Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 5:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಪ್ರತಿ ಹೆಂಡತಿಯೂ ತನ್ನ ಗಂಡನಿಗೆ ಗೌರವದಿಂದ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

33 ಆದರೆ ಇದು ನಿಮಗೂ ಅನ್ವಯಿಸುತ್ತದೆ. ಪ್ರತಿಯೊಬ್ಬ ಪುರುಷನು ತನ್ನನ್ನು ಪ್ರೀತಿಸುವಂತೆ ತನ್ನ ಪತ್ನಿಯನ್ನೂ ಪ್ರೀತಿಸಲಿ ಮತ್ತು ಪ್ರತಿಯೊಬ್ಬ ಸ್ತ್ರೀಯು ತನ್ನ ಪತಿಯ ವಿಷಯದಲ್ಲಿ ಗೌರವದಿಂದ ನಡೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಅದಿರಲಿ; ನಿಮ್ಮಲ್ಲಿ ಪ್ರತಿಪುರುಷನು ತನ್ನನ್ನು ಪ್ರೀತಿಸಿಕೊಳ್ಳುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು; ಪ್ರತಿ ಹೆಂಡತಿಯು ತನ್ನ ಗಂಡನಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಆದರೆ ನಿಮ್ಮಲ್ಲಿ ಪ್ರತಿ ಪುರುಷನು ತನ್ನನ್ನು ತಾನು ಪ್ರೀತಿಸುವಂತೆ ತನ್ನ ಹೆಂಡತಿಯನ್ನು ಪ್ರೀತಿಸಬೇಕು ಮತ್ತು ಸ್ತ್ರೀಯು ತನ್ನ ಗಂಡನಿಗೆ ಭಯಭಕ್ತಿಯಿಂದರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದರೂ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನನ್ನು ಪ್ರೀತಿಸುವಂತೆಯೇ ತನ್ನ ಹೆಂಡತಿಯನ್ನೂ ಪ್ರೀತಿಸಬೇಕು. ಹೆಂಡತಿಯು ತನ್ನ ಗಂಡನನ್ನು ಗೌರವಿಸುವವಳಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಹೆ ಸಗ್ಳೆ ತುಮ್ಕಾಬಿ ಲಾಗು ಹೊತಾ, ತುಮ್ಚ್ಯಾತ್ ಹರ್ ಎಕ್ ಘವ್ ಮಾನುಸ್ ಬಿ ಅಪ್ನಾಕ್ ಅಪ್ನಿ ಪ್ರೆಮ್ ಕರುನ್ ಘೆಟಲ್ಯಾ ಸಾರ್ಕೆ ಅಪ್ಲ್ಯಾ ಬಾಯ್ಕೊಕ್‍ಬಿ ಪ್ರೆಮ್ ಕರುಚೆ, ಅನಿ ಬಾಯ್ಕೊ ಅಪ್ಲ್ಯಾ ಘವಾಕ್ ಮಾನುನ್ ಘೆವ್ನ್ ಅನಿ ದೆವಸ್ಪಾನಾನ್ ಚಲುಚಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 5:33
10 ತಿಳಿವುಗಳ ಹೋಲಿಕೆ  

ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.


ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.


ಗಂಡಂದಿರೇ, ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ, ಅವರೊಂದಿಗೆ ಕಠಿಣವಾಗಿ ವರ್ತಿಸಬೇಡಿರಿ.


ಈ ರಾಜನಿರ್ಣಯವು ಬಹು ವಿಸ್ತಾರವಾದ ಅವನ ರಾಜ್ಯದಲ್ಲೆಲ್ಲಾ ಗೊತ್ತಾದಾಗ ಶ್ರೇಷ್ಠರೂ, ಕನಿಷ್ಠರೂ ಆದ ಎಲ್ಲಾ ಸ್ತ್ರೀಯರು ತಮ್ಮ ಗಂಡಂದಿರಿಗೆ ಗೌರವ ಸಲ್ಲಿಸುವರು” ಎಂದು ಹೇಳಿದನು.


ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದ ಲೌಕಿಕ ತಂದೆಗಳನ್ನು ನಾವು ಸನ್ಮಾನಿಸಿತ್ತೇವಲ್ಲ. ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಅಧೀನರಾಗಿ ಜೀವಿಸಬೇಕಲ್ಲವೇ?


ಆಗ ಬತ್ಷೆಬೆಯು ಅರಸನಿಗೆ ಸಾಷ್ಟಾಂಗನಮಸ್ಕಾರ ಮಾಡಿ, “ನನ್ನ ಒಡೆಯನೂ ಅರಸನೂ ಆದ ದಾವೀದನು ಸದಾಕಾಲವೂ ಬಾಳಲಿ” ಎಂದಳು.


ಆಗ ರಾಜನು ನಿನ್ನ ಲಾವಣ್ಯವನ್ನು ನೋಡಲು ಅಪೇಕ್ಷಿಸುವನು. ಆತನೇ ನಿನಗೆ ಒಡೆಯನು; ಆತನನ್ನು ಗೌರವಿಸು.


ನಾನು ಕ್ರಿಸ್ತನಿಗೂ ಸಭೆಗೂ ಇರುವ ಸಂಬಂಧವನ್ನು ಕುರಿತು ಮಾತನಾಡುತ್ತಿದ್ದೇನೆ, ಇದುವರೆಗೆ ಗುಪ್ತವಾಗಿದ್ದ ಈ ಮರ್ಮವು ಬಹು ಗಂಭೀರವಾದದ್ದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು