Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:23 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನೀವು ನಿಮ್ಮ ಹೃನ್ಮನಗಳನ್ನು ನವೀಕರಿಸಿ, ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಿಮ್ಮ ಹೃನ್ಮನಗಳು ನವೀಕೃತವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನೀವು ನಿಮ್ಮ ಆಂತರ್ಯದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಆದರೆ ಆಂತರ್ಯದಲ್ಲಿ ಹೊಸಬರಾಗಿ ನೂತನ ಸ್ವಭಾವವನ್ನು ಹೊಂದಿಕೊಳ್ಳತಕ್ಕ ರೀತಿಯನ್ನು ನೀವು ಕಲಿತುಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಹೀಗೆ ನೀವು ನಿಮ್ಮ ಮನೋಭಾವನೆಯನ್ನು ನವೀಕರಿಸಿಕೊಂಡು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಖರೆ ಭುತ್ತುರ್ಲ್ಯಾ ಆತ್ಮ್ಯಾನ್ ನ್ಹವೊ ಹೊವ್ನ್ ನ್ಹವೊ ಸ್ವಬಾವ್ ಘೆತಲಿ ರಿತ್ ತುಮಿ ಶಿಕುನ್ ಘೆಟ್ಲ್ಯಾಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:23
11 ತಿಳಿವುಗಳ ಹೋಲಿಕೆ  

ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.


ಶರೀರಭಾವದ ವಿಷಯಗಳ ಮೇಲೆ ಮನಸ್ಸಿಡುವುದು ಮರಣ; ಪವಿತ್ರಾತ್ಮನ ವಿಷಯಗಳ ಮೇಲೆ ಮನಸ್ಸಿಡುವುದು ನಿತ್ಯಜೀವವೂ ಮತ್ತು ಮನಶಾಂತಿಯೂ ಆಗಿದೆ.


ದೇವರೇ, ನನ್ನಲ್ಲಿ ಶುದ್ಧಹೃದಯವನ್ನು ನಿರ್ಮಿಸು; ನನಗೆ ಸ್ಥಿರಚಿತ್ತವನ್ನು ಅನುಗ್ರಹಿಸಿ ನನ್ನನ್ನು ನೂತನಪಡಿಸು.


ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.


ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು, ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು, ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು.


ನಾವು ಮಾಡಿದ ಪುಣ್ಯಕಾರ್ಯಗಳ ನಿಮಿತ್ತದಿಂದಲ್ಲ ಪುನರ್ಜನ್ಮವನ್ನು ಸೂಚಿಸುವ ದೀಕ್ಷಾಸ್ನಾನದ ಮೂಲಕವಾಗಿಯೂ, ಪವಿತ್ರಾತ್ಮನ ನವೀಕರಣದ ಮೂಲಕವಾಗಿಯೂ ಆತನು ತನ್ನ ಕರುಣೆಯಿಂದಲೇ ನಮ್ಮನ್ನು ರಕ್ಷಿಸಿದನು.


“ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಮತ್ತು ಸ್ವಭಾವವನ್ನೂ ನೂತನಪಡಿಸಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಬೇಕೇ?


“ಅವರು ನನ್ನ ನಿಯಮಗಳನ್ನು ಅನುಸರಿಸಿ, ನನ್ನ ವಿಧಿಗಳನ್ನು ಕೈಕೊಂಡು ನೆರವೇರಿಸಲಿ ಎಂದು ನಾನು ಅವರಿಗೆ ಒಂದೇ ಮನಸ್ಸನ್ನು ದಯಪಾಲಿಸಿ ನೂತನ ಸ್ವಭಾವವನ್ನು ಅವರಲ್ಲಿ ಹುಟ್ಟಿಸುವೆನು.


ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.


ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು