Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 4:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆದರೆ ಕ್ರಿಸ್ತನ ವರದ ಅಳತೆಯ ಪ್ರಕಾರವೇ ಪ್ರತಿಯೊಬ್ಬರಿಗೆ ಕೃಪಾವರವು ಕೊಡಲ್ಪಟ್ಟಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಆದರೂ ನಮ್ಮಲ್ಲಿ ಪ್ರತಿಯೊಬ್ಬನೂ ಕ್ರಿಸ್ತಯೇಸು ಅನುಗ್ರಹಿಸುವ ಪ್ರಕಾರವೇ ವರಗಳನ್ನು ಪಡೆದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆದರೆ ಕ್ರಿಸ್ತನು ನಮ್ಮಲ್ಲಿ ಒಬ್ಬೊಬ್ಬನಿಗೆ ಅನುಗ್ರಹಿಸಿದ ಪ್ರಕಾರವೇ ಅವನವನಿಗೆ ಕೃಪಾವರವು ದೊರಕಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಕ್ರಿಸ್ತನು ನಮ್ಮಲ್ಲಿ ಪ್ರತಿಯೊಬ್ಬರಿಗೂ ವಿಶೇಷವಾದ ವರವನ್ನು ಕೊಟ್ಟಿದ್ದಾನೆ. ಪ್ರತಿಯೊಬ್ಬನು ಕ್ರಿಸ್ತನ ಇಷ್ಟಾನುಸಾರವಾಗಿ ವರವನ್ನು ಪಡೆದುಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ನಮ್ಮಲ್ಲಿ ಪ್ರತಿಯೊಬ್ಬನಿಗೂ ಕ್ರಿಸ್ತ ಯೇಸುವು ನೀಡಿದ ಅಳತೆಗೆ ಅನುಸಾರವಾಗಿ ವರವನ್ನು ಕೊಡಲಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಖರೆ ಅಮ್ಕಾ ಹರ್ ಎಕ್ಲ್ಯಾಕ್ನಿ ಕ್ರಿಸ್ತಾನ್ ನೆಮಲ್ಯಾ ಸಾರ್ಕೆ ಎಕ್ ವಿಶೆಸ್ ದೆನೆ ದಿಲ್ಲೆ ಹಾಯ್‍.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 4:7
13 ತಿಳಿವುಗಳ ಹೋಲಿಕೆ  

ದೇವರು ನನಗೆ ಕೃಪೆಮಾಡಿದ ಸೇವೆಯನ್ನು ಮಾಡುತ್ತಾ ನಿಮ್ಮಲ್ಲಿ ಒಬ್ಬೊಬ್ಬನಿಗೂ ಹೇಳುವುದೇನಂದರೆ ಯಾರೂ ತನ್ನ ಯೋಗ್ಯತೆಗೆ ಮೀರಿ ತನ್ನನ್ನು ಭಾವಿಸಿಕೊಳ್ಳದೆ ದೇವರು ಒಬ್ಬೊಬ್ಬನಿಗೆ ಎಂಥೆಂಥ ನಂಬಿಕೆಯ ಬಲವನ್ನು ಕೊಟ್ಟಿರುವನೋ, ಅದಕ್ಕೆ ತಕ್ಕ ಹಾಗೆ ನ್ಯಾಯವಾದ ಅಭಿಪ್ರಾಯದಿಂದ ತನ್ನನ್ನು ತಾನು ಭಾವಿಸಿಕೊಳ್ಳಬೇಕು.


ನೀವೆಲ್ಲರು ದೇವರ ವಿವಿಧ ವರಗಳ ವಿಷಯದಲ್ಲಿ ಒಳ್ಳೆಯ ನಿರ್ವಾಹಕರಾಗಿದ್ದು ಪ್ರತಿಯೊಬ್ಬನು ತಾನು ಹೊಂದಿದ ಕೃಪಾವರವನ್ನು ಎಲ್ಲರ ಸೇವೆಗಾಗಿ ಉಪಯೋಗಿಸಕೊಳ್ಳಲಿ.


ನಿಮಗೋಸ್ಕರ ನಿರ್ವಹಿಸುವುದಕ್ಕಾಗಿ ದೇವರು ನನಗೆ ಕೃಪೆಯಾಗಿ ಕೊಟ್ಟ ಕಾರ್ಯಭಾರವನ್ನು ನೀವು ಕೇಳಿದ್ದೀರಿ,


ಕ್ರಿಸ್ತನ ಅಗಮ್ಯವಾದ ಐಶ್ವರ್ಯದ ಸುವಾರ್ತೆಯನ್ನು ಅನ್ಯಜನರಿಗೆ ಸಾರುವ ಹಾಗೆಯೂ


ಅವನು ಒಬ್ಬನಿಗೆ ಐದು ತಲಾಂತು, ಇನ್ನೊಬ್ಬನಿಗೆ ಎರಡು, ಮತ್ತೊಬ್ಬನಿಗೆ ಒಂದು, ಹೀಗೆ ಅವನವನ ಸಾಮರ್ಥ್ಯದ ಪ್ರಕಾರ ತಲಾಂತನ್ನು ವಹಿಸಿಕೊಟ್ಟು ತನ್ನ ಪ್ರಯಾಣಕ್ಕೆ ಹೋದನು.


ಹೇಗೆಂದರೆ ದೇವರು ಯಾರನ್ನು ಕಳುಹಿಸಿದ್ದಾನೋ ಆತನಿಗೆ ಆತ್ಮ ವರವನ್ನು ಅಳತೆಮಾಡದೆ ಧಾರಾಳವಾಗಿ ಅನುಗ್ರಹಿಸುವುದರಿಂದ ಆತನು ದೇವರ ಮಾತುಗಳನ್ನೇ ಆಡುತ್ತಾನೆ.


ದೇವರೊಡನೆ ದುಡಿಯುತ್ತಿರುವ ನಾವು ನಿಮ್ಮಲ್ಲಿ ವಿಜ್ಞಾಪಿಸುವುದೆನೆಂದರೆ; ದೇವರಿಂದ ಪಡೆದ ಕೃಪೆಯನ್ನು ವ್ಯರ್ಥಮಾಡಬೇಡಿರಿ.


ಸೂಚಕ ಕಾರ್ಯಗಳಿಂದಲೂ, ಅದ್ಭುತಕಾರ್ಯಗಳಿಂದಲೂ, ನಾನಾ ವಿಧವಾದ ಮಹತ್ಕಾರ್ಯಗಳಿಂದಲೂ ಮತ್ತು ತನ್ನಿಚ್ಛೆಯಂತೆ ಪವಿತ್ರಾತ್ಮವರಗಳನ್ನು ನೀಡುವುದರ ಮೂಲಕವೂ ದೇವರು ತಾನೇ ಅದನ್ನು ಸಾಕ್ಷಿಕರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು