Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 1:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವನು ಅನೇಕ ದಿನ ಅಂದರೆ, ನೂರ ಎಂಭತ್ತು ದಿನಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮತ್ತು ಮಹಾಮಹಿಮೆಯ ವೈಭವದ ಪ್ರತಾಪಗಳನ್ನೂ ಪ್ರದರ್ಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅರಸನು ತನ್ನ ಘನರಾಜ್ಯದ ಸಿರಿಸಂಪತ್ತನ್ನು, ವೈಭವವನ್ನು ಹಾಗು ರಾಜ್ಯದ ಆಡಂಬರವನ್ನು ಅವರೆಲ್ಲರ ಮುಂದೆ ಬಹುದಿನಗಳವರೆಗೆ ಅಂದರೆ, ನೂರೆಂಬತ್ತು ದಿನಗಳವರೆಗೆ ಪ್ರದರ್ಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವನು ಅನೇಕ ದಿವಸ ಅಂದರೆ ನೂರೆಂಭತ್ತು ದಿವಸಗಳವರೆಗೂ ಅವರಿಗೆ ತನ್ನ ಘನವಾದ ರಾಜ್ಯದ ಐಶ್ವರ್ಯವನ್ನೂ ಮಹಾಮಹಿಮೆಯ ವೈಭವಗಳನ್ನೂ ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಔತಣ ಸಮಾರಂಭವು ನೂರೆಂಭತ್ತು ದಿವಸಗಳ ತನಕ ಮುಂದುವರೆಯಿತು. ಆ ಸಮಯದಲ್ಲಿ ತನ್ನ ರಾಜ್ಯದ ಸಕಲ ವೈಭವವನ್ನೂ ಅರಮನೆಯ ಐಶ್ವರ್ಯವನ್ನೂ ಅತಿಥಿಗಳಿಗೆ ಪ್ರದರ್ಶಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅವನು ನೂರ ಎಂಬತ್ತು ದಿವಸಗಳವರೆಗೆ ತನ್ನ ಘನವುಳ್ಳ ರಾಜ್ಯದ ಐಶ್ವರ್ಯವನ್ನೂ ತನ್ನ ವೈಭವ ಹಾಗು ಆಡಂಬರವನ್ನು ತೋರಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 1:4
25 ತಿಳಿವುಗಳ ಹೋಲಿಕೆ  

ನಿನ್ನನ್ನು ನೀನೇ ಮಹಿಮೆ ಘನತೆಗಳಿಂದ ಭೂಷಿಸಿಕೊಂಡು ಪ್ರಭಾವ ಮಹತ್ವಗಳನ್ನು ಧರಿಸಿಕೋ.


ಈ ಮರ್ಮದ ಮಹಿಮಾತಿಶಯವು ಎಷ್ಟೆಂಬುದನ್ನು ಅನ್ಯಜನಗಳಿಗೂ ತಿಳಿಸಲಿಕ್ಕೆ ದೇವರು ಇಚ್ಛಿಸಿದನು. ಈ ಮರ್ಮವು ಏನೆಂದರೆ ಮಹಿಮೆಯ ನಿರೀಕ್ಷೆಗೆ ಆಧಾರನಾಗಿರುವ ಕ್ರಿಸ್ತನು ನಿಮ್ಮಲ್ಲಿದ್ದಾನೆಂಬುದೇ.


ಆತನೇ ನಿಮ್ಮ ಮನೋನೇತ್ರಗಳನ್ನು ಬೆಳಗಿಸಿ, ಆತನ ಕರೆಯ ನಿರೀಕ್ಷೆಯು ಎಂಥದೆಂಬುದನ್ನೂ ಮತ್ತು ದೇವಜನರಲ್ಲಿರುವ ಆತನ ಸ್ವತ್ತಿನ ಮಹಿಮಾತಿಶಯವು ಎಂಥದೆಂಬುದನ್ನೂ,


ಮತ್ತು ಮಹಿಮೆ ಹೊಂದುವುದಕ್ಕೆ ತಾನು ಮೊದಲೇ ಸಿದ್ಧಪಡಿಸಿರುವ ಕರುಣಾಪಾತ್ರರಲ್ಲಿ ತನ್ನ ಮಹಿಮಾತಿಶಯವನ್ನು ತೋರ್ಪಡಿಸಿದ್ದಾನೆ.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು


ಬಳಿಕ ಸೈತಾನನು ಆತನನ್ನು ಬಹಳ ಎತ್ತರವಾದ ಬೆಟ್ಟಕ್ಕೆ ಕರೆದುಕೊಂಡು ಹೋಗಿ ಪ್ರಪಂಚದ ಎಲ್ಲಾ ರಾಜ್ಯಗಳನ್ನೂ ಅವುಗಳ ವೈಭವವನ್ನೂ ಆತನಿಗೆ ತೋರಿಸಿ,


ಅರಸನೇ, ಪರಾತ್ಪರನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನಿಗೆ ರಾಜ್ಯಮಹತ್ವ, ಮಾನಸನ್ಮಾನಗಳನ್ನು ದಯಪಾಲಿಸಿದನು.


ಅದೇ ಸಮಯದಲ್ಲಿ ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು; ನನ್ನ ಪ್ರಭಾವ ವೈಭವಗಳು ನನಗೆ ಮತ್ತೆ ಲಭಿಸಿ ನನ್ನ ರಾಜ್ಯದ ಕೀರ್ತಿಯು ಪ್ರಕಾಶಿಸಿತು; ನನ್ನ ಮಂತ್ರಿಗಳೂ ಅಧಿಪತಿಗಳೂ ನನ್ನನ್ನು ಸಮಾಧಾನಪಡಿಸಿದರು; ನನ್ನ ರಾಜ್ಯದಲ್ಲಿ ರಾಜನಾಗಿ ನೆಲೆಗೊಂಡೆನು; ನನ್ನ ಮಹಿಮೆಯು ಅತ್ಯಧಿಕವಾಯಿತು.


“ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯ ಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವುದು ಇಗೋ, ಮಹಾ ಪಟ್ಟಣವಾದ ಈ ಬಾಬೆಲ್” ಎಂದು ಕೊಚ್ಚಿಕೊಂಡನು.


ನೀನು ನಿನ್ನ ಅಧಿಕ ಜ್ಞಾನದಿಂದ ವ್ಯಾಪಾರದಲ್ಲಿ ಸಂಪತ್ತನ್ನು ವೃದ್ಧಿಮಾಡಿಕೊಂಡಿರುವೆ. ನಿನ್ನ ಮನಸ್ಸು ನಿನ್ನ ಆಸ್ತಿಯ ನಿಮಿತ್ತ ಉಬ್ಬಿಕೊಂಡಿದೆ.”


ಹಿಜ್ಕೀಯನು ಬಂದ ದೂತರನ್ನು ಸಂತೋಷದಿಂದ ನೋಡಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದುದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.


ಅವರು ನಿನ್ನ ಮಹಾಪ್ರಭಾವಯುಕ್ತವಾದ ಮಹಿಮೆಯನ್ನು ಕೊಂಡಾಡುವರು, ನಿನ್ನ ಅದ್ಭುತಕಾರ್ಯಗಳನ್ನೂ ಧ್ಯಾನಿಸುವೆನು.


ಯೆಹೋವನು ರಾಜ್ಯಾಧಿಕಾರವನ್ನು ವಹಿಸಿದ್ದಾನೆ; ಆತನು ಮಹಿಮಾ ವಸ್ತ್ರವನ್ನು ಧರಿಸಿದ್ದಾನೆ, ಶೌರ್ಯವನ್ನು ನಡುಕಟ್ಟನ್ನಾಗಿ ಬಿಗಿದಿದ್ದಾನೆ; ಹೌದು, ಭೂಲೋಕವು ಸ್ಥಿರವಾಗಿರುವುದು ಅದು ಕದಲುವುದಿಲ್ಲ.


ಶೂರನೇ, ಮಹಿಮೆ ಮತ್ತು ಪ್ರಭಾವವನ್ನು ಧರಿಸಿಕೊಂಡು, ಸೊಂಟಕ್ಕೆ ಪಟ್ಟದ ಕತ್ತಿಯನ್ನು ಕಟ್ಟಿಕೋ.


ನಿನ್ನ ರಕ್ಷಣಕಾರ್ಯದಿಂದ ಅವನ ಗೌರವ ಬಹು ವೃದ್ಧಿಯಾಯಿತು; ಘನತೆ ಮತ್ತು ವೈಭವಗಳನ್ನು ಅವನಿಗೆ ಅನುಗ್ರಹಿಸಿದ್ದೀ.


ಯೆಹೋವನು ಇಸ್ರಾಯೇಲರೆಲ್ಲರಿಗೆ ಗೊತ್ತಾಗುವಂತೆ ಸೊಲೊಮೋನನನ್ನು ಅಭಿವೃದ್ಧಿಪಡಿಸಿ ಅವನಿಗಿಂತ ಮೊದಲು ಇಸ್ರಾಯೇಲರನ್ನು ಆಳಿದ ಎಲ್ಲಾ ಅರಸರ ವೈಭವಕ್ಕಿಂತಲೂ ಹೆಚ್ಚಿನ ವೈಭವವನ್ನು ಅವನಿಗೆ ಅನುಗ್ರಹಿಸಿದನು.


ಅವನು ತನ್ನ ಆಳ್ವಿಕೆಯ ಮೂರನೆಯ ವರ್ಷದಲ್ಲಿ ತನ್ನ ಎಲ್ಲಾ ಸರದಾರರಿಗೋಸ್ಕರವೂ ಮತ್ತು ಪರಿವಾರದವರಿಗಾಗಿ ಒಂದು ಔತಣ ಏರ್ಪಡಿಸಿದ್ದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ, ಪ್ರಧಾನರೂ ಮತ್ತು ಸಂಸ್ಥಾನದ ಅಧಿಕಾರಿಗಳೂ, ರಾಜನ ಸನ್ನಿಧಿಗೆ ಸೇರಿ ಬಂದಿದ್ದರು.


ಆ ನಂತರ ಅರಸನು ಶೂಷನ್ ಕೋಟೆಯಲ್ಲಿದ್ದ ಎಲ್ಲಾ ಶ್ರೇಷ್ಠರಿಗೂ ಮತ್ತು ಕನಿಷ್ಠರಿಗೂ ಅರಮನೆಯ ತೋಟದ ಆವರಣದಲ್ಲಿ ಏಳು ದಿನಗಳವರೆಗೂ ಔತಣಮಾಡಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು