Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಕರ್ತನಿಗೆ ಮೆಚ್ಚಿಕೆಯಾದದ್ದು ಏನೆಂಬುದನ್ನು ಪರಿಶೋಧಿಸಿ ತಿಳಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಪ್ರಭುವಿಗೆ ಮೆಚ್ಚಿಕೆಯಾದುದು ಯಾವುದೆಂಬುದನ್ನು ಕಲಿತುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಕರ್ತನಿಗೆ ಮೆಚ್ಚಿಗೆಯಾದದ್ದು ಏನೆಂಬದನ್ನು ಪರಿಶೋಧಿಸಿ ತಿಳುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪ್ರಭುವಿಗೆ ಯಾವುದು ಮೆಚ್ಚಿಕೆಯಾದದ್ದೆಂಬುದನ್ನು ತಿಳಿದುಕೊಳ್ಳಲು ಪ್ರಯತ್ನಿಸಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಕರ್ತನಿಗೆ ಮೆಚ್ಚಿಗೆಯಾದದ್ದು ಏನೆಂಬುದನ್ನು ಪರಿಶೋಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಧನಿಯಾಕ್ ಮೆಚ್ಕಿಚೆ ಕಾಮ್ ಖಲೆ ಮನುನ್ ಕಳ್ವುನ್ ಘೆವ್ಕ್ ಕಟ್ಪಟ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:10
16 ತಿಳಿವುಗಳ ಹೋಲಿಕೆ  

ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.


ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.


ತಪ್ಪುಮಾಡಿ ಗುದ್ದು ತಿನ್ನುವುದರಲ್ಲಿ ನೀವು ಸಹಿಸಿಕೊಂಡರೆ ಅದರಿಂದೇನು ಕೀರ್ತಿ? ಆದರೆ ಒಳ್ಳೆಯದನ್ನು ಮಾಡಿ ಬಾಧೆಪಡುವುದರಲ್ಲಿ ನೀವು ಸಹಿಸಿಕೊಂಡರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮೀಕವಾದ ಮಂದಿರವಾಗುವುದಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ. ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಕ ಯಜ್ಞಗಳನ್ನು ಸಮರ್ಪಿಸುವುದಕ್ಕೆ ಪವಿತ್ರ ಯಾಜಕ ವರ್ಗದವರಾಗಿದ್ದೀರಿ.


ಆದರೆ ಎಲ್ಲವನ್ನೂ ಪರೀಕ್ಷಿಸಿ ಒಳ್ಳೆಯದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ.


ಹಾಗೆ ಮಾಡುವುದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಒಳ್ಳೆಯದು, ಮೆಚ್ಚಿಕೆಯಾಗಿಯೂ ಇದೆ.


ಹೀಗೆ ಉತ್ತಮ ಕಾರ್ಯಗಳು ಯಾವವೆಂಬುದನ್ನು ನೀವು ವಿವೇಚಿಸುವವರಾಗಬೇಕೆಂತಲೂ ಹಾಗೂ ಕ್ರಿಸ್ತನು ಬರುವ ದಿನದಲ್ಲಿ ನೀವು ಸರಳರಾಗಿಯೂ, ನಿರ್ಮಲರಾಗಿಯೂ,


ಈ ಪ್ರಕಾರವಾಗಿ ಕ್ರಿಸ್ತನ ಸೇವೆಯನ್ನು ಮಾಡುವವನು ದೇವರನ್ನು ಮೆಚ್ಚಿಸುವವನೂ, ಮನುಷ್ಯರಿಗೆ ಒಳ್ಳೆಯದನ್ನು ಮಾಡುವವನೂ ಆಗಿರಲಿ.


ಯಜ್ಞಕ್ಕಿಂತಲೂ ನೀತಿನ್ಯಾಯಗಳು ಯೆಹೋವನಿಗೆ ಇಷ್ಟ.


ನೀವು ಶೆಬದ ಧೂಪವನ್ನು ಮತ್ತು ದೂರ ದೇಶದ ಒಳ್ಳೆಯ ಬಜೆಯನ್ನು ನನಗೆ ಅರ್ಪಿಸುವುದರಿಂದ ಏನು ಪ್ರಯೋಜನ? ನಿಮ್ಮ ಹೋಮಗಳು ನನಗೆ ಮೆಚ್ಚಿಕೆಯಲ್ಲ, ನಿಮ್ಮ ಯಜ್ಞಗಳು ನನಗೆ ಇಷ್ಟವಿಲ್ಲ.


ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ದಾವೀದನು ಯುದ್ಧ ವಸ್ತ್ರದ ಮೇಲೆ ಕತ್ತಿಯನ್ನೂ ಬಿಗಿದುಕೊಂಡ ನಂತರ ನಡೆಯಲು ಸಾಧ್ಯವಾಗುತ್ತದೆಯೇ ಎಂದು ಪರೀಕ್ಷಿಸಿದ ಮೇಲೆ ಸೌಲನಿಗೆ, “ನನಗೆ ಅಭ್ಯಾಸವಿಲ್ಲದೆ ಇರುವುದರಿಂದ ಇವುಗಳನ್ನು ಧರಿಸಿಕೊಂಡು ನಡೆಯಲಾರೆ” ಎಂದು ಹೇಳಿ ಅವುಗಳನ್ನು ತೆಗೆದಿಟ್ಟು


ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ?


ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು