿ ಪಾಪ ಕ್ಷಮಾಪಣೆಯೆಂಬ ವಿಮೋಚನೆಯು ಉಂಟಾಯಿತು.


ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು