Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಸತ್ಯವೆಂಬ ನಡುಕಟ್ಟನ್ನು ಸೊಂಟಕ್ಕೆ ಕಟ್ಟಿಕೊಂಡು, ನೀತಿಯೆಂಬ ಎದೆಕವಚವನ್ನು ಧರಿಸಿಕೊಂಡು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಹಿಮ್ಮೆಟ್ಟದೆ ನಿಲ್ಲಲೇಬೇಕು. ಇದಕ್ಕಾಗಿ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಳ್ಳಿ. ನೀತಿಯೆಂಬ ರಕ್ಷಕವಚವನ್ನು ತೊಟ್ಟುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಧರಿಸಿಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆದ್ದರಿಂದ ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ವಜ್ರಕವಚವನ್ನು ಎದೆಗೆ ಬಿಗಿದುಕೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು, ನೀತಿಯೆಂಬ ಕವಚವನ್ನು ಧರಿಸಿಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತಸೆ ಹೊವ್ನ್, ಖರೆ ಮನ್ತಲೊ ಕಂಬ್ರೆಚೊ ಪಟ್ಟೊ ಬಾಂದುನ್ ಘೆವ್ನ್ ನಿಯತ್ ಮನ್ತಲೊ ವಜ್ರಾಚೊ ಕವಚ್ ಚಾತಿಕ್ ಭಾಂದುನ್ ಘೆವ್ನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:14
13 ತಿಳಿವುಗಳ ಹೋಲಿಕೆ  

ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.


ನಾವಾದರೋ ಹಗಲಿನವರಾಗಿರಲಾಗಿ ನಂಬಿಕೆ ಪ್ರೀತಿಗಳೆಂಬ ಎದೆಕವಚವನ್ನೂ, ರಕ್ಷಣೆಯ ನಿರೀಕ್ಷೆಯೆಂಬ ಶಿರಸ್ತ್ರಾಣವನ್ನೂ ಧರಿಸಿಕೊಂಡು ಸ್ವಸ್ಥಚಿತ್ತರಾಗಿರೋಣ.


ಧರ್ಮವೇ ಅವನಿಗೆ ನಡುಕಟ್ಟು, ಪ್ರಾಮಾಣಿಕತೆಯೇ ಸೊಂಟಪಟ್ಟಿ.


“ನಿಮ್ಮ ನಡುಗಳು ಕಟ್ಟಿರಲಿ. ನಿಮ್ಮ ದೀಪಗಳು ಆರದಂತೆ ಉರಿಯುತ್ತಾ ಇರಲಿ.


ಆದ್ದರಿಂದ ನೀವು ನಿಮ್ಮ ಮನಸ್ಸನ್ನು ದೃಢಪಡಿಸಿಕೊಂಡು, ಸ್ವಸ್ಥಚಿತ್ತರಾಗಿದ್ದು ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ದೊರಕುವ ಕೃಪೆಯ ಮೇಲೆ ನಿಮ್ಮ ನಿರೀಕ್ಷೆಯನ್ನು ಸಂಪೂರ್ಣವಾಗಿ ಇಡಿರಿ.


ಸತ್ಯವಾಕ್ಯ, ದೇವರ ಮಹತ್ವ ಇವುಗಳಿಂದ ಕೂಡಿದವರಾಗಿ, ಎಡಬಲಗೈಗಳಲ್ಲಿ ನೀತಿಯೆಂಬ ಆಯುಧಗಳನ್ನು ಧರಿಸಿಕೊಂಡಿದ್ದೇವೆ.


ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.


ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಿತ್ತೆಂದರೆ, ಸವಾರರ ಕವಚಗಳ ಬಣ್ಣವು ಬೆಂಕಿ, ಹೊಗೆ, ಗಂಧಕ ಇವುಗಳ ಬಣ್ಣದ ಹಾಗಿತ್ತು ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು.


ಅವುಗಳಿಗೆ ಉಕ್ಕಿನ ಕವಚಗಳಂತಿದ್ದ ಕವಚಗಳು ಇದ್ದವು. ಅವುಗಳ ರೆಕ್ಕೆಗಳ ಶಬ್ದವು ಯುದ್ಧಕ್ಕೆ ಓಡುವ ರಥಾಶ್ವಗಳ ಶಬ್ದದಂತೆ ಇತ್ತು.


ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು. ನನ್ನ ನ್ಯಾಯವೇ ನನಗೆ ನಿಲುವಂಗಿಯೂ, ಕಿರೀಟವೂ ಆಗಿತ್ತು.


ಇರುಳು ಬಹಳ ಮಟ್ಟಿಗೆ ಕಳೆಯಿತು; ಹಗಲು ಸಮೀಪವಾಯಿತು. ಕತ್ತಲೆಗೆ ಅನುಗುಣವಾದ ಕೃತ್ಯಗಳನ್ನು ಬಿಟ್ಟು ಬೆಳಕಿಗೆ ಅನುಗುಣವಾದ ರಕ್ಷಣೆಯ ಆಯುಧಗಳನ್ನು ಧರಿಸಿಕೊಳ್ಳೋಣ.


ಆದ್ದರಿಂದ ಆ ದುಷ್ಟ ದಿನದಲ್ಲಿ ವೈರಿಗಳನ್ನು ಎದುರಿಸುವುದಕ್ಕೂ ಮಾಡಬೇಕಾದದ್ದೆಲ್ಲವನ್ನು ಮಾಡಿ ದೃಢವಾಗಿ ನಿಲ್ಲುವುದಕ್ಕೂ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.


ಅರಸರು ತಮಗೆ ವಿರುದ್ಧವಾಗಿ ಯುದ್ಧಕ್ಕೆ ಬಂದಿದ್ದಾರೆಂಬುವುದನ್ನು ಮೋವಾಬ್ಯರು ಕೇಳಿ ಆಯುಧಗಳನ್ನು ಧರಿಸಲು ಶಕ್ತರಾದ ಎಲ್ಲಾ ಯೌವನಸ್ಥರನ್ನೂ ಕೂಡಿಸಿಕೊಂಡು ತಮ್ಮ ದೇಶದ ಗಡಿಪ್ರದೇಶಕ್ಕೆ ಬಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು