ಎಸ್ತೇರಳು 1:3 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಸರದಾರರಿಗೋಸ್ಕರವೂ ಮತ್ತು ಪರಿವಾರದವರಿಗಾಗಿ ಒಂದು ಔತಣ ಏರ್ಪಡಿಸಿದ್ದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ, ಪ್ರಧಾನರೂ ಮತ್ತು ಸಂಸ್ಥಾನದ ಅಧಿಕಾರಿಗಳೂ, ರಾಜನ ಸನ್ನಿಧಿಗೆ ಸೇರಿ ಬಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಪರ್ಷಿಯ ಮತ್ತು ಮೇದ್ಯ ದೇಶಗಳ ದಂಡನಾಯಕರೂ ಪದಾಧಿಕಾರಿಗಳೂ ಸಂಸ್ಥಾನದ ಅಧಿಕಾರಿಗಳೂ ಅರಸನ ಮುಂದೆ ಉಪಸ್ಥಿತರಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಎಲ್ಲಾ ಸರದಾರರಿಗೋಸ್ಕರವೂ ಪರಿವಾರದವರಿಗೋಸ್ಕರವೂ ಔತಣಮಾಡಿಸಿದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ ಪ್ರಧಾನರೂ ಸಂಸ್ಥಾನಾಧಿಕಾರಿಗಳೂ ಅವನ ಸನ್ನಿಧಿಗೆ ಬಂದಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ತನ್ನ ಆಳ್ವಿಕೆಯ ಮೂರನೆ ವರ್ಷದಲ್ಲಿ ರಾಜ್ಯದ ಅಧಿಕಾರಿಗಳಿಗೂ ನಾಯಕರುಗಳಿಗೂ ಒಂದು ಔತಣವನ್ನು ಏರ್ಪಡಿಸಿದನು. ಮೇದ್ಯ. ಪರ್ಶಿಯದ ಎಲ್ಲಾ ಸೈನ್ಯಾಧಿಕಾರಿಗಳೂ ಪ್ರಧಾನರೂ ಔತಣದಲ್ಲಿ ಭಾಗವಹಿಸಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ತನ್ನ ಆಳಿಕೆಯ ಮೂರನೆಯ ವರ್ಷದಲ್ಲಿ ಅವನು ತನ್ನ ಸಮಸ್ತ ಶ್ರೇಷ್ಠರಿಗೂ ಅಧಿಕಾರಿಗಳಿಗೂ ಔತಣವನ್ನು ಮಾಡಿಸಿದನು. ಪಾರಸಿಯ ಮತ್ತು ಮೇದ್ಯ ದೇಶಗಳ ಸೇನಾಧಿಪತಿಗಳೂ ಪ್ರಾಂತಗಳ ಶ್ರೇಷ್ಠರೂ ಪ್ರಧಾನರೂ ಉಪಸ್ಥಿತರಿದ್ದರು. ಅಧ್ಯಾಯವನ್ನು ನೋಡಿ |