Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಕ್ಕನುಗುಣವಾಗಿ ನೀತಿಯುಳ್ಳದ್ದಾಗಿಯೂ, ಪರಿಶುದ್ಧತೆಯುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ನೂತನ ಸ್ವಭಾವವನ್ನು ಧರಿಸಿಕೊಳ್ಳಿರಿ. ಇದು ದೇವರ ಅನುರೂಪದಲ್ಲಿ ನಿರ್ಮಿತವಾದ ಸ್ವಭಾವ; ದೇವರೊಂದಿಗೆ ಸತ್ಸಂಬಂಧವುಳ್ಳ ಹಾಗೂ ನೈಜವಾದ ಪಾವನ ಸ್ವಭಾವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯಾನುಗುಣವಾದ ನೀತಿಯುಳ್ಳದ್ದಾಗಿಯೂ ದೇವಭಯವುಳ್ಳದ್ದಾಗಿಯೂ ನಿರ್ಮಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಆ ಸ್ವಭಾವವು ದೇವರ ಹೋಲಿಕೆಯ ಮೇರೆಗೆ ಸತ್ಯವಾದ ನೀತಿಯುಳ್ಳದಾಗಿಯೂ ಪರಿಶುದ್ಧವಾಗಿಯೂ ನಿರ್ಮಿಸಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಸತ್ಯವಾದ ನೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ದೇವರ ಹೋಲಿಕೆಯ ಪ್ರಕಾರವಾಗಿರಲು ಸೃಷ್ಟಿಸಲಾದ ಹೊಸ ಸ್ವಭಾವವನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಅನಿ ತುಮ್ಕಾಚ್ ತುಮಿ ನ್ಹವ್ಯಾ ಸ್ವಭಾವಾನ್ ನೆಸುನ್ ಘೆವಾ, ತೊ ಸ್ವಬಾವ್ ದೆವಾಚ್ಯಾ ರುಪಾಕ್ ಖರಿ ನಿತ್ ಹೊವ್ನ್ ಪವಿತ್ರ್ ಹೊವ್ನ್ ತಯಾರ್ ಕರಲೆ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:24
30 ತಿಳಿವುಗಳ ಹೋಲಿಕೆ  

ಆದ್ದರಿಂದ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನ ಸೃಷ್ಟಿಯಾಗಿದ್ದಾನೆ. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು.


ನಾವಾದರೋ ದೇವರ ಕಲಾಕೃತಿಯಾಗಿದ್ದೇವೆ, ದೇವರು ಮೊದಲೇ ನಮಗಾಗಿ ಸಂಕಲ್ಪಿಸಿದ್ದ ಸತ್ಕಾರ್ಯಗಳನ್ನು ಮಾಡುವವರಾಗಿ ಬದುಕಬೇಕೆಂದು ಯೇಸು ಕ್ರಿಸ್ತನಲ್ಲಿ ಸೃಷ್ಟಿಸಲ್ಪಟ್ಟಿದ್ದೇವೆ.


ದೇಹದ ಆಸೆಗಳನ್ನು ಪೂರೈಸುವುದಕ್ಕಾಗಿ ಚಿಂತಿಸದೇ ಕರ್ತನಾದ ಯೇಸು ಕ್ರಿಸ್ತನನ್ನು ಧರಿಸಿಕೊಳ್ಳಿರಿ.


ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.


ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದ್ದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ನೂತನ ಜೀವದಲ್ಲಿ ನಡೆದುಕೊಳ್ಳಬೇಕು.


ನಾವೆಲ್ಲರೂ ಮುಸುಕು ತೆಗೆದಿರುವ ಮುಖದಿಂದ ಕರ್ತನ ಪ್ರಭಾವವನ್ನು ದರ್ಪಣದಲ್ಲಿ ಕಾಣಿಸುತ್ತದೋ ಎಂಬಂತೆ ದೃಷ್ಟಿಸುವವರಾಗಿದ್ದು ನಾವೆಲ್ಲರೂ ಕರ್ತನ ದಾನವಾಗಿರುವ ಆತ್ಮದ ಮಹಿಮೆಯಿಂದ ಅಧಿಕ ಮಹಿಮೆಗೆ ಹೋಗುತ್ತಾ, ಆ ಮಹಿಮೆಯ ಸಾರೂಪ್ಯವುಳ್ಳವರೇ ಆಗುತ್ತೇವೆ. ಇದು ಆತ್ಮನಾಗಿರುವ ಕರ್ತನ ಕಾರ್ಯವೇ ಸರಿ.


ಆದ್ದರಿಂದ ನಾವು ಧೈರ್ಯಗೆಡುವುದಿಲ್ಲ. ನಮ್ಮ ದೇಹವು ನಾಶವಾಗುತ್ತಾ ಇದ್ದರೂ ನಮ್ಮ ಅಂತರಂಗವು ದಿನೇ ದಿನೇ ಹೊಸದಾಗುತ್ತಾ ಬರುತ್ತದೆ.


ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ಹೊಸದಾಗಿ ಹುಟ್ಟಿದ ಶಿಶುಗಳಂತೆ ನೀವು ದೇವರ ವಾಕ್ಯವೆಂಬ ಶುದ್ಧವಾದ ಆತ್ಮೀಕ ಹಾಲನ್ನು ಬಯಸಿರಿ. ಆದರಿಂದ ರಕ್ಷಣೆಯಲ್ಲಿ ಬೆಳೆಯುವಿರಿ.


ದೇವರು ಯಾರನ್ನು ತಮ್ಮವರೆಂದು ಮೊದಲೇ ಆರಿಸಿಕೊಂಡನೋ ಅವರನ್ನು ತನ್ನ ಮಗನ ಅನುರೂಪಿಗಳಾಗುವಂತೆ ಆಗಲೇ ನೇಮಿಸಿದನು.


ನೀನು ಸತ್ಯದಿಂದ ಇವರನ್ನು ಪ್ರತಿಷ್ಠೆಪಡಿಸು, ನಿನ್ನ ವಾಕ್ಯವೇ ಸತ್ಯ.


ಸುನ್ನತಿ ಮಾಡಿಸಿಕೊಳ್ಳುವುದೋ ಅಥವಾ ಮಾಡಿಸಿಕೊಳ್ಳದಿರುವುದೋ ಏನು ಅಲ್ಲ, ಆದರೆ ಹೊಸ ಸೃಷ್ಟಿಯಾಗುವುದೇ ಪ್ರಮುಖವಾದುದು.


ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ.


ನಶಿಸುವಂಥ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವುದೂ, ಮರಣಕ್ಕೆ ಅಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವುದೂ ಅಗತ್ಯವಾಗಿದೆ.


ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು. ನನ್ನ ನ್ಯಾಯವೇ ನನಗೆ ನಿಲುವಂಗಿಯೂ, ಕಿರೀಟವೂ ಆಗಿತ್ತು.


ಆತನು ಸಮಾಧಾನವನ್ನುಂಟು ಮಾಡುವವನಾಗಿ, ಉಭಯರನ್ನೂ ತನ್ನಲ್ಲಿ ಒಂದುಗೂಡಿಸಿ ನೂತನ ಮಾನವನನ್ನಾಗಿ ನಿರ್ಮಿಸಿದ್ದಾನೆ.


ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.


ಎಲ್ಲರೊಂದಿಗೆ ಸಮಾಧಾನದಿಂದ ಜೀವಿಸಲು ಮತ್ತು ಪರಿಶುದ್ಧರಾಗಿರಲು ಪ್ರಯತ್ನಮಾಡಿರಿ. ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವುದಿಲ್ಲ.


ಆದರೆ ಮಗನ ವಿಷಯದಲ್ಲಿಯಾದರೋ, “ದೇವರೇ ನಿನ್ನ ಸಿಂಹಾಸನವು ಯುಗಯುಗಾಂತರಗಳಲ್ಲಿಯೂ ಇರುವುದು. ನೀತಿದಂಡವೇ ನಿನ್ನ ರಾಜದಂಡವಾಗಿದೆ.


ಆದಾಮನ ವಂಶದವರ ದಾಖಲೆ: ದೇವರು ಸೃಷ್ಟಿಕಾಲದಲ್ಲಿ ಮನುಷ್ಯನನ್ನು ತನ್ನ ಹೋಲಿಕೆಗನುಸಾರವಾಗಿ ಸೃಷ್ಟಿ ಮಾಡಿದನು.


ಈಗಲಾದರೋ ನಮ್ಮನ್ನು ಬಂಧಿಸಿಟ್ಟಿದ್ದ ಧರ್ಮಶಾಸ್ತ್ರದ ಪಾಲಿಗೆ ನಾವು ಸತ್ತವರಾದ ಕಾರಣ ಆ ಧರ್ಮಶಾಸ್ತ್ರದಿಂದ ಬಿಡುಗಡೆಹೊಂದಿದ್ದೇವೆ. ಹೀಗಿರಲಾಗಿ ಬರಹರೂಪದ ಹಿಂದಿನ ಶಾಸ್ತ್ರದ ರೀತಿಯಲ್ಲಿ ನಾವು ದೇವರಿಗೆ ಸೇವೆ ಸಲ್ಲಿಸದೆ, ಪವಿತ್ರಾತ್ಮ ಪ್ರೇರಿತವಾದ ಹೊಸ ರೀತಿಯಲ್ಲಿ ಆತನ ಸೇವೆ ಮಾಡುವವರಾಗಿದ್ದೇವೆ.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.


ನೀವು ಲೋಕದಲ್ಲಿ ದುರಾಶೆಯಿಂದುಂಟಾಗುವ ಕೆಟ್ಟತನದಿಂದ ದೂರವಾಗಿ ದೈವಸ್ವಭಾವದಲ್ಲಿ ಪಾಲನ್ನು ಹೊಂದುವವರಾಗಬೇಕೆಂಬ ಉದ್ದೇಶದಿಂದ ದೇವರು ತನ್ನ ಅತ್ಯಂತ ಮಹತ್ವವುಳ್ಳ ಮತ್ತು ಅಮೂಲ್ಯವಾದ ವಾಗ್ದಾನಗಳನ್ನು ನಮಗೆ ದಯಪಾಲಿಸಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು