Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಫೆಸದವರಿಗೆ 6:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದಾಸರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆ ವಿಧೇಯರಾಗುವ ಹಾಗೆಯೇ ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಸೇವಕರೇ, ನೀವು ಮಾಡುತ್ತಿರುವುದು ಕ್ರಿಸ್ತಯೇಸುವಿನ ಸೇವೆಯನ್ನೇ ಎಂದು ಭಾವಿಸಿ, ನಿಮ್ಮ ಲೌಕಿಕ ಧಣಿಗಳಿಗೆ ಭಯಭಕ್ತಿಯಿಂದಲೂ ಏಕಮನಸ್ಸಿನಿಂದಲೂ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದಾಸತ್ವದಲ್ಲಿರುವವರೇ, ಈ ಲೋಕದಲ್ಲಿ ನಿಮಗೆ ಯಜಮಾನರಾಗಿರುವವರಿಗೆ ಕ್ರಿಸ್ತನಿಗೆಂದು ಮನೋಭೀತಿಯಿಂದ ನಡುಗುವವರಾಗಿಯೂ ಸರಳಹೃದಯರಾಗಿಯೂ ವಿಧೇಯರಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೇವಕರೇ, ನಿಮ್ಮ ಇಹಲೋಕದ ಯಜಮಾನರಿಗೆ ಭಯದಿಂದಲೂ ಗೌರವದಿಂದಲೂ ವಿಧೇಯರಾಗಿರಿ. ನೀವು ಕ್ರಿಸ್ತನಿಗೆ ವಿಧೇಯರಾಗುವಂತೆ ಯಥಾರ್ಥವಾದ ಹೃದಯದಿಂದ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸೇವಕರೇ, ಭಯಭಕ್ತಿಯಿಂದಲೂ ಸರಳ ಹೃದಯದಿಂದ ಕ್ರಿಸ್ತನಿಗೆ ವಿಧೇಯರಾಗುವ ಪ್ರಕಾರ ಲೌಕಿಕವಾಗಿ ನಿಮ್ಮ ಯಜಮಾನನಾಗಿರುವವರಿಗೆ ವಿಧೇಯರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಗುಲಾಮಾನು, ತುಮ್ಚ್ಯಾ ಹ್ಯಾ ಜಗಾಚ್ಯಾ ಯಜಮಾನಾಕ್ನಿ ಭಿಂಯಾನ್, ಥರ್ತರುನ್ಗೆತ್ ಅನಿ ಮಾನ್ ದಿವ್ನ್ ಖಾಲ್ತಿ ಹೊವ್ನ್ ರಾವಾ, ತುಮಿ ಕ್ರಿಸ್ತಾಕ್ ಖಾಲ್ತಿ ಹೊಲ್ಯಾ ಸಾರ್ಕೆ ಸರಳ್ ಮನಾನ್ ಖಾಲ್ತಿ ಹೊವ್ನ್ ರಾವಾ .

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಫೆಸದವರಿಗೆ 6:5
27 ತಿಳಿವುಗಳ ಹೋಲಿಕೆ  

ಸತಿಯರೇ, ನೀವು ಕರ್ತನಿಗೆ ಹೇಗೋ ಹಾಗೆಯೇ ನಿಮ್ಮ ಗಂಡಂದಿರಿಗೆ ಅಧೀನರಾಗಿರಿ.


“ನನ್ನ ನಾಮವನ್ನು ಧಿಕ್ಕರಿಸುವ ಯಾಜಕರೇ, ಮಗನು ತಂದೆಗೆ ಸನ್ಮಾನ ಸಲ್ಲಿಸುತ್ತಾನಲ್ಲಾ, ಆಳು ಧಣಿಗೆ ಭಯಭಕ್ತಿ ತೋರಿಸುತ್ತಾನಷ್ಟೇ; ನಾನು ತಂದೆಯಾಗಿರಲು ನನಗೆ ಸಲ್ಲುವ ಸನ್ಮಾನವೆಲ್ಲಿ? ನಾನು ದಣಿಯಾಗಿರಲು ನನಗೆ ತೋರಿಸುವ ಭಯಭಕ್ತಿಯೆಲ್ಲಿ?” ಎಂದು ಸೇನಾಧೀಶ್ವರನಾದ ಯೆಹೋವನು ನಿಮಗೇ ನುಡಿಯುತ್ತಾನೆ. ಆದರೆ ನೀವು, “ಯಾವ ವಿಷಯದಲ್ಲಿ ನಿನ್ನ ನಾಮವನ್ನು ಧಿಕ್ಕರಿಸಿದ್ದೇವೆ?” ಅನ್ನುತ್ತೀರಿ.


ಇನ್ನು ಮೇಲೆ ಅವನು ದಾಸನಂತಾಗಿರದೆ ದಾಸನಿಗಿಂತ ಮಿಗಿಲಾಗಿ ಉತ್ತಮವಾದ ಪ್ರಿಯ ಸಹೋದರನಂತಾಗಬೇಕು. ಅವನು ನನಗೆ ಬಹಳ ಪ್ರಿಯನಾಗಿರುವಲ್ಲಿ ನಿನಗೆ ಲೋಕದ ಪ್ರಕಾರವಾಗಿಯೂ, ಕರ್ತನ ಸಂಬಂಧದಲ್ಲಿಯೂ ಇನ್ನೂ ಹೆಚ್ಚು ಪ್ರಿಯನಾಗಿರುವನಲ್ಲವೇ?


ಹೀಗಿರುವಲ್ಲಿ ನನ್ನ ಪ್ರಿಯರೇ, ನೀವು ನನ್ನ ಮಾತನ್ನು ಯಾವಾಗಲೂ ಅನುಸರಿಸಿದಂತೆ ಈಗಲೂ ಅನುಸರಿಸಿರಿ. ನಾನು ನಿಮ್ಮಲ್ಲಿರುವಾಗ ಮಾತ್ರವಲ್ಲದೆ, ನಾನಿಲ್ಲದಿರುವಾಗಲೂ ಬಹು ಹೆಚ್ಚಾಗಿ ಮನೋಭೀತಿಯಿಂದ ನಡುಗುವವರಾಗಿ ನಿಮ್ಮ ನಿಮ್ಮ ರಕ್ಷಣೆಯನ್ನು ಸಾಧಿಸಿಕೊಳ್ಳಿರಿ.


ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ನಿನ್ನ ಸತ್ಯತೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡು ನಡೆಯುವೆನು. ನಾನು ನಿನ್ನ ನಾಮದಲ್ಲಿ ಭಯಭಕ್ತಿಯಿಂದಿರುವಂತೆ ಏಕಮನಸ್ಸನ್ನು ಅನುಗ್ರಹಿಸು.


ನಾವು ಕೇವಲ ಮನುಷ್ಯಜ್ಞಾನವನ್ನು ಬಳಸದೇ ದೇವರ ಕೃಪೆಯನ್ನು ಆಶ್ರಯಿಸಿ ಪರಿಶುದ್ಧರಾಗಿಯೂ, ಪ್ರಾಮಾಣಿಕರಾಗಿಯೂ ಈ ಲೋಕದಲ್ಲಿ ಮುಖ್ಯವಾಗಿ ನಿಮ್ಮ ವಿಷಯದಲ್ಲಿ ನಡೆದುಕೊಂಡೆವೆಂದು ನಮ್ಮ ಮನಸ್ಸಾಕ್ಷಿ ಹೇಳುತ್ತದೆ. ಇದೇ ನಮಗಿರುವ ಹೆಮ್ಮೆ.


ಯಾವನಾದರೂ ದಾಸನಾಗಿದ್ದು ಕರ್ತನಿಂದ ಕರೆಯಲ್ಪಟ್ಟಿರುವನೋ ಅವನು ಕರ್ತನ ಮೂಲಕ ಬಿಡುಗಡೆ ಹೊಂದಿರುವ ಸ್ವತಂತ್ರನಾಗಿದ್ದಾನೆ. ಅದೇ ಪ್ರಕಾರ ಯಾವನು ಸ್ವತಂತ್ರನಾಗಿದ್ದಾಗ ಕರೆಯಲ್ಪಟ್ಟಿರುವನೋ ಅವನು ಕ್ರಿಸ್ತನಿಗೆ ದಾಸನು.


ನಾನು ಸಹ ಅಧಿಕಾರದ ಕೆಳಗಿರುವ ಮನುಷ್ಯನು; ನನ್ನ ಕೈಕೆಳಗೆ ಸಿಪಾಯಿಗಳಿದ್ದಾರೆ; ನಾನು ಅವರಲ್ಲಿ ಒಬ್ಬನಿಗೆ ‘ಹೋಗು’ ಎಂದು ಹೇಳಿದರೆ ಹೋಗುತ್ತಾನೆ; ಮತ್ತೊಬ್ಬನಿಗೆ ‘ಬಾ’ ಎಂದು ಹೇಳಿದರೆ ಬರುತ್ತಾನೆ; ‘ನನ್ನ ಆಳಿಗೆ ಇಂಥಿಂಥದ್ದನ್ನು ಮಾಡು’ ಎಂದು ಹೇಳಿದರೆ ಮಾಡುತ್ತಾನೆ” ಅಂದನು.


“ಯಾರೊಬ್ಬನೂ ಇಬ್ಬರು ಯಜಮಾನರಿಗೆ ಸೇವೆಮಾಡಲಾರನು. ಅವನು ಒಬ್ಬನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುವನು; ಇಲ್ಲವೆ ಒಬ್ಬನಿಗೆ ಶ್ರದ್ಧೆಯಿಂದ ಸೇವೆಮಾಡಿ ಮತ್ತೊಬ್ಬನನ್ನು ತಾತ್ಸಾರ ಮಾಡಬಹುದು. ನೀವು ದೇವರನ್ನೂ ಐಶ್ವರ್ಯವನ್ನೂ ಒಟ್ಟಾಗಿ ಸೇವಿಸಲಾರಿರಿ.


ಅದಕ್ಕೆ ಯೆಹೋವನ ದೂತನು, “ನೀನು ಯಜಮಾನಿಯ ಬಳಿಗೆ ಹಿಂದಿರುಗಿ ಹೋಗಿ ಅವಳಿಗೆ ಅಧೀನಳಾಗಿ ನಡೆದುಕೋ” ಎಂದನು.


ನಮ್ಮ ಕರ್ತನಾದ ಯೇಸು ಕ್ರಿಸ್ತನನ್ನು ನಿರಂತರವಾಗಿ ಪ್ರೀತಿಸುವವರೆಲ್ಲರ ಮೇಲೆ ದೇವರ ಕೃಪೆಯು ಇರಲಿ.


ಯಜಮಾನನ ಕೈಯನ್ನು ದಾಸನ ಕಣ್ಣುಗಳು, ಯಜಮಾನಿಯ ಕೈಯನ್ನು ದಾಸಿಯ ಕಣ್ಣುಗಳು ನೋಡುವ ಪ್ರಕಾರವೇ, ನಮ್ಮ ಕಣ್ಣುಗಳು ನಮ್ಮ ಯೆಹೋವ ದೇವರನ್ನು ನೋಡುತ್ತಾ, ಆತನ ಕಟಾಕ್ಷವನ್ನು ನಿರೀಕ್ಷಿಸಿಕೊಂಡಿವೆ.


ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.


ಹೀಗಿರುವುದರಿಂದ, “ನೀವು ಯೆಹೋವನಲ್ಲಿ ಭಯಭಕ್ತಿಯುಳ್ಳವರಾಗಿರಿ ಆತನನ್ನು ಪೂರ್ಣಮನಸ್ಸಿನಿಂದಲೂ, ಯಥಾರ್ಥಚಿತ್ತದಿಂದಲೂ ಸೇವಿಸಿರಿ. ನಿಮ್ಮ ಪೂರ್ವಿಕರು ಯೂಫ್ರೆಟಿಸ್ ನದಿಯ ಆಚೆಯಲ್ಲಿಯೂ ಐಗುಪ್ತದಲ್ಲಿಯೂ ಪೂಜಿಸುತ್ತಿದ್ದ ದೇವತೆಗಳನ್ನು ನಿಮ್ಮಲ್ಲಿಂದ ತೆಗೆದುಹಾಕಿರಿ. ಯೆಹೋವನನ್ನೇ ಸೇವಿಸಿರಿ.


ನೀವು ವಿಧೇಯತೆಯಲ್ಲಿ ಭಯಭಕ್ತಿಯಿಂದ ಅವನನ್ನು ಸ್ವೀಕರಿಸಿಕೊಂಡಿದ್ದನ್ನು ಜ್ಞಾಪಕಮಾಡಿಕೊಳ್ಳುವಾಗ ನಿಮ್ಮ ಮೇಲೆ ಅವನಿಗಿರುವ ಪ್ರೀತಿ ಹೆಚ್ಚಾಗಿದೆ.


ಇದಲ್ಲದೆ ನಾನು ನಿಮ್ಮಲ್ಲಿಗೆ ಬಂದಾಗ ನಿಮ್ಮ ಬಳಿಯಲ್ಲಿ ಬಲಹೀನನೂ, ಭಯಪಡುವವನೂ, ಬಹು ನಡುಗುವವನೂ ಆಗಿದ್ದೆನು.


ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.


“ಕಣ್ಣು ದೇಹಕ್ಕೆ ದೀಪವಾಗಿದೆ; ಹೀಗಿರುವುದರಿಂದ ನಿನ್ನ ಕಣ್ಣು ಚೆನ್ನಾಗಿದ್ದರೆ ನಿನ್ನ ದೇಹವೆಲ್ಲಾ ಬೆಳಕಾಗಿರುವುದು.


ನನ್ನ ಸ್ವಜನರೂ ರಕ್ತಸಂಬಂಧಿಕರೂ ಆದ ನನ್ನ ಪ್ರಿಯರಿಗೋಸ್ಕರವಾಗಿ ನಾನು ಕ್ರಿಸ್ತಯೇಸುವಿನಿಂದ ಬಹಿಷ್ಕ್ರಿತನಾಗಿ ಶಾಪಗ್ರಸ್ತನಾಗಲು ಸಹ ಸಿದ್ಧನಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು