Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದುದರಿಂದ ನಿಮ್ಮ ನಡತೆಯ ವಿಷಯದಲ್ಲಿ ನೀವು ಅತ್ಯಂತ ಜಾಗರೂಕರಾಗಿರಿ; ಮೂಢರಂತಿರದೆ ಜಾಣರಾಗಿ ಜೀವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆದಕಾರಣ ನೀವು ನಡಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಜ್ಞಾನವಿಲ್ಲದರಾಗಿರದೆ ಜ್ಞಾನವಂತರಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದ್ದರಿಂದ ನೀವು ಹೇಗೆ ಜೀವಿಸುತ್ತಿದ್ದೀರಿ ಎಂಬುದರ ಬಗ್ಗೆ ಬಹು ಎಚ್ಚರಿಕೆಯಿಂದಿರಿ. ಅವಿವೇಕಿಗಳಂತೆ ಜೀವಿಸದೆ ವಿವೇಕಿಗಳಾಗಿ ಜೀವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಆದಕಾರಣ ನೀವು ಹೇಗೆ ಜೀವಿಸಬೇಕೆಂದು ಜಾಗರೂಕರಾಗಿರಿ. ಅಜ್ಞಾನಿಗಳಂತಿರದೆ, ಜಾಣರಾಗಿ ಜೀವಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ತಸೆ ಹೊವ್ನ್ ತುಮಿ ಕಸೆ ಜಿವನ್ ಕರುಲ್ಯಾಸಿ ಮನ್ತಲ್ಯಾ ವಿಸಯಾತ್ ಲೈ ಹುರ್ಶಾಕಿನ್ ರಾವಾ ಬುದ್ದ್ ನಸಲ್ಯಾನಿ ಜಿವನ್ ಕರಲ್ಲ್ಯಾ ಸಾರ್ಕೆ ಕರಿನಸ್ತಾನಾ, ಬುದ್ದ್ ಹೊತ್ಯಾಂಚ್ಯಾ ಸಾರ್ಕೆ ಜಿವನ್ ಕರಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:15
26 ತಿಳಿವುಗಳ ಹೋಲಿಕೆ  

ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.


ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.


ಹೇಗೂ ಕ್ರಿಸ್ತನ ಸುವಾರ್ತೆಗೆ ಯೋಗ್ಯರಾಗಿ ನಡೆದುಕೊಳ್ಳಿರಿ. ಆಗ ನಾನು ಬಂದು ನಿಮ್ಮನ್ನು ನೋಡಿದರೂ ಸರಿಯೇ, ದೂರದಲ್ಲಿದ್ದು ನಿಮ್ಮ ಸುದ್ದಿಯನ್ನು ಕೇಳಿದರೂ ಸರಿಯೇ, ನೀವು ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಾದರೂ ಹೆದರದೆ ಏಕಮನಸ್ಸಿನಿಂದ ದೃಢವಾಗಿ ನಿಂತು ಸುವಾರ್ತೆಯಲ್ಲಿಟ್ಟ ನಂಬಿಕೆಗೋಸ್ಕರ ಐಕಮತ್ಯದಿಂದ ಹೋರಾಡುವವರಾಗಿದ್ದೀರೆಂದು ನಾನು ತಿಳಿದುಕೊಳ್ಳುವೆನು.


ಸಹೋದರರೇ, ಬಾಲಕರಂತೆ ಆಲೋಚಿಸಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಂತಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಿ.


ಸನ್ಮಾರ್ಗವನ್ನು ಗ್ರಹಿಸಿಕೊಳ್ಳುವುದೇ ಜಾಣನ ಜ್ಞಾನ, ಮೂಢರ ಮೂರ್ಖತನ ಮೋಸಕರ.


ಐಶ್ವರ್ಯವಂತರಾಗಬೇಕೆಂದು ಮನಸ್ಸುಮಾಡುವವರು ದುಷ್ಟ್ರೇರಣೆಯೆಂಬ ಬಲೆಯಲ್ಲಿ ಸಿಕ್ಕಿಕೊಂಡು, ಬುದ್ಧಿಗೆ ವಿರುದ್ಧವಾಗಿಯೂ ಹಾನಿಕರವಾಗಿಯೂ ಇರುವ ಅನೇಕ ಆಸೆಗಳಲ್ಲಿ ಬೀಳುತ್ತಾರೆ. ಇಂಥ ಆಸೆಗಳು ಮನುಷ್ಯರನ್ನು ಸಂಹಾರ ವಿನಾಶಗಳಲ್ಲಿ ಸಿಕ್ಕಿಸುತ್ತವೆ.


ನೀವು ಸತ್ಯೋಪದೇಶಕ್ಕೆ ವಿಧೇಯರಾಗಿದ್ದು ನಿಮ್ಮ ಆತ್ಮಗಳನ್ನು ಶುದ್ಧಿಮಾಡಿಕೊಂಡದ್ದರಿಂದ ನಿಷ್ಕಪಟವಾದ ಸಹೋದರ ಪ್ರೀತಿಯುಳ್ಳವರಾಗಿರತಕ್ಕದ್ದು. ಹೀಗಿರಲಾಗಿ ಒಬ್ಬರನೊಬ್ಬರು ಶುದ್ಧಹೃದಯದಿಂದಲೂ, ಯಥಾರ್ಥವಾಗಿಯೂ ಪ್ರೀತಿಸಿರಿ.


“ನೋಡಿರಿ, ತೋಳಗಳ ನಡುವೆ ಕುರಿಗಳನ್ನು ಕಳುಹಿಸುವಂತೆ ನಾನು ನಿಮ್ಮನ್ನು ಕಳುಹಿಸಿಕೊಡುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಜಾಣರೂ ಪಾರಿವಾಳಗಳಂತೆ ನಿಷ್ಕಪಟಿಗಳೂ ಆಗಿರಿ.


ಯಾರೂ ಅಪಕಾರಕ್ಕೆ ಅಪಕಾರಮಾಡದಂತೆ ನೋಡಿಕೊಳ್ಳಿರಿ, ಯಾವಾಗಲೂ ನೀವು ಒಬ್ಬರಿಗೊಬ್ಬರು ಹಿತವನ್ನು ಮಾಡಿಕೊಂಡಿರುವುದಲ್ಲದೆ ಎಲ್ಲರಿಗೂ ಒಳ್ಳೆಯದನ್ನು ಮಾಡುವವರಾಗಿರಿ.


ಯೇಸು ಅವರಿಗೆ, “ಎಲಾ ಬುದ್ಧಿಯಿಲ್ಲದವರೇ, ಪ್ರವಾದಿಗಳು ಹೇಳಿದ್ದೆಲ್ಲವನ್ನು ನಂಬದ ಮಂದ ಹೃದಯವುಳ್ಳವರೇ,


ನೀವು ಇಷ್ಟು ಬುದ್ಧಿಯಿಲ್ಲದವರೋ? ದೇವರಾತ್ಮಾನುಸಾರವಾಗಿ ಪ್ರಾರಂಭಿಸಿ ಈಗ ಶಾರೀರಿಕ ಸಂಬಂಧವಾಗಿ ಕೊನೆಗೊಳಿಸುವಿರೋ?


ಆಗ ಯೋಬನು ಆಕೆಗೆ, “ಮೂರ್ಖಳು ಮಾತನಾಡಿದಂತೆ ನೀನು ಮಾತನಾಡುತ್ತಿ. ದೇವರ ಹಸ್ತದಿಂದ ನಾವು ಒಳ್ಳೆಯದನ್ನು ಹೊಂದುವಾಗ ಕೆಟ್ಟದ್ದನ್ನು ಹೊಂದಬಾರದೋ?” ಎಂದು ಹೇಳಿದನು. ಈ ಸಂದರ್ಭದಲ್ಲಿಯೂ ಪಾಪದ ಮಾತು ಅವನ ತುಟಿಗಳಿಂದ ಹೊರಡಲಿಲ್ಲ.


ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?


ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು


ಆಗ ನಾನು ಅವನಿಗೆ ಆರಾಧನೆ ಮಾಡಬೇಕೆಂದು ಅವನ ಪಾದಗಳ ಮೇಲೆ ಬೀಳಲು ಅವನು, “ಹೀಗೆ ಮಾಡಬೇಡ ನೋಡು, ನಾನು ನಿನಗೂ, ಯೇಸುವಿನ ಬಗ್ಗೆ ಸಾಕ್ಷಿಯನ್ನು ಹೇಳಿರುವ ನಿನ್ನ ಸಹೋದರರಿಗೂ ಸೇವೆಯನ್ನು ಮಾಡುವ ದಾಸನಾಗಿದ್ದೇನೆ, ದೇವರಿಗೆ ಆರಾಧನೆ ಮಾಡು, ಯೇಸುವಿನ ಸಾಕ್ಷಿಯು ಪ್ರವಾದನೆಯ ಆತ್ಮವೇ” ಎಂದು ಹೇಳಿದನು.


ಆಗ ಯೇಸು ಅವನಿಗೆ; “ನೋಡು, ಯಾರಿಗೂ ಹೇಳಬೇಡ; ಆದರೆ ಹೋಗಿ ಯಾಜಕನಿಗೆ ನಿನ್ನ ಮೈ ತೋರಿಸಿ ಮೋಶೆ ನೇಮಿಸಿದ ಕಾಣಿಕೆಯನ್ನು ಕೊಡು;” ಅದು ಅವರಿಗೆ ಸಾಕ್ಷಿಯಾಗಲಿ ಎಂದು ಹೇಳಿದನು.


ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.


ಜನಗಣತಿ ಮಾಡಿಸಿದ ನಂತರ ದಾವೀದನಿಗೆ ಮನಸ್ಸಾಕ್ಷಿಯು ಚುಚ್ಚತೊಡಗಿತು. ಆದುದರಿಂದ ಅವನು ಯೆಹೋವನನ್ನು, “ಯೆಹೋವನೇ, ನಾನು ಬುದ್ಧಿಹೀನಕಾರ್ಯವನ್ನು ಮಾಡಿ ಪಾಪಿಯಾದೆನು. ದಯವಿಟ್ಟು ನಿನ್ನ ಸೇವಕನ ಅಪರಾಧವನ್ನು ಕ್ಷಮಿಸು” ಎಂದು ಪ್ರಾರ್ಥಿಸಿದನು.


ನಾನು ನಿಮಗೆ ಹೇಳಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಕೊಳ್ಳಬೇಕು. ಅನ್ಯ ದೇವರುಗಳ ಹೆಸರುಗಳನ್ನು ಸ್ಮರಿಸಬಾರದು, ಅವುಗಳನ್ನು ಉಚ್ಚರಿಸಬಾರದು.


ಹೀಗಿರುವುದ್ದರಿಂದ ಈ ನಿಮ್ಮ ಪ್ರೀತಿಯ ಕುರಿತು ನಾವು ಕೇಳಿದ ದಿನದಿಂದ ನಿಮಗೋಸ್ಕರ ಪ್ರಾರ್ಥಿಸುವುದನ್ನು ನಿಲ್ಲಿಸದೆ, ನೀವು ಸಕಲ ಆತ್ಮೀಕ ಗ್ರಹಿಕೆಯಿಂದಲೂ ಜ್ಞಾನದಿಂದಲೂ ದೇವರ ಚಿತ್ತದ ತಿಳಿವಳಿಕೆಯ ಕುರಿತು ಸಂಪೂರ್ಣರಾಗಬೇಕೆಂತಲೂ,


ಎಲೈ ಬುದ್ಧಿಹೀನರಾದ ಗಲಾತ್ಯದವರೇ! ನಿಮ್ಮನ್ನು ಮರುಳುಗೊಳಿಸಿದವರು ಯಾರು? ಯೇಸು ಕ್ರಿಸ್ತನು ಶಿಲುಬೆಗೆ ಹಾಕಿಸಿಕೊಂಡವನಾಗಿ ನಿಮ್ಮ ಕಣ್ಣೆದುರಿನಲ್ಲಿಯೇ ವರ್ಣಿಸಲ್ಪಟ್ಟನಲ್ಲವೇ?


“ನಿರಪರಾಧಿಯನ್ನು ಮರಣಕ್ಕೆ ಒಪ್ಪಿಸಿಕೊಟ್ಟು ನಾನು ಪಾಪ ಮಾಡಿದ್ದೇನೆ” ಅಂದನು. ಅದಕ್ಕವರು, “ಅದು ನಮಗೇನು? ನೀನೇ ನೋಡಿಕೋ” ಅಂದರು.


ಅವರಲ್ಲಿ ಐದು ಮಂದಿ ಬುದ್ಧಿವಂತೆಯರು, ಐದು ಮಂದಿ ಬುದ್ಧಿಹೀನರು.


ನಾನು ವಿವೇಕಹೀನ ತಿಳಿವಳಿಕೆ ಇಲ್ಲದವನಂತೆ, ನಿನ್ನ ದೃಷ್ಟಿಯಲ್ಲಿ ಕೇವಲ ಪಶುವೇ ಆಗಿದ್ದೆನು.


ಬುದ್ಧಿಹೀನನು ಮೂರ್ಖತನದಲ್ಲಿ ಆನಂದಿಸುವನು, ಬುದ್ಧಿವಂತನು ತನ್ನ ಮಾರ್ಗವನ್ನು ಸರಳಮಾಡಿಕೊಳ್ಳುವನು.


ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು