Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅಂದು ನೀವು ಕ್ರಿಸ್ತನಿಂದ ದೂರವಿದವರೂ, ಇಸ್ರಾಯೇಲ್ಯರ ಹಕ್ಕಿನಲ್ಲಿ ಪಾಲಿಲ್ಲದವರೂ, ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಪರಕೀಯರೂ, ಯಾವ ನಿರೀಕ್ಷೆಯಿಲ್ಲದವರೂ ಮತ್ತು ಲೋಕದಲ್ಲಿ ದೇವರಿಲ್ಲದವರೂ ಆಗಿದ್ದಿರೆಂಬುದನ್ನು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆಗ ನೀವು ಯೇಸುಕ್ರಿಸ್ತರಿಂದ ದೂರವಿದ್ದಿರಿ; ದೇವರು ಆಯ್ದುಕೊಂಡ ಜನಾಂಗಕ್ಕೆ ಸೇರದೆ ಪರಕೀಯರಾಗಿದ್ದಿರಿ; ದೇವರು ತಮ್ಮ ಜನರೊಂದಿಗೆ ಮಾಡಿಕೊಂಡ ಒಡಂಬಡಿಕೆಯಲ್ಲಿ ಪಾಲಿಲ್ಲದವರಾಗಿದ್ದಿರಿ; ನಂಬಿಕೆ ನಿರೀಕ್ಷೆ ಇಲ್ಲದೆ ಬಾಳಿದಿರಿ ಮತ್ತು ದೇವರಿಲ್ಲದವರಂತೆ ಲೋಕದಲ್ಲಿ ಬದುಕಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಸೇರದವರಾಗಿದ್ದು ಇಸ್ರಾಯೇಲ್ಯ ಹಕ್ಕಿನಲ್ಲಿ ಪಾಲಿಲ್ಲದವರೂ [ಅಬ್ರಹಾಮನಿಗೆ ಉಂಟಾದ] ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ ಈ ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ ದೇವರನ್ನರಿಯದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಪೂರ್ವಕಾಲದಲ್ಲಿ ನೀವು ಕ್ರಿಸ್ತನಿಲ್ಲದವರಾಗಿದ್ದಿರಿ ಎಂಬುದನ್ನು ಜ್ಞಾಪಿಸಿಕೊಳ್ಳಿರಿ. ನೀವು ಇಸ್ರೇಲಿನ ಪ್ರಜೆಗಳಾಗಿರಲಿಲ್ಲ. ದೇವರು ತನ್ನ ಜನರೊಂದಿಗೆ ಮಾಡಿಕೊಂಡಿದ್ದ ವಾಗ್ದಾನಗಳಿಗೆ ಸಂಬಂಧಪಟ್ಟ ಒಡಂಬಡಿಕೆಗಳನ್ನು ನೀವು ಹೊಂದಿರಲಿಲ್ಲ. ನಿಮಗೆ ನಿರೀಕ್ಷೆಯಿರಲಿಲ್ಲ ಮತ್ತು ನೀವು ದೇವರನ್ನು ತಿಳಿದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ನೀವು ಆಗ ಕ್ರಿಸ್ತನಿಲ್ಲದವರೂ ಇಸ್ರಾಯೇಲಿನ ಪೌರತ್ವದಿಂದ ಪ್ರತ್ಯೇಕಿಸಲಾದವರೂ ಒಡಂಬಡಿಕೆಯ ವಾಗ್ದಾನಕ್ಕೆ ವಿದೇಶಿಯವರೂ ಲೋಕದಲ್ಲಿ ದೇವರೊಂದಿಗೆ ಯಾವ ಸಂಬಂಧವಿಲ್ಲದೆ ನಿರೀಕ್ಷೆಯಿಲ್ಲದವರೂ ಆಗಿದ್ದೀರೆಂದು ಜ್ಞಾಪಕಮಾಡಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತ್ಯಾ ವೆಳಾಕ್ ತುಮಿ ಕ್ರಿಸ್ತಾಕ್ನಾ ಧುರ್ ಹೊತ್ತ್ಯಾಸಿ, ತುಮಿ ದೆವಾನ್ ಎಚುನ್ ಕಾಡಲ್ಲ್ಯಾ ಲೊಕಾನಿಕ್ನಾ ಭಾಯ್ಲ್ಯಾ ಲೊಕಾಕ್ನಿ ದಿಲ್ಲ್ಯಾ ಗೊಸ್ಟಿಯಾಂಚ್ಯಾ ವರ್ತಿ ಕರಲ್ಲ್ಯಾ ಕರಾರಾಚ್ಯಾ ಭಾಗಾತ್ ನತ್ತಾಸಿ, ಅನಿ ತುಮಿ ಬರೊಸೊ ಅನಿ ದೆವ್ ನಸ್ತಾನಾ ಹ್ಯಾ ಜಗಾತ್ ಜಿವನ್ ಕರ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:12
51 ತಿಳಿವುಗಳ ಹೋಲಿಕೆ  

ಹಿಂದೆ ನೀವು ದೇವರನ್ನು ಅರಿಯದೆ, ಸ್ವಾಭಾವಿಕವಾಗಿ ದೇವರಲ್ಲದವರುಗಳಿಗೆ ದಾಸರಾಗಿದ್ದೀರಿ.


ಇದಲ್ಲದೆ ನೀವು ಪೂರ್ವದಲ್ಲಿ ಅನ್ಯರು ನಿಮ್ಮ ದುಷ್ಕೃತ್ಯಗಳಿಂದಲೂ ದ್ವೇಷಮನಸ್ಸುಳ್ಳವರಾಗಿ ಆತನಿಗೆ ವಿರೋಧಿಗಳೂ ಆಗಿದ್ದಿರಿ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯೂ ದೇವರೂ ಆಗಿರುವಾತನಿಗೆ ಸ್ತೋತ್ರವಾಗಲಿ. ಆತನು ಯೇಸು ಕ್ರಿಸ್ತನನ್ನು ಸತ್ತವರೊಳಗಿಂದ ಎಬ್ಬಿಸಿದ್ದರಲ್ಲಿ, ತನ್ನ ಮಹಾ ಕರುಣಾನುಸಾರವಾಗಿ ನಮ್ಮನ್ನು ತಿರುಗಿ ಜೀವಿಸುವಂತೆ ಮಾಡಿ ಜೀವಕರವಾದ ನಿರೀಕ್ಷೆಯನ್ನು ನಮ್ಮಲ್ಲಿ ಹುಟ್ಟಿಸಿ,


ಸಹೋದರರೇ, ನಿದ್ರೆಹೋಗುವವರ ಗತಿ ಏನೆಂದು ನೀವು ತಿಳಿಯದೆ ಇದ್ದು, ನಿರೀಕ್ಷೆಯಿಲ್ಲದವರಾಗಿರುವ ಇತರರಂತೆ ದುಃಖಿಸಬಾರದು ಎಂಬುದೇ ನಮ್ಮ ಬಯಕೆ.


ಅವರ ಮನಸ್ಸಿಗೆ ಕತ್ತಲು ಕವಿದಿದೆ, ಅವರು ತಮ್ಮ ಕಠಿಣವಾದ ಹೃದಯದ ನಿಮಿತ್ತದಿಂದಲೂ ಮತ್ತು ತಮ್ಮಲ್ಲಿರುವ ಅಜ್ಞಾನದ ನಿಮಿತ್ತದಿಂದಲೂ ದೇವರಿಂದಾಗುವ ಜೀವಕ್ಕೆ ದೂರವಾಗಿದ್ದಾರೆ.


ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು; ಅದು ಶಾಶ್ವತವಾಗಿರುವುದು. ನಾನು ಅವರನ್ನು ನೆಲೆಗೊಳಿಸಿ, ವೃದ್ಧಿಮಾಡಿ, ನನ್ನ ಪವಿತ್ರಾಲಯವನ್ನು ಅವರ ನಡುವೆ ಯುಗಯುಗಾಂತರಕ್ಕೂ ನಿಲ್ಲಿಸುವೆನು.


ನಾನು ದ್ರಾಕ್ಷಿಬಳ್ಳಿ, ನೀವು ಕೊಂಬೆಗಳು; ಒಬ್ಬನು ನನ್ನಲ್ಲಿಯೂ ನಾನು ಅವನಲ್ಲಿಯೂ ನೆಲೆಗೊಂಡಿದ್ದರೆ ಅವನು ಬಹಳ ಫಲ ಕೊಡುವನು. ನೀವು ನನ್ನನ್ನು ಬಿಟ್ಟು ಏನೂ ಮಾಡಲಾರಿರಿ.


ದೇವರ ವಾಗ್ದಾನ ಮತ್ತು ಆಣೆ ಇವೆರಡೂ ನಿಶ್ಚಲವಾದ ಆಧಾರಗಳು ಏಕೆಂದರೆ ದೇವರು ಸುಳ್ಳಾಡುವವನಲ್ಲ. ಅದುದರಿಂದ ಆಶ್ರಯವನ್ನು ಹೊಂದಬೇಕೆಂದು ಓಡಿಬಂದು, ನಮ್ಮ ಮುಂದೆ ಇಟ್ಟಿರುವ ನಿರೀಕ್ಷೆಯನ್ನು ಹಿಡಿದುಕೊಂಡವರಾದ ನಮಗೆ ಬಲವಾದ ಪ್ರೋತ್ಸಾಹ ಉಂಟಾಯಿತು.


ಆ ಮಾತಿನ ಅರ್ಥವೇನಂದರೆ ಶರೀರಸಂಬಂಧವಾಗಿ ಹುಟ್ಟಿದವರೆಲ್ಲರೂ ದೇವರ ಮಕ್ಕಳಲ್ಲ. ವಾಗ್ದಾನ ಸಂಬಂಧವಾಗಿ ಹುಟ್ಟಿದವರೇ ಅಬ್ರಹಾಮನ ಸಂತತಿಯವರೆಂದು ಎಣಿಸಲ್ಪಡುವರು ಎಂಬುದು.


ಆಗ ಇಸ್ರಾಯೇಲರಿಗೆ ಬಹುಕಾಲದಿಂದ ಸತ್ಯವಾದ ದೇವರೂ, ಬೋಧಿಸುವ ಯಾಜಕರೂ ಹಾಗೂ ಧರ್ಮಶಾಸ್ತ್ರವೂ ಇರಲಿಲ್ಲ.


ಆದರೆ ಕ್ರಿಸ್ತನನ್ನು ಕರ್ತನೆಂದು ನಿಮ್ಮ ಹೃದಯಗಳಲ್ಲಿ ಪ್ರತಿಷ್ಠಿಸಿರಿ. ನಿಮ್ಮಲ್ಲಿರುವ ನಿರೀಕ್ಷೆಗೆ ಆಧಾರವೆನೆಂದು ಕೇಳುವವರೆಲ್ಲರಿಗೂ ಉತ್ತರ ಹೇಳುವುದಕ್ಕೆ ಯಾವಾಗಲೂ ಸಿದ್ಧರಾಗಿರಿ. ಆದರೆ ಅದನ್ನು ಸಾತ್ವಿಕತ್ವದಿಂದಲೂ ಮತ್ತು ಗೌರವದಿಂದಲೂ ಹೇಳಿರಿ.


ಈ ಕಾರಣದಿಂದ ನಾನು ನಿಮ್ಮನ್ನು ಕಂಡು ಮಾತನಾಡಬೇಕೆಂದು ಕರೆಯಿಸಿದೆನು. ಇಸ್ರಾಯೇಲ್ ಜನರ ನಿರೀಕ್ಷೆಯ ನಿಮಿತ್ತವಾಗಿ ಈ ಬೇಡಿಯಿಂದ ಬಂಧಿತನಾಗಿದ್ದೇನೆ” ಎಂದು ಹೇಳಿದನು.


ನೀವು ಆ ಪ್ರವಾದಿಗಳ ಶಿಷ್ಯರು, ದೇವರು ನಮ್ಮ ಪೂರ್ವಿಕರ ಸಂಗಡ ಮಾಡಿಕೊಂಡ ಒಡಂಬಡಿಕೆಗೆ ಬಾಧ್ಯರೂ ಆಗಿದ್ದೀರಿ. ಆತನು ಅಬ್ರಹಾಮನಿಗೆ ‘ನಿನ್ನ ಸಂತತಿಯ ಮೂಲಕ ಭೂಲೋಕದ ಎಲ್ಲಾ ಕುಲದವರಿಗೂ ಆಶೀರ್ವಾದವುಂಟಾಗುವುದು’ ಎಂದು ಹೇಳಿ ಆ ಒಡಂಬಡಿಕೆಯನ್ನು ಮಾಡಿಕೊಂಡನಲ್ಲಾ.


ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು. ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು.


ಆ ದಿನದಲ್ಲಿ ಯೆಹೋವನು ಅಬ್ರಾಮನ ಸಂಗಡ ಒಡಂಬಡಿಕೆ ಮಾಡಿಕೊಂಡು, “ಐಗುಪ್ತ ದೇಶದ ನದಿಯಿಂದ ಯೂಫ್ರೆಟಿಸ್ ಮಹಾ ನದಿಯವರೆಗೂ ಇರುವ ಈ ದೇಶವನ್ನೆಲ್ಲಾ ನಿನ್ನ ಸಂತತಿಯವರಿಗೆ ಕೊಟ್ಟಿದ್ದೇನೆ.


ಆತನ ಮೇಲೆ ಈ ನಿರೀಕ್ಷೆಯನ್ನು ಇಟ್ಟಿರುವ ಪ್ರತಿಯೊಬ್ಬನು ಆತನು ಶುದ್ಧನಾಗಿರುವಂತೆಯೇ ತನ್ನನ್ನು ತಾನು ಶುದ್ಧಿಮಾಡಿಕೊಳ್ಳುತ್ತಾನೆ.


ಆತನನ್ನು ಸತ್ತವರೊಳಗಿಂದ ಎಬ್ಬಿಸಿ ಆತನಿಗೆ ಮಹಿಮೆಯನ್ನು ಕೊಟ್ಟ ದೇವರಲ್ಲಿ ನೀವು ಆತನ ಮೂಲಕ ನಂಬಿಕೆಯಿಟ್ಟವರಾಗಿದ್ದೀರಷ್ಟೆ. ಹೀಗಿರಲಾಗಿ ನಿಮ್ಮ ನಂಬಿಕೆಯೂ ನಿರೀಕ್ಷೆಯೂ ದೇವರಲ್ಲಿಯೇ ನೆಲೆಗೊಂಡಿವೆ.


ಬೆಂಕಿಯ ಶಕ್ತಿಯನ್ನು ನಂದಿಸಿದರು, ಕತ್ತಿಯ ಬಾಯಿಂದ ತಪ್ಪಿಸಿಕೊಂಡರು, ದುರ್ಬಲರಾಗಿದ್ದು ಬಲಿಷ್ಠರಾದರು, ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು, ಪರದೇಶದವರ ಸೈನ್ಯಗಳನ್ನು ಓಡಿಸಿಬಿಟ್ಟರು.


ನಮ್ಮ ರಕ್ಷಕನಾದ ದೇವರ ನಮ್ಮ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತ ಯೇಸುವಿನ ಆಜ್ಞೆಯ ಮೇರೆಗೆ ನೇಮಿಸಲ್ಪಟ್ಟ ಕ್ರಿಸ್ತ ಯೇಸುವಿನ ಅಪೊಸ್ತಲನಾದ ಪೌಲನು


ಮತ್ತು ನಮ್ಮನ್ನು ಪ್ರೀತಿಸಿ ನಮಗೆ ನಿತ್ಯವಾದ ಆದರಣೆಯನ್ನೂ ಉತ್ತಮವಾದ ನಿರೀಕ್ಷೆಯನ್ನೂ ಕೃಪೆಯಿಂದ ಅನುಗ್ರಹಿಸಿದ ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸು ಕ್ರಿಸ್ತನೂ ತಾನೇ ನಿಮ್ಮ ಹೃದಯಗಳನ್ನು ಸಂತೈಸಿ,


ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.


ಪರಲೋಕದಲ್ಲಿ ನಿಮಗೋಸ್ಕರ ಕಾದಿರಿಸಿರುವ ನಿರೀಕ್ಷೆಯನ್ನು ಕುರಿತು ಸುವಾರ್ತೆಯ ಸತ್ಯವಾಕ್ಯದಿಂದ ನೀವು ಮೊದಲೇ ಕೇಳಿದ್ದಿರಿ.


ಇದಲ್ಲದೆ ಈ ಮಂದೆಗೆ ಸೇರದಿರುವ ಇನ್ನೂ ಬೇರೆ ಕುರಿಗಳು ನನಗಿವೆ, ಅವುಗಳನ್ನೂ ಸಹ ನಾನು ಕರೆ ತರಬೇಕು. ಅವು ನನ್ನ ಸ್ವರಕ್ಕೆ ಕಿವಿಗೊಡುತ್ತವೆ. ಆಗ ಒಂದೇ ಕುರಿಹಿಂಡು ಆಗುವುದು ಮತ್ತು ಒಬ್ಬನೇ ಕುರುಬನು ಇರುವನು.


ಸಮಾರ್ಯದವರಾದ ನೀವು ಅರಿಯದೇ ಇರುವಂಥದನ್ನು ಆರಾಧಿಸುತ್ತೀರಿ, ಆದರೆ ನಾವು ಅರಿತಿರುವುದನ್ನೇ ಆರಾಧಿಸುವವರಾಗಿದ್ದೇವೆ. ಏಕೆಂದರೆ, ಬರಬೇಕಾದ ರಕ್ಷಣೆಯು ಯೆಹೂದ್ಯರೊಳಗಿಂದ ಬರುತ್ತದಷ್ಟೆ.


ಆತನು ನಮ್ಮ ಪೂರ್ವಿಕರಿಗೆ ದಯೆಯನ್ನು ತೋರಿಸುವುದರ ಮೂಲಕ ನಮ್ಮ ಮೂಲಪಿತೃವಾದ ಅಬ್ರಹಾಮನಿಗೆ ಪ್ರಮಾಣಮಾಡಿ ಕೊಟ್ಟ ತನ್ನ ಪರಿಶುದ್ಧವಾದ ಒಡಂಬಡಿಕೆಯನ್ನು ನೆನಪಿಸಿಕೊಳ್ಳುವವನಾಗಿದ್ದಾನೆ.


ಇದರಂತೆ ರಾಜಮುಖಂಡ, ಯಜ್ಞ, ಸ್ತಂಭ, ಏಫೋದು, ವಿಗ್ರಹಗಳಿಲ್ಲದೆ ಇಸ್ರಾಯೇಲರು ಬಹಳ ದಿನಗಳು ತಾಳಿಕೊಂಡಿರುವರು.


‘ಮಿಥ್ಯ ದರ್ಶನಹೊಂದಿ, ಸುಳ್ಳು ಕಣಿ ಹೇಳುವ ಪ್ರವಾದಿಗಳ ಮೇಲೆ ನಾನು ಕೈಮಾಡುವೆನು; ಅವರು ನನ್ನ ಜನರ ಹಿರೀಸಭೆಯಲ್ಲಿ ಸೇರಬಾರದು, ಇಸ್ರಾಯೇಲ್ ವಂಶದವರ ಪಟ್ಟಿಯಲ್ಲಿ ಅವರ ಹೆಸರುಗಳು ಲಿಖಿತವಾಗಬಾರದು, ಅವರು ಇಸ್ರಾಯೇಲ್ ದೇಶದಲ್ಲಿ ಪ್ರವೇಶಿಸಲೂಬಾರದು; ನಾನೇ ಕರ್ತನಾದ ಯೆಹೋವನು’ ಎಂದು ನಿಮಗೆ ಗೊತ್ತಾಗುವುದು.


ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ, ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ, ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ?


ತಪ್ಪಿಸಿಕೊಂಡ ಅನ್ಯಜನರೇ, ಕೂಡಿಬನ್ನಿರಿ, ಒಟ್ಟಿಗೆ ಸಮೀಪಿಸಿರಿ! ತಮ್ಮ ಮರದ ವಿಗ್ರಹಗಳನ್ನು ಹೊತ್ತುಕೊಂಡು ರಕ್ಷಿಸಲಾರದ ಆ ದೇವರಿಗೆ ಬಿನ್ನವಿಸುವವರು ಏನೂ ತಿಳಿಯದವರಾಗಿದ್ದಾರೆ.


ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ.


ಆಗ ಜೆರುಬ್ಬಾಬೆಲ್, ಯೇಷೂವ ಮತ್ತು ಬೇರೆ ಇಸ್ರಾಯೇಲ್ ಗೋತ್ರಪ್ರಧಾನರೂ ಅವರಿಗೆ, “ನೀವು ನಮ್ಮ ದೇವರ ಆಲಯ ಕಟ್ಟುವುದರಲ್ಲಿ ನಮ್ಮೊಡನೆ ಸೇರಲೇ ಕೂಡದು. ಪರ್ಷಿಯ ದೇಶದ ರಾಜನಾದ ಕೋರೆಷನಿಂದ ನಮಗಾದ ಅಪ್ಪಣೆಯ ಮೇರೆಗೆ ನಾವೇ ಇಸ್ರಾಯೇಲ್ ದೇವರಾದ ಯೆಹೋವನ ಆಲಯವನ್ನು ಕಟ್ಟುತ್ತೇವೆ” ಎಂದು ಉತ್ತರ ಕೊಟ್ಟರು.


ಇಸ್ರಾಯೇಲರು ಯೆಹೋವನಿಗೋಸ್ಕರ ಪ್ರತ್ಯೇಕಿಸಿ ಸಮರ್ಪಿಸುವ ದೇವರ ವಸ್ತುಗಳೆಲ್ಲಾ ನಿನಗೂ, ನಿನ್ನ ಸಂತತಿಯವರಾದ ಸ್ತ್ರೀಪುರುಷರೆಲ್ಲರಿಗೂ ಸದಾಕಾಲವೂ ಸಲ್ಲಬೇಕೆಂದು ನಾನು ಅನುಗ್ರಹಮಾಡಿದ್ದೇನೆ. ಇದು ಯೆಹೋವನ ಸನ್ನಿಧಿಯಲ್ಲಿ ನಿನ್ನೊಡನೆಯೂ, ನಿನ್ನ ಸಂತತಿಯೊಡನೆಯೂ ಮಾಡಲ್ಪಟ್ಟ ಶಾಶ್ವತವಾದ ಉಪ್ಪಿನ ಒಡಂಬಡಿಕೆಯಾಗಬೇಕು” ಎಂದು ಹೇಳಿದನು.


ಆಗ ವಿದೇಶೀಯರು ನಿಂತುಕೊಂಡು ನಿಮ್ಮ ಮಂದೆಗಳನ್ನು ಮೇಯಿಸುವರು, ಅನ್ಯರು ನಿಮಗೆ ಉಳುವವರೂ ಮತ್ತು ತೋಟಗಾರರೂ ಆಗುವರು.


ಯೆಹೋವನು ಯಾಕೋಬ್ಯನನ್ನು ಕನಿಕರಿಸಿ, ಪುನಃ ಇಸ್ರಾಯೇಲರನ್ನು ಆರಿಸಿಕೊಂಡು, ಅವರನ್ನು ಅವರ ಸ್ವದೇಶಕ್ಕೆ ಸೇರಿಸುವನು; ಪರದೇಶಿಗಳು ಅವರೊಂದಿಗೆ ಕೂಡಿ ಬಂದು, ಯಾಕೋಬನ ಮನೆತನಕ್ಕೆ ಸೇರಿಕೊಳ್ಳುವರು.


ನಿಮಗೂ, ನಿಮ್ಮ ಮಧ್ಯದಲ್ಲಿ ಪ್ರವಾಸ ಮಾಡುತ್ತಾ, ಮಕ್ಕಳನ್ನು ಪಡೆದಿರುವ ವಿದೇಶಿಗಳಿಗೂ ದೇಶವನ್ನು ಬಾಧ್ಯವಾಗಿ ಹಂಚಬೇಕು. ಅವರು ಇಸ್ರಾಯೇಲರ ಮಧ್ಯದಲ್ಲಿ ನಿಮಗೆ ಸ್ವದೇಶಿಗಳಂತೆಯೇ ಇರಬೇಕು. ಇಸ್ರಾಯೇಲಿನ ಕುಲಗಳೊಳಗೆ ನಿಮ್ಮೊಂದಿಗೆ ಅವರಿಗೆ ಸ್ವಾಸ್ತ್ಯವಾಗಲಿ.


ಆ ವಾಗ್ದಾನವು ನಿಮಗೂ, ನಿಮ್ಮ ಮಕ್ಕಳಿಗೂ, ಅಂತೂ ನಮ್ಮ ದೇವರಾಗಿರುವ ಕರ್ತನು ತನ್ನ ಕಡೆಗೆ ಕರೆಯುವ ದೂರದಲ್ಲಿರುವ ಎಲ್ಲರಿಗೂ ಇರುವುದಾಗಿದೆ” ಎಂದು ಹೇಳಿದನು.


ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.


ಆದರೆ ಯೇಸು ಕ್ರಿಸ್ತನು ಅದಕ್ಕಿಂತ ಶ್ರೇಷ್ಠವಾದ ಉತ್ತಮ ಸೇವೆಯನ್ನು ಹೊಂದಿದವನಾಗಿದ್ದಾನೆ, ಯಾಕೆಂದರೆ ಈತನು ಉತ್ತಮ ವಾಗ್ದಾನಗಳ ಮೇಲೆ ಸ್ಥಾಪಿತವಾದ ಉತ್ತಮವಾದ ಒಡಂಬಡಿಕೆಗೆ ಮಧ್ಯಸ್ಥನಾಗಿದ್ದಾನೆ.


ಪರದೇಶದವರೂ, ಕೂಲಿಯವರೂ ಅದನ್ನು ತಿನ್ನಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು