Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಎಸ್ತೇರಳು 10:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅವನ ಬಲ ಪ್ರತಾಪಯುಕ್ತವಾದ ಕೃತ್ಯಗಳೂ, ಅವನ ಅನುಗ್ರಹದಿಂದ ಮೊರ್ದೆಕೈಗೆ ಪ್ರಾಪ್ತವಾದ ದೊಡ್ಡಸ್ತಿಕೆಯ ವಿವರಗಳು ಮೇದ್ಯ ಮತ್ತು ಪಾರಸಿಯ ರಾಜಕಾಲ ವೃತ್ತಾಂತಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅವನ ಶಕ್ತಿಸಾಮರ್ಥ್ಯದ ಸಾಹಸಕಾರ್ಯಗಳೆಲ್ಲವು ಹಾಗೂ ಅರಸನು ಮೊರ್ದೆಕೈಯನ್ನು ಅತ್ಯುನ್ನತ ಗೌರವಸ್ಥಾನಕ್ಕೆ ಏರಿಸಿದ್ದನ್ನು ಕುರಿತ ಪೂರ್ಣ ವಿವರವು ಮೇದ್ಯ ಮತ್ತು ಪರ್ಷಿಯ ದೇಶಗಳ ಅರಸರ ವೃತ್ತಾಂತಗ್ರಂಥದಲ್ಲಿ ಬರೆಯಲಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅವನ ಬಲ ಪ್ರತಾಪಯುಕ್ತವಾದ ಕೃತ್ಯಗಳೂ ಅವನ ಅನುಗ್ರಹದಿಂದ ಮೊರ್ದೆಕೈಗೆ ಪ್ರಾಪ್ತವಾದ ದೊಡ್ಡಸ್ತಿಕೆಯ ವಿವರವೂ ಮೇದ್ಯ ಮತ್ತು ಪಾರಸಿಯ ರಾಜಕಾಲ ವೃತ್ತಾಂತಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅಹಷ್ವೇರೋಷ್ ಅರಸನು ಮಾಡಿದ ಎಲ್ಲಾ ಮಹತ್ಕಾರ್ಯಗಳೂ ಕೃತ್ಯಗಳೂ ಮೇದ್ಯ, ಪರ್ಶಿಯ ಅರಸರ ರಾಜಕಾಲವೃತ್ತಾಂತ ಪುಸ್ತಕಗಳಲ್ಲಿ ಬರೆಯಲ್ಪಟ್ಟಿರುತ್ತವೆ; ಮೊರ್ದೆಕೈ ಮಾಡಿದ ವಿಷಯಗಳ ಬಗ್ಗೆಯೂ ಬರೆಯಲ್ಪಟ್ಟಿದೆ. ಮೊರ್ದೆಕೈಯನ್ನು ಅರಸನು ಬಹು ದೊಡ್ಡ ಪ್ರಭಾವಶಾಲಿ ವ್ಯಕ್ತಿಯನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅವನ ಅಧಿಕಾರದ ಕ್ರಿಯೆಗಳೂ ಅವನ ಪರಾಕ್ರಮವೂ ಅರಸನು ಮೊರ್ದೆಕೈಯನ್ನು ಹೆಚ್ಚಿಸಿದ ಮಹತ್ತಿನ ಪ್ರಸಿದ್ಧಿಯೂ ಮೇದ್ಯ ಮತ್ತು ಪಾರಸಿಯ ಅರಸರ ಇತಿಹಾಸಗಳ ಗ್ರಂಥದಲ್ಲಿ ಬರೆದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಎಸ್ತೇರಳು 10:2
10 ತಿಳಿವುಗಳ ಹೋಲಿಕೆ  

ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.


ಸರ್ವ ಸಂಸ್ಥಾನಾಧಿಕಾರಿಗಳೂ, ಉಪರಾಜರೂ, ದೇಶಾಧಿಪತಿಗಳೂ ಮತ್ತು ಇತರ ರಾಜೋದ್ಯೋಗಸ್ಥರೂ ಅವನಿಗೆ ಹೆದರಿ ಯೆಹೂದ್ಯರಿಗೆ ಸಹಾಯಕರಾದರು.


ಈ ವಿಷಯವು ವಿಚಾರಣೆಗೆ ಬಂದಾಗ ಅದು ನಿಜವೆಂದು ಸಾಬೀತಾದುದರಿಂದ ಆ ಇಬ್ಬರನ್ನೂ ಗಲ್ಲಿಗೆ ಹಾಕಿಸಿದರು. ಆ ಸಂಗತಿಯು ರಾಜನ ದಿನಚರಿಪುಸ್ತಕದಲ್ಲಿ ಬರೆದು ದಾಖಲಿಸಲಾಯಿತು.


ಆ ರಾತ್ರಿಯಲ್ಲಿ ಅರಸನಿಗೆ ನಿದ್ರೆಬರಲಿಲ್ಲ; ಆದುದರಿಂದ ಅವನು ಪೂರ್ವ ಘಟನೆಗಳ ಗ್ರಂಥವನ್ನು ತರಲು ಸೇವಕರಿಗೆ ಅಪ್ಪಣೆಮಾಡಿ ಅದನ್ನು ಪಾರಾಯಣಮಾಡಿಸುತ್ತಿದ್ದನು.


ಬಳಿಕ ರಾಜನು ದಾನಿಯೇಲನನ್ನು ಸನ್ಮಾನಿಸಿ, ಅವನಿಗೆ ಅಮೂಲ್ಯವಾದ ಅನೇಕ ಬಹುಮಾನಗಳನ್ನೂ ದಾನಗಳನ್ನು ಕೊಟ್ಟು, ಬಾಬೆಲ್ ಸಂಸ್ಥಾನವನ್ನೆಲ್ಲಾ ಅಧೀನಪಡಿಸಿ, ಬಾಬೆಲಿನ ವಿದ್ವಾಂಸರ ಸಕಲ ಮುಖ್ಯಸ್ಥರಿಗೂ ಅವನನ್ನು ಮುಖ್ಯಸ್ಥನನ್ನಾಗಿ ನೇಮಿಸಿದನು.


ನೀನೇ ನನಗೋಸ್ಕರ ಗುರಾಣಿಯನ್ನು ಹಿಡಿದು ರಕ್ಷಿಸಿದ್ದೀ. ನಿನ್ನ ಬಲಗೈ ನನಗೆ ಆಧಾರ; ನಿನ್ನ ಕೃಪಾಕಟಾಕ್ಷವು ನನಗೆ ದೊಡ್ಡಸ್ತಿಕೆಯನ್ನು ಉಂಟುಮಾಡಿದೆ.


ಅಹಾಬನ ಉಳಿದ ಚರಿತ್ರೆಯೂ ಅವನು ಕಟ್ಟಿಸಿದ ದಂತ ಮಂದಿರ ಪಟ್ಟಣಗಳು, ಇವುಗಳ ವಿವರವೂ ಮತ್ತು ಅವನ ಬೇರೆ ಎಲ್ಲಾ ಕೃತ್ಯಗಳೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಲಿಖಿತವಾಗಿದೆ.


ಯಾರೊಬ್ಬಾಮನ ಇತರ ಕೃತ್ಯಗಳೂ ಅವನ ಯುದ್ಧ ಮತ್ತು ರಾಜ್ಯಭಾರಗಳ ವಿವರವೂ ಇಸ್ರಾಯೇಲ್ ರಾಜಕಾಲವೃತ್ತಾಂತ ಎಂಬ ಗ್ರಂಥದಲ್ಲಿ ಬರೆದು ದಾಖಲಿಸಲಾಗಿದೆ.


ಸೊಲೊಮೋನನ ಉಳಿದ ಎಲ್ಲಾ ಕೃತ್ಯಗಳನ್ನೂ, ಅವನ ಜ್ಞಾನವನ್ನೂ ಕುರಿತು ಸೊಲೊಮೋನನ ಚರಿತ್ರೆ ಎಂಬ ಗ್ರಂಥದಲ್ಲಿ ಬರೆದಿರುತ್ತದೆ.


ಆಗ ಅರಸನು ತಾನು ಹಾಮಾನನಿಗೆ ನೀಡಿದ್ದ ತನ್ನ ಮುದ್ರೆಯುಂಗುರವನ್ನು ಮೊರ್ದೆಕೈಗೆ ಕೊಟ್ಟನು; ಎಸ್ತೇರಳು ಹಾಮಾನನ ಮನೆಯ ಆಡಳಿತವನ್ನು ಅವನಿಗೆ ಒಪ್ಪಿಸಿದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು