ಎಫೆಸದವರಿಗೆ 6:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ನಮಗೆ ಹೋರಾಟವಿರುವುದು ಮನುಷ್ಯಮಾತ್ರದವರ ಸಂಗಡವಲ್ಲ. ರಾಜತ್ವಗಳ ಮೇಲೆಯೂ, ಅಧಿಕಾರಿಗಳ ಮೇಲೆಯೂ, ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ, ಆಕಾಶ ಮಂಡಲಗಳಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ನಮ್ಮ ಹೋರಾಟ ಕೇವಲ ನರಮಾನವರೊಂದಿಗಲ್ಲ, ದಿಗಂತದಲ್ಲಿರುವ ಅಧಿಕಾರಿಗಳ ಹಾಗೂ ಆಧಿಪತ್ಯಗಳ ವಿರುದ್ಧ; ಪ್ರಸ್ತುತ ಅಂಧಕಾರಲೋಕಾಧಿಪತಿಗಳ ಹಾಗೂ ಅಶರೀರ ದುಷ್ಟಗಣಗಳ ವಿರುದ್ಧ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನಾವು ಹೋರಾಡುವದು ಮನುಷ್ಯ ಮಾತ್ರದವರ ಸಂಗಡವಲ್ಲ; ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಅಂಧಕಾರದ ಲೋಕಾಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಯ ಮೇಲೆಯೂ ನಾವು ಹೋರಾಡುವವರಾಗಿದ್ದೇವೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ನಮ್ಮ ಹೋರಾಟವು ಜನರ ವಿರುದ್ಧವಲ್ಲ. ನಾವು ಅಂಧಕಾರದ ಅಧಿಪತಿಗಳಿಗೂ ಅಧಿಕಾರಿಗಳಿಗೂ ಮತ್ತು ಈ ಲೋಕದ ಕತ್ತಲೆಯ ಶಕ್ತಿಗಳಿಗೂ ಆಕಾಶಮಂಡಲದ ದುಷ್ಟಶಕ್ತಿಗಳಿಗೂ ವಿರುದ್ಧವಾಗಿ ಹೋರಾಡುತ್ತಿದ್ದೇವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಏಕೆಂದರೆ, ನಾವು ಹೋರಾಡುವುದು ನರಮಾನವರೊಂದಿಗಲ್ಲ, ರಾಜತ್ವಗಳ ಮೇಲೆಯೂ ಅಧಿಕಾರಿಗಳ ಮೇಲೆಯೂ ಈ ಲೋಕದ ಅಂಧಕಾರದ ಅಧಿಪತಿಗಳ ಮೇಲೆಯೂ ಆಕಾಶಮಂಡಲದಲ್ಲಿರುವ ದುರಾತ್ಮಗಳ ಸೇನೆಗಳ ಮೇಲೆಯೂ ಆಗಿದೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್12 ಕಶ್ಯಾಕ್ ಮಟ್ಲ್ಯಾರ್, ಅಮ್ಚೊ ಝಗ್ಡೊ ಲೊಕಾಕ್ನಿ ವಿರೊದ್ ಹೊವ್ನ್ ನ್ಹಯ್ ಖರೆ ಅಮಿ ಕಾಳ್ಕಾತ್ಲ್ಯಾ ಅಧಿಕಾರ್‍ಯಾಕ್ನಿ, ಅಧಿಪತಿಕ್ನಿ ಅನಿ ಹ್ಯಾ ಜಗಾಚ್ಯಾ ಕಾಳ್ಕಾಚ್ಯಾ ಬಳಾಕ್ನಿಅನಿ ಮಳ್ಬಾಚ್ಯಾ ಬುರ್ಶ್ಯಾ ಆತ್ಮ್ಯಾಂಚ್ಯಾ ಬಳಾಂಚ್ಯಾಬಿ ವಿರೊಧ್ ಹೊವ್ನ್ ಝಗ್ಡೊ ಕರ್ತಾಂವ್. ಅಧ್ಯಾಯವನ್ನು ನೋಡಿ |
ಆದಕಾರಣ ಇಷ್ಟು ಸಾಕ್ಷಿಗಳ ದೊಡ್ಡ ಗುಂಪು ಮೇಘದಂತೆ ನಮ್ಮ ಸುತ್ತಲು ಇರುವುದರಿಂದ ನಮಗೆ ಅಭ್ಯಂತರಪಡಿಸುವ ಎಲ್ಲಾ ಭಾರವನ್ನೂ, ಸುಲಭವಾಗಿ ಮುತ್ತಿಕೊಳ್ಳುವ ಪಾಪವನ್ನು ಸಹ ನಾವು ತೆಗೆದಿಟ್ಟು, ನಂಬಿಕೆಯನ್ನು ಹುಟ್ಟಿಸುವಾತನೂ ಅದನ್ನು ಪರಿಪೂರ್ಣಗೊಳಿಸುವಾತನೂ ಆಗಿರುವ ಯೇಸುವಿನ ಮೇಲೆ ದೃಷ್ಟಿಯಿಟ್ಟು ನಮಗೆ ನೇಮಕವಾದ ಓಟವನ್ನು ಸಹನೆಯಿಂದ ಓಡೋಣ. ಆತನು ತನ್ನ ಮುಂದೆ ಇಟ್ಟಿದ್ದ ಸಂತೋಷಕ್ಕೋಸ್ಕರ ಅಪಮಾನವನ್ನು ಅಲಕ್ಷ್ಯಮಾಡಿ, ಶಿಲುಬೆಯ ಮರಣವನ್ನು ಸಹಿಸಿಕೊಂಡು, ದೇವರ ಸಿಂಹಾಸನದ ಬಲಗಡೆಯಲ್ಲಿ ಆಸೀನನಾಗಿದ್ದಾನೆ.