Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕ್ರಿಸ್ತನು ನಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುವಾಸನೆಯಾದ ಕಾಣಿಕೆಯಾಗಿಯೂ, ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪ್ರೀತಿಯಿಂದ ಬಾಳಿರಿ. ಕ್ರಿಸ್ತನು ನಮ್ಮನ್ನು ಪ್ರೀತಿಸಿದಂತೆ ನೀವೂ ಇತರರನ್ನು ಪ್ರೀತಿಸಿರಿ. ಕ್ರಿಸ್ತನು ನಮಗೋಸ್ಕರವಾಗಿ ತನ್ನನ್ನೇ ಪರಿಮಳದ ಕಾಣಿಕೆಯಾಗಿಯೂ ಯಜ್ಞವಾಗಿಯೂ ದೇವರಿಗೆ ಸಮರ್ಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಕ್ರಿಸ್ತ ಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ದೇವರಿಗೆ ಸುಗಂಧ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಸಹ ಪ್ರೀತಿಯಿಂದ ಬಾಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಪ್ರೆಮಾನ್ ಭರಲೊ ಜಿವನ್ ಕರಾ, ಕ್ರಿಸ್ತಾನ್ ಅಪ್ನಾಕುಚ್ ಆಮ್ಚ್ಯಾಸಾಟಿ ಬರ್ಯಾ ವಾಸೆಚಿ ಕಾನಿಕ್ ಹೊವ್ನ್, ಅನಿ ಬಲಿ ಹೊವ್ನ್ ದೆವಾಕ್ ಒಪ್ಸುನ್ ಘೆಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:2
54 ತಿಳಿವುಗಳ ಹೋಲಿಕೆ  

ನಾನು ನಿಮಗೆ ಒಂದು ಹೊಸ ಆಜ್ಞೆಯನ್ನು ಕೊಡುತ್ತೇನೆ: ಏನೆಂದರೆ, ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕು. ನಾನು ನಿಮ್ಮನ್ನು ಪ್ರೀತಿಸಿದ ಹಾಗೆಯೇ ನೀವೂ ಸಹ ಒಬ್ಬರನ್ನೊಬ್ಬರು ಪ್ರೀತಿಸಬೇಕು, ಎಂಬುದೇ.


ನಾನು ಸಹ ಕ್ರಿಸ್ತನೊಂದಿಗೆ ಶಿಲುಬೆಗೆ ಹಾಕಿಸಿಕೊಂಡವನಾಗಿದ್ದೇನೆ, ಇನ್ನು ಜೀವಿಸುವವನು ನಾನಲ್ಲ, ಕ್ರಿಸ್ತನು ನನ್ನಲ್ಲಿ ಜೀವಿಸುತ್ತಾನೆ. ಈಗ ಶರೀರದಲ್ಲಿರುವ ನಾನು ಜೀವಿಸುವುದು ಹೇಗೆಂದರೆ ದೇವಕುಮಾರನ ಮೇಲಣ ನಂಬಿಕೆಯಿಂದಲೇ. ಆತನು ನನ್ನನ್ನು ಪ್ರೀತಿಸಿ ನನಗಾಗಿ ತನ್ನನ್ನು ಒಪ್ಪಿಸಿಕೊಟ್ಟನು.


ಇವೆಲ್ಲಕ್ಕಿಂತ ಮಿಗಿಲಾಗಿ ಸಂಪೂರ್ಣತೆಯ ಬಂಧವಾಗಿರುವ ಪ್ರೀತಿಯನ್ನು ಧರಿಸಿಕೊಳ್ಳಿರಿ.


ರಕ್ಷಣಾ ಮಾರ್ಗದಲ್ಲಿರುವವರಲ್ಲಿಯೂ ಮತ್ತು ನಾಶನದ ಮಾರ್ಗದಲ್ಲಿರುವವರಲ್ಲಿಯೂ ನಾವು ದೇವರಿಗೆ ಕ್ರಿಸ್ತನ ಪರಿಮಳವಾಗಿದ್ದೇವೆ.


ಆತನು ನಮ್ಮನ್ನು ಸಕಲ ಅಧರ್ಮಗಳಿಂದ ಬಿಡುಗಡೆಮಾಡುವುದಕ್ಕೂ ಸತ್ಕ್ರಿಯೆಗಳಲ್ಲಿ ಆಸಕ್ತರಾದ ಸ್ವಕೀಯಜನರನ್ನು ತನಗಾಗಿ ಬೇರ್ಪಡಿಸಿ ಶುದ್ಧೀಕರಣ ಮಾಡುವುದಕ್ಕಾಗಿಯೂ ನಮಗೋಸ್ಕರ ತನ್ನನ್ನು ಒಪ್ಪಿಸಿಕೊಟ್ಟನು.


ನೀವು ಮಾಡುವುದನ್ನೆಲ್ಲಾ ಪ್ರೀತಿಯಿಂದ ಮಾಡಿರಿ.


ಹಾಗೆಯೇ ಮನುಷ್ಯಕುಮಾರನು ಸೇವೆಮಾಡಿಸಿಕೊಳ್ಳುವುದಕ್ಕಾಗಿ ಬರಲಿಲ್ಲ, ಸೇವೆ ಮಾಡುವುದಕ್ಕೂ, ಅನೇಕರ ವಿಮೋಚನೆಗಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದನು” ಎಂದು ಹೇಳಿದನು.


ಮೊಟ್ಟಮೊದಲು ನಿಮ್ಮ ನಿಮ್ಮೊಳಗೆ ಪ್ರಾಮಾಣಿಕವಾದ ಪ್ರೀತಿಯಿರಲಿ. ಪ್ರೀತಿಯು ಬಹು ಪಾಪಗಳನ್ನು ಮುಚ್ಚುತ್ತದೆ.


ನಮ್ಮ ಕರ್ತನಾದ ಯೇಸು ಕ್ರಿಸ್ತನ ಕೃಪೆಯು ನಿಮಗೆ ಗೊತ್ತಾಗಿದೆಯಲ್ಲಾ; ಆತನು ಐಶ್ವರ್ಯವಂತನಾಗಿದ್ದರೂ ತನ್ನ ಬಡತನದ ಮುಖಾಂತರ ನೀವು ಐಶ್ವರ್ಯವಂತರಾಗಬೇಕೆಂದು ನಿಮಗೋಸ್ಕರ ಆತನು ಬಡವನಾದನು.


ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಅರ್ಪಿಸಿದ್ದರಿಂದ ದೇವರ ಪ್ರೀತಿ ಇಂಥದ್ದೆಂದು ನಮಗೆ ತಿಳಿದು ಬಂದಿದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.


ಅದರ ಸುವಾಸನೆಯು ಯೆಹೋವನಿಗೆ ಗಮಗಮಿಸಲು ಆತನು ಹೃದಯದೊಳಗೆ, “ಮನುಷ್ಯರ ಹೃದಯದ ಆಲೋಚನೆ ಚಿಕ್ಕಂದಿನಿಂದಲೇ ಕೆಟ್ಟದ್ದು, ಆದರೂ ನಾನು ಇನ್ನು ಮೇಲೆ ಅವರ ನಿಮಿತ್ತವಾಗಿ ಭೂಮಿಯನ್ನು ಶಪಿಸುವುದಿಲ್ಲ. ನಾನು ಎಲ್ಲಾ ಜೀವಿಗಳನ್ನೂ ಈಗ ನಾಶಮಾಡಿದಂತೆ ಇನ್ನು ಮೇಲೆ ನಾಶ ಮಾಡುವುದಿಲ್ಲ.


ಮತ್ತು ನಂಬಿಗಸ್ತ ಸಾಕ್ಷಿಯೂ, ಸತ್ತವರೊಳಗಿಂದ ಮೊದಲು ಎದ್ದುಬಂದಾತನೂ ಮತ್ತು ಭೂರಾಜರ ಅಧಿಪತಿಯೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವಾತನೂ ತನ್ನ ಪವಿತ್ರವಾದ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದಾತನೂ,


ಹಾಗೆ ಸಮರ್ಪಿಸಬೇಕಾಗಿದ್ದ ಪಕ್ಷದಲ್ಲಿ ಆತನು ಲೋಕಾದಿಯಿಂದ ಎಷ್ಟೋ ಸಾರಿ ಬಾಧೆಪಡಬೇಕಾಗಿತ್ತು. ಆದರೆ ಒಂದೇ ಸಾರಿ, ಯುಗಗಳ ಸಮಾಪ್ತಿಯವರೆಗೂ, ಆತನು ಪಾಪ ನಿವಾರಣೆ ಮಾಡುವ ಉದ್ದೇಶದಿಂದ ತನ್ನನ್ನು ತಾನೇ ಯಜ್ಞಮಾಡಿಕೊಳ್ಳುವವನಾಗಿ ಪ್ರತ್ಯಕ್ಷನಾದನು.


ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ, ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ, ನಮ್ಮನ್ನು ನಿರ್ಜೀವ ಕ್ರಿಯೆಗಳಿಂದ ಬಿಡಿಸಿ, ನಾವು ಜೀವವುಳ್ಳ ದೇವರನ್ನು ಆರಾಧಿಸುವಂತೆ ನಮ್ಮ ಮನಸ್ಸಾಕ್ಷಿಯನ್ನು ಶುದ್ಧೀಕರಿಸುತ್ತದಲ್ಲವೇ?


ಆತನು ಎಲ್ಲರ ವಿಮೋಚನಾರ್ಥವಾಗಿ ತನ್ನನ್ನು ಒಪ್ಪಿಸಿಕೊಟ್ಟನು. ಇದೇ ತಕ್ಕ ಸಮಯಗಳಲ್ಲಿ ಹೇಳಬೇಕಾದ ಸಾಕ್ಷಿಯಾಗಿದೆ.


ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ ಎಲ್ಲಾ ವಿಷಯಗಳಲ್ಲಿಯೂ ತಲೆಯಾಗಿರುವ ಕ್ರಿಸ್ತನಲ್ಲಿ ಬೆಳೆಯುವವರಾಗಿರೋಣ.


ದೇವರ ಆಜ್ಞೆ ಯಾವುದೆಂದರೆ ನಾವು ಆತನ ಮಗನಾದ ಯೇಸು ಕ್ರಿಸ್ತನನ್ನು ನಂಬಿ ಆತನು ನಮಗೆ ಕೊಟ್ಟಿರುವ ಆಜ್ಞೆಗಳ ಪ್ರಕಾರ ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬುದೇ.


ನಿನ್ನ ಯೌವನವನ್ನು ಅಸಡ್ಡೆಮಾಡುವುದಕ್ಕೆ ಯಾರಿಗೂ ಆಸ್ಪದಮಾಡಿಕೊಡದೆ, ನಂಬುವವರಿಗೆ ನಡೆ, ನುಡಿ, ಪ್ರೀತಿ, ನಂಬಿಕೆ, ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು.


ಸಹೋದರ ಸ್ನೇಹದ ವಿಷಯದಲ್ಲಿ ನಿಮಗೆ ಬರೆಯುವ ಅವಶ್ಯಕತೆಯಿಲ್ಲ, ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬ ಉಪದೇಶವನ್ನು ನೀವೇ ದೇವರಿಂದ ಹೊಂದಿದವರಾಗಿದ್ದೀರಿ.


ನೀವು ಪೂರ್ಣ ವಿನಯ, ಸಾತ್ವಿಕತ್ವಗಳಿಂದಲೂ ದೀರ್ಘಶಾಂತಿಯಿಂದಲೂ ಕೂಡಿದವರಾಗಿ, ಪ್ರೀತಿಯಿಂದ ಒಬ್ಬರನ್ನೊಬ್ಬರು ಸಹಿಸಿಕೊಳ್ಳಿರಿ.


ಕ್ರಿಸ್ತನು ನಿಮ್ಮ ನಂಬಿಕೆಯ ಮೂಲಕ ನಿಮ್ಮ ಹೃದಯಗಳಲ್ಲಿ ವಾಸಮಾಡುವಂತೆಯೂ, ಆತನು ತನ್ನ ಮಹಿಮಾತಿಶಯದ ಪ್ರಕಾರ ಅನುಗ್ರಹಿಸಲಿ.


ಆತನು ನಮ್ಮನ್ನು ಈಗಿನ ದುಷ್ಟ ಯುಗದಿಂದ ಬಿಡಿಸಬೇಕೆಂದು ನಮ್ಮ ತಂದೆಯಾದ ದೇವರ ಚಿತ್ತಕ್ಕನುಸಾರವಾಗಿ, ನಮ್ಮ ಪಾಪಗಳ ದೆಸೆಯಿಂದ ತನ್ನನ್ನು ಮರಣಕ್ಕೆ ಒಪ್ಪಿಸಿಕೊಟ್ಟನು.


ಅವನು ಆ ಪಕ್ಷಿಯನ್ನು ರೆಕ್ಕೆಗಳ ಮಧ್ಯದಲ್ಲಿ ಇಬ್ಭಾಗವಾಗಿ ಹರಿಯಬೇಕು, ಅವನು ಅದನ್ನು ವಿಭಾಗಿಸಬಾರದು. ಆದರೆ ರೆಕ್ಕೆಗಳನ್ನು ಪೂರಾ ಕಿತ್ತುಹಾಕಬಾರದು. ಅನಂತರ ಯಾಜಕನು ಅದನ್ನು ಯಜ್ಞವೇದಿಯ ಮೇಲಣ ಬೆಂಕಿಯಲ್ಲಿರುವ ಕಟ್ಟಿಗೆಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.


ಅದರ ಕರುಳುಗಳನ್ನು ಹಾಗು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಸುಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗಿದೆ.


ಅವರು ಹೊಸಹಾಡನ್ನು ಹಾಡುತ್ತಾ, “ನೀನು ಸುರುಳಿಯನ್ನು ಸ್ವೀಕರಿಸಲು ಅದರ ಮುದ್ರೆಯನ್ನು ಒಡೆಯಲು ನೀನು ಅರ್ಹನಾಗಿದ್ದಿ. ನೀನು ವಧಿಸಲ್ಪಟ್ಟು, ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ, ಭಾಷೆ, ಜನ, ಜನಾಂಗಗಳನ್ನು ದೇವರಿಗಾಗಿ ಕೊಂಡುಕೊಂಡಿರುವೆ.


ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ.


ಬುದ್ಧಿಗಿಂತಲೂ ಮಿಗಿಲಾಗಿರುವ ಕ್ರಿಸ್ತನ ಪ್ರೀತಿಯನ್ನು ತಿಳಿದುಕೊಂಡು, ದೇವರ ಸಂಪೂರ್ಣತೆಯ ಮಟ್ಟಿಗೂ ಪರಿಪೂರ್ಣರಾಗುವ ಹಾಗೆ ದೇವರು ನಿಮಗೆ ದಯಪಾಲಿಸಲಿ ಎಂದು ಆತನನ್ನು ಬೇಡಿಕೊಳ್ಳುತ್ತೇನೆ.


ಧರ್ಮಶಾಸ್ತ್ರವು ನಮ್ಮ ಶರೀರಾಧೀನಸ್ವಭಾವದ ನಿಮಿತ್ತ ದುರ್ಬಲವಾಗಿ ಯಾವ ಕೆಲಸವನ್ನು ಮಾಡಲಾರದೆ ಇತ್ತೋ, ಅದನ್ನು ದೇವರೇ ಮಾಡಿದನು. ಹೇಗೆಂದರೆ ಆತನು ಪಾಪನಿವಾರಣೆಗಾಗಿ ತನ್ನ ಮಗನನ್ನು ಪಾಪಾಧೀನವಾದ ಶರೀರ ರೂಪದಲ್ಲಿ ಕಳುಹಿಸಿಕೊಟ್ಟು ಶರೀರದಲ್ಲಿಯೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದನು.


“ನಿಮ್ಮ ಜಾತ್ರೆಗಳನ್ನು ಹಗೆಮಾಡುತ್ತೇನೆ, ತುಚ್ಛೀಕರಿಸುತ್ತೇನೆ, ನಿಮ್ಮ ಉತ್ಸವಗಳ ವಾಸನೆಯೇ ನನಗೆ ಬೇಡ.


ಅದರ ಕರುಳುಗಳನ್ನು ಮತ್ತು ಕಾಲುಗಳನ್ನು ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುತ್ತದೆ.


ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.


ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.


ದೇವರು ಯೇಸುವನ್ನು ನಮ್ಮ ಅಪರಾಧಗಳ ನಿಮಿತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವುದಕ್ಕಾಗಿಯೇ ಜೀವದಿಂದ ಎಬ್ಬಿಸಲ್ಪಟ್ಟನು.


ನಾನೇ ಪರಲೋಕದಿಂದ ಇಳಿದು ಬಂದ ಜೀವವುಳ್ಳ ರೊಟ್ಟಿ. ಈ ರೊಟ್ಟಿಯನ್ನು ಯಾವನಾದರೂ ತಿಂದರೆ ಅವನು ಸದಾ ಕಾಲವು ಬದುಕುವನು; ಮತ್ತು ನಾನು ಕೊಡುವ ರೊಟ್ಟಿ ನನ್ನ ದೇಹವೇ, ಅದನ್ನು ಲೋಕದ ಜೀವಕ್ಕಾಗಿ ಕೊಡುವೆನು” ಎಂದು ಹೇಳಿದನು.


ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಎಲ್ಲಾ ವಿಷಯಗಳಲ್ಲಿಯೂ ಪೂರ್ಣ ಜಯಶಾಲಿಗಳಾಗಿದ್ದೇವೆ.


ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.


ಅದನ್ನೆಲ್ಲಾ ಯಜ್ಞವೇದಿಯ ಮೇಲೆ ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು. ಇದು ಯೆಹೋವನಿಗೆ ಸುಗಂಧಹೋಮವಾಗಿದೆ.


ಆಮೇಲೆ ಅವುಗಳನ್ನು ಅವರ ಕೈಯಿಂದ ತೆಗೆದುಕೊಂಡು ಯಜ್ಞವೇದಿಯ ಮೇಲೆ ಯೆಹೋವನಿಗಾಗಿ ಸುಡಬೇಕು. ಅದು ಯೆಹೋವನಿಗೆ ಸುಗಂಧ ಹೋಮವಾಗಿದೆ.


ಕ್ರಿಸ್ತನ ಮುಖಾಂತರ ನಮ್ಮನ್ನು ವಿಜಯೋತ್ಸವದತ್ತ ನಡೆಸುವ ಹಾಗೂ ನಮ್ಮ ಮೂಲಕವಾಗಿ ತನ್ನ ಜ್ಞಾನವೆಂಬ ಸುವಾಸನೆಯನ್ನು ಎಲ್ಲಾ ಸ್ಥಳಗಳಲ್ಲಿ ಹರಡಿಸಿದ ದೇವರಿಗೆ ಸ್ತೋತ್ರವಾಗಲಿ.


ನಾವು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು, ಜಗತ್ತು ಸೃಷ್ಟಿಯಾಗುವುದಕ್ಕಿಂತ ಮೊದಲೇ ದೇವರು ಕ್ರಿಸ್ತನಲ್ಲಿ ನಮ್ಮನ್ನು ಆರಿಸಿಕೊಂಡನು.


ಆದಕಾರಣ ನೀವು ನಡೆದುಕೊಳ್ಳುವ ರೀತಿಯನ್ನು ಕುರಿತು ಚೆನ್ನಾಗಿ ನೋಡಿಕೊಳ್ಳಿರಿ. ಅಜ್ಞಾನಿಗಳಾಗಿರದೆ ಜ್ಞಾನವಂತರಾಗಿರಿ.


ಬೇಕಾದದ್ದೆಲ್ಲಾ ನನಗುಂಟು, ಸಮೃದ್ಧಿಹೊಂದಿದ್ದೇನೆ. ಎಪಫ್ರೊದೀತನ ಕೈಯಿಂದ ನೀವು ಕೊಟ್ಟು ಕಳುಹಿಸಿದ್ದು ನನಗೆ ತಲುಪಲಾಗಿ ನಾನು ತುಂಬಿತುಳುಕಿದವನಾಗಿದ್ದೇನೆ. ಅದು ದೇವರಿಗೆ ಮೆಚ್ಚಿಕೆಯಾದದ್ದು, ಸುಗಂಧವಾಸನೆಯೇ, ಇಷ್ಟ ಯಜ್ಞವೇ.


ಪ್ರತಿಯೊಬ್ಬ ಮಹಾಯಾಜಕನು ಕಾಣಿಕೆಗಳನ್ನೂ, ಯಜ್ಞಗಳನ್ನೂ ಸಮರ್ಪಿಸುವುದಕ್ಕೆ ನೇಮಕವಾಗಿರುತ್ತಾನೆ. ಆದ್ದರಿಂದ ಸಮರ್ಪಿಸುವುದಕ್ಕೆ ಈತನಿಗೂ ಸಹ ಏನಾದರೂ ಇರುವುದು ಅಗತ್ಯವಾಗಿದೆ.


ಅವನು ಸರ್ವಾಂಗಹೋಮಕ್ಕಾಗಿ ಒಂದು ಹೋರಿ, ಒಂದು ಟಗರು ಮತ್ತು ಒಂದು ವರ್ಷದ ಕುರಿಯನ್ನು ಕಾಣಿಕೆಯಾಗಿ ಕೊಟ್ಟನು.


ಉಳಿ ಮುಂತಾದದ್ದನ್ನು ಉಪಯೋಗಿಸದೆ ಹುಟ್ಟುಕಲ್ಲುಗಳಿಂದಲೇ ನಿಮ್ಮ ದೇವರಾದ ಯೆಹೋವನ ಯಜ್ಞವೇದಿಯನ್ನು ಕಟ್ಟಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು