Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:21 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನನ್ನ ವಿಷಯಗಳು ನನ್ನ ಕೆಲಸಕಾರ್ಯಗಳು ನಿಮಗೆ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತ ಸೇವಕನಾಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸಿಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಪ್ರಿಯ ಸಹೋದರ ತುಖಿಕನು ನನ್ನ ವಿಷಯವಾಗಿಯೂ ನನ್ನ ಕೆಲಸಕಾರ್ಯಗಳ ವಿಷಯವಾಗಿಯೂ ನಿಮಗೆ ತಿಳಿಸುವನು. ಆತ ಪ್ರಭುವಿನ ಪ್ರಾಮಾಣಿಕ ಸೇವಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನ ಸಂಗತಿಗಳು ನಿಮಗೆ ಸಹ ಗೊತ್ತಾಗುವ ಹಾಗೆ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ನಮ್ಮ ಪ್ರಿಯ ಸಹೋದರನಾದ ತುಖಿಕನನ್ನು ನಿಮ್ಮ ಬಳಿಗೆ ಕಳುಹಿಸುತ್ತಿದ್ದೇನೆ. ಅವನು ಪ್ರಭುವಿನ ಸೇವೆಯಲ್ಲಿ ನಂಬಿಗಸ್ತನಾದ ಸೇವಕನಾಗಿದ್ದಾನೆ. ಇಲ್ಲಿಯ ಸಂಗತಿಗಳನ್ನೆಲ್ಲಾ ಅವನು ನಿಮಗೆ ತಿಳಿಸುವನು. ನಾನು ಇಲ್ಲಿ ಹೇಗಿದ್ದೇನೆ ಮತ್ತು ಏನು ಮಾಡುತ್ತಿದ್ದೇನೆ ಎಂಬುದು ಆಗ ನಿಮಗೆ ಗೊತ್ತಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನನ್ನ ವಿಷಯವಾಗಿಯೂ ನಾನು ಮಾಡುತ್ತಿರುವುದರ ವಿಷಯವಾಗಿಯೂ ಪ್ರಿಯ ಸಹೋದರನೂ ಕರ್ತನಲ್ಲಿ ನಂಬಿಗಸ್ತನಾದ ಸೇವಕನೂ ಆಗಿರುವ ತುಖಿಕನು ನಿಮಗೆ ಎಲ್ಲವನ್ನೂ ತಿಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಅಮ್ಚೊ ಪ್ರೆಮಾಚೊ ಭಾವ್ ತುಖಿಕಾ ಮನ್ತಲ್ಯಾಕ್ ತುಮ್ಚ್ಯಾಕ್ಡೆ ಧಾಡುನ್ ದಿವ್ಲಾ, ತೊ ಧನಿಯಾಚ್ಯಾ ಸೆವಾತ್ ವಿಶ್ವಾಸಾಚೊ ಸೆವಕ್ ಹೊವ್ನ್ ಹಾಯ್, ಹಿತ್ಲಿ ಸಂಗ್ತಿಯಾ ಸಗ್ಳಿ ತೊ ತುಮ್ಕಾ ಕಳ್ವುತಾ. ಮಿಯಾ ಹಿತ್ತೆ ಕಸೊ ಹಾಯ್, ಅನಿ ಕಾಯ್ ಕರುಲ್ಲಾ ಮನ್ತಲೆ ತನ್ನಾ ತುಮ್ಕಾ ಕಳ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:21
11 ತಿಳಿವುಗಳ ಹೋಲಿಕೆ  

ಪುರ್ರನ ಮಗನಾದ ಬೆರೋಯ ಪಟ್ಟಣದ ಸೋಪತ್ರನೂ, ಥೆಸಲೋನಿಕದವರಲ್ಲಿ ಅರಿಸ್ತಾರ್ಕನೂ, ಸೆಕುಂದನೂ ದೆರ್ಬೆಪಟ್ಟಣದ ಗಾಯನೂ, ತಿಮೊಥೆಯನೂ, ಆಸ್ಯಸೀಮೆಯವರಲ್ಲಿ ತುಖಿಕನೂ, ತ್ರೊಫಿಮನೂ, ಆಸ್ಯಸೀಮೆಯ ವರೆಗೂ ಅವನ ಜೊತೆಯಲ್ಲಿ ಹೋದರು.


ತುಖಿಕನನ್ನು ಎಫೆಸಕ್ಕೆ ಕಳುಹಿಸಿದೆನು. ತ್ರೋವದಲ್ಲಿ ನಾನು ಕರ್ಪನ ಬಳಿಯಲ್ಲಿ ಬಿಟ್ಟು ಬಂದ ಮೇಲಂಗಿಯನ್ನೂ, ಪುಸ್ತಕಗಳನ್ನೂ, ಮುಖ್ಯವಾಗಿ ಚರ್ಮದ ಕಾಗದಗಳನ್ನೂ ನೀನು ಬರುವಾಗ ತೆಗೆದುಕೊಂಡು ಬಾ.


ನಾನು ನಿಕೊಪೊಲಿಯಲ್ಲಿ ಚಳಿಗಾಲವನ್ನು ಕಳೆಯಬೇಕೆಂದು ನಿಶ್ಚಯಿಸಿಕೊಂಡಿದ್ದರಿಂದ ಅರ್ತೆಮನನ್ನಾಗಲಿ ತುಖಿಕನನ್ನಾಗಲಿ ನಿನ್ನ ಬಳಿಗೆ ಕಳುಹಿಸಿದ ಕೂಡಲೆ ಅಲ್ಲಿಗೆ ನನ್ನ ಹತ್ತಿರ ಬರುವುದಕ್ಕೆ ಪ್ರಯತ್ನಿಸು.


ನಮ್ಮ ಕರ್ತನ ದೀರ್ಘಶಾಂತಿಯು ನಮ್ಮ ರಕ್ಷಣಾರ್ಥವಾಗಿ ಇದೆ ಎಂದು ಪರಿಗಣಿಸಿರಿ. ನಮ್ಮ ಪ್ರಿಯ ಸಹೋದರನಾದ ಪೌಲನು ಸಹ ತನಗೆ ಅನುಗ್ರಹಿಸಿರುವ ಜ್ಞಾನದ ಪ್ರಕಾರ ನಿಮಗೆ ಬರೆದಿದ್ದಾನೆ.


ನಿಮ್ಮನ್ನು ಪ್ರೋತ್ಸಾಹಿಸುವುದಕ್ಕೂ ಇದೇ ದೇವರ ನಿಜವಾದ ಕೃಪೆ ಎಂದು ಸಾಕ್ಷಿ ಹೇಳುವುದಕ್ಕೂ ನಾನು ಸಂಕ್ಷೇಪವಾಗಿ ಬರೆದು, ನಂಬಿಗಸ್ತನಾದ ಸಹೋದರನೆಂದು ನಾನು ಎಣಿಸುವ ಸಿಲ್ವಾನನ ಕೈಯಲ್ಲಿ ಇದನ್ನು ಕಳುಹಿಸಿದ್ದೇನೆ. ಈ ನಿಜವಾದ ಕೃಪೆಯಲ್ಲಿ ನಿಲ್ಲಿರಿ.


ಇನ್ನು ಮೇಲೆ ಅವನು ದಾಸನಂತಾಗಿರದೆ ದಾಸನಿಗಿಂತ ಮಿಗಿಲಾಗಿ ಉತ್ತಮವಾದ ಪ್ರಿಯ ಸಹೋದರನಂತಾಗಬೇಕು. ಅವನು ನನಗೆ ಬಹಳ ಪ್ರಿಯನಾಗಿರುವಲ್ಲಿ ನಿನಗೆ ಲೋಕದ ಪ್ರಕಾರವಾಗಿಯೂ, ಕರ್ತನ ಸಂಬಂಧದಲ್ಲಿಯೂ ಇನ್ನೂ ಹೆಚ್ಚು ಪ್ರಿಯನಾಗಿರುವನಲ್ಲವೇ?


ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.


ಈ ಸುವಾರ್ತೆಯನ್ನು ಕ್ರಿಸ್ತನ ನಂಬಿಗಸ್ತ ಸೇವಕನೂ, ನಮ್ಮ ಪ್ರಿಯ ಜೊತೆಸೇವಕನೂ ಆದ ಎಪಫ್ರನಿಂದ ನೀವು ಕಲಿತುಕೊಂಡಿದ್ದೀರಿ.


ಈ ಕಾರಣದಿಂದ ಕರ್ತನಲ್ಲಿ ನನ್ನ ಪ್ರಿಯ ಮತ್ತು ನಂಬಿಗಸ್ತ ಮಗನಾದ ತಿಮೊಥೆಯನನ್ನು ನಿಮ್ಮ ಬಳಿಗೆ ಕಳುಹಿಸಿಕೊಟ್ಟಿದ್ದೇನೆ. ನಾನು ಪ್ರತಿಯೊಂದು ಸಭೆಗಳಲ್ಲಿಯೂ, ಎಲ್ಲೆಲ್ಲಿಯೂ ಬೋಧಿಸುವ ಹಾಗೆ ಕ್ರಿಸ್ತನಲ್ಲಿರುವ ನನ್ನ ನಡವಳಿಕೆಗಳನ್ನು ಅವನು ನಿಮ್ಮ ನೆನಪಿಗೆ ತರುವನು.


ಸಹೋದರರೇ, ನನಗೆ ಸಂಭವಿಸಿರುವಂಥವುಗಳೆಲ್ಲವೂ ಸುವಾರ್ತೆಯ ಪ್ರಸಾರಣೆಗೆ ಸಹಾಯವಾಯಿತೆಂದು ನೀವು ತಿಳಿಯಬೇಕೆಂಬುದಾಗಿ ಅಪೇಕ್ಷಿಸುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು