Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆದಕಾರಣ ಹಿಂದೊಮ್ಮೆ ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ ಎಂಬುದು ನಿಮಗೆ ನೆನಪಿರಲಿ. ಶರೀರದಲ್ಲಿ ಮನುಷ್ಯನಿಂದ ಸುನ್ನತಿಯನ್ನು ಮಾಡಿಸಿಕೊಂಡು ಸುನ್ನತಿಯವರೆನ್ನಿಸಿಕೊಳ್ಳುವವರಿಂದ ‘ಸುನ್ನತಿಯಿಲ್ಲದವರು’ ಎಂದು ಕರೆಯಲ್ಪಟ್ಟಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಹಿಂದೊಮ್ಮೆ ನೀವು ಅನ್ಯಜನರಾಗಿದ್ದಿರಿ ಎಂಬುದು ನಿಮ್ಮ ನೆನಪಿನಲ್ಲಿರಲಿ; ಆಗ ಶಾರೀರಿಕ ಸುನ್ನತಿ ಪಡೆದವರು ನಿಮ್ಮನ್ನು ‘ಸುನ್ನತಿಯಿಲ್ಲದವರು’ ಎಂದು ತುಚ್ಛೀಕರಿಸಿ ಕರೆಯುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀವು ಜನ್ಮದಿಂದ ಅನ್ಯಜನರಾಗಿದ್ದೀರಿ; ಶರೀರದಲ್ಲಿ ಕೈಯಿಂದ ಸುನ್ನತಿಮಾಡಿಸಿಕೊಂಡು ಸುನ್ನತಿಯವರೆನಿಸಿಕೊಳ್ಳುವವರು ನಿಮ್ಮನ್ನು ಸುನ್ನತಿಯಿಲ್ಲದವರೆಂದು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀವು ಹುಟ್ಟಿದಂದಿನಿಂದ ಅನ್ಯಜನರಾಗಿದ್ದೀರಿ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಯೆಹೂದ್ಯರು ಕರೆಯುತ್ತಾರೆ. ನಿಮ್ಮನ್ನು “ಸುನ್ನತಿಯಿಲ್ಲದವರು” ಎಂದು ಕರೆಯುವ ಯೆಹೂದ್ಯರು ತಮ್ಮ ಬಗ್ಗೆ “ಸುನ್ನತಿಯವರು” ಎಂದು ಹೇಳಿಕೊಳ್ಳುತ್ತಾರೆ. (ಅವರ ಸುನ್ನತಿಯು ಶರೀರದಲ್ಲಿ ಕೈಯಿಂದ ಮಾಡಲ್ಪಡುತ್ತದೆ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆದಕಾರಣ ಸುನ್ನತಿಮಾಡಿಸಿಕೊಂಡಿದ್ದೇವೆ ಎಂದು ತಮ್ಮ ಬಗ್ಗೆ ಹೇಳಿಕೊಂಡವರು, ಹುಟ್ಟಿದಂದಿನಿಂದ ಯೆಹೂದ್ಯರಲ್ಲದವರಾದ ನಿಮಗೆ ಸುನ್ನತಿಮಾಡಿಸಿಕೊಳ್ಳದವರು ಎಂದು ಹೇಳಿದ್ದನು ನೆನಪುಮಾಡಿಕೊಳ್ಳಿ. ಈ ಸುನ್ನತಿಯು ಮನುಷ್ಯರಿಂದಾದದ್ದಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ಜುದೆವಾನಿಕ್ನಾ ಸುನ್ನತ್ ಕರುನ್ ಘೆವ್ ನಸಲ್ಲೆ ಮನುನ್ ಬಲ್ವುನ್ ಘೆತಲ್ಯಾ ಜಲ್ಮಿ ಜುದೆವ್ ನ್ಹಯ್ ಹೊವ್ನ್ ಅಸಲ್ಲ್ಯಾನು, ಅಪ್ನಾಕುಚ್ ಸುನ್ನತ್ ಕರ್ಸುನ್ ಘೆಟಲ್ಲೆ ತಸೆ ಮಟ್ಲ್ಯಾರ್ ಘೊವ್ಮಾನ್ಸಾನ್ ಅಪ್ನಾಚ್ಯಾ ಅಂಗಾಕ್ ಕರುನ್ಗೆಟಲ್ಲ್ಯಾ ವಿಶಯಾತ್ ಸಮುಂದ್ ಪಡಲೆ ಹಾಯ್ ಫಾಟಿ ತುಮಿ ಕಾಯ್ ಹೊವ್ನ್ ಹೊತ್ತ್ಯಾಸಿ ಮನುನ್ ಯಾದ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:11
29 ತಿಳಿವುಗಳ ಹೋಲಿಕೆ  

ದೇವರು ಆತನಲ್ಲಿ ನಿಮಗೆ ಮನುಷ್ಯರ ಕೈಯಿಂದ ಮಾಡಲಾಗದಂತಹ ಸುನ್ನತಿಯನ್ನು ಮಾಡಿದ್ದಾನೆ. ಕ್ರಿಸ್ತನ ಸುನ್ನತಿಯು ಶಾರೀರಿಕವಾದ ಪಾಪಸ್ವಭಾವವನ್ನು ತೆಗೆದುಹಾಕುವುದೇ.


ಅಪರಾಧಗಳನ್ನು ಮಾಡುವುದರಿಂದಲೂ ಹಾಗೂ ಸುನ್ನತಿಯಿಲ್ಲದ ಶರೀರಭಾವದಿಂದಲೂ ಸತ್ತವರಾಗಿದ್ದ ನಿಮ್ಮನ್ನು ದೇವರು ಕ್ರಿಸ್ತನೊಂದಿಗೆ ಬದುಕಿಸಿದ್ದಾನೆ ಮತ್ತು ನಮ್ಮ ಅಪರಾಧಗಳನ್ನೆಲ್ಲಾ ಕ್ಷಮಿಸಿದ್ದಾನೆ.


ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.


ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ.


ನಿಜವಾದ ಸುನ್ನತಿಯವರು ಯಾರೆಂದರೆ, ದೇವರಾತ್ಮನಿಂದ ಪ್ರೇರಿತರಾಗಿ ಆರಾಧಿಸುವವರೂ, ಕ್ರಿಸ್ತ ಯೇಸುವಿನಲ್ಲಿ ಹರ್ಷಗೊಳ್ಳುವವರೂ, ಶರೀರಸಂಬಂಧವಾದವುಗಳಲ್ಲಿ ಭರವಸವಿಲ್ಲದವರೂ ಆಗಿರುವ ನಾವುಗಳೇ.


ಏಕೆಂದರೆ ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿದ್ದು ಬೆಳಕಾಗಿದ್ದೀರಿ. ಬೆಳಕಿನವರಂತೆ ನಡೆದುಕೊಳ್ಳಿರಿ.


ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.


ನೀವು ಅನ್ಯಜನರಾಗಿದ್ದಾಗ ಮೂಕ ವಿಗ್ರಹಗಳು ನಿಮ್ಮನ್ನು ನಡೆಸಿದ ಹಾಗೆ ನೀವು ಅವುಗಳ ಬಳಿಗೆ ಹೋಗುತ್ತಿದ್ದಿರೆಂದು ಬಲ್ಲಿರಿ.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದೀರಿ. ಆದರೆ ನೀವು ಕರ್ತನಾದ ಯೇಸು ಕ್ರಿಸ್ತನ ಹೆಸರಿನಿಂದಲೂ ಮತ್ತು ನಮ್ಮ ದೇವರ ಆತ್ಮದಿಂದಲೂ ತೊಳೆಯಲ್ಪಟ್ಟು, ಶುದ್ಧೀಕರಿಸಲ್ಪಟ್ಟಿದ್ದೀರಿ, ದೇವರಿಂದ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದೀರಿ.


ದಾವೀದನು, “ಜೀವಸ್ವರೂಪನಾದ ದೇವರ ಸೈನ್ಯವನ್ನು ಹೀಯಾಳಿಸುವುದಕ್ಕೆ ಸುನ್ನತಿಯಿಲ್ಲದ ಈ ಫಿಲಿಷ್ಟಿಯನು ಎಷ್ಟರವನು? ಇವನನ್ನು ಕೊಂದು ಇಸ್ರಾಯೇಲ್ಯರಿಗೆ ಬಂದಿರುವ ನಿಂದೆಯನ್ನು ತೆಗೆದುಹಾಕುವವನಿಗೆ ಏನು ಸಿಕ್ಕುವುದು ಹೇಳಿರಿ” ಎಂದು ತನ್ನ ಬಳಿಯಲ್ಲಿ ನಿಂತಿದ್ದ ಮನುಷ್ಯರನ್ನು ಕೇಳಿದನು,


ಐಗುಪ್ತದೇಶದಲ್ಲಿ ದಾಸರಾಗಿದ್ದೆವೆಂಬುದನ್ನು ನೀವು ನೆನಪಿಗೆ ತಂದುಕೊಂಡು ಈ ವಿಧಿಗಳನ್ನು ಅನುಸರಿಸಿ ನಡೆಯಬೇಕು.


ಐಗುಪ್ತದೇಶದಲ್ಲಿ ನೀವೇ ದಾಸರಾಗಿರಲು ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಬಿಡುಗಡೆಮಾಡಿದನು ಎಂಬುದನ್ನು ಜ್ಞಾಪಕಮಾಡಿಕೊಳ್ಳಿರಿ. ಇದಕ್ಕೋಸ್ಕರವಾಗಿಯೇ ನಾನು ಈ ಆಜ್ಞೆಯನ್ನು ನಿಮಗೆ ಈಗ ಕೊಟ್ಟಿದ್ದೇನೆ.


ನೀವು ಅರಣ್ಯದಲ್ಲಿ ನಿಮ್ಮ ದೇವರಾದ ಯೆಹೋವನಿಗೆ ಕೋಪಹುಟ್ಟಿಸಿದ್ದನ್ನು ನೆನಪುಮಾಡಿಕೊಳ್ಳಿರಿ; ಅದನ್ನು ಮರೆಯಬೇಡಿರಿ. ನೀವು ಐಗುಪ್ತದೇಶವನ್ನು ಬಿಟ್ಟಂದಿನಿಂದ ಈ ಸ್ಥಳಕ್ಕೆ ಬಂದ ದಿನದವರೆಗೂ ಯೆಹೋವನ ಆಜ್ಞೆಗಳನ್ನು ಧಿಕ್ಕರಿಸುವವರಾಗಿದ್ದೀರಿ.


ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಈ ನಲ್ವತ್ತು ವರ್ಷ ಅರಣ್ಯದಲ್ಲಿ ನಡಿಸಿದ್ದನ್ನೂ, ನೀವು ಆತನ ಆಜ್ಞೆಗಳನ್ನು ಕೈಕೊಳ್ಳುತ್ತಿರೋ ಇಲ್ಲವೋ ಎಂದು ತಿಳಿದುಕೊಳ್ಳುವುದಕ್ಕೆ ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ನಿಮ್ಮ ಮನೋಭಾವವನ್ನು ಪರೀಕ್ಷಿಸಿದ್ದನ್ನೂ ನೆನಪಿಗೆ ತಂದುಕೊಳ್ಳಿರಿ.


ನಾವಂತೂ ಜನ್ಮತ ಯೆಹೂದ್ಯರು “ಪಾಪಿಗಳೆನಿಸಿಕೊಂಡ ಅನ್ಯಜನರಲ್ಲ.”


ಆಗ ನೀವು ನಿಮ್ಮ ದುರ್ಮಾರ್ಗ, ದುರಾಚಾರಗಳನ್ನು ಜ್ಞಾಪಕಕ್ಕೆ ತಂದುಕೊಂಡು, ನಿಮ್ಮ ಅಪರಾಧಗಳ ಮತ್ತು ಅಸಹ್ಯಕಾರ್ಯಗಳ ನಿಮಿತ್ತ ನಿಮಗೆ ನೀವೇ ಹೇಸಿಕೊಳ್ಳುವಿರಿ.”


ಐಗುಪ್ತ ದೇಶದಲ್ಲಿ ನೀವು ದಾಸತ್ವದಲ್ಲಿದ್ದುದ್ದನ್ನೂ, ನಿಮ್ಮ ದೇವರಾದ ಯೆಹೋವನು ಭುಜಪರಾಕ್ರಮದಿಂದಲೂ ಮತ್ತು ಶಿಕ್ಷಾಹಸ್ತದಿಂದಲೂ ನಿಮ್ಮನ್ನು ಬಿಡುಗಡೆಮಾಡಿದ್ದನ್ನೂ ಜ್ಞಾಪಕಮಾಡಿಕೊಳ್ಳಿರಿ. ನೀವು ಸಬ್ಬತ್‍ ದಿನವನ್ನು ಆಚರಿಸಬೇಕೆಂದು ನಿಮ್ಮ ದೇವರಾದ ಯೆಹೋವನು ಇದಕ್ಕಾಗಿಯೇ ಆಜ್ಞಾಪಿಸಿದ್ದಾನೆ.


ನೀವು ನಿಮ್ಮನ್ನು ಹೊಲಸು ಮಾಡಿಕೊಂಡಿರುವ ನಿಮ್ಮ ನಡತೆಯನ್ನೂ, ನಿಮ್ಮ ಎಲ್ಲಾ ಕಾರ್ಯಗಳನ್ನೂ ಅಲ್ಲಿ ಜ್ಞಾಪಕಕ್ಕೆ ತಂದುಕೊಂಡು, ನೀವು ನಡೆಸಿರುವ ಸಕಲ ದುಷ್ಕೃತ್ಯಗಳ ನಿಮಿತ್ತ ನಿಮ್ಮನ್ನು ನೋಡಿ ನೀವೇ ಅಸಹ್ಯಪಡುವಿರಿ.


ನಿನ್ನ ಸೇವಕನಿಂದ ಕೊಲ್ಲಲ್ಪಟ್ಟ ಸಿಂಹಕ್ಕೂ, ಕರಡಿಗೂ ಆದ ಗತಿಯೇ ಜೀವಸ್ವರೂಪನಾದ ದೇವರ ಸೈನ್ಯವನ್ನು ನಿಂದಿಸುವಂಥ ಈ ಸುನ್ನತಿಯಿಲ್ಲದ ಫಿಲಿಷ್ಟಿಯನಿಗೂ ಆಗಬೇಕು.


ಹೀಗಿರಲಾಗಿ ಸುನ್ನತಿಯಿಲ್ಲದವನು ಧರ್ಮಶಾಸ್ತ್ರದ ನೇಮಗಳ ಪ್ರಕಾರ ನಡೆದರೆ ಸುನ್ನತಿಯಿಲ್ಲದವನಾಗಿದ್ದರೂ ಸುನ್ನತಿಯಿದ್ದವನಂತೆ ಎಣಿಸಲ್ಪಡುವುದಿಲ್ಲವೇ?


ನೀವು ಸುನ್ನತಿ ಮಾಡಿಸಿಕೊಂಡಿದ್ದಿರಿ; ಧರ್ಮಶಾಸ್ತ್ರವನ್ನು ಇಟ್ಟುಕೊಂಡಿದ್ದೀರಿ; ಆದರೂ ಅದನ್ನು ಮೀರಿ ನಡೆಯುತ್ತೀರಿ. ಹೀಗಿರಲಾಗಿ, ಶಾರೀರಿಕವಾಗಿ ಸುನ್ನತಿಯನ್ನು ಮಾಡಿಸಿಕೊಳ್ಳದಿದ್ದರೂ ಸ್ವಾಭಾವಿಕವಾಗಿ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರು ಸುನ್ನತಿ ಮಾಡಿಸಿಕೊಂಡಿರುವ ನಿಮಗೆ ತೀರ್ಪುಕೊಡುತ್ತಾರೆ.


ಆದರೆ ಕೆಲವು ಕೊಂಬೆಗಳನ್ನು ಮುರಿದುಹಾಕಿ ಕಾಡೆಣ್ಣೆ ಮರದಂತಿರುವ ನಿನ್ನನ್ನು ಅವುಗಳ ಜಾಗದಲ್ಲಿ ಕಸಿಮಾಡಿರಲಾಗಿ ಊರೆಣ್ಣೇಮರದ ರಸವತ್ತಾದ ಬೇರಿನಲ್ಲಿ ಅದು ಪಾಲುಹೊಂದಿದ್ದರೂ ಆ ಕೊಂಬೆಗಳನ್ನು ಕಡೆಗಣಿಸಿ ನಿನ್ನನ್ನು ಅಂಟಿಸಿದ ಮೇಲೆ ನೀನು ಕೊಂಬೆಯ ಕುರಿತು ಹೆಚ್ಚಿಸಿಕೊಳ್ಳಬೇಡ.


ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.


ಅವರು ಅವನಿಗೆ, ‘ಯಾರೂ ನಮ್ಮನ್ನು ಕೂಲಿಗೆ ಕರೆಯಲಿಲ್ಲ’ ಎಂದರು, ಆಗ ಅವನು ಅವರಿಗೆ, ‘ನೀವು ಸಹ ನನ್ನ ದ್ರಾಕ್ಷಾತೋಟಕ್ಕೆ ಹೋಗಿರಿ’ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು