Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿಮ್ಮ ವಿಶ್ವಾಸದ ಫಲವಾಗಿ, ಯೇಸುಕ್ರಿಸ್ತರು ನಿಮ್ಮ ಹೃದಯಗಳಲ್ಲಿ ಸದಾ ವಾಸಿಸಲಿ ಮತ್ತು ನಿಮ್ಮ ಜೀವನವು ಪ್ರೀತಿಯಲ್ಲಿ ಬೇರೂರಿ ಸದೃಢವಾಗಿ ನಿಲ್ಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವ ಹಾಗೆಯೂ ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ನಿಮ್ಮ ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಬೇಕೆಂದು ಪ್ರಾರ್ಥಿಸುತ್ತೇನೆ. ನಿಮ್ಮ ಜೀವಿತವು ಪ್ರೀತಿಯಲ್ಲಿ ಬಲವಾಗಿ ಬೇರೂರಿರಬೇಕೆಂದು ಮತ್ತು ಪ್ರೀತಿಯ ಮೇಲೆ ಕಟ್ಟಲ್ಪಟ್ಟಿರಬೇಕೆಂದು ಪ್ರಾರ್ಥಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಂಬಿಕೆಯ ಮೂಲಕ ಕ್ರಿಸ್ತನು ನಿಮ್ಮ ಹೃದಯಗಳಲ್ಲಿ ವಾಸಿಸಲಿ. ನೀವು ಪ್ರೀತಿಯಲ್ಲಿ ಬೇರೂರಿ ನೆಲೆಗೊಂಡು ನಿಂತು

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಅನಿ ವಿಶ್ವಾಸಾಚ್ಯಾ ವೈನಾ ಕ್ರಿಸ್ತ್ ತುಮ್ಚ್ಯಾ ಮನಾಕ್ನಿ ಅಪ್ನಾಚೆ ಘರ್ ಕರುನ್ಗೆಂವ್ದಿತ್ ಮನುನ್ ಮಾಗ್ತಾ ಅನಿ ತುಮ್ಚೆ ಮುಳಾ ಅನಿ ಪಾಯಾ ಪ್ರೆಮಾ ವೈರ್ ಭಾಂದಲಿ ಹೊವ್ನ್ ರ್‍ಹಾಂವ್ದಿತ್ ಮನುನ್ ಮಾಗ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:17
24 ತಿಳಿವುಗಳ ಹೋಲಿಕೆ  

ಆತನಲ್ಲಿ ಬೇರೂರಿಕೊಂಡು, ಆತನಲ್ಲಿ ಕಟ್ಟಲ್ಪಟ್ಟು ಮತ್ತು ನಿಮಗೆ ಬೋಧಿಸಲ್ಪಟ್ಟ ಉಪದೇಶದ ಪ್ರಕಾರವೇ ಕ್ರಿಸ್ತ ನಂಬಿಕೆಯಲ್ಲಿ ನೆಲೆಗೊಂಡು ದೇವರಿಗೆ ಹೆಚ್ಚೆಚ್ಚಾಗಿ ಸ್ತೋತ್ರ ಸಲ್ಲಿಸುವವರಾಗಿರಿ.


ಹೀಗೆ ದೇವರು ನಮ್ಮಲ್ಲಿಟ್ಟಿರುವ ಪ್ರೀತಿಯನ್ನು ನಾವು ತಿಳಿದುಕೊಂಡಿದ್ದೇವೆ. ಅದನ್ನು ನಂಬಿದ್ದೇವೆ. ದೇವರು ಪ್ರೀತಿಸ್ವರೂಪಿ, ಪ್ರೀತಿಯಲ್ಲಿ ನೆಲೆಗೊಂಡಿರುವವನು ದೇವರಲ್ಲಿ ನೆಲೆಗೊಂಡಿದ್ದಾನೆ. ದೇವರು ಅವನಲ್ಲಿ ನೆಲೆಗೊಂಡಿದ್ದಾನೆ.


ಯೇಸು ಅವನಿಗೆ, “ಯಾವನಾದರೂ ನನ್ನನ್ನು ಪ್ರೀತಿಸುವುದಾದರೆ ನನ್ನ ಮಾತಿನಂತೆ ನಡೆಯುವನು. ಅವನನ್ನು ನನ್ನ ತಂದೆಯು ಪ್ರೀತಿಸುವನು ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು, ಅವನೊಂದಿಗೆ ನೆಲೆಸುವೆವು.


ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ಈ ನಿರೀಕ್ಷೆಯು ನಮ್ಮನ್ನು ಆಶಾಭಂಗಪಡಿಸುವುದಿಲ್ಲ, ಏಕೆಂದರೆ, ನಮಗೆ ಕೊಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಸುರಿಸಿದ್ದಾನೆ.


ಇಗೋ ಬಾಗಿಲಲ್ಲಿ ನಿಂತುಕೊಂಡು ತಟ್ಟುತ್ತಾ ಇದ್ದೇನೆ. ಯಾವನಾದರೂ ನನ್ನ ಧ್ವನಿಯನ್ನು ಕೇಳಿ ಬಾಗಿಲನ್ನು ತೆರೆದರೆ ನಾನು ಒಳಗೆ ಬಂದು ಅವನ ಸಂಗಡ ಊಟ ಮಾಡುವೆನು. ಅವನು ನನ್ನ ಸಂಗಡ ಊಟ ಮಾಡುವನು.


ದೇವ ಮಂದಿರಕ್ಕೂ, ವಿಗ್ರಹಗಳಿಗೂ ಒಪ್ಪಿಗೆಯೇನು? ನಾವು ದೇವರೇ ಹೇಳಿರುವಂತೆ ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ, “ನಾನು ಅವರಲ್ಲಿ ವಾಸಮಾಡುವೆನು, ಅವರ ನಡುವೆಯೇ ನಾ ತಿರುಗಾಡುವೆನು ಅವರಿಗೆ ನಾನೇ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು” ಎಂದು ಹೇಳಿದ್ದಾನೆ.


ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ, “ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ.


ಪ್ರಿಯಮಕ್ಕಳೇ, ನೀವಂತೂ ದೇವರಿಗೆ ಸೇರಿದವರಾಗಿದ್ದೀರಿ. ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಉನ್ನತನಾಗಿರುವುದರಿಂದ ನೀವು ಆ ಸುಳ್ಳು ಪ್ರವಾದಿಗಳ ಆತ್ಮವನ್ನು ಜಯಿಸಿದ್ದೀರಿ.


ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.


ಆಕಾಶದ ಕೆಳಗಿರುವ ಸರ್ವ ಸೃಷ್ಟಿಗೂ ಸಾರಲ್ಪಟ್ಟಂತಹ ಮತ್ತು ನೀವು ಕೇಳಿದಂತಹ ಸುವಾರ್ತೆಯಿಂದ ಉಂಟಾದ ನಿರೀಕ್ಷೆಯಿಂದ ಕದಲಿಹೋಗದಂತೆ ನಂಬಿಕೆಯಲ್ಲಿ ದೃಢವಾಗಿರಿ ಮತ್ತು ನೆಲೆಗೊಂಡಿರಿ. ಇದೇ ಸುವಾರ್ತೆಗೆ ಪೌಲನೆಂಬ ನಾನು ಸೇವಕನಾಗಿದ್ದೇನೆ.


ನಾನು ಇವರಲ್ಲಿಯೂ ನೀನು ನನ್ನಲ್ಲಿಯೂ ಇರುವಂತೆ ಇವರೂ ಐಕ್ಯತೆಯಲ್ಲಿ ಪರಿಪೂರ್ಣರಾಗಿರಲಿ. ಹೀಗೆ ನೀನು ನನ್ನನ್ನು ಕಳುಹಿಸಿದ್ದೀ, ಎಂದೂ ಮತ್ತು ನೀನು ನನ್ನನ್ನು ಪ್ರೀತಿಸಿದಂತೆ, ಇವರನ್ನೂ ನೀನು ಪ್ರೀತಿಸುತ್ತೀ ಎಂದು ಲೋಕವು ತಿಳಿದುಕೊಳ್ಳುವುದು.


ಆ ಸಹಾಯಕನು ಯಾರೆಂದರೆ ಸತ್ಯದ ಆತ್ಮನೇ. ಲೋಕವು ಆತನನ್ನು ನೋಡದೆಯೂ, ತಿಳಿಯದೆಯೂ ಇರುವುದರಿಂದ ಆತನನ್ನು ಸ್ವೀಕರಿಸಲಾರದು. ನೀವು ಆತನನ್ನು ಬಲ್ಲಿರಿ, ಹೇಗೆಂದರೆ ಆತನು ನಿಮ್ಮೊಂದಿಗೆ ವಾಸಮಾಡುತ್ತಾನೆ ಮತ್ತು ನಿಮ್ಮೊಳಗೆ ಇರುವನು.


ಅವನು ಆಳವಾಗಿ ಅಗೆದು, ಬಂಡೆಯ ಮೇಲೆ ಅಸ್ತಿವಾರವನ್ನು ಹಾಕಿ ಮನೇ ಕಟ್ಟಿದವನಿಗೆ ಸಮಾನನು. ಹೊಳೆಬಂದು ಪ್ರವಾಹವು ಆ ಮನೆಗೆ ಅಪ್ಪಳಿಸಿದರೂ ಅದು ಚೆನ್ನಾಗಿ ಕಟ್ಟಿರುವುದರಿಂದ ಆ ಪ್ರವಾಹವು ಅದನ್ನು ಅಲ್ಲಾಡಿಸಲಾರದೆ ಹೋಯಿತು.


ಆದರೆ ಬಿಸಿಲೇರಿದಾಗ ಬೇರಿಲ್ಲದ ಕಾರಣ ಬಾಡಿ ಒಣಗಿಹೋದವು.


ಕ್ರಿಸ್ತ ಯೇಸುವಿನಲ್ಲಿರುವವರಿಗೆ ಸುನ್ನತಿಯಾದರೂ ಆಗದಿದ್ದರೂ ಪ್ರಯೋಜನವಿಲ್ಲ, ಆದರೆ ಅವರಲ್ಲಿ ಪ್ರೀತಿಯಿಂದ ಹೊರಹೊಮ್ಮುವ ನಂಬಿಕೆಯೇ ಪ್ರಯೋಜನವಾಗಿದೆ.


ಯಾರು ನನ್ನ ದೇಹವನ್ನು ತಿಂದು, ನನ್ನ ರಕ್ತವನ್ನು ಕುಡಿದಿದ್ದಾನೋ ಅವನು ನನ್ನಲ್ಲಿ ನೆಲೆಸಿರುತ್ತಾನೆ; ನಾನು ಅವನಲ್ಲಿ ನೆಲೆಸಿರುತ್ತೇನೆ.


ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥಗಳ ವಿಷಯವನ್ನು ಕುರಿತಾದರೋ. “ನಮ್ಮೆಲ್ಲರಿಗೆ ಜ್ಞಾನವುಂಟೆಂದು” ನಾವು ಬಲ್ಲೆವು. ತಿಳಿವಳಿಕೆಯು ಉಬ್ಬಿಸುತ್ತದೆ, ಆದರೆ ಪ್ರೀತಿಯು ಭಕ್ತಿಯನ್ನು ಬೆಳೆಸುತ್ತದೆ.


ನಾನು ಸಸಿಯನ್ನು ನೆಟ್ಟೆನು. ಅಪೊಲ್ಲೋಸನು ನೀರನ್ನು ಹೊಯ್ಯಿದನು. ಆದರೆ ಅದನ್ನು ಬೆಳೆಸಿದವನು ದೇವರೇ.


ನೀವು ಕ್ರಿಸ್ತ ನಂಬಿಕೆಯಲ್ಲಿ ಇದ್ದೀರೋ ಇಲ್ಲವೋ ಎಂದು ನಿಮ್ಮನ್ನು ನೀವೇ ಪರೀಕ್ಷಿಸಿಕೊಳ್ಳಿರಿ, ನಿಮ್ಮನ್ನು ನೀವೇ ಪರಿಶೋಧಿಸಿಕೊಳ್ಳಿರಿ. ಯೇಸು ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದು ನಿಮಗೆ ತಿಳಿಯುವುದಿಲ್ಲವೋ? ಆತನು ನಿಮ್ಮಲ್ಲಿಲ್ಲದಿದ್ದರೆ ನೀವು ಆಯೋಗ್ಯರೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು