ಎಫೆಸದವರಿಗೆ 1:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ದೇವರು ಆತನಲ್ಲಿ ಮೊದಲೇ ನಿರ್ಣಯಿಸಿಕೊಂಡಿದ್ದ ಕೃಪೆಯುಳ್ಳ ಸಂಕಲ್ಪದ ಪ್ರಕಾರ ತನ್ನ ಚಿತ್ತದ ರಹಸ್ಯವನ್ನು ನಮಗೆ ತಿಳಿಯಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ದೇವರು ಸಮಗ್ರ ಜ್ಞಾನ-ವಿವೇಕಗಳಿಂದ ತಮ್ಮ ರಹಸ್ಯ ಯೋಜನೆಯನ್ನು ನಮಗೆ ತಿಳಿಯಪಡಿಸಿದ್ದಾರೆ. ಮೊದಲೇ ನಿರ್ಧರಿಸಿದ್ದಂತೆ ಅದನ್ನು ಯೇಸುಕ್ರಿಸ್ತರ ಮೂಲಕ ಪರಿಪೂರ್ಣಗೊಳಿಸಬೇಕೆಂಬುದು ಅವರ ಸಂಕಲ್ಪವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9-10 ತಾನು ಕಾಲವು ಪರಿಪೂರ್ಣವಾದಾಗ ನಿರ್ವಹಿಸಬೇಕಾದ ಒಂದು ಕೃಪೆಯುಳ್ಳ ಸಂಕಲ್ಪವನ್ನು ಆತನು ಕ್ರಿಸ್ತನಲ್ಲಿ ಮೊದಲೇ ನಿಷ್ಕರ್ಷೆಮಾಡಿಕೊಂಡಿದ್ದನು. ಅದೇನಂದರೆ ಭೂಪರಲೋಕಗಳಲ್ಲಿರುವ ಸಮಸ್ತವನ್ನೂ ಕ್ರಿಸ್ತನಲ್ಲಿ ಒಂದಾಗಿ ಕೂಡಿಸಬೇಕೆಂಬದೇ. ಕ್ರಿಸ್ತನಲ್ಲಿಯೇ ಸಮಸ್ತವು ಒಂದಾಗುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಇದು ದೇವರ ಚಿತ್ತವಾಗಿತ್ತು. ಕ್ರಿಸ್ತನ ಮೂಲಕ ಇದನ್ನು ನೆರವೇರಿಸಲು ಆತನು ಯೋಜನೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದೇವರು ಕ್ರಿಸ್ತನಲ್ಲಿ ಉದ್ದೇಶಮಾಡಿಕೊಂಡ ತಮ್ಮ ಚಿತ್ತದ ರಹಸ್ಯವನ್ನು ಸಂತೋಷದಿಂದ ನಮಗೆ ಪ್ರಕಟಿಸಿದರು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ದೆವಾನ್ ಅಪ್ನಾಚ್ಯಾ ಉದ್ದೆಶಾ ಪರ್ಕಾರ್ ಕರ್ಲ್ಯಾನ್, ಅನಿ ತೆನಿ ಅದ್ದಿಚ್ ನಿರ್ದಾರ್ ಕರಲ್ಲಿ ಅಪ್ಲಿ ಗುಟ್ಟಾಚಿ ಯೆವ್ಜನ್ ಕ್ರಿಸ್ತಾಚ್ಯಾ ವೈನಾ ಅಮ್ಕಾ ಕಳ್ವುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |
ದೇವಭಕ್ತಿಗೆ ಆಧಾರವಾಗಿರುವ ಸತ್ಯಾರ್ಥದ ರಹಸ್ಯವು ಗಂಭೀರವಾದದ್ದೆಂಬುದನ್ನು ನಾವೆಲ್ಲರೂ ಒಪ್ಪಿಕೊಳ್ಳುತ್ತೇವೆ, ಅದೇನಂದರೆ, ಕ್ರಿಸ್ತನು ಶರೀರಧಾರಿಯಾಗಿ ಪ್ರತ್ಯಕ್ಷನಾದನು, ಆತ್ಮಸಂಬಂಧವಾಗಿ ಕ್ರಿಸ್ತನೇ ನೀತಿವಂತನೆಂದು ಪರಿಗಣಿಸಲ್ಪಟ್ಟನು, ದೇವದೂತರಿಗೆ ಕಾಣಿಸಿಕೊಂಡನು, ಅನ್ಯಜನರ ಮಧ್ಯದಲ್ಲಿ ಸಾರಲ್ಪಟ್ಟನು, ಲೋಕದಲ್ಲಿ ನಂಬಲ್ಪಟ್ಟನು, ಮಹಿಮೆಯೊಂದಿಗೆ ಪರಲೋಕಕ್ಕೆ ಎತ್ತಲ್ಪಟ್ಟನು.