Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 3:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆಯಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅತ್ಯಧಿಕವಾದದ್ದನ್ನು ಮಾಡಲು ಶಕ್ತನಾದ ದೇವರಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆತನಿಗೆ ಸಭೆಯಲ್ಲಿಯೂ ಕ್ರಿಸ್ತ ಯೇಸುವಿನಲ್ಲಿಯೂ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಸ್ತೋತ್ರವಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಸಭೆಯಲ್ಲಿ ಕ್ರಿಸ್ತ ಯೇಸುವಿನ ಮೂಲಕ ತಲತಲಾಂತರಕ್ಕೂ ಯುಗಯುಗಾಂತರಕ್ಕೂ ಮಹಿಮೆ ಉಂಟಾಗಲಿ. ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ದೆವಾಕ್ ದೆವಾಚ್ಯಾ ಲೊಕಾಂಚ್ಯಾ ಸಗ್ಳ್ಯಾ ತಾಂಡ್ಯಾಚ್ಯಾಕ್ನಾ ಅನಿ ಸಗ್ಳ್ಯಾ ಯೆಳಾರ್ ಕ್ರಿಸ್ತಾ ಜೆಜುಕ್ನಾ ಸದಾಸರ್ವತಾಕ್ ಮಹಿಮಾ ಹೊಂವ್ದಿತ್! ಆಮೆನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 3:21
27 ತಿಳಿವುಗಳ ಹೋಲಿಕೆ  

ನಮ್ಮ ರಕ್ಷಕನಾದ ಒಬ್ಬನೇ ದೇವರಿಗೆ, ನಮ್ಮ ಕರ್ತನಾದ ಯೇಸು ಕ್ರಿಸ್ತನ ಮೂಲಕ ಮಹಿಮೆ, ಮಹತ್ವ, ಅಧಿಪತ್ಯ ಮತ್ತು ಅಧಿಕಾರಗಳು ಎಲ್ಲಾ ಕಾಲಗಳಲ್ಲಿ ಮೊದಲು ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲ್ಲಿ. ಆಮೆನ್.


ಸಮಸ್ತವೂ ಆತನಿಂದ ಉತ್ಪತ್ತಿಯಾಗಿ, ಆತನಿಂದ ನಡೆಯುತ್ತಾ, ಇರುವುದೆಲ್ಲವೂ ಅತನಿಗೋಸ್ಕರವೇ. ಆತನಿಗೇ ಸದಾಕಾಲವೂ ಮಹಿಮೆಯುಂಟಾಗಲಿ ಸ್ತೋತ್ರ. ಅಮೆನ್.


ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ಕುರಿತಾದ ಕೃಪೆಯಲ್ಲಿಯೂ ಜ್ಞಾನದಲ್ಲಿಯೂ ನೀವು ಅಭಿವೃದ್ಧಿ ಹೊಂದಿರಿ. ಆತನಿಗೆ ಈಗಲೂ ಸದಾಕಾಲವೂ ಮಹಿಮೆಯುಂಟಾಗಲಿ. ಆಮೆನ್.


ಆತನಿಗೆ ಅಧಿಪತ್ಯವು ಯುಗಯುಗಾಂತರಗಳಲ್ಲಿಯೂ ಇರಲಿ. ಆಮೆನ್.


ಆಗ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು.


ಯೆಹೋವನೇ, ಎಲ್ಲಾ ಮಹಿಮೆ, ವೈಭವ, ಪರಾಕ್ರಮ, ಪ್ರಭಾವ, ಪ್ರತಾಪ, ಪ್ರತಿಭೆ ಎಲ್ಲವೂ ನಿನ್ನವೆ. ಭೂಮ್ಯಾಕಾಶಗಳಲ್ಲಿ ಇರುವದೆಲ್ಲಾ ನಿನ್ನದೇ. ಯೆಹೋವನೇ ರಾಜ್ಯವು ನಿನ್ನದು. ನೀನು ಮಹೋನ್ನತನಾಗಿ ಸರ್ವವನ್ನು ಆಳುವವನಾಗಿರುತ್ತೀ.


ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲಕ್ಕೂ ಸ್ತುತಿ ಇರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್. ಆಮೆನ್.


ನಮ್ಮ ತಂದೆಯಾದ ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯುಂಟಾಗಲಿ. ಆಮೆನ್‍.


ಜ್ಞಾನನಿಧಿಯಾದ ಒಬ್ಬನೇ ದೇವರಿಗೆ ಯೇಸು ಕ್ರಿಸ್ತನ ಮೂಲಕ ಯುಗಯುಗಾಂತರಗಳಲ್ಲಿಯೂ ಸ್ತೋತ್ರವಾಗಲಿ. ಆಮೆನ್.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ.


ತಂದೆಯಾದ ದೇವರ ಮಹಿಮೆಗಾಗಿ ಪ್ರತಿಯೊಂದು ನಾಲಿಗೆಯು ಯೇಸು ಕ್ರಿಸ್ತನನ್ನು ಕರ್ತನೆಂದು ಅರಿಕೆಮಾಡುವುದು.


ದೇವರಿಗೆ ಯುಗಯುಗಾಂತರಗಳಲ್ಲಿಯೂ ಮಹಿಮೆಯಾಗಲಿ. ಆಮೆನ್.


ಪ್ರತಿಯೊಂದು ದುಷ್ಕೃತ್ಯದಿಂದ ಕರ್ತನು ನನ್ನನ್ನು ಕಾಪಾಡಿ ತನ್ನೊಂದಿಗೆ ಪರಲೋಕ ರಾಜ್ಯಕ್ಕೆ ಸೇರಿಸುವನು. ಯುಗಯುಗಾಂತರಗಳಲ್ಲಿಯೂ ಆತನಿಗೆ ಸ್ತೋತ್ರ. ಆಮೆನ್.


ಯೇಸು ಕ್ರಿಸ್ತನ ಮೂಲಕವಾಗಿರುವ ನೀತಿಯೆಂಬ ಫಲದಿಂದ ತುಂಬಿದವರಾಗಿಯೂ ಇರಬೇಕೆಂದು ದೇವರಿಗೆ ಘನತೆಯನ್ನೂ ಸ್ತೋತ್ರವನ್ನೂ ಸಲ್ಲಿಸಬೇಕೆಂತಲೂ ಬೇಡಿಕೊಳ್ಳುತ್ತೇನೆ.


ತನ್ನ ಪ್ರಿಯನಲ್ಲಿಯೇ ನಮಗೆ ಉಚಿತವಾಗಿ ಅನುಗ್ರಹಿಸಿರುವ ತನ್ನ ಮಹಿಮೆಯುಳ್ಳ ಕೃಪೆಯ ಸ್ತುತಿಗಾಗಿ ಇದೆಲ್ಲಾವನ್ನು ಮಾಡಿದನು.


ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿ, ಸತ್ಯತೆಗಳ ನಿಮಿತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು.


ಮುಂದಿನ ಯುಗಗಳಲ್ಲಿ ನಮಗೆ ತೋರಿಸಬೇಕೆಂದು ಕ್ರಿಸ್ತಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ, ಪರಲೋಕದಲ್ಲಿ ಯೇಸುಕ್ರಿಸ್ತನೊಂದಿಗೆ ನಮ್ಮನ್ನು ಕೂರಿಸಿದ್ದಾನೆ.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ನೀವು ದೇವರಿಂದ ಕರೆಯಲ್ಪಟ್ಟವರಾದ ಕಾರಣ ಆ ಕರೆಗೆ ಯೋಗ್ಯರಾಗಿ ಜೀವಿಸಬೇಕೆಂದು, ಕರ್ತನ ಸೇವೆಯಲ್ಲಿ ಸೆರೆಯವನಾದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು