Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 2:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ವಿಧಿನಿಯಮಗಳಿಂದ ಕೂಡಿದ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿದ್ದಾರೆ. ಉಭಯರನ್ನು ಒಂದುಗೂಡಿಸಿ, ಶಾಂತಿ ಸಮಾಧಾನವನ್ನೇರ್ಪಡಿಸಿ, ನೂತನ ಮಾನವನನ್ನಾಗಿ ಪರಿವರ್ತಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆತನು ಸಮಾಧಾನಮಾಡುವವನಾಗಿ ಉಭಯರನ್ನೂ ತನ್ನಲ್ಲಿ ಒಬ್ಬ ನೂತನಪುರುಷನನ್ನಾಗಿ ನಿರ್ಮಿಸಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೆಹೂದ್ಯರ ಧರ್ಮಶಾಸ್ತ್ರವು ಅನೇಕ ಆಜ್ಞೆಗಳನ್ನೂ ನಿಯಮಗಳನ್ನೂ ಹೊಂದಿತ್ತು. ಆದರೆ ಕ್ರಿಸ್ತನು ಆ ಧರ್ಮಶಾಸ್ತ್ರವನ್ನು ಅಂತಿಮಗೊಳಿಸಿದನು. ಯೆಹೂದ್ಯರನ್ನು ಮತ್ತು ಯೆಹೂದ್ಯರಲ್ಲದವರನ್ನು ತನ್ನಲ್ಲಿ ಒಂದು ಜನಾಂಗವನ್ನಾಗಿ ಮಾಡಿ ಶಾಂತಿಯನ್ನು ಸ್ಥಾಪಿಸಬೇಕೆಂಬುದೇ ಕ್ರಿಸ್ತನ ಉದ್ದೇಶವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಹೀಗೆ ಕ್ರಿಸ್ತ ಯೇಸು ತಮ್ಮ ದೇಹವನ್ನು ಶಿಲುಬೆಯಲ್ಲಿ ಸಮರ್ಪಿಸಿದ್ದರಿಂದ ನಿಯಮದ ಆಜ್ಞೆಗಳುಳ್ಳ ಶಾಸನಗಳನ್ನು ರದ್ದುಗೊಳಿಸಿದರು. ಈ ರೀತಿಯಾಗಿ ಇವೆರಡೂ ಗುಂಪಿನವರಿಂದ ಒಬ್ಬ ನೂತನ ಮಾನವತ್ವವನ್ನು ತಮ್ಮಲ್ಲಿ ಸೃಷ್ಟಿಸಿ ಸಮಾಧಾನವನ್ನು ಉಂಟುಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತೊ ಜುದೆವಾಂಚೆ ಖಾಯ್ದೆ ಅನಿ ನಿಯಮಾಕ್ನಿ ಕಡೆಕ್ ಕರ್ತಾ, ಅಸೆ ಅಪ್ನಾಚ್ಯಾ ಎಕ್ವಟ್ಟಾ ವೈನಾ ದೊನ್ ರಿತಿಚ್ಯಾ ಲೊಕಾಂಚ್ಯಾ ಮದ್ದಿ ಸಮಾಧಾನ್ ಹಾನುನ್ ಎಕ್ ನ್ಹವಿ ಲೊಕಾ ಕರ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 2:15
21 ತಿಳಿವುಗಳ ಹೋಲಿಕೆ  

ನಮ್ಮ ಮೇಲೆ ದೋಷಾರೋಪಣೆ ಮಾಡಿದಂಥ ಆಜ್ಞಾರೂಪವಾಗಿದ್ದಂಥ ಪತ್ರವನ್ನು ತೊಡೆದುಹಾಕಿ ಅದನ್ನು ಶಿಲುಬೆಗೆ ಜಡಿದು ಇಲ್ಲದಂತಾಗಿ ಮಾಡಿದನು.


ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.


ಆತನು “ಹೊಸತು” ಎಂದು ಹೇಳಿದ್ದರಲ್ಲಿ ಮೊದಲಿದ್ದ ಒಡಂಬಡಿಕೆಯನ್ನು ಹಳೆಯದಾಗಿ ಮಾಡಿದ್ದಾನೆ. ಅದು ಹಳೆಯದಾಗುತ್ತಾ ಅಳಿದುಹೋಗುವುದಕ್ಕೆ ಸಮೀಪವಾಗಿದೆ.


ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.


ಪ್ರಾಪಂಚಿಕವಾದ ಪ್ರಥಮಬೋಧನೆಯ ಪಾಲಿಗೆ ನೀವು ಕ್ರಿಸ್ತನೊಂದಿಗೆ ಸತ್ತವರಾಗಿದ್ದರೆ, ಇನ್ನೂ ಪ್ರಾಪಂಚಿಕರಾಗಿ ಬದುಕುವವರಂತೆ ಮನುಷ್ಯಕಲ್ಪಿತ ಆಜ್ಞೆಗಳನ್ನು ಮತ್ತು ಉಪದೇಶಗಳನ್ನು ಅನುಸರಿಸಿ,


ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು.


ನೀವೆಲ್ಲರೂ ಕ್ರಿಸ್ತ ಯೇಸುವಿನಲ್ಲಿ ಒಂದೇ ಆಗಿರುವುದರಿಂದ ಯೆಹೂದ್ಯನು ಅಥವಾ ಗ್ರೀಕನು ಎಂದಾಗಲೀ, ಆಳು ಅಥವಾ ಒಡೆಯ ಎಂದಾಗಲೀ, ಗಂಡು ಹಾಗೂ ಹೆಣ್ಣು ಎಂದಾಗಲೀ ಭೇದವಿಲ್ಲ.


ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ.


ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ.


ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.


ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.


ನಿಮ್ಮನ್ನು ಮತ್ತು ನಮ್ಮನ್ನು ಒಂದುಮಾಡಿದವನಾದ ಆತನೇ ನಮಗೆ ಶಾಂತಿದಾತನಾಗಿದ್ದಾನೆ. ಆತನು ವಿಧಿನಿಯಮಗಳಿಂದ ಕೂಡಿದ್ದ ಆಜ್ಞೆಗಳುಳ್ಳ ಧರ್ಮಶಾಸ್ತ್ರವನ್ನು ನಿರರ್ಥಕಗೊಳಿಸಿ, ನಮ್ಮನ್ನು ಅಗಲಿಸಿದ್ದ ಹಗೆತನವೆಂಬ ಅಡ್ಡಗೋಡೆಯನ್ನು ತನ್ನ ಶರೀರದಿಂದಲೇ ಕೆಡವಿಹಾಕಿದ್ದಾನೆ.


ನಮ್ಮ ಮೇಲೆ ಇದ್ದ ಹಗೆತನವನ್ನು ತನ್ನ ಶಿಲುಬೆಯ ಮೇಲೆ ಇಲ್ಲವಾಗಿಸಿ, ಆ ಶಿಲುಬೆಯ ಮೂಲಕ ಉಭಯರನ್ನೂ ಒಂದೇ ಶರೀರವನ್ನಾಗಿ ಮಾಡಿ ದೇವರೊಂದಿಗೆ ಸಂಧಾನಪಡಿಸಿದ್ದಾನೆ.


ಈ ಜ್ಞಾನದಲ್ಲಿ ಗ್ರೀಕನು ಮತ್ತು ಯೆಹೂದ್ಯನು ಎಂಬ ಭೇದವಿಲ್ಲ, ಸುನ್ನತಿಮಾಡಿಸಿಕೊಂಡವರು ಮತ್ತು ಸುನ್ನತಿ ಮಾಡಿಸಿಕೊಳ್ಳದವರು ಎಂಬ ಭೇದವಿಲ್ಲ, ನಾಗರಿಕ, ಅನಾಗರಿಕನು ಎಂಬ ಭೇದವಿಲ್ಲ, ದಾಸನು, ಸ್ವತಂತ್ರನು ಎಂಬ ಭೇದವಿಲ್ಲ, ಆದರ ಬದಲಾಗಿ ಕ್ರಿಸ್ತನೇ ಸಮಸ್ತವೂ ಹಾಗೂ ಸಮಸ್ತರಲ್ಲಿಯೂ ಇರುವಾತನಾಗಿದ್ದಾನೆ.


ಕ್ರಿಸ್ತನ ಸಮಾಧಾನವು ನಿಮ್ಮ ಹೃದಯಗಳಲ್ಲಿ ಆಳಲಿ. ಇದೇ ಸಮಾಧಾನದಲ್ಲಿ ಏಕ ದೇಹವಾಗಿರುವಂತೆ ನೀವು ಕರೆಯಲ್ಪಟ್ಟಿರುವಿರಿ ಇದಲ್ಲದೆ ಕೃತಜ್ಞತೆಯುಳ್ಳವರಾಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು