Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಕಳವು ಮಾಡುವವನು ಇನ್ನು ಮುಂದೆ ಕಳವು ಮಾಡದೇ ಸ್ವಂತ ಕೈಯಿಂದ ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವರಿಗೆ ಕೊಡುವುದಕ್ಕೆ ಅವನಿಂದಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಕಳ್ಳತನ ಮಾಡುವವನು ಕಳ್ಳತನವನ್ನು ಬಿಟ್ಟುಬಿಡಲಿ; ಶ್ರಮಪಟ್ಟು ದುಡಿದು ಸಂಪಾದಿಸಲಿ. ಆಗ ತನ್ನ ಪ್ರಾಮಾಣಿಕ ದುಡಿಮೆಯಿಂದ ಕಷ್ಟದಲ್ಲಿರುವವರಿಗೆ ನೆರವು ನೀಡಲು ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಕಳವು ಮಾಡುವವನು ಇನ್ನು ಮೇಲೆ ಕಳವುಮಾಡದೆ ಕೈಯಿಂದ ಯಾವದೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕಷ್ಟದಲ್ಲಿರುವವರಿಗೆ ಕೊಡುವದಕ್ಕೆ ಅವನಿಂದಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಕಳ್ಳನು ಕದಿಯುವುದನ್ನು ನಿಲ್ಲಿಸಿ ತಾನೇ ದುಡಿದು ಸಂಪಾದಿಸಲಿ; ಅವನು ತನ್ನ ಕೈಗಳನ್ನು ಒಳ್ಳೆಯದನ್ನು ಮಾಡುವುದಕ್ಕಾಗಿ ಉಪಯೋಗಿಸಲಿ. ಆಗ ಬಡವರಿಗೂ ಸಹಾಯ ಮಾಡಲು ಅವನಿಗೆ ಸಾಧ್ಯವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ಚೊರ್ ಚೊರಿಕರ್ತಲೆ ಸೊಡುನ್ ಘೊಳುನ್ ಜಮ್ವುನ್ದಿತ್; ತೊ ಅಪ್ಲಿ ಹಾತಾ ಬರ್‍ಯಾ ಕಾಮಾಕ್ನಿ ವಾಪ್ರುನ್ ಘೆಂವ್ದಿತ್, ತನ್ನಾ ಗರಿಬಾಕ್ನಿ ಮಜ್ಜತ್ ಕರುಕ್ ತೆಜ್ಯಾನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:28
33 ತಿಳಿವುಗಳ ಹೋಲಿಕೆ  

ವಾಸ್ತವವಾದ ಜೀವವನ್ನು ಹೊಂದುವುದಕ್ಕೋಸ್ಕರ ಅವರು ಒಳ್ಳೆಯದನ್ನು ಮಾಡುವವರೂ, ಸತ್ಕಾರ್ಯಗಳನ್ನು ಮಾಡುವುದರಲ್ಲಿ ಐಶ್ವರ್ಯವಂತರೂ, ಉದಾರಶೀಲರೂ, ಪರೋಪಕಾರಮಾಡುವವರೂ ಆಗಿದ್ದು, ಮುಂದಿನ ಕಾಲಕ್ಕೆ ಒಳ್ಳೆ ಅಸ್ತಿವಾರವಾಗುವಂಥವುಗಳನ್ನು ತಮಗೆ ಕೂಡಿಸಿಟ್ಟುಕೊಳ್ಳಬೇಕೆಂದು ಅವರಿಗೆ ಆಜ್ಞಾಪಿಸು.


ಆದ್ದರಿಂದ ಅವಕಾಶ ಸಿಕ್ಕಿದಾಗಲೆಲ್ಲಾ ಎಲ್ಲರಿಗೂ ಒಳ್ಳೆಯದನ್ನು ಮಾಡೋಣ, ವಿಶೇಷವಾಗಿ ಒಂದೇ ಮನೆಯವರಂತಿರುವ ಕ್ರೈಸ್ತ ವಿಶ್ವಾಸಿಗಳಿಗೆ ಮಾಡೋಣ.


ಆಗ ದೂತನು ನನಗೆ, “ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪವು ಇದೇ. ಕಳ್ಳತನ ಮಾಡುವ ಪ್ರತಿಯೊಬ್ಬರೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವರು. ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳು ಸಾಕ್ಷಿಯೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವನು.


ಅವನು ಬಡವರ ಮೇಲಿನ ಕನಿಕರದಿಂದ ಹೀಗೆ ಹೇಳಲಿಲ್ಲ. ಆದರೆ ಅವನು ಕಳ್ಳನಾಗಿದ್ದು ಹಣದ ಚೀಲವನ್ನು ತನ್ನ ಬಳಿಯಲ್ಲಿ ಇಟ್ಟುಕೊಂಡಿರಲಾಗಿ ಅದರಲ್ಲಿ ಹಾಕಿದ್ದನ್ನು ತನ್ನ ಸ್ವಂತ ಉಪಯೋಗಕ್ಕಾಗಿ ತೆಗೆದುಕೊಳ್ಳುತ್ತಿದ್ದನು, ಆದುದರಿಂದಲೇ ಹೀಗೆ ಹೇಳಿದನು.


ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ನಡೆಯುತ್ತಿವೆ, ದೇಶವೆಲ್ಲಾ ರಕ್ತಮಯವಾಗಿದೆ.


ನೀವು ಕಳ್ಳತನ, ಕೊಲೆ ಮತ್ತು ವ್ಯಭಿಚಾರಗಳನ್ನು ಮಾಡಿ ಸುಳ್ಳುಸಾಕ್ಷಿ ಹೇಳಿ, ಬಾಳನಿಗೆ ಹೋಮವನ್ನರ್ಪಿಸಿ, ಕಂಡುಕೇಳದ ಅನ್ಯದೇವತೆಗಳನ್ನು ಹಿಂಬಾಲಿಸಿದ ಮೇಲೆ,


“ಮತ್ತೊಬ್ಬನ ಮನೆಯನ್ನು ನೋಡಿ ಆಶೆಪಡಬಾರದು. ಮತ್ತೊಬ್ಬನ ಹೆಂಡತಿ, ಗಂಡಾಳು, ಹೆಣ್ಣಾಳು, ಎತ್ತು, ಕತ್ತೆ ಮುಂತಾದ ಯಾವುದನ್ನೂ ಬಯಸಬಾರದು.”


ಒಬ್ಬನು ಕೊಡುವಂತ ಮನಸ್ಸುಳ್ಳವನಾಗಿರುವಲ್ಲಿ ಅವನು ತನ್ನ ಯೋಗ್ಯತೆಗೆ ಅನುಸಾರವಾಗಿ ಕೊಟ್ಟರೆ ಅದು ಸಮರ್ಪಕವಾಗಿರುವುದು; ಅವನಿಗೆ ದೇವರಿಂದ ಮೆಚ್ಚಿಕೆ ದೊರೆಯುವುದು.


ಆ ಸಭೆಗಳವರಿಗೆ ಬಹಳ ಸಂಕಷ್ಟಗಳು ಬಂದರೂ ತಮ್ಮ ವಿಪರೀತವಾದ ಬಡತನದಲ್ಲಿದ್ದರೂ ಬಹು ಆನಂದದಿಂದ ತುಂಬಿದವರಾಗಿ ಅತ್ಯಂತ ಔದಾರ್ಯವುಳ್ಳವರಾದರು.


ದೇವಜನರಿಗೆ ಕೊರತೆ ಬಂದಾಗ ಸಹಾಯ ಮಾಡಿರಿ. ಅತಿಥಿಸತ್ಕಾರವನ್ನು ಆಚರಿಸಿರಿ.


ಅವರಲ್ಲಿ ಕೆಲವರು, ಯೂದನ ವಶದಲ್ಲಿ ಹಣದ ಚೀಲವಿದ್ದುದರಿಂದ ಯೇಸು ಅವನಿಗೆ “ಹಬ್ಬಕ್ಕೆ ನಮಗೆ ಅಗತ್ಯವಾದವುಗಳನ್ನು ಕೊಂಡುಕೋ ಎಂದೋ, ಅಥವಾ ಬಡವರಿಗೆ ಏನಾದರೂ ಕೊಡು ಎಂದೋ, ಯೇಸು ಅವನಿಗೆ ಹೇಳುತ್ತಾನೆ” ಎಂದು ಅಂದುಕೊಂಡರು.


ಹಾಗಾದರೆ ಮಾನಸಾಂತರಕ್ಕೆ ಯೋಗ್ಯವಾದ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಲ್ಲವೇ’ ಎಂದು ನಿಮ್ಮೊಳಗೆ ಅಂದುಕೊಳ್ಳಬೇಡಿರಿ. ದೇವರು ಅಬ್ರಹಾಮನಿಗೆ ಈ ಕಲ್ಲುಗಳಿಂದಲೂ ಮಕ್ಕಳನ್ನು ಹುಟ್ಟಿಸಬಲ್ಲನೆಂದು ನಿಮಗೆ ಹೇಳುತ್ತೇನೆ.


ಹಾಗಾಗದೆ ಹೊಟ್ಟೆತುಂಬಿದವನಾದರೆ, “ಯೆಹೋವನು ಯಾರೋ?” ಎಂದು ನಿನ್ನನ್ನು ತಿರಸ್ಕರಿಸೇನು, ಬಡವನಾದರೆ ಕಳ್ಳತನಮಾಡಿ ನನ್ನ ದೇವರಾದ ನಿನ್ನ ಹೆಸರನ್ನು ಅಯೋಗ್ಯವಾಗಿ ಎತ್ತೆನು.


ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.


ಶ್ರಮೆಯಿಂದ ಸಮೃದ್ಧಿ, ಹರಟೆಯಿಂದ ಕೊರತೆ.


ಸುಮ್ಮನೆ ಸಿಕ್ಕಿದ ಸಂಪತ್ತು ಕ್ಷಯಿಸುವುದು, ದುಡಿದು ಕೂಡಿಸಿಕೊಂಡವನಿಗೆ ಅಭಿವೃದ್ಧಿಯಾಗುವುದು.


ನಾನು ಕಾಣದಿರುವುದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮೇಲೆ ಮಾಡುವುದಿಲ್ಲ’ ಎಂದು ಹೇಳುವುದಕ್ಕಾದೀತೇ?


ಯಾರಾದರೂ ಒಬ್ಬ ಮನುಷ್ಯನನ್ನು ಅಪಹರಿಸಿಕೊಂಡು ಹೋಗಿ ಮಾರಿದರೆ ಅಥವಾ ಅವನು ಬಂಧಿಸಲ್ಪಟ್ಟಾಗ, ಅಪಹರಿಸಲ್ಪಟ್ಟವನು ಅವನೊಂದಿಗಿದ್ದರೆ ಅವನಿಗೆ ಮರಣಶಿಕ್ಷೆಯಾಗಬೇಕು.


ಧರ್ಮಿಯು ಹಿಂತೆಗೆಯದೆ ಕೊಡುವನು, ಲೋಭಿಯು ದಿನವೆಲ್ಲಾ ಆಶಿಸುತ್ತಲೇ ಇರುವನು.


ಬಡವರಿಗಾಗಿ ಕೈ ಬಿಚ್ಚಿ, ದಿಕ್ಕಿಲ್ಲದವರಿಗೆ ಕೈ ನೀಡುವಳು.


ಸ್ವಂತ ಕೈಗಳಿಂದ ಕೆಲಸಮಾಡಿ ದುಡಿಯುವವರೂ ಆಗಿದ್ದೇವೆ. ಶಪಿಸುವವರನ್ನು ಆಶೀರ್ವದಿಸುತ್ತೇವೆ. ಜನರು ಹಿಂಸಿಸುವಾಗ ಸಹಿಸಿಕೊಳ್ಳುತ್ತೇವೆ.


ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.


ನಮ್ಮ ಜನರು ಸತ್ಕ್ರಿಯೆಹೀನರಾಗದಂತೆ ಬೋಧಿಸು. ತಮ್ಮ ಸಹಮಾನವರ ಕೊರತೆಗಳನ್ನು ಗುರುತಿಸಿ ನೆರವು ನೀಡಲಿ. ಪರೋಪಕಾರವನ್ನು ಕಲಿತುಕೊಂಡು ಸಾರ್ಥಕ ಜೀವನ ನಡೆಸಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು