Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ವಿಧೇಯರಾಗಿರಿ. ಇದು ನ್ಯಾಯವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮಕ್ಕಳೇ, ಪ್ರಭುವಿನಲ್ಲಿ ನಿಮ್ಮ ತಂದೆತಾಯಿಗಳ ಮಾತಿಗೆ ಕಿವಿಗೊಡಿ. ಇದು ಧರ್ಮಸಮ್ಮತವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಮಕ್ಕಳೇ, ನೀವು ಕರ್ತನಲ್ಲಿರುವವರಿಗೆ ತಕ್ಕ ಹಾಗೆ ನಿಮ್ಮ ತಂದೆತಾಯಿಗಳ ಮಾತನ್ನು ಕೇಳಬೇಕು; ಇದು ಧರ್ಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮಕ್ಕಳೇ, ಪ್ರಭುವಿನ ಚಿತ್ತಕ್ಕನುಸಾರವಾಗಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ. ಅದು ನ್ಯಾಯಬದ್ಧವಾದದ್ದಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಮಕ್ಕಳೇ, ನೀವು ಕರ್ತನಲ್ಲಿ ನಿಮ್ಮ ತಂದೆತಾಯಿಗಳಿಗೆ ವಿಧೇಯರಾಗಿರಿ, ಇದು ಸೂಕ್ತವಾದದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಪೊರಾನು, ಧನಿಯಾಚ್ಯಾ ಇಚ್ಛ್ಯಾ ಸಾರ್ಕೆ ತುಮ್ಚ್ಯಾ ಬಾಯ್ ಬಾಬಾಕ್ನಿ ಖಾಲ್ತಿ ಹೊವ್ನ್ ರಾವಾ, ಹೆ ತುಮಿ ಕರ್ತಲೆ ಸಮಾ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:1
33 ತಿಳಿವುಗಳ ಹೋಲಿಕೆ  

ಹೆತ್ತ ತಂದೆಯ ಮಾತಿಗೆ ಕಿವಿಗೊಡು, ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.


ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ.


ಮಗನೇ, ನಿನ್ನ ತಂದೆಯ ಉಪದೇಶವನ್ನು ಕೇಳು, ನಿನ್ನ ತಾಯಿಯ ಬೋಧನೆಯನ್ನು ತೊರೆಯಬೇಡ.


ಒಬ್ಬ ಮಗನು ತಂದೆತಾಯಿಗಳ ಆಜ್ಞೆಗೆ ಒಳಗಾಗದೆ ಶಿಕ್ಷಿಸಲ್ಪಟ್ಟರೂ, ಮೊಂಡನೂ ಮತ್ತು ಅವಿಧೇಯನೂ ಆಗಿ,


“‘ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇಮಿಸಿರುವ ಸಬ್ಬತ್ ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.


ಇಹಲೋಕದ ನಡವಳಿಕೆಯನ್ನು ಅನುಸರಿಸದೆ ನೂತನ ಮನಸ್ಸನ್ನು ಹೊಂದಿಕೊಂಡು ಪರಲೋಕಭಾವದವರಾಗಿರಿ. ಹೀಗಾದರೆ ದೇವರ ಚಿತ್ತವನ್ನು ತಿಳಿದವರಾಗಿ ಉತ್ತಮವಾದದ್ದೂ, ಮೆಚ್ಚಿಕೆಯಾದದ್ದೂ, ದೋಷವಿಲ್ಲದ್ದೂ ಯಾವ ಯಾವುದೆಂದು ವಿವೇಚಿಸುವಿರಿ.


ತಂದೆಯನ್ನು ಹಾಸ್ಯಮಾಡಿ ತಾಯಿಯ ಅಪ್ಪಣೆಯನ್ನು, ಧಿಕ್ಕರಿಸುವವನ ಕಣ್ಣನ್ನು, ಹಳ್ಳಕೊಳ್ಳದ ಕಾಗೆಗಳು ಕುಕ್ಕುವವು, ರಣಹದ್ದುಗಳು ತಿಂದುಬಿಡುವವು.


ಹೀಗಿರಲಾಗಿ ಧರ್ಮಶಾಸ್ತ್ರವು ಪರಿಶುದ್ಧವಾದದ್ದು. ಮತ್ತು ಆಜ್ಞೆಯು ಪರಿಶುದ್ಧವೂ, ನ್ಯಾಯವೂ ಮತ್ತು ಒಳ್ಳೆಯದೇ ಆಗಿದೆ.


ಬಳಿಕ ಆತನು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ವಿಧೇಯನಾಗಿದ್ದನು. ಆತನ ತಾಯಿಯು ಈ ಸಂಗತಿಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಇಟ್ಟುಕೊಂಡಳು.


ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, ಆತನು ಮುಯ್ಯಿತೀರಿಸಲಿಲ್ಲ.


ಮನುಷ್ಯರು ನೇಮಿಸಿರುವ ಪ್ರತಿಯೊಂದು ಅಧಿಕಾರಕ್ಕೂ ಕರ್ತನ ನಿಮಿತ್ತ ನೀವು ಅಧೀನರಾಗಿರಿ. ಸರ್ವಾಧಿಕಾರಿಯಾಗಿರುವ ಅರಸನಿಗಾಗಲಿ


ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.


ತಾಯಿಗೆ ಶುಭವನ್ನು ಕೋರದೆ, ತಂದೆಯನ್ನು ಶಪಿಸುವ ಒಂದು ತರದವರು ಉಂಟು.


ಯಾಕೋಬನು ತನ್ನ ತಂದೆತಾಯಿಗಳ ಮಾತಿಗೆ ವಿಧೇಯನಾಗಿ ಪದ್ದನ್ ಅರಾಮಿಗೆ ಹೋದದ್ದನ್ನೂ ಸಹ ಏಸಾವನು ನೋಡಿದನು.


ಯೆಹೋವನ ಆಜ್ಞೆಗಳು ನೀತಿಯುಳ್ಳವುಗಳಾಗಿವೆ; ಮನಸ್ಸನ್ನು ಹರ್ಷಪಡಿಸುತ್ತವೆ. ಯೆಹೋವನ ಆಜ್ಞೆ ಪವಿತ್ರವಾದದ್ದು; ಕಣ್ಣುಗಳನ್ನು ಕಳೆಗೊಳಿಸುತ್ತದೆ.


ಎಸ್ತೇರಳಾದರೋ ಮೊರ್ದೆಕೈಯ ಪರಾಂಬರಿಕೆಯಲ್ಲಿದ್ದ ದಿನಗಳಲ್ಲಿ ಹೇಗೋ ಹಾಗೆ ಆಗಲೂ ಅವನ ಆಜ್ಞೆಯನ್ನು ಅನುಸರಿಸುವವಳಾಗಿ ತಾನು ಇಂಥ ಕುಲದವಳು, ಇಂಥ ಜನಾಂಗದವಳು ಎಂಬುದನ್ನು ಯಾರಿಗೂ ತೋರ್ಪಡಿಸಿಕೊಳ್ಳಲಿಲ್ಲ.


ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.


ನೀವು ಆಕೆಯನ್ನು ದೇವಜನರಿಗೆ ತಕ್ಕ ಹಾಗೆ ಕರ್ತನ ಶಿಷ್ಯಳೆಂದು ಸೇರಿಸಿಕೊಂಡು, ಆಕೆಗೆ ಯಾವ ವಿಷಯದಲ್ಲಿ ಅಗತ್ಯವಿದೆಯೋ ಅದರಲ್ಲಿ ಸಹಾಯವನ್ನು ಮಾಡಿರಿ. ಆಕೆಯು ನನಗೂ ಮತ್ತು ಅನೇಕರಿಗೂ ಸಹಾಯಮಾಡಿದವಳು.


ಯೆಹೋವನೇ, ನಿನ್ನ ವಿಧಿಗಳು ನೀತಿಯುಳ್ಳವುಗಳಾಗಿವೆ ಎಂದೂ, ನೀನು ನಂಬಿಗಸ್ತಿಕೆಯಿಂದಲೇ ನನ್ನನ್ನು ಕುಗ್ಗಿಸಿದ್ದೀ ಎಂದೂ ತಿಳಿದುಕೊಂಡಿದ್ದೇನೆ.


ಇಸ್ರಾಯೇಲನು ಯೋಸೇಫನಿಗೆ, “ನಿನ್ನ ಅಣ್ಣಂದಿರು ಶೆಕೆಮಿನಲ್ಲಿ ಆಡುಕುರಿಗಳನ್ನು ಮೇಯಿಸುತ್ತಿದ್ದಾರಲ್ಲಾ ಅವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೆ, ಹೋಗು” ಎಂದು ಹೇಳಿದನು. ಅದಕ್ಕೆ ಅವನು, “ಆಗಲಿ, ಹೋಗುತ್ತೇನೆ” ಎಂದನು.


ರೇಕಾಬನ ಮಗನಾದ ಯೋನಾದಾಬನು ತನ್ನ ಸಂತಾನದವರಿಗೆ ದ್ರಾಕ್ಷಾರಸವನ್ನು ಕುಡಿಯಬಾರದೆಂದು ಕೊಟ್ಟ ಅಪ್ಪಣೆ ನೆರವೇರಿದೆ; ಅವರು ಇಂದಿನ ವರೆಗೂ ಕುಡಿಯಲಿಲ್ಲ, ತಮ್ಮ ಪಿತೃವಿನ ಆಜ್ಞೆಯನ್ನು ಕೈಕೊಂಡಿದ್ದಾರೆ; ನೀವೋ, ನಾನು ನಿಮಗೆ ಎಡೆಬಿಡದೆ ಹೇಳುತ್ತಾ ಬಂದರೂ ನನ್ನ ಮಾತಿಗೆ ಕಿವಿಗೊಡಲಿಲ್ಲ.


ಸೀನಾಯಿ ಬೆಟ್ಟದ ಮೇಲೆ ಇಳಿದು ಬಂದು ಆಕಾಶದ ಕಡೆಯಿಂದ ಅವರೊಡನೆ ಮಾತನಾಡಿ, ಅವರಿಗೆ ನೀತಿನಿಯಮಗಳನ್ನೂ, ಯಥಾರ್ಥ ಧರ್ಮೋಪದೇಶವನ್ನೂ, ಶ್ರೇಷ್ಠವಾದ ಆಜ್ಞಾವಿಧಿಗಳನ್ನೂ ಅನುಗ್ರಹಿಸಿದೆ.


ದಾವೀದನು ಮರುದಿನ ಬೆಳಿಗ್ಗೆ ಎದ್ದು ಕುರಿ ಕಾಯುವವನಿಗೆ ಕುರಿಗಳನ್ನು ಒಪ್ಪಿಸಿ, ತನ್ನ ತಂದೆಯಾದ ಇಷಯನು ಹೇಳಿದವುಗಳನ್ನು ತೆಗೆದುಕೊಂಡು ಸೈನ್ಯವು ಹೊರಟು ಯುದ್ಧಕ್ಕಾಗಿ ಅರ್ಭಟಿಸುವ ಹೊತ್ತಿನಲ್ಲಿ ಪಾಳೆಯದ ರಥಗಳು ನಿಂತಿದ್ದ ಸ್ಥಳಕ್ಕೆ ಬಂದನು.


ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ, ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ. ಪೆ.


ಅದಕ್ಕೆ ರೂತಳು “ನೀನು ಹೇಳಿದ ಹಾಗೆಯೇ ಮಾಡುವೆನು” ಎಂದು ಹೇಳಿದಳು.


ನಮ್ಮ ಪಿತೃವಾದ ರೇಕಾಬನ ಮಗನಾಗಿರುವ ಯೋನಾದಾಬನು ನಮಗೆ ಕೊಟ್ಟ ಈ ಅಪ್ಪಣೆಯನ್ನು, ಎಲ್ಲಾ ವಿಷಯದಲ್ಲಿಯೂ ಕೈಗೊಳ್ಳುತ್ತಿದ್ದೇವೆ; ನಾವಾಗಲಿ, ನಮ್ಮ ಹೆಂಡತಿಯರಾಗಲಿ, ಗಂಡು ಹೆಣ್ಣುಮಕ್ಕಳಾಗಲಿ ಜೀವಮಾನದಲ್ಲೆಲ್ಲಾ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.


ಮತ್ತು ಯೆರೆಮೀಯನು ರೇಕಾಬ್ಯರಿಗೆ, “ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ನೀವು ನಿಮ್ಮ ಪಿತೃವಾದ ಯೋನಾದಾಬನ ಅಪ್ಪಣೆಯನ್ನು ಕೇಳಿ ಅವನ ಸಕಲ ವಿಧಿಗಳನ್ನು ಅನುಸರಿಸಿ ಅವನು ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸಿದ ಕಾರಣ,


ಆಗ ಯೋಸೇಫನು ಅವರನ್ನು ತಂದೆಯ ಮಡಿಲಿನಿಂದ ಎತ್ತಿಕೊಂಡು ತನ್ನ ತಂದೆಗೆ ತಲೆಬಾಗಿ ನಮಸ್ಕರಿಸಿದನು.


ಯಾಕೋಬನ ಮಕ್ಕಳು ತಂದೆಯ ಅಪ್ಪಣೆಯ ಮೇರೆಗೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು