ಎಸ್ತೇರಳು 1:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅರಸನಾದ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಮತ್ತು ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಪಾರಸಿಯ ಮತ್ತು ಮೇದ್ಯ ದೇಶಗಳ ರಾಜ ಪ್ರಮುಖರಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅರಸ ಅಹಷ್ವೇರೋಷನ ಆಸ್ಥಾನದಲ್ಲಿ ರಾಜಸಾನ್ನಿಧ್ಯ ಸೇವಕರೂ ಪದಾಧಿಕಾರಿಗಳೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಪರ್ಷಿಯ ಮತ್ತು ಮೇದ್ಯ ದೇಶಗಳ ರಾಜಪ್ರಮುಖರು ಇದ್ದರು. ಸಮಯೋಚಿತ ವ್ಯವಹಾರ ಜ್ಞಾನಹೊಂದಿದವರಾದ ಇವರನ್ನು ಅರಸನು, ಈ ವಿಷಯವಾಗಿ ವಿಚಾರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅರಸನಾದ ಅಹಷ್ವೇರೋಷನ ಒಡ್ಡೋಲಗದಲ್ಲಿ ರಾಜಸಾನಿಧ್ಯಸೇವಕರೂ ರಾಜಸಭಾಪ್ರಧಾನರೂ ಆಗಿದ್ದ ಕರ್ಷೆನಾ, ಶೇತಾರ್, ಅದ್ಮಾತಾ, ತರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಎಂಬ ಏಳು ಮಂದಿ ಪಾರಸಿಯ ಮತ್ತು ಮೇದ್ಯ ಪ್ರಭುಗಳಿದ್ದರು. ಅವನು ಸಮಯೋಚಿತಜ್ಞಾನವುಳ್ಳವರಾದ ಇವರನ್ನು - ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಅರಸನಿಗೆ ಬಹು ಹತ್ತಿರವಾಗಿದ್ದ ಪಾರಸಿಯ ಮತ್ತು ಮೇದ್ಯ ದೇಶಗಳ ಏಳುಮಂದಿ ಪ್ರಧಾನರಾದ ಕರ್ಷೇನಾ, ಶೆತಾರ್, ಅದ್ಮಾತಾ, ತಾರ್ಷೀಷ್, ಮೆರೆಸ್, ಮರ್ಸೆನಾ, ಮೆಮೂಕಾನ್ ಇವರ ಸಂಗಡ ಮಾತನಾಡಿದನು. ರಾಜ್ಯದಲ್ಲಿ ಇವರು ಅರಸನ ಬಳಿಗೆ ಹೋಗಲು ವಿಶೇಷ ಅನುಮತಿಪಡೆದ ಅತ್ಯಂತ ಶ್ರೇಷ್ಠರಾಗಿದ್ದರು. ಅಧ್ಯಾಯವನ್ನು ನೋಡಿ |