ಎಫೆಸದವರಿಗೆ 4:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ದೇಹವೆಲ್ಲಾ ಆತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಐಕ್ಯವಾಗಿದ್ದು, ಪ್ರತಿಯೊಂದು ಅಂಗವು ತನ್ನ ಕೆಲಸವನ್ನು ಮಾಡುವುದರಿಂದ ದೇಹವು ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಇಡೀ ದೇಹವು ಕ್ರಿಸ್ತಯೇಸುವನ್ನೇ ಆಧರಿಸಿದೆ. ಅವರಲ್ಲಿಯೇ ಎಲ್ಲ ನರನಾಡಿಗಳು, ಕೀಲುಗಂಟು಼ಗಳು ಒಂದಾಗಿ ಕೆಲಸಮಾಡುತ್ತವೆ. ಪ್ರತಿಯೊಂದು ಅಂಗವೂ ತನ್ನ ಕೆಲಸವನ್ನು ಸೂಕ್ತರೀತಿಯಲ್ಲಿ ನಿರ್ವಹಿಸುವುದರಿಂದ ಇಡೀ ದೇಹ ಬೆಳೆಯುತ್ತಾ, ಪ್ರೀತಿಯಲ್ಲಿ ಪ್ರವರ್ಧಿಸುತ್ತಾ ಕ್ಷೇಮಾಭಿವೃದ್ಧಿಯನ್ನು ಪಡೆಯುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆತನೇ ಶಿರಸ್ಸು; ದೇಹವೆಲ್ಲಾ ಆತನ ದೊರೆತನದಲ್ಲಿದ್ದು ತನ್ನಲ್ಲಿರುವ ಎಲ್ಲಾ ನರಗಳಿಂದ ಬಿಗಿಯಾಗಿ ಜೋಡಿಸಲ್ಪಟ್ಟು ಪ್ರತಿ ಅಂಗದಿಂದ ಅದರದರ ಶಕ್ತಿಯ ಪ್ರಕಾರ ಸಹಾಯ ಹೊಂದಿ ಪ್ರೀತಿಯಿಂದ ಐಕ್ಯವಾಗಿದ್ದು ಕ್ಷೇಮಾಭಿವೃದ್ಧಿಯನ್ನು ಹೊಂದುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಇಡೀ ದೇಹವು ಕ್ರಿಸ್ತನನ್ನು ಅವಲಂಬಿಸಿಕೊಂಡಿದೆ. ದೇಹದ ಒಂದೊಂದು ಅಂಗಗಳೂ ಒಂದಕ್ಕೊಂದು ಬಿಗಿದುಕೊಂಡಿವೆ. ಪ್ರತಿಯೊಂದು ಅಂಗವು ತನ್ನದೇ ಆದ ಕೆಲಸವನ್ನು ಮಾಡುವುದರಿಂದ ಇಡೀ ದೇಹವು ಬೆಳೆದು ಪ್ರೀತಿಯಲ್ಲಿ ಬಲವಾಗಿರಲು ಸಾಧ್ಯವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಹೀಗೆ ದೇಹವೆಲ್ಲಾ ಕ್ರಿಸ್ತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಣೆಹೊಂದಿ, ಪ್ರತಿ ಅಂಗವೂ ತನ್ನ ಕೆಲಸವನ್ನು ಸೂಕ್ತವಾಗಿ ಮಾಡುವಂತೆ ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿ ಹೊಂದುತ್ತದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್16 ತೆಚ್ಯಾ ಚಾಲ್ವುನ್ಕಿತ್ ದುಸ್ರಿ ದುಸ್ರಿ ಭಾಗಾ ಎಕ್ ಆಂಗ್ ಹೊವ್ನ್ ಮಿಳುನ್ ಹಾತ್ ಅನಿ ಅಂಗಾಚಿ ಸಗ್ಳಿ ಸಂದಾ ಎಕಾಮೆಕಾಕ್ ಎಕ್ ಹೊವ್ನ್ ಜೊಡಲಿ ಹಾತ್ ಅಸೆ ಹರಿ ಎಕ್ ಎಗ್ಳೊ ಭಾಗಾನ್ ಅಪ್ನಾಚೆ ಕಾಮ್ ಕರ್ಲ್ಯಾರ್, ಸಗ್ಳೆ, ಆಂಗುಚ್ ವಾಡ್ತಾ ಅನಿ ಪ್ರೆಮಾಚ್ಯಾ ವೈನಾ ಅಪ್ನಾಕುಚ್ ಗಟ್ಟ್ ಬಾಂಧುನ್ ಘೆತಾ. ಅಧ್ಯಾಯವನ್ನು ನೋಡಿ |