ಎಫೆಸದವರಿಗೆ 3:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019
10-11 ದೇವರು ನಮ್ಮ ಕರ್ತನಾದ ಕ್ರಿಸ್ತಯೇಸುವಿನಲ್ಲಿ ಮಾಡಿದ ನಿತ್ಯಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು, ಪರಲೋಕದಲ್ಲಿ ರಾಜತ್ವಗಳಿಗೂ, ಅಧಿಕಾರಗಳಿಗೂ ಈಗ ಸಭೆಯ ಮೂಲಕ ಗೊತ್ತಾಗಬೇಕೆಂದು ಉದ್ದೇಶಿಸಿದನು.
10-11 ದೇವರು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿ ಅನಾದಿಕಾಲದಿಂದ ಮಾಡಿದ ಸಂಕಲ್ಪದ ಮೇರೆಗೆ ತನ್ನ ನಾನಾ ವಿಧವಾದ ಜ್ಞಾನವು ಪರಲೋಕದಲ್ಲಿ ರಾಜತ್ವಗಳಿಗೂ ಅಧಿಕಾರಗಳಿಗೂ ಈಗ ಕ್ರೈಸ್ತ ಸಭೆಯ ಮೂಲಕ ಗೊತ್ತಾಗಬೇಕೆಂಬದನ್ನು ಉದ್ದೇಶಿಸಿದ್ದನು.
ಆದರೆ ಈ ಸಂಗತಿಗಳನ್ನು ಮುಂತಿಳಿಸುವುದರಲ್ಲಿ ತಮಗೋಸ್ಕರವಲ್ಲ ನಿಮಗೋಸ್ಕರವೇ ಸೇವೆ ಮಾಡುವವರಾಗಿದ್ದಾರೆಂಬುದು ಅವರಿಗೆ ಪ್ರಕಟವಾಯಿತು. ಅವರು ಮುಂದಾಗಿ ಹೇಳಿದ ಸಂಗತಿಗಳೇ ಈಗ ಸಂಭವಿಸಲ್ಪಡುತ್ತಿವೆ ಎಂಬ ವರ್ತಮಾನವು ಪರಲೋಕದಿಂದ ಕಳುಹಿಸಲ್ಪಟ್ಟ ಪವಿತ್ರಾತ್ಮನ ಬಲದಿಂದ ನಿಮಗೆ ಸುವಾರ್ತೆಯನ್ನು ಸಾರಿದವರ ಮೂಲಕ ನಿಮಗೆ ಪ್ರಸಿದ್ಧಿಮಾಡಲ್ಪಟ್ಟಿದೆ. ದೇವದೂತರೂ ಈ ಸಂಗತಿಗಳನ್ನು ಲಕ್ಷ್ಯವಿಟ್ಟು ನೋಡಬೇಕೆಂದು ಬಯಸುತ್ತಿದ್ದಾರೆ.
ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ.
ಇದುವರೆಗೆ ಗುಪ್ತವಾಗಿದ್ದ ಸತ್ಯಾರ್ಥವನ್ನು ತಿಳಿಸುವಲ್ಲಿ ದೇವರ ಜ್ಞಾನವನ್ನೇ ಹೇಳುತ್ತೇವೆ. ಅದು ಯಾವುದೆಂದರೆ ದೇವರು ನಮ್ಮ ಮಹಿಮೆಗಾಗಿ ಲೋಕೋತ್ಪತ್ತಿಗಿಂತ ಮೊದಲೇ ನೇಮಿಸಿ ಮರೆಮಾಡಿದ್ದ ದೇವರ ಜ್ಞಾನದ ಮರ್ಮವೇ ಆಗಿದೆ.